Shuru
Apke Nagar Ki App…
ಶಿಗ್ಗಾವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎಂ.ಬಿ. ಬೆಟದೂರ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಸವರಾಜ ವೀ ಎಚ್
ಶಿಗ್ಗಾವಿ ತಾಲೂಕಿನ ಹಿರೇಮಣಕಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎಂ.ಬಿ. ಬೆಟದೂರ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
More news from ಕರ್ನಾಟಕ and nearby areas
- ಪೊಲೀಸರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಖಾಕಿ ಪಡೆ ನೀಟ್ ವಿದ್ಯಾರ್ಥಿಗಳನ್ನು ಅವರ ಸರಿಯಾದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮೂಲಕ ಅವರ ಭವಿಷ್ಯವನ್ನು ಉಳಿಸಿದೆ. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ನೀಡಿ, ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು.1
- ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಸಿದ್ದರಾಮಯ್ಯ ಅವರು ಮನವಿಯೊಂದನ್ನು ಮಾಡಿದ್ದಾರೆ. ತಮ್ಮನ್ನು ಕಾರ್ಯಕ್ರಮಗಳಲ್ಲಿ ಕೊನೆಯ ಭಾಷಣಕಾರರನ್ನಾಗಿ ಮಾಡಬೇಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.1
- ಶಿಗ್ಗಾವಿ ಪಟ್ಟಣದಲ್ಲಿ ಪುಟ್ಟರಾಜ ಗವಾಯಿ ಸೌಹಾರ್ದ ಸಹಕಾರಿ ಶಾಖೆಯ ನೂತನ ಬಾಡಿಗೆ ಕಟ್ಟಡ ಸ್ಥಳಾಂತರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ, ಶಾಖೆಯ ಮೂರನೇ ವರ್ಷದ ವಾರ್ಷಿಕೋತ್ಸವದ ನಿಮಿತ್ತ ಶ್ರೀ ಸತ್ಯನಾರಾಯಣ ಪೂಜಾ ಸಮಾರಂಭವನ್ನೂ ಆಯೋಜಿಸಲಾಗಿತ್ತು. ಶ್ರೀ ರುದ್ರಮುನಿ ಹೀರೆಮಠ ಸ್ವಾಮಿಜಿಗಳು ಹಾಗೂ ಸಹಕಾರಿಯ ಅಧ್ಯಕ್ಷರಾದ ಹನುಮಂತಪ್ಪ ಯು.ವಿ. ತಮ್ಮ ದಂಪತಿಗಳೊಂದಿಗೆ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಕಾರಿಯ ಉಪಾಧ್ಯಕ್ಷ ಸುಭಾಸ್‌ಗೌಡ ಪಾಟೀಲ, ಕುಮಾರಿ ಪ್ರತಿಕ್ಷಾ ಗೌಳಿ, ನಿರ್ದೇಶಕರಾದ ರಾಜಶೇಖರ ಶೆಟ್ಟರ್, ಬಸಯ್ಯ ಈಳಿಗೇರ, ನಿರ್ಮಲಾ ಈಳಿಗೇರ, ರೇಖಾ ವಡ್ಡರ್, ಸಿ.ಪಿ.ಐ. ಅನಿಲ್ ರಾಠೋಡ, ಶಿವಾನಂದ ಮ್ಯಾಗೇರಿ, ಉಮೇಶ್ ಗೌಳಿ, ಸಿ.ಡಿ. ಯತ್ನಳ್ಳಿ, ನಾಗಪ್ಪ ಬೆಂತೂರ, ವಿನೋದಾ ಪಾಟೀಲ, ಭರಮಜ್ಜ ನವಲಗುಂದ, ರಮೇಶ್ ಹರಿಜನ, ಶಾಖೆಯ ವ್ಯವಸ್ಥಾಪಕರಾದ ಅಶೋಕ್ ಹೋಳಲ ಹಾಗೂ ಎಲ್ಲ ಸಿಬ್ಬಂದಿ ವರ್ಗ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.2
- ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು. ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.2
- ಬೆಂಗಳೂರಿನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿನಿಯರು ಕಣ್ಣೀರಿಟ್ಟ ಘಟನೆ ವರದಿಯಾಗಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಲವಾರು ವಿದ್ಯಾರ್ಥಿನಿಯರು ದುಃಖಿತರಾಗಿ ಕಣ್ಣೀರು ಹಾಕುತ್ತಿರುವುದು ಕಂಡುಬಂದಿದೆ.1
- ಬಾದಾಮಿ ತಾಲೂಕಿನ ಕೆರೂರ್ ಪೊಲೀಸ್ ಠಾಣಾ ವ್ಯಾಪ್ತಿಯ ನರನೂರ ತಾಂಡಾ ಗ್ರಾಮದಲ್ಲಿ ಎಂಟನೇ ತರಗತಿ ಓದುತ್ತಿರುವ ಪ್ರಜ್ವಲ್ ಕುಮಾರ್ ಚವಾಣ್ ಎಂಬ ಅನಾಥ ವಿದ್ಯಾರ್ಥಿಯ ಮೇಲೆ ಭೀಕರ ಹಲ್ಲೆ ನಡೆದಿದೆ. ಕ್ರಿಕೆಟ್ ಆಡುವ ಸಂದರ್ಭದಲ್ಲಿ ಚಂಡು ಓರ್ವ ಅಜ್ಜಿಗೆ ತಗುಲಿದ ಕಾರಣ, ಆ ಅಜ್ಜಿಯ ಕುಟುಂಬಸ್ಥರು ವಿದ್ಯಾರ್ಥಿಯನ್ನು ಕಟ್ಟಿ ಹಾಕಿ ಚಪ್ಪಲಿ ಮತ್ತು ಕೈಗಳಿಂದ ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ, ಈ ಮಗು ತಂದೆ-ತಾಯಿ ಇಲ್ಲದ ಅನಾಥನಾಗಿದ್ದಾನೆ. ಈ ಹಲ್ಲೆಯಿಂದ ಗಾಯಗೊಂಡ ಮಗು ಸದ್ಯ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿನ ಪೋಷಕರು ಈ ಘಟನೆಯ ಬಗ್ಗೆ ತಕ್ಷಣ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ದೂರು ಸಲ್ಲಿಸುವಂತೆ ಆಗ್ರಹಿಸಿದ್ದಾರೆ.3