ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಶ್ರೀ ರಾಘವೇಂದ್ರ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಘಟಿಕೋತ್ಸವ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಶ್ರೀ ರಾಘವೇಂದ್ರ ಸ್ವಾಮೀಜಿ ಕ್ರೀಡಾಂಗಣದಲ್ಲಿಂದು ಶ್ರೀ ರಾಘವೇಂದ್ರ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಘಟಿಕೋತ್ಸವ ಕಾರ್ಯಕ್ರಮವನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನಗಳ ಖಾತೆಗಳ ಸಚಿವ ಪ್ರಹ್ಲಾದ್ ಜೋಷಿ ಉದ್ಘಾಟಿಸಿದರು. ಆಯುರ್ವೇದ ವೈದ್ಯಕೀಯ ಪದವಿ ಪೂರ್ಣಗೊಳಿಸಿದ ರ್‍ಯಾಂಕ್ ವಿಜೇತರು ಸೇರಿದಂತೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಕುಲಪತಿ ಡಾ.ಬಿ.ಸಿ.ಭಗವಾನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

- ಅದ್ದೂರಿಯಾಗಿ ಜರುಗಿದ ಶ್ರೀ ವೀರಭದ್ರ ಸ್ವಾಮಿ ಜಾತ್ರಾ ಮಹೋತ್ಸವ: ಮುಕ್ತಿ ಬಾವುಟ 9 ಲಕ್ಷಕ್ಕೆ ಹರಾಜು ಚಳ್ಳಕೆರೆ: ನಗರದ ಆರಾಧ್ಯ ದೈವವಾದ ಶ್ರೀ ವೀರಭದ್ರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವವು ಶನಿವಾರ ಸಂಜೆ 5.15ರ ವೇಳೆಗೆ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು. ವೀರಭದ್ರಸ್ವಾಮಿಗೆ ಬೃಹತ್ ಹೂವಿನ ಹಾರಗಳು, ಬಣ್ಣ ಬಣ್ಣದ ಬಾವುಟಗಳಿಂದ ಅಲಂಕರಿಸಲ್ಪಟ್ಟ ಭವ್ಯ ರಥದಲ್ಲಿ ದೇವರನ್ನು ಆಸೀನಗೊಳಿಸಿ ಪೂಜೆ ಸಲ್ಲಿಸಿದ ಬಳಿಕ ಜಯಘೋಷಗಳ ಮಧ್ಯೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ರಥವು ನಗರದ ತೇರು ಬೀದಿಯಲ್ಲಿ ಗಾಂಭೀರ್ಯದಿಂದ ಸಾಗಿತು. ಸಾವಿರಾರು ಭಕ್ತರು ಭಕ್ತಿಭಾವದಿಂದ ಭಾಗವಹಿಸಿದರು. ರಥೋತ್ಸವದ ಮುಂಭಾಗದಲ್ಲಿ ಮಂಗಳವಾದ್ಯಗಳು, ಕರಡಿ ಮಜಲು, ನಂದಿಕೋಲು, ಕೋಲಾಟ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ತಂದವು. ಭಕ್ತರು “ಸ್ವಾಮಿಗೆ ಜಯಕಾರ” ಕೂಗುತ್ತಾ ಸೂರುಬೆಲ್ಲ, ಮೆಣಸು, ಬಾಳೆಹಣ್ಣುಗಳನ್ನು ತೇರಿಗೆ ಎಸೆಯುವ ಮೂಲಕ ತಮ್ಮ ಹರಕೆಗಳನ್ನು ಸಲ್ಲಿಸಿ ಭಕ್ತಿ ಭಾವ ವ್ಯಕ್ತಪಡಿಸಿದರು. ಜಾತ್ರೆಯ ವಿಶೇಷ ಆಕರ್ಷಣೆಯಾಗಿರುವ “ಮುಕ್ತಿ ಬಾವುಟ” ಹರಾಜು ಪ್ರಕ್ರಿಯೆಯೂ ಭಾರೀ ಕುತೂಹಲಕ್ಕೆ ಕಾರಣವಾಯಿತು. ಈ ವೇಳೆ ನಗರದ ವಾಣಿಜ್ಯೋದ್ಯಮಿ ಎಸ್. ರುದ್ರಮನಿಯಪ್ಪ 9ಲಕ್ಷ ರೂಪಾಯಿಗೆ ಬಿಡ್ ಮಾಡುವ ಮೂಲಕ ಮುಕ್ತಿ ಬಾವುಟವನ್ನು ತಮ್ಮದಾಗಿಸಿಕೊಂಡರು. ಈ ಸಂದರ್ಭ ಭಕ್ತರು ಜಯಘೋಷಗಳ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಜಾತ್ರಾ ಮಹೋತ್ಸವದ ಅಂಗವಾಗಿ ಮೇ 6ರಿಂದ ಸೂಜಿಮಲ್ಲೇಶ್ವರ ನಗರದಲ್ಲಿ ಒಂದು ವಾರದ ದನಗಳ ಜಾತ್ರೆ ನಡೆಯಲಿದೆ. ದನಗಳಿಗೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ರೈತರು ತಮ್ಮ ದನಗಳೊಂದಿಗೆ ಮೇವು ತರಬೇಕೆಂದು ದೇವಸ್ಥಾನ ಸಮಿತಿ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಶಾಸಕರಾದ ಟಿ ರಘುಮೂರ್ತಿ.ಕೆ.ಸಿ ವಿರೇಂದ್ರ ಪಪ್ಪಿ ವೀರಭದ್ರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.1
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಶ್ರೀ ರಾಘವೇಂದ್ರ ಸ್ವಾಮೀಜಿ ಕ್ರೀಡಾಂಗಣದಲ್ಲಿಂದು ಶ್ರೀ ರಾಘವೇಂದ್ರ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಘಟಿಕೋತ್ಸವ ಕಾರ್ಯಕ್ರಮವನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನಗಳ ಖಾತೆಗಳ ಸಚಿವ ಪ್ರಹ್ಲಾದ್ ಜೋಷಿ ಉದ್ಘಾಟಿಸಿದರು. ಆಯುರ್ವೇದ ವೈದ್ಯಕೀಯ ಪದವಿ ಪೂರ್ಣಗೊಳಿಸಿದ ರ್‍ಯಾಂಕ್ ವಿಜೇತರು ಸೇರಿದಂತೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಿವಶರಣ ಮಾದರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಕುಲಪತಿ ಡಾ.ಬಿ.ಸಿ.ಭಗವಾನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.1
- ಯುವಕನ ಕತ್ತು ಕೊಯ್ದು ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಉಮರ್ ಸರ್ಕಲ್ ಬಳಿ ಭಾನುವಾರ ನಡೆದಿದೆ. ಕೊಲೆಯಾದ ಯುವಕನನ್ನು ಪ್ರಮೋದ್ ಬಾಬು ಎಂದು ಗುರುತಿಸಲಾಗಿದೆ. ಪ್ರಮೋದ್ ಬಾಬುವನ್ನು ಬರ್ಬರವಾಗಿ ಕೊಲೆ ಮಾಡಿದ ಕಾರಣ ತಿಳಿದು ಬಂದಿಲ್ಲ. ಪ್ರಮೋದ್ ಬಾಬು ಎಸ್ ಆರ್ ಇ ಬಸ್ ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಬಂದು ಮನೆಗೆ ಮಲಗಿದಾಗ ಈ ಘಟನೆ ನಡೆದಿದೆ. ಸಹೋದರನನ್ನು ಕಳೆದು ಕೊಂಡ ಅಕ್ಕ ತಂಗಿಯರ ಆಕ್ರಂದನ ಮುಗಿಲು ಮುಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- Post by Karibasava Balal1
- Post by ALTAF,❤️🙏1
- Post by Hanumantha yadav1
- ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ: ದಲಿತ ಪರ ಸಂಘಟನೆಗಳು ಮಹಿಳಾ ಪರ ಸಂಘಟನೆಗಳು ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು "ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.1
- Post by Suresh Belagere1