*ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಹುಟ್ಟುಹಬ್ಬ ಆಚರಣೆ* ಕೋಲಾರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೈಲಾಂಡಹಳ್ಳಿ ಮುರಳಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಪಕ್ಷದ ಸಂಘಟನೆ ಬಲಪಡಿಸುವುದು, ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು ಹಾಗೂ ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ಹಿರಿಯ ಮುಖಂಡ ಶ್ರೀಕೃಷ್ಣ, ಒಬಿಸಿ ಮಂಜುನಾಥ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿ, ಷಂಷೀರ್, ನಗರಸಭೆ ಮಾಜಿ ಸದಸ್ಯರಾದ ಸೂರಿ ಅಮರನಾಥ ಸೂರಿ ಬಾಲು ಕುಡಾ ಸದಸ್ಯ ಬಿ ಟಿ ಚಂದ್ರಶೇಖರ್ ಮುಖಂಡರಾದ ಪೆಮ್ಮಶೆಟ್ನೆಹಲ್ಳಿ ಸುರೇಶ್ ನದೀಂ ವೀರೇಂದ್ರ ಪಾಟೀಲ್ ರಾಜಕಲ್ಲಹಳ್ಳಿ ಶ್ರೀನಿವಾಸ್ ಚಿನ್ನಾಪುರ ನಾರಾಯಣಸ್ವಾಮಿ, ವೇಮಗಲ್ ರಮೇಶ್ ಮುಂತಾದವರು ಇದ್ದರು
*ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಹುಟ್ಟುಹಬ್ಬ ಆಚರಣೆ* ಕೋಲಾರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೈಲಾಂಡಹಳ್ಳಿ ಮುರಳಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಪಕ್ಷದ ಸಂಘಟನೆ ಬಲಪಡಿಸುವುದು, ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವುದು ಹಾಗೂ ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ಸರ್, ಹಿರಿಯ ಮುಖಂಡ ಶ್ರೀಕೃಷ್ಣ, ಒಬಿಸಿ ಮಂಜುನಾಥ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿ, ಷಂಷೀರ್, ನಗರಸಭೆ ಮಾಜಿ ಸದಸ್ಯರಾದ ಸೂರಿ ಅಮರನಾಥ ಸೂರಿ ಬಾಲು ಕುಡಾ ಸದಸ್ಯ ಬಿ ಟಿ ಚಂದ್ರಶೇಖರ್ ಮುಖಂಡರಾದ ಪೆಮ್ಮಶೆಟ್ನೆಹಲ್ಳಿ ಸುರೇಶ್ ನದೀಂ ವೀರೇಂದ್ರ ಪಾಟೀಲ್ ರಾಜಕಲ್ಲಹಳ್ಳಿ ಶ್ರೀನಿವಾಸ್ ಚಿನ್ನಾಪುರ ನಾರಾಯಣಸ್ವಾಮಿ, ವೇಮಗಲ್ ರಮೇಶ್ ಮುಂತಾದವರು ಇದ್ದರು
- ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ1
- ಒಂದೇ ಮಳೆಗೆ ಶಿವಾಜಿನಗರದ ಸ್ಥಿತಿ ನೋಡಿ ,ಜಲಾವೃತ್ತವಾದ ರಸ್ತೆಯಲ್ಲೇ ಆ್ಯಂಬುಲೆನ್ಸ್ ಸಂಚಾರ.!1
- ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.3
- ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.1
- ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ #onlinetv24x71
- ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ತುಮಕೂರು:ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು,ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿಲ್ಲ.ಇದರಿAದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಡಳಿತ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಮಳೆಯಿಲ್ಲದ ಕಾರಣ ಜಿಲ್ಲೆಯ ಶೇ70 ರಷ್ಟು ಭೂಮಿಯಲ್ಲಿ ಭಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಶೇ30ರಷ್ಟು ಭೂಮಿಯಲ್ಲಿನ ಫಸಲು ಸಹ ಸಕಾಲಕ್ಕೆ ಮಳೆಯಿಲ್ಲದೆ ಒಣಗಿದ್ದು,ದಿನದಿಂದ ದಿನಕ್ಕೆ ಅಂತರಜಲ ಕುಸಿಯುತ್ತಿದ್ದು,ಮುಂದಿನ 15-20 ದಿನಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ತಕ್ಷಣವೇ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಜಾನುವಾರುಗಳ ಮೇವಿಗೆ ಗೋಶಾಲೆ ತೆರೆಯುವುದು.ಎಕರೆಗೆ ತಲಾ 50 ಸಾವಿರ ಬೆಳೆ ಪರಿಹಾರ,ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದಂತೆ ವಿಬಿಜಿ ರಾಮಜಿ ಅಡಿಯಲ್ಲಿ ಕೆಲಸ ನೀಡಿ ಜನರ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ಈ ಬಾರಿ ಹೇಮಾವತಿ ಜಲಾಶಯದಲ್ಲಿ ಶೇ75ರಷ್ಟು ನೀರಿನ ಸಂಗ್ರಹವಿತ್ತು. ಆಗ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರುಗಳು ಎಚ್ಚೆತ್ತುಕೊಂಡು ನಮ್ಮ ಕೆರೆ, ಕೆಟ್ಟೆಗಳಿಗೆ ನೀರು ಹರಿಸಿಕೊಂಡಿದ್ದರೆ ಅಂತರ ಜಲ ಕುಸಿತ ತಡೆಯಬಹುದಿತ್ತು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ನಿರ್ಲಕ್ಷದ ಫಲವಾಗಿ ನಮ್ಮ ಜಿಲ್ಲೆಗೆ ಬರಬೇಕಾದ ನೀರು ತೆಮಿಳು ನಾಡಿಗೆ ಹರಿಸಿ,ಸರಕಾರ ತನ್ನ ಖರ್ಚಿ ಉಳಿಸಿಕೊಂಡಿದೆ.ನಮ್ಮ ತೋಟ, ತುಡಿಕೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ.ಈಗಲಾದರೂ ಜಿಲ್ಲಾಡಳಿತ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕೆಲಸ ಮಾಡಬೇಕು ಎಂದು ಎ.ಗೋವಿಂದರಾಜು ನುಡಿದರು. ಈಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ದಿನದಲ್ಲಿ ಒಂದು ಗಂಟೆ ರೈತರ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ದೊರೆಯುತ್ತಿಲ್ಲ.ನಿರ್ಮಾಣವಾಗಿರುವ 220 ಕೆ.ವಿ.ಉಪಸ್ಥಾವರಗಳು ಕಾರ್ಯಾರಂಭಗೊAಡಿಲ್ಲ.ಬೇಸ್ಕಾA ಅಧಿಕಾರಿಗಳು ಅಸಹಾಯಕರಾಗಿದ್ದಾರೆ.ಹಾಗಾಗಿ ಬೆಸ್ಕಾಂ ಸೂಪರಿಂಡೆAಟ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್‌ಗಳು ಸೆಪ್ಟಂಬರ್ 21ರೊಳಗೆ ರೈತರು,ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ಸೆಪ್ಟಂಬರ್ 23 ರಿಂದ ಹಂತ ಹಂತವಾಗಿ ಎಲ್ಲಾ ತಾಲೂಕು ಬೆಸ್ಕಾಂ ಕಚೇರಿ ಮತ್ತು ತಹಶೀಲ್ದಾರರ ಕಚೇರಿಯ ಮುಂದೆ ಪಿಕೇಟಿಗ್ ನಡೆಸಲಾಗುವುದು. ಮಧುಗಿರಿ ಉಪವಿಭಾಗಕ್ಕೆ ಸಂಬAಧಿಸಿ ದಂತೆ ಸೆಪ್ಟಂಬರ್ 23 ರಂದು ಮಧುಗಿರಿ ಎ.ಸಿ.ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು. ಈಲ್ಲೆಯಲ್ಲಿ ಸರಕಾರದ ಯೋಜನೆಗಳಾದ ಹೇಮಾವತಿ ನಾಲೆ, ಎತ್ತಿನಹೊಳೆ ಯೋಜನೆ, ರೈಲ್ವೆಗೆ ಸೇರಿ ರೈತರ ಸಾಕಷ್ಟು ಫಲವತ್ತಾ ಭೂಮಿಯನ್ನು ವಶಪಡಿಸಿಕೊಂಡು 20-30 ವರ್ಷಗಳು ಕಳೆದರು ವೈಜ್ಞಾನಿಕ ಪರಿಹಾರ ನೀಡಿಲ್ಲ. ನ್ಯಾಯಾಲಯಕ್ಕೆ ಹೋದ ರೈತರಿಗೆ ಕೋರ್ಟ್ ಆದೇಶದಂತೆ ಸುಮಾರು 500 ಕೋಟಿ ರೂಗಳಿಗೆ ಹೆಚ್ಚಿನ ಬಾಕಿ ನೀಡಬೇಕಿದೆ.ಆದರೆ ಇದುವರೆಗೂ ಒಂದು ನೈಯಾಫೈಸೆ ನೀಡಿಲ್ಲ. ಹಲವು ಮೂಲ ಜಮೀನುದಾರರು ಸಾವನ್ನಪ್ಪಿದ್ದಾರೆ.ಸರಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಹಾಗೆಯೇ ಕಳೆದ ಸಾಲಿನಲ್ಲಿ ನ್ಯಾಫೇಡ್ ಮೂಲಕ ಖರೀದಿಸಿದ್ದ ರಾಗಿಯ ಬಾಬ್ತು ಸುಮಾರು 400 ಕೋಟಿ ರೂ ಬಾಕಿ ಬರಬೇಕಾಗಿದೆ. ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಎ.ಗೋವಿಂದರಾಜು ಆಗ್ರಹಿಸಿದರು. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದೆ.ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದ ಕಾರಣ, ಉತ್ಪಾಧನಾ ವೆಚ್ಚ ಹೆಚ್ಚಾಗಿ,ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾನೆ.ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಂಸದರು ಒಂದು ಬಾರಿಗೆ ರೈತರ ಸಾಲಮನ್ನಾಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕು.ಹಾಗೆಯೇ ಬ್ಯಾಂಕುಗಳು, ಕಿರು ಹಣಕಾಸು ಸಂಸ್ಥೆಗಳು ಬಲವಂತದ ವಸೂಲಿ ಮಾಡದಂತೆ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ,ಬರದಿಂದ ಬೆಳೆ ನಷ್ಟದಿಂದ ಜನರು ಸಂಕಷ್ಟದಲ್ಲಿದ್ದು,ಸರಕಾರ ಕೇರಳ ಮಾದರಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ, ಬೇಳೆ, ಬೆಲ್ಲ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ರಿಯಾಯತಿ ದರದಲ್ಲಿ ನೀಡಬೇಕು.ಹಾಗೆಯೇ ಪಶುಸಂಗೋಪನೆಗೆ ಪೂರಕವಾಗಿ ಬೂಸ್ ಮತ್ತು ಹಿಂಡಿಯನ್ನು ಶೇ50ರ ರಿಯಾಯಿತಿ ದರದಲ್ಲಿ ನೀಡಬೇಕು. ಲೀಟರ್ ಹಾಲಿಗೆ 40 ರೂ ನೀಡಬೇಕೆಂದು ಒತ್ತಾಯಿಸಿದರು. ನಂದಿಹಳ್ಳಿ-ಮಲ್ಲಸAದ್ರ-ವಸAತನರಸಾಪುರ ಔಟರ್ ರಿಂಗ್ ರಸ್ತೆಗೆ ರೈತರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಅಧಿಕಾರಿಗಳು ಮುಂದಾಗುತ್ತಲೇ ಇದ್ದಾರೆ.ಜನರಿಗೆ ಹೆಚ್ಚು ಉಪಯೋಗವಿಲ್ಲದ ಔಟರ್‌ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ 7-8 ತಾಲೂಕುಗಳಿಗೆ ಮರಣ ಶಾಸನವಾಗಿರುವ ಏಕ್ಸ್ಪ್ರೆಸ್ ಕೇನಾಲ್ ಯೋಜನೆಯನ್ನು ಸರಕಾರ ರದ್ದು ಮಾಡಬೇಕು. ಕುಣಿಗಲ್ ನೆಪದಲ್ಲಿ ಬಿಡದಿಯೇ ಎಐ ಡೇಟಾ ಸೆಂಟರ್‌ಗೆ ನೀರು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ ಎಂದು ಜಿ.ಸಿ.ಶಂಕರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ಲೋಕೇಶ್, ರಂಗಹನುಮಯ್ಯ, ಷಬ್ಬೀರ್ ಪಾಷ, ಯುವಘಟಕದ ಮಂಜುನಾಥ್, ಜಟ್ಟಿ, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ತಡರಾತ್ರಿ ಸುರಿದ ಮಳೆಗೆ ಓಲ್ಡ್ ಏರ್ಪೋರ್ಟ್ ರಸ್ತೆ ಸ್ಥಿತಿ ನೋಡಿ,ನೀರು ಹರಿದು ಹೋಗಲು ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!1
- ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ ಮಾಜಿ ಸಂಸದ ಪ್ರತಾಪ್ ಸಿಂಹಗೆ ಮುಸ್ಲಿಂ ಮುಖಂಡರಿಂದ ಖಡಕ್ ಎಚ್ಚರಿಕೆ1
- ದೊಡ್ಡಆಲಹಳ್ಳಿಯಲ್ಲಿ ಗೌರಿ–ಗಣೇಶ ಹಬ್ಬ ಆಚರಣೆ: ಮಹಿಳೆಯರೊಂದಿಗೆ ಸರಳವಾಗಿ ಬೆರೆತ ಸಿಎಂ ಪತ್ನಿ ಶ್ರೀಮತಿ ಉಷಾ ಕನಕಪುರ: ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದಲ್ಲಿ ಗೌರಿ–ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಅವರು ತಂಬಿಟ್ಟಿನ ಆರತಿಯೊಂದಿಗೆ ಆಗಮಿಸಿ ನಾಗರಕಲ್ಲಿಗೆ ತನಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯವರ ಪತ್ನಿ ಎಂಬ ಯಾವುದೇ ಅಹಂ ಪ್ರದರ್ಶಿಸದೆ, ಗ್ರಾಮದ ಮಹಿಳೆಯರೊಂದಿಗೆ ಸಾಮಾನ್ಯ ಮಹಿಳೆಯಂತೆ ಬೆರೆತು ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಗ್ರಾಮೀಣ ಸಂಪ್ರದಾಯದಂತೆ ನಾಗರಕಲ್ಲಿಗೆ ಪೂಜೆ ಸಲ್ಲಿಸಿ, ಕುಟುಂಬ ಹಾಗೂ ರಾಜ್ಯದ ಒಳಿತಿಗಾಗಿ ಪ್ರಾರ್ಥಿಸಿದರು. ಪೂಜೆ ಬಳಿಕ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಉಷಾ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಈ ವೇಳೆ ಉಷಾ ಅವರು ಗ್ರಾಮದ ಮಹಿಳೆಯರೊಂದಿಗೆ ಆತ್ಮೀಯವಾಗಿ ಬೆರೆತು, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಉಷಾ ಅವರ ಸರಳತೆ ಹಾಗೂ ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಬೆರೆತ ನಡೆ ಸ್ಥಳೀಯರ ಗಮನ ಸೆಳೆಯಿತು1