logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.

4 hrs ago
user_ಸಂಗನಗೌಡ
ಸಂಗನಗೌಡ
Engineer Vijayapura, Karnataka•

More news from ಕರ್ನಾಟಕ and nearby areas
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    3 hrs ago
  • ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ
    1
    ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ
ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
    1
    ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    21 hrs ago
  • ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.
    3
    ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ  ವಿಘ್ನನಿವಾರಕನ ವಿಸಜ೯ನೆ

ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ  ಗಣೇಶನನ್ನ
ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    14 hrs ago
  • ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    1
    ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    21 hrs ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ  8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ
ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. 

ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು  ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    14 hrs ago
  • ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ! ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು. ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು. ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು. ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    1
    ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ!
ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.
ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.
ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು.
ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    19 hrs ago
  • #ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್‌ ಫೆಸ್ಟಿವಲ್‌) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×7 #ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್‌ ಫೆಸ್ಟಿವಲ್‌) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×7
    1
    #ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್‌ ಫೆಸ್ಟಿವಲ್‌) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×7
#ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್‌ ಫೆಸ್ಟಿವಲ್‌) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×7
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    3
    ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ  ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ  ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.