ಸ್ಪರ್ಶ್ ಆಸ್ಪತ್ರೆ: ಆಗ್ನೇಯ ಬೆಂಗಳೂರಿನ ಜನತೆಗೆ ವರದಾನವಾದ ಸುಧಾರಿತ ಆರೋಗ್ಯ ಸೇವೆ ಕೆ.ಅರ್.ಪುರ: ಆಗ್ನೇಯ ಬೆಂಗಳೂರು ಹಾಗೂ ಸರ್ಜಾಪುರ ಭಾಗವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನೇದಿನೆ ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಸುಧಾರಿತ ಆರೋಗ್ಯ ಸೇವೆಗಳ ಅಗತ್ಯವೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಚಿಕಿತ್ಸೆಗಳನ್ನು ಒದಗಿಸುತ್ತಿರುವ ಸರ್ಜಾಪುರ ರಸ್ತೆಯ 'ಸ್ಪರ್ಶ್ ಆಸ್ಪತ್ರೆ' ಇದೀಗ ಯಶಸ್ವಿ ಪ್ರಥಮ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಕಳೆದ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಷ್ಠಿತ ಸ್ಪರ್ಶ್ ಹಾಸ್ಪಿಟಲ್ಸ್ ಗ್ರೂಪ್‌ನ ಭಾಗವಾಗಿರುವ ಈ ಆಸ್ಪತ್ರೆಯು, ಕೇವಲ ಒಂದೇ ವರ್ಷದಲ್ಲಿ ಈ ಭಾಗದ ಜನರ ವಿಶ್ವಾಸಾರ್ಹ ಆರೋಗ್ಯ ಕೇಂದ್ರವಾಗಿ ರೂಪುಗೊಂಡಿದೆ. ಮಲ್ಟಿಸ್ಪೆಷಾಲಿಟಿ, ಸರ್ಜಿಕಲ್, ತುರ್ತು ಚಿಕಿತ್ಸೆ (ಎಮರ್ಜೆನ್ಸಿ) ಸೇರಿದಂತೆ ಸುಧಾರಿತ ಟರ್ಷಿಯರಿ ಕೇರ್ ಸೇವೆಗಳನ್ನು ಜನರಿಗೆ ಇನ್ನಷ್ಟು ಹತ್ತಿರ ತಂದ ಹೆಗ್ಗಳಿಕೆ ಈ ಆಸ್ಪತ್ರೆಯದ್ದಾಗಿದೆ. ಆಸ್ಪತ್ರೆಯು ತನ್ನ ಮೊದಲ ವರ್ಷದಲ್ಲೇ 90,000ಕ್ಕೂ ಹೆಚ್ಚು ಒಪಿಡಿ (OPD) ಭೇಟಿಗಳನ್ನು ಕಂಡಿರುವುದು ಅದರ ಜನಪ್ರಿಯತೆಗೆ ಸಾಕ್ಷಿ. ಜತೆಗೆ, 5,000ಕ್ಕೂ ಹೆಚ್ಚು ಇನ್‌ಪೇಷಂಟ್ಸ್, 2,750ಕ್ಕೂ ಹೆಚ್ಚು ಸರ್ಜರಿಗಳು ಹಾಗೂ 15,000ಕ್ಕೂ ಅಧಿಕ ತುರ್ತು ಪ್ರಕರಣಗಳನ್ನು (ಎಮರ್ಜೆನ್ಸಿ ಕೇಸ್) ಯಶಸ್ವಿಯಾಗಿ ನಿರ್ವಹಿಸಿದೆ. ತಜ್ಞರ ಸಮಾಲೋಚನೆಯಿಂದ ಹಿಡಿದು ಸಂಕೀರ್ಣ ಶಸ್ತ್ರಚಿಕಿತ್ಸೆಗಳವರೆಗೆ ಪ್ರತಿಯೊಂದು ಹಂತದಲ್ಲೂ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ಆಸ್ಪತ್ರೆಯು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ಪತ್ರೆಯು ಅತ್ಯಾಧುನಿಕ ಚಿಕಿತ್ಸೆಗಳಲ್ಲಿ ಮಹತ್ತರ ಸಾಧನೆ ಮಾಡಿದೆ. ಅಂಗಾಂಗ ಕಸಿ (ಟ್ರಾನ್ಸ್‌ಪ್ಲಾಂಟ್ಸ್), ಎಕ್ಮೋ ಬೆಂಬಲಿತ ಕ್ರಿಟಿಕಲ್ ಕೇರ್, ರೋಬೋಟಿಕ್ ಸರ್ಜರಿ, ಸ್ಟ್ರಕ್ಚರಲ್ ಕಾರ್ಡಿಯಾಕ್ ಪ್ರೊಸೀಜರ್‌ಗಳು ಹಾಗೂ ಹೈ-ಎಂಡ್ ನ್ಯೂರೋಲಾಜಿಕಲ್ ಚಿಕಿತ್ಸೆಗಳನ್ನು ಪರಿಣಾಮಕಾರಿಯಾಗಿ ಒದಗಿಸುತ್ತಿದೆ.
ಸ್ಪರ್ಶ್ ಆಸ್ಪತ್ರೆ: ಆಗ್ನೇಯ ಬೆಂಗಳೂರಿನ ಜನತೆಗೆ ವರದಾನವಾದ ಸುಧಾರಿತ ಆರೋಗ್ಯ ಸೇವೆ ಕೆ.ಅರ್.ಪುರ: ಆಗ್ನೇಯ ಬೆಂಗಳೂರು ಹಾಗೂ ಸರ್ಜಾಪುರ ಭಾಗವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದಿನೇದಿನೆ ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಸುಧಾರಿತ ಆರೋಗ್ಯ ಸೇವೆಗಳ ಅಗತ್ಯವೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಚಿಕಿತ್ಸೆಗಳನ್ನು ಒದಗಿಸುತ್ತಿರುವ ಸರ್ಜಾಪುರ ರಸ್ತೆಯ 'ಸ್ಪರ್ಶ್ ಆಸ್ಪತ್ರೆ' ಇದೀಗ ಯಶಸ್ವಿ ಪ್ರಥಮ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಕಳೆದ ಎರಡು ದಶಕಗಳಿಂದ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಷ್ಠಿತ ಸ್ಪರ್ಶ್ ಹಾಸ್ಪಿಟಲ್ಸ್ ಗ್ರೂಪ್‌ನ ಭಾಗವಾಗಿರುವ ಈ ಆಸ್ಪತ್ರೆಯು, ಕೇವಲ ಒಂದೇ ವರ್ಷದಲ್ಲಿ ಈ ಭಾಗದ ಜನರ ವಿಶ್ವಾಸಾರ್ಹ ಆರೋಗ್ಯ ಕೇಂದ್ರವಾಗಿ ರೂಪುಗೊಂಡಿದೆ. ಮಲ್ಟಿಸ್ಪೆಷಾಲಿಟಿ, ಸರ್ಜಿಕಲ್, ತುರ್ತು ಚಿಕಿತ್ಸೆ (ಎಮರ್ಜೆನ್ಸಿ) ಸೇರಿದಂತೆ ಸುಧಾರಿತ ಟರ್ಷಿಯರಿ ಕೇರ್ ಸೇವೆಗಳನ್ನು ಜನರಿಗೆ ಇನ್ನಷ್ಟು ಹತ್ತಿರ ತಂದ ಹೆಗ್ಗಳಿಕೆ ಈ ಆಸ್ಪತ್ರೆಯದ್ದಾಗಿದೆ. ಆಸ್ಪತ್ರೆಯು ತನ್ನ ಮೊದಲ ವರ್ಷದಲ್ಲೇ 90,000ಕ್ಕೂ ಹೆಚ್ಚು ಒಪಿಡಿ (OPD) ಭೇಟಿಗಳನ್ನು ಕಂಡಿರುವುದು ಅದರ ಜನಪ್ರಿಯತೆಗೆ ಸಾಕ್ಷಿ. ಜತೆಗೆ, 5,000ಕ್ಕೂ ಹೆಚ್ಚು ಇನ್‌ಪೇಷಂಟ್ಸ್, 2,750ಕ್ಕೂ ಹೆಚ್ಚು ಸರ್ಜರಿಗಳು ಹಾಗೂ 15,000ಕ್ಕೂ ಅಧಿಕ ತುರ್ತು ಪ್ರಕರಣಗಳನ್ನು (ಎಮರ್ಜೆನ್ಸಿ ಕೇಸ್) ಯಶಸ್ವಿಯಾಗಿ ನಿರ್ವಹಿಸಿದೆ. ತಜ್ಞರ ಸಮಾಲೋಚನೆಯಿಂದ ಹಿಡಿದು ಸಂಕೀರ್ಣ ಶಸ್ತ್ರಚಿಕಿತ್ಸೆಗಳವರೆಗೆ ಪ್ರತಿಯೊಂದು ಹಂತದಲ್ಲೂ ಅತ್ಯುತ್ತಮ ಸೇವೆ ಒದಗಿಸುವ ಮೂಲಕ ಆಸ್ಪತ್ರೆಯು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ಪತ್ರೆಯು ಅತ್ಯಾಧುನಿಕ ಚಿಕಿತ್ಸೆಗಳಲ್ಲಿ ಮಹತ್ತರ ಸಾಧನೆ ಮಾಡಿದೆ. ಅಂಗಾಂಗ ಕಸಿ (ಟ್ರಾನ್ಸ್‌ಪ್ಲಾಂಟ್ಸ್), ಎಕ್ಮೋ ಬೆಂಬಲಿತ ಕ್ರಿಟಿಕಲ್ ಕೇರ್, ರೋಬೋಟಿಕ್ ಸರ್ಜರಿ, ಸ್ಟ್ರಕ್ಚರಲ್ ಕಾರ್ಡಿಯಾಕ್ ಪ್ರೊಸೀಜರ್‌ಗಳು ಹಾಗೂ ಹೈ-ಎಂಡ್ ನ್ಯೂರೋಲಾಜಿಕಲ್ ಚಿಕಿತ್ಸೆಗಳನ್ನು ಪರಿಣಾಮಕಾರಿಯಾಗಿ ಒದಗಿಸುತ್ತಿದೆ.
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.1
- ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ4