ಯಾವುದೇ ಕಾರಣಕ್ಕೂ ಬಂದ್ ಬೇಡ, ಅದರಿಂದ ಪರಿಹಾರ ಸಿಗಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಕಾವೇರಿ ಜಲ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ಆದೇಶವನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಶಾಸನಸೌಧದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಂದ್ ನಿರ್ಧಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆ "ಯಾವುದೇ ಕಾರಣಕ್ಕೂ ಬಂದ್ ಬೇಡ, ಬಂದ್‌ನಿಂದ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ" ಎಂದು ಸಿಎಂ ಸ್ಪಷ್ಟಪಡಿಸಿದರು. ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, "CWMA ಸಭೆಗೆ ರಾಜ್ಯದ ಪರವಾಗಿ ಮೂವರು ಹಿರಿಯ ಅಧಿಕಾರಿಗಳು ಹಾಜರಾಗಿದ್ದರು. ಎಸಿಎಸ್ ಗೌರವ್ ಗುಪ್ತಾ ಅವರು ರಾಜ್ಯದ ಪರ ಬಲವಾದ ವಾದ ಮಂಡಿಸಿ, ನೀರು ಬಿಡುಗಡೆಗೆ ಕಾಲಾವಕಾಶ ಕೋರಿದ್ದರು. ಆದರೆ ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ" ಎಂದು ವಿವರಿಸಿದರು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಗೆ ಬದ್ಧ ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ವಿವರಿಸಿದ ಸಿಎಂ: ಹಾರಂಗಿ: ಶೇ. 95 ಕಬಿನಿ: ಶೇ. 83 ಹೇಮಾವತಿ: ಶೇ. 67 ಕೆಆರ್‌ಎಸ್: ಶೇ. 36 "ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದ್ದು, ಕುಡಿಯುವ ನೀರು ಹಾಗೂ ರೈತರ ಹಿತವನ್ನು ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಈ ಹಿಂದೆಯೂ ಶಾಸಕರ ಸಭೆ ಕರೆದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಈಗಲೂ ರಾಜ್ಯದ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆ" ಎಂದು ಅವರು ಭರವಸೆ ನೀಡಿದರು. ತಮಿಳುನಾಡು ಸಿಎಂ ಭೇಟಿ ಮುಂದೂಡುವಂತೆ ಮನವಿ ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಆಗಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, "ತಮಿಳುನಾಡು ಮುಖ್ಯ ಕಾರ್ಯದರ್ಶಿಯವರಿಂದ ಬಂದಿದ್ದ ಪತ್ರದ ಹಿನ್ನೆಲೆಯಲ್ಲಿ ನಾನು ಸ್ವತಃ ತಮಿಳುನಾಡು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪ್ರಸ್ತುತ ಕಾವೇರಿ ವಿಚಾರವಾಗಿ ವಾತಾವರಣ ಸರಿಯಿಲ್ಲದ ಕಾರಣ, ಆಗಸ್ಟ್ 3ರ ಭೇಟಿಯನ್ನು ಮುಂದೂಡಿ ಬೇರೊಂದು ದಿನ ಬರುವಂತೆ ಕೋರಿದ್ದೇನೆ. ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆಯಾಗದಂತೆ ಈ ವಿವಾದವನ್ನು ಬಗೆಹರಿಸಬೇಕಿದೆ" ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಬಂದ್ ಬೇಡ, ಅದರಿಂದ ಪರಿಹಾರ ಸಿಗಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಕಾವೇರಿ ಜಲ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ಆದೇಶವನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಶಾಸನಸೌಧದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಂದ್ ನಿರ್ಧಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆ "ಯಾವುದೇ ಕಾರಣಕ್ಕೂ ಬಂದ್ ಬೇಡ, ಬಂದ್‌ನಿಂದ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ" ಎಂದು ಸಿಎಂ ಸ್ಪಷ್ಟಪಡಿಸಿದರು. ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, "CWMA ಸಭೆಗೆ ರಾಜ್ಯದ ಪರವಾಗಿ ಮೂವರು ಹಿರಿಯ ಅಧಿಕಾರಿಗಳು ಹಾಜರಾಗಿದ್ದರು. ಎಸಿಎಸ್ ಗೌರವ್ ಗುಪ್ತಾ ಅವರು ರಾಜ್ಯದ ಪರ ಬಲವಾದ ವಾದ ಮಂಡಿಸಿ, ನೀರು ಬಿಡುಗಡೆಗೆ ಕಾಲಾವಕಾಶ ಕೋರಿದ್ದರು. ಆದರೆ ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ" ಎಂದು ವಿವರಿಸಿದರು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಗೆ ಬದ್ಧ ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ವಿವರಿಸಿದ ಸಿಎಂ: ಹಾರಂಗಿ: ಶೇ. 95 ಕಬಿನಿ: ಶೇ. 83 ಹೇಮಾವತಿ: ಶೇ. 67 ಕೆಆರ್‌ಎಸ್: ಶೇ. 36 "ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದ್ದು, ಕುಡಿಯುವ ನೀರು ಹಾಗೂ ರೈತರ ಹಿತವನ್ನು ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಈ ಹಿಂದೆಯೂ ಶಾಸಕರ ಸಭೆ ಕರೆದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಈಗಲೂ ರಾಜ್ಯದ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆ" ಎಂದು ಅವರು ಭರವಸೆ ನೀಡಿದರು. ತಮಿಳುನಾಡು ಸಿಎಂ ಭೇಟಿ ಮುಂದೂಡುವಂತೆ ಮನವಿ ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಆಗಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, "ತಮಿಳುನಾಡು ಮುಖ್ಯ ಕಾರ್ಯದರ್ಶಿಯವರಿಂದ ಬಂದಿದ್ದ ಪತ್ರದ ಹಿನ್ನೆಲೆಯಲ್ಲಿ ನಾನು ಸ್ವತಃ ತಮಿಳುನಾಡು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪ್ರಸ್ತುತ ಕಾವೇರಿ ವಿಚಾರವಾಗಿ ವಾತಾವರಣ ಸರಿಯಿಲ್ಲದ ಕಾರಣ, ಆಗಸ್ಟ್ 3ರ ಭೇಟಿಯನ್ನು ಮುಂದೂಡಿ ಬೇರೊಂದು ದಿನ ಬರುವಂತೆ ಕೋರಿದ್ದೇನೆ. ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆಯಾಗದಂತೆ ಈ ವಿವಾದವನ್ನು ಬಗೆಹರಿಸಬೇಕಿದೆ" ಎಂದು ತಿಳಿಸಿದರು.
- ಯಾವುದೇ ಕಾರಣಕ್ಕೂ ಬಂದ್ ಬೇಡ, ಅದರಿಂದ ಪರಿಹಾರ ಸಿಗಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಕಾವೇರಿ ಜಲ ವಿವಾದ ಮತ್ತೆ ಕಾವು ಪಡೆದುಕೊಂಡಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ ಆದೇಶವನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಶಾಸನಸೌಧದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಂದ್ ನಿರ್ಧಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆ "ಯಾವುದೇ ಕಾರಣಕ್ಕೂ ಬಂದ್ ಬೇಡ, ಬಂದ್‌ನಿಂದ ಕಾವೇರಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ" ಎಂದು ಸಿಎಂ ಸ್ಪಷ್ಟಪಡಿಸಿದರು. ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, "CWMA ಸಭೆಗೆ ರಾಜ್ಯದ ಪರವಾಗಿ ಮೂವರು ಹಿರಿಯ ಅಧಿಕಾರಿಗಳು ಹಾಜರಾಗಿದ್ದರು. ಎಸಿಎಸ್ ಗೌರವ್ ಗುಪ್ತಾ ಅವರು ರಾಜ್ಯದ ಪರ ಬಲವಾದ ವಾದ ಮಂಡಿಸಿ, ನೀರು ಬಿಡುಗಡೆಗೆ ಕಾಲಾವಕಾಶ ಕೋರಿದ್ದರು. ಆದರೆ ಪ್ರಾಧಿಕಾರವು 4.5 ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ" ಎಂದು ವಿವರಿಸಿದರು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಗೆ ಬದ್ಧ ರಾಜ್ಯದ ಜಲಾಶಯಗಳ ಪ್ರಸ್ತುತ ನೀರಿನ ಮಟ್ಟವನ್ನು ವಿವರಿಸಿದ ಸಿಎಂ: ಹಾರಂಗಿ: ಶೇ. 95 ಕಬಿನಿ: ಶೇ. 83 ಹೇಮಾವತಿ: ಶೇ. 67 ಕೆಆರ್‌ಎಸ್: ಶೇ. 36 "ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದ್ದು, ಕುಡಿಯುವ ನೀರು ಹಾಗೂ ರೈತರ ಹಿತವನ್ನು ಕಾಪಾಡಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಈ ಹಿಂದೆಯೂ ಶಾಸಕರ ಸಭೆ ಕರೆದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಈಗಲೂ ರಾಜ್ಯದ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆ" ಎಂದು ಅವರು ಭರವಸೆ ನೀಡಿದರು. ತಮಿಳುನಾಡು ಸಿಎಂ ಭೇಟಿ ಮುಂದೂಡುವಂತೆ ಮನವಿ ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಅವರು ಕರ್ನಾಟಕಕ್ಕೆ ಆಗಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, "ತಮಿಳುನಾಡು ಮುಖ್ಯ ಕಾರ್ಯದರ್ಶಿಯವರಿಂದ ಬಂದಿದ್ದ ಪತ್ರದ ಹಿನ್ನೆಲೆಯಲ್ಲಿ ನಾನು ಸ್ವತಃ ತಮಿಳುನಾಡು ಸಿಎಂ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪ್ರಸ್ತುತ ಕಾವೇರಿ ವಿಚಾರವಾಗಿ ವಾತಾವರಣ ಸರಿಯಿಲ್ಲದ ಕಾರಣ, ಆಗಸ್ಟ್ 3ರ ಭೇಟಿಯನ್ನು ಮುಂದೂಡಿ ಬೇರೊಂದು ದಿನ ಬರುವಂತೆ ಕೋರಿದ್ದೇನೆ. ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆಯಾಗದಂತೆ ಈ ವಿವಾದವನ್ನು ಬಗೆಹರಿಸಬೇಕಿದೆ" ಎಂದು ತಿಳಿಸಿದರು.1
- *ಆರೋಗ್ಯ ಇಲಾಖೆಯಲ್ಲಿ ಸೇವಾ ಮನೋಭಾವನೆಯಿಂದ ವಿಶಿಷ್ಟ ಛಾಪು ಮೂಡಿಸಿದ ಜಯಚಂದ್ರಾರೆಡ್ಡಿ-ಡಿ ಎಚ್ ಓ ಡಾ. ಚೇತನ್* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಯಾಗಿ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ ಎಂದು ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್ ತಿಳಿಸಿದ್ದಾರೆ. ಪಟ್ಟಣದ ಕೊಡಿಕೊಂಡ ರಸ್ತೆಯ ಜಾಮೀಯಾ ಷಾದಿ ಮಹಲ್ ಆವರಣದಲ್ಲಿ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿದ್ದ ಸಿ.ಹೆಚ್. ಜಯಚಂದ್ರಾರೆಡ್ಡಿ ವಯೋನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮನಡೆಯಿತು,ಬೀಳ್ಕೊಡುಗೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್,ಸರ್ಕಾರಿ ಸೇವೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಗಳಾದ ಸಿ.ಹೆಚ್. ಜಯಚಂದ್ರಾರೆಡ್ಡಿ ಅವರ ವಯೋನಿವೃತ್ತಿ ಸುಖಮಯವಾಗಿ ಇರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆಯ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು. ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ. ಅವರ ಸೇವಾ ಮನೋಭಾವವು ಕಿರಿಯ ಸಿಬ್ಬಂದಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಂಗವಾಗಿ ಜಯಚಂದ್ರಾರೆಡ್ಡಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಹೋದ್ಯೋಗಿಗಳು ಅವರೊಂದಿಗೆ ಕಳೆದ ಸೇವಾ ದಿನಗಳ ಅನುಭವಗಳನ್ನು ಹಂಚಿಕೊಂಡು, ನಿವೃತ್ತ ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದರು. ಸಮಾರಂಭವು ಆತ್ಮೀಯ ವಾತಾವರಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸತ್ಯನಾರಾಯಣರೆಡ್ಡಿ,ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವಿನಯ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಟಿ ಡಿ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತ ರೆಡ್ಡಿ,ವೈದ್ಯರಾದ ಡಾ.ಜಗ್ನಾಥ್,ಡಾ! ಸುಜಿತ್,ಮುಖಂಡರಾದ ಪ್ರಭಾಕರ್ ರೆಡ್ಡಿ, ಸೇರಿದಂತೆ ಅನೇಕ ಗಣ್ಯರು ಶುಭಹಾರೈಯಿಸಿದರು..4
- ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.1
- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.1
- ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ. ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ! ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ. ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ. ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು1
- ಮಹಾರಾಷ್ಟ್ರ: ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿತ — ಸಾವಿನ ಸಂಖ್ಯೆ 9ಕ್ಕೆ ಏರಿಕೆ; ಮುಂದುವರೆದ NDRF ಅಧಿಕಾರಿಗಳ ರಕ್ಷಣಾ ಕಾರ್ಯಾಚರಣೆ ಮುಂಬಯಿ: ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಭಾಗವೊಂದು ಕುಸಿದು ಬಿದ್ದು ಕನಿಷ್ಠ 9 ಜನರು ಜೀವ ಕಳೆದುಕೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಬಾಲಾಜಿ ನಗರದಲ್ಲಿರುವ 'ಕೊಹಿನೂರ್' ಕಟ್ಟಡದಲ್ಲಿ ಗುರುವಾರ ರಾತ್ರಿ ಸುಮಾರು 11.30ರ ವೇಳೆಗೆ ಈ ದುರಂತ ಸಂಭವಿಸಿದೆ. ಒಟ್ಟು 48 ಕೊಠಡಿಗಳನ್ನು ಹೊಂದಿದ್ದ (ಪ್ರತಿ ಮಹಡಿಯಲ್ಲಿ 12 ಕೊಠಡಿಗಳು) ಈ ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ 'ಬಿ' ವಿಂಗ್ ಭಾಗ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ ಗುರುವಾರ ರಾತ್ರಿ 9 ಗಂಟೆಯ ಸುಮಾರಿಗೆ ಕಟ್ಟಡದಿಂದ ಭಾರಿ ಬಿರುಕು ಬಿಡುವ ಶಬ್ದಗಳು ಕೇಳಿಬಂದಿದ್ದವು. ಶಬ್ದದಿಂದ ಆತಂಕಗೊಂಡ ಸ್ಥಳೀಯರು ತಕ್ಷಣವೇ ಜಾಗರೂಕರಾಗಿ, ಕಟ್ಟಡದಲ್ಲಿದ್ದ ಹಲವು ಕುಟುಂಬಗಳನ್ನು ಹೊರತರಲು ನೆರವಾದರು. ಜನರು ಆವರಣದಿಂದ ಹೊರಬರುತ್ತಿದ್ದ ಸಮಯದಲ್ಲೇ ಕಟ್ಟಡ ಕುಸಿದುಬಿದ್ದಿದೆ. ಸ್ಥಳೀಯರ ಈ ಸಮಯಪ್ರಜ್ಞೆಯಿಂದಾಗಿ ಹಲವು ಜೀವಗಳು ಅಪಾಯದಿಂದ ಪಾರಾಗಿವೆ. ಭರದಿಂದ ಸಾಗಿರುವ ರಕ್ಷಣಾ ಕಾರ್ಯಾಚರಣೆ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಭಿವಂಡಿ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ತಂಡಗಳು ಇದುವರೆಗೆ ಅವಶೇಷಗಳ ಅಡಿಯಿಂದ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನು 8 ರಿಂದ 10 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದ್ದು, ಅವರನ್ನು ರಕ್ಷಿಸಲು ಸತತ ಪ್ರಯತ್ನ ನಡೆಯುತ್ತಿದೆ. ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯ ವೇಳೆ NDRF ಸಹಾಯಕ ಕಮಾಂಡೆಂಟ್ ಒಬ್ಬರು ಗಾಯಗೊಂಡಿದ್ದಾರೆ. ಗಾಯಳುಗಳನ್ನ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಹಿತಕರ ಘಟನೆಗಳು ನಡೆಯದಂತೆ ಹಾಗೂ ರಕ್ಷಣಾ ಕಾರ್ಯಕ್ಕೆ ಅಡಚಣೆಯಾಗದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.1