Shuru
Apke Nagar Ki App…
ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ! ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!
NAYAN NEWS
ಆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಉಷಾರಾಣಿ ಎಂ. ಆಯ್ಕೆ! ಎಲ್ಲಾ ಸದಸ್ಯರ ಒಗ್ಗಟ್ಟಿನ ಬೆಂಬಲದೊಂದಿಗೆ ಚುನಾವಣಾ ಪ್ರಕ್ರಿಯೆ!
More news from Chikkaballapura and nearby areas
- ಶಿಡ್ಲಘಟ್ಟದ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವತಿಯಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ! ಬೈಕ್ ರ್ಯಾಲಿ ಮೂಲಕ ರಸ್ತೆ ಸುರಕ್ಷತಾ ಜಾಗೃತಿ..!1
- ದೇವನಹಳ್ಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ. ಚಾಲಕನ ಸೀಟ್ ಬೆಂಡ್ ಮಾಡಿ ಮಲಗಿರುವ ಸ್ಥಿತಿಯಲ್ಲಿ ಶವಪತ್ತೆ. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಘಟನೆ. ಬೆಳಗ್ಗೆಯಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿ. ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಮೇಲೆಳದ ಕಾರಣ ಎಬ್ಬಿಸಲು ಮುಂದಾಗಿದ್ದ ಸ್ಥಳೀಯರು. ಡೋರ್ ಹೊಡೆದರು ಎಚ್ಚರವಾಗದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಥಳೀಯರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ. ಮೆಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪಿರುವ ಶಂಕೆ. ವ್ಯಕ್ತಿಯ ಜೇಬಿನಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ತಾಳಹಳ್ಳಿ ದಾಖಲೆಗಳು ಪತ್ತೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಘಟನೆ.1
- ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಬಾಗೇಪಲ್ಲಿ:- ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿಗೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ಟ್ರ್ಯಾಕ್ಟರ್ ಮೂಲಕ ಮುಂಜಾನೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕನ ಪಿ.ಮಂಜುನಾಥ ರೆಡ್ಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ ರೈತರು ಹಾಗೂ ಪಧಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅಕ್ಟೋಬರ್ 15ಕ್ಕೆ ಕೇಂದ್ರ ಸರಕಾರ ಎಂಎಸ್‍ಪಿ ಘೋಷಿಸಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಗೆ ರೂ. 2,400 ಘೋಷಣೆ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಕೇವಲ ರೂ. 1,500 ರಿಂದ 1,700 ಇದೆ. ಇವತ್ತಿನ ಮಾರುಕಟ್ಟೆ ಬೆಲೆ ಮತ್ತು ಎಂಎಸ್‍ಪಿಗೆ ಹೋಲಿಸಿದರೆ ರೈತರು ಪ್ರತಿ ಕ್ವಿಂಟಾಲ್ ಗೆ ಸುಮಾರು 700 ರೂ. ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯ ಸರಕಾರವೇ ಮೆಕ್ಕೆಜೋಳ ಖರೀದಿಸಬೇಕು. ಇಲ್ಲದಿದ್ದರೆ ದಲ್ಲಾಳಿಗಳು ಲಾಭ ಮಾಡಿಕೊಳ್ಳುತ್ತಾರೆ. ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರವಿಚಂದ್ರರೆಡ್ಡಿ, ಎಚ್.ಪಿ. ಲಕ್ಷ್ಮೀನಾರಾಯಣ, ರಮೇಶ್ ರೆಡ್ಡಿ, ಗೋಪಾಲ್ (ಗೋಪಿ) ಎಸ್.ಎನ್. ರಾಮರೆಡ್ಡಿ, ಹೇಮಚಂದ್ರ, ಕೃಷ್ಣಮೂರ್ತಿ, ಆಂಜನೇಯರೆಡ್ಡಿ, ಅಶ್ವತ್ಥಪ್ಪ ಶ್ರೀರಾಮನಾಯ್ಕ್, ಜಿ.ಎಸ್, ಶ್ರೀನಿವಾಸ್, ಸುರೇಶ್,ಆದಿನಾರಾಯಣರೆಡ್ಡಿ, ಆನಂದ್, ಶ್ರೀರಾಮಪ್ಪ, ಸೇರಿದಂತೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ಪಧಾಧಿಕಾರಿಗಳು, ಹಲವಾರು ರೖತ ಮುಖಂಡರು ಹಾಜರಿದ್ದರು.1
- ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿಯ ನೆಲಗಂಗಮ್ಮ ದೇವಸ್ಥಾನದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಂದ ಹಮ್ಮಿಕೊಂಡಿದ್ದ ಭಜನಾ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಗುರಸ್ವಾಮಿಗಳು:ಮುನಿಯಪ್ಪ, ನಾರಾಯಣಸ್ವಾಮಿ, ಮಂಜುನಾಥ್,ಸುರೇಶ್, ಪೂಜಾರಿ, ಹಾಗೂ ಊರಿನ ಹಲವು ಸ್ವಾಮಿಗಳು ನೇತೃತ್ವದಲ್ಲಿ ಜರುಗಿತು. ಮಂಡಲ ಪೂಜೆಯ ಅಂಗವಾಗಿ ಏರ್ಪಡಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿರುವ ಭಕ್ತರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದ ಮುಖ್ಯಾಂಶಗಳು: ಹೊಂಬಾಳೆ ಪೂಜೆ: ಈ ಬಾರಿ ಮಾಲೆ ಧರಿಸಿರುವ ಕನ್ನೆ ಸ್ವಾಮಿಗಳಿಗಾಗಿ ವಿಶೇಷವಾಗಿ ಹೊಂಬಾಳೆ ಪೂಜೆಯನ್ನು ನೆರವೇರಿಸಲಾಯಿತು. ಭಜನಾ ಸುಧೆ: ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆಗಳ ಭಜನೆಯು ಭಕ್ತರಲ್ಲಿ ಆಧ್ಯಾತ್ಮಿಕ ಭಾವವನ್ನು ಮೂಡಿಸಿತು. ಪ್ರಸಾದ ವಿನಿಯೋಗ: ಕಾರ್ಯಕ್ರಮದ ಅಂತ್ಯದಲ್ಲಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಾಗೂ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ನಂಬರ್ ನಾರಾಯಣಪ್ಪ, ಮುನಿ ವೆಂಕಟಪ್ಪ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು. ಅಯ್ಯಪ್ಪ ಮಾಲೆ ಧರಿಸಿದ ಮಣಿಕಂಠ ಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿ, ಪೂಜಾ ಕೈಂಕರ್ಯಗಳನ್ನು ಸಾಂಗವಾಗಿ ನೆರವೇರಿಸಿಕೊಟ್ಟರು1
- ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ನಂಜಾಪುರ ಗ್ರಾಮದಲ್ಲಿ 8 ಅಡಿ, 30 ಕೆಜಿ ತೂಕದ ಹೆಬ್ಬಾವು ಪತ್ತೆ. ಹಲಗೂರು:- ಗೊಲ್ಲರಹಳ್ಳಿ ಗ್ರಾಮದ ಸಮೀಪ ಇರುವ ನಂಜಾಪುರ ಗ್ರಾಮದ ಮಹದೇವು ಎಂಬುವರ ಜಮೀನಿನಲ್ಲಿ ಬುಧವಾರ ರಾತ್ರಿ ಸುಮಾರು ಎಂಟು ಅಡಿ ಉದ್ದದ 30 ಕೆಜಿ ತೂಕದ ಹೆಬ್ಬಾವು ಪತ್ತೆಯಾಗಿದ್ದು ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗ ತಜ್ಞರಾದ ಜಗದೀಶ ಮತ್ತು ಕೃಷ್ಣ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಬಿಟ್ಟಿರುತ್ತಾರೆ. ನಂಜಾಪುರ ಗ್ರಾಮದ ಮಹಾದೇವ ಎಂಬುವರ ಜಮೀನಿನಲ್ಲಿ ಬುಧವಾರ ರಾತ್ರಿ ಭಾರಿ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡ ತಕ್ಷಣ ಅವರು ಅರಣ್ಯ ಇಲಾಖೆಯವರಿಗೂ ಮತ್ತು ಉರಗ ತಜ್ಞರಿಗೆ ವಿಷಯ ತಿಳಿಸಿದ ಮೇರೆಗೆ ಸ್ಥಳಕ್ಕೆ ತಕ್ಷಣ ಬಂದ ಉರಗ ತಜ್ಞರಾದ ಜಗದೀಶ ಮತ್ತು ಕೃಷ್ಣ ಸುರಕ್ಷಿತವಾಗಿ ಅದನ್ನು ಹಿಡಿದು ಮುತ್ತತ್ತಿ ಅರಣ್ಯಪ್ರದೇಶಕ್ಕೆ ಸುರಕ್ಷಿತವಾಗಿ ಹೆಬ್ಬಾವನ್ನು ಬಿಟ್ಟು, ನಂತರ ಜಗದೀಶ್ ಮಾತನಾಡುತ್ತಾ ನಮ್ಮ ಹಲಗೂರು ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಾಗಿ ಹೆಬ್ಬಾವುಗಳು ಕಾಣಿಸಿಕೊಳ್ಳುತ್ತಿದ್ದು, ಅವುಗಳು ರೈತರು ಸಾಕಿದ ಆಡು ,ಕುರಿ, ಮೇಕೆ ಮತ್ತು ಇತರೆ ಪ್ರಾಣಿಗಳನ್ನು ಮೊದಲು ಕಾಲನ್ನು ಹಿಡಿದು ನಂತರ ಅದನ್ನು ಸುತ್ತಿಕೊಂಡು ಅದರ ಪ್ರಾಣ ಹೋದ ನಂತರ ನುಂಗುತ್ತದೆ ,ಆಹಾರದ ಕೊರತೆಯಿಂದ ಅವುಗಳು ಜಮೀನಿನ ಹತ್ತಿರ ಹೆಚ್ಚು ಓಡಾಡುತ್ತಿವೆ ಇದುವರೆಗೂ 12 ರಿಂದ 13 ಹೆಬ್ಬಾವುಗಳನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಯವರ ಸಮ್ಮುಖದಲ್ಲಿ ಅರಣ್ಯ ಪ್ರದೇಶಕ್ಕೆ ಬಿಟ್ಟಿರುತ್ತೇನೆ ಮತ್ತು ನಾಗರಹಾವು, ಕೇರೆ ಹಾವು ಅಥವಾ ಇನ್ಯಾವುದೇ ತರದ ಹಾವುಗಳು ಇದ್ದರೂ ಸಹ ಅವುಗಳನ್ನು ಸಾಯಿಸಲು ಹೋಗಬೇಡಿ ,ನಮಗೆ ವಿಷಯ ತಿಳಿಸಿದ ತಕ್ಷಣ ನಾವು ಬಂದು ಯಾವುದೇ ಸಂಭಾವನೆ ಪಡೆಯದೆ ಸುರಕ್ಷಿತವಾಗಿ ನಾನಾಗಲೇ ಅಥವಾ ನನ್ನ ಸಹಪಾಠಿ ಕೃಷ್ಣನಾಗಲಿ ಬಂದು ಅವನ್ನು ಹಿಡಿದು ಕಾಡಿಗೆ ಬಿಡುತ್ತೇವೆ .ನಮಗೆ ದೂರವಾಣಿ ಕರೆ ಮಾಡಿದರೆ ಸಾಕು ನಾವೇ ಬರುತ್ತೇವೆ ನಮ್ಮ ದೂರವಾಣಿ ಸಂಖ್ಯೆ 8431500189 ಜಗದೀಶ.9686955795 ಕೃಷ್ಣ ಆಗಿರುತ್ತದೆ ಕರೆ ಮಾಡುವಂತೆ ಮನವಿ ಮಾಡಿದರು. ಜಮೀನಿನ ಮಾಲೀಕರಾದ ಮಹಾದೇವ ಮಾತನಾಡಿ, ನಾವು ರಾತ್ರಿ ಹಗಲುಎನ್ನದೆ ಜಮೀನಿನಲ್ಲಿ ನೀರು ಹಾಯಿಸಿಕೊಂಡು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತಿದ್ದೇವೆ .ಎಂದಿನಂತೆ ಬುಧವಾರ ರಾತ್ರಿ ಜಮೀನಿಗೆ ನೀರು ಹಾಯಿಸಲು ಬಂದಾಗ ಹೆಬ್ಬಾವುಕಂಡು ತುಂಬಾ ಭಯಪಟ್ಟಿದ್ದೇನೆ, ಮತ್ತು ಇತ್ತೀಚೆಗೆ ಚಿರತೆ ಹಾವಳಿಯು ಸಹ ಇದೆ ಎಂದರು . ಹಲಗೂರು ಸಮೀಪ ಹೆಬ್ಬಾವು ಪತ್ತೆ ,ಉರಗ ತಜ್ಞರು ಹೆಬ್ಬಾವನ್ನು ಹಿಡಿದಿರುವ ಚಿತ್ರ.1
- ಹನೂರು: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಆಕ್ರಮ ಮದ್ಯೆ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಏರ್ಪಟ್ಟು ಪೊಲೀಸ್ ಪೇದೆಯೊರ್ವನ ಪುತ್ರನ್ನೆ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡನಿಗೆ ಹಲ್ಲೆ ಮಾಡಿರುವ ಘಟನೆ ಜರುಗಿದೆ ಲೋಕನಹಳ್ಳಿ ಹೋಬಳಿಯ ಬೂದಿಪಡಗ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಹೆಚ್ಚಾಗುತ್ತಿರುವ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಯಜಮಾನರು ಸಭೆ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಗ್ರಾಮದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತೀಟೆ ಜಗಳದ ವೇಳೆ, ಬೂದಿಪಡಗ ಗ್ರಾಮದ ಪೊಲೀಸ್ ಪೇದೆಯೋರ್ವನ ಮಗ ಕಿಶೋರ್ ಎಂಬಾತನು, ಗ್ರಾಮದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮನೆಗೆ ತೆರಳಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ರಂಗೇಗೌಡ ಅವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ ಹಲ್ಲೆಯಿಂದ ಗಾಯಗೊಂಡ ಅವರು ಪ್ರಸ್ತುತ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಹನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.1
- *ಭಾರತ ನಲ್ಲಿ ವೈರಲ್*1
- ವಾಣಿಜ್ಯ ಅಂಗಡಿ ಮಳಿಗೆಗಳು ಉದ್ಘಾಟನೆ ಮಾಡಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ತಾಲ್ಲೂಕು ಮಿಟ್ಟೇಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣ ಬಳಿ 20:00 ಲಕ್ಷ ರೂ.ವೆಚ್ಚದಲ್ಲಿ ಮಿಟ್ಟೇಮರಿ ಗ್ರಾಮ ಪಂಚಾಯತಿ ವರ್ಗ-1ರ ಯೋಜನೆಯಡಿ ಅನುದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಅಂಗಡಿ ಮಳಿಗೆಗಳನ್ನು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಹಂತ ಹಂತವಾಗಿ ನೆರವೇರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಅಂಗಡಿ ಮಳಿಗೆಗಳನ್ನು ನಿರ್ಮಾಣ ಮಾಡಲು ಸಹಕರಿಸಿದ ಗ್ರಾಮ ಪಂಚಾಯತಿ ಅದ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಅಭಿನಂದನೆಗಳು ತಿಳಿಸುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದಿಗೆ ಏಳು ವರ್ಷ, 240 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುವ ಮೂಲಕ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ ಆದ್ದರಿಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಕೋಮುವಾದ ವಿರೋಧಿ ನಿಲುವುಗಳನ್ನು ಸದಾ ಪ್ರತಿಪಾದಿಸಿರುವ ಸಿದ್ದರಾಮಯ್ಯ ಅವರು, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇತ್ತೀಚಿನ ಅವಧಿಯಲ್ಲಿ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮಾಜಿ ಸಿಎಂ ದಿವಂಗತ ದೇವರಾಜ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತೀಕ್ ಭಾಷಾ,ಇಓ ರಮೇಶ್ ಕುಮಾರ್, ಗ್ರಾಮ ಪಂಚಾಯತಿ ಅದ್ಯಕ್ಷೆ ಸೀತಮ್ಮ ಅಂಜನಪ್ಪ,ಉಪಾಧ್ಯಕ್ಷೆ ಗೌತಮಿ ವಿಜಯಗೋಪಾಲ ರೆಡ್ಡಿ, ಮಾಜಿ ಅಧ್ಯಕ್ಷ ನರಸಿಂಹಯ್ಯ,ಸದಸ್ಯರಾದ ನರಸರೆಡ್ಡಿ,ಮಮತಾ ಎನ್ ಮಂಜುನಾಥ್, ಅಶ್ವಥಮ್ಮ ಕಾಮರೆಡ್ಡಿ,ನಾರಾಯಣ ಸ್ವಾಮಿ, ವೆಂಕಟೇಶ್, ಅಂಜನಮ್ಮ ನಾಗರಾಜು, ಮಂಜುಳಾ ಶ್ರೀನಿವಾಸ್, ವೆಂಕಟರವಣಪ್ಪ,ಅಂಜನಪ್ಪ,ರಾಮಲಕ್ಷ್ಮಮ್ಮ,ಪಿ.ಡಿ.ಓ ಡಿ.ಎಂ.ವೆಂಕಟೇಶಪ್ಪ, ಗುತ್ತಿಗೆದಾರ ನಾಗರಾಜು ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಯುವಕರು, ಹಿರಿಯರು, ಗ್ರಾಮಸ್ಥರು, ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.1