Shuru
Apke Nagar Ki App…
ಮೈಸೂರಿನ ಓವಲ್ ಮೈದಾನಕ್ಕೆ ನಮೋ ಆಗಮನ. ವಿಶೇಷ ಹೆಲಿಕಾಪ್ತರ್ ಮೂಲಕ ಆಗಮನ. ಓವಲ್ ಮೈದಾನಕ್ಕೆ ಬಂದಿಳಿದ ನಮೋ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಸಿಎಂ ಡಿಕೆ ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ.
ಸುನೀಲ್ ಲ್ ಬೆಟಗೇರಿ
ಮೈಸೂರಿನ ಓವಲ್ ಮೈದಾನಕ್ಕೆ ನಮೋ ಆಗಮನ. ವಿಶೇಷ ಹೆಲಿಕಾಪ್ತರ್ ಮೂಲಕ ಆಗಮನ. ಓವಲ್ ಮೈದಾನಕ್ಕೆ ಬಂದಿಳಿದ ನಮೋ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಸಿಎಂ ಡಿಕೆ ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ.
More news from ಕರ್ನಾಟಕ and nearby areas
- ಹಾನಗಲ್. ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಹನುಮಂತಪ್ಪ ಶಡಗರವಳ್ಳಿ ನೂತನವಾಗಿ ಆಯ್ಕೆ. 3 ವರ್ಷಗಳ ಅವಧಿಗೆ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಒಟ್ಟು 20 ಜನ ಸದಸ್ಯರನ್ನೋಳಗೊಂಡ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಇದಾಗಿದ್ದು, ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ಅಧ್ಯಕ್ಷರಿಗೆ ಪದಾಧಿಕಾರಿಗಳಿಗೆ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು1
- ಪ್ರಧಾನಿ ಶ್ರೀ Narendra Modi ಅವರು ವಿವೇಕ ಸ್ಮಾರಕದಲ್ಲಿ ಯೋಗ ಮತ್ತು ಧ್ಯಾನ ಸಭಾಂಗಣ ಹಾಗೂ ಪ್ರದರ್ಶನ ಸಭಾಂಗಣವನ್ನು ಉದ್ಘಾಟಿಸಿ, ಶ್ರೀ ರಾಮಕೃಷ್ಣ ಪರಮಹಂಸರ ಚಿತ್ರಪಟದ ಮುಂದೆ ಶ್ರದ್ಧಾ-ಭಕ್ತಿಯಿಂದ ಧ್ಯಾನ ಮಗ್ನರಾಗಿ ಅವರನ್ನು ಸ್ಮರಿಸಿದರು.1
- ಹಮ್ಮಿಗಿ ಗ್ರಾಮದಲ್ಲಿ ಸಣ್ಣದೊಂದು ಜನನ ಪ್ರಮಾಣ ಪತ್ರದ ತಿದ್ದುಪಡಿ ಗಾಗಿ ಅಂಗವಿಕಲ ಮಹಿಳೆಯೊಬ್ಬರು ನಾಲ್ಕು ದಿನಗಳಿಂದ ಅಲೆದಾಡುತ್ತಿರುವ ಘಟನೆ... ಹೌದು, ಹಮ್ಮಿಗಿ ಗ್ರಾಮದ ವೀರಮ್ಮ ಬಾಬುಸಾಬ ಮಡಿವಾಳರ ಎಂಬ ವಿಶೇಷ ಚೇತನ ಮಹಿಳೆ, ನವಿನ ಹಾಲಪ್ಪ ಈಟಿ ಅವರ ಜನನ ಪ್ರಮಾಣ ಪತ್ರಕ್ಕಾಗಿ ನಾಲ್ಕು ದಿನಗಳಿಂದ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಎರಡು ಕಾಲು ಇಲ್ಲದೆ ನಡೆಯಲು ಶಕ್ತಿಯಿಲ್ಲದಿದ್ದರೂ, ಶ್ರಮಪಟ್ಟು ಕಚೇರಿಗೆ ಬಂದರೆ ತಲಾಠಿ ಮಾತ್ರ ಸ್ಥಳದಲ್ಲೇ ಇರುವುದಿಲ್ಲ! ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಅಧಿಕಾರಿ ಹೀಗೆ ನಾಪತ್ತೆಯಾಗುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸಂಬಳ ಪಡೆಯುವ ಅಧಿಕಾರಿಗಳು ಹೀಗೆ ಬಡವರನ್ನು, ಅಂಗವಿಕಲರನ್ನು ಸತಾಹಿಸುವುದು ಎಷ್ಟು ಸರಿ ಎನ್ನುವುದು ಗ್ರಾಮಸ್ಥರ ಖಾರವಾದ ಪ್ರಶ್ನೆ.1
- ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು. ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು. ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು. ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು1
- ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ ಕೂಡ್ಲಿಗಿ: ಆಗಷ್ಟ-15ರಂದು ನಡೆಯುವ 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶನಿವಾರ ನಡೆಯಿತು. ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ವಿ.ಕೆ ನೇತ್ರಾವತಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನ ಮಾಡುವ ಮುಖೇನ ಅವರಿಗೆ ಗೌರವ ಸಲ್ಲಿಸೋಣ. ಪ್ರೌಢಶಾಲಾ ಹಾಗೂ ಕಾಲೇಜು ಮಟ್ಟದ ವಿಧ್ಯಾರ್ಥಿಗಳಿಗೆ ದೇಶ ಭಕ್ತಿ ಹುಟ್ಟಿಸುವ ಹಾಗೂ ದೇಶದ ಪ್ರಗತಿ ವಿಷಯವಾಗಿ ಭಾಷಣ ಹಾಗೂ ಪ್ರಭಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಮೊದಲು ಪುಷ್ಪ ನಮನ ಸಲ್ಲಿಸಿ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜಾ ವಂದನೆ ಕಾರ್ಯಕ್ರಮ, ಆಯ್ದಾ ಹತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಿದ್ದು ಸುಗಮ ಸಂಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಇಒ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಪಿಎಸ್ಐ ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಗುನ್ನಳ್ಳಿ ರಾಘವೇಂದ್ರ, ಕಾಟೇರ ಹಾಲೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.1
- " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಮಳೆಯಲ್ಲೂ ಕರ್ತವ್ಯಕ್ಕೆ ಆದ್ಯತೆ; ಕೆಲಸದ ಪ್ರಗತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಸಮೀಪದ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಕಾಮಗಾರಿಯ ಕುರಿತು ಮಾಹಿತಿ ಪಡೆದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.1
- ವೇಗವಾಗಿ ಬಂದು ಕಾರ್ ಡಿಕ್ಕಿ : ಮಗು ಸೇರಿ ಆರು ಕುರಿಗಳು ಸ್ಥಳದಲ್ಲೇ ಸಾವು. ಕಾರ್ ಡಿಕ್ಕಿ : ಮಗು ಸೇರಿ ಆರು ಕುರಿಗಳು ಸ್ಥಳದಲ್ಲೇ ಸಾವು ಹಾವೇರಿ : ವೇಗವಾಗಿ ಬಂದ ಕಾರೊಂದು ಮುಂದೆ ಚಲಿಸುತ್ತಿದ್ದ ಆಟೋ ಮತ್ತು ಕುರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 6 ಕುರಿಗಳು ಹಾಗೂ ಆಟೋದಲ್ಲಿ ಕುಳಿತಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಕರುಣಾಜನಕ ಘಟನೆ ಹಾವೇರಿ ಆರ್ ಟಿ ಓ ಕಛೇರಿ ಹತ್ತಿರ ಜರುಗಿದೆ. ವೇಗವಾಗಿ ಬಂದ ಕಾರು ಮುಂದೆ ಚಲಿಸುತ್ತಿದ್ದ ಕುರಿಗಳು ಹಾಗೂ ಆಟೋಗೆ ವೇಗವಾಗಿ ಡಿಕ್ಕಿ ಆದ ಪರಿಣಾಮವಾಗಿ ಸ್ಥಳದಲ್ಲಿಯೇ ಆರು ಕುರಿಗಳು ಹಾಗೂ ಒಂದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ತೀವ್ರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು, ಕೆಲ ಕಾಲ ಉದ್ವಿಗ್ನ ವಾತಾವರಣವಿದ್ದರೂ ಪೋಲೀಸರು ಸ್ಥಳಕ್ಕಾಗಮಿಸಿ ಸಾರ್ವಜನಿಕರ ಅಕ್ರೊಷದ ವಾತಾವರಣವನ್ನ ಸಮಾಧಾನ ಪಡಿಸಿದರು ಎನ್ನಲಾಗಿದೆ.1