ಶಿವಮೊಗ್ಗ-ಮಧ್ಯರಾತ್ರಿ ವರುಣನ ಆರ್ಭಟ:ಹಲವೆಡೆ ಅವಾಂತರ ಶಿವಮೊಗ್ಗ: ನಗರದಲ್ಲಿ ಮಧ್ಯರಾತ್ರಿ ಯಲ್ಲಿ ಹೊಡೆದ ಮಳೆ ಶರಾವತಿ ನಗರದ ನಿವಾಸಿಗಳ ನಿದ್ದೆ ಕಡೆಸಿದೆ. ರಾಜಾಕಾಲುವೆ ಸ್ವಚ್ಛಗೊಳಿಸದ ಹಿನ್ನಲೆಯಲ್ಲಿ 10-15 ಮನೆಗಳಿಗೆ ಗಲೀಜು ನೀರು ನುಗ್ಗಿದೆ. ಅಲ್ಲದೆ ಸಾಗರ ರಸ್ತೆಯ ಎಸ್ ಎಸ್ ಇಂಡಸ್ಟ್ರಿಯಲ್ ಗೆ ಮಳೆ ನೀರು ನುಗ್ಗಿದೆ. ಎಫ್ ಸಿ ಐ ಕಾಂಪೌಂಡ್ ಸಹ ಕುಸಿದು ಬಿದ್ದಿದೆ. ಗೋಡೆ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಟಾಟಾ ಏಸ್ ಜಖಂ ಗೊಂಡಿದೆ. ಮಧ್ಯರಾತ್ರಿ ಗುಡುಗು ಮಿಂಚು ಸಮೇತ ಹೊಡೆದ ಮಳೆ ಅಕ್ಷರಶಃ ಸಾರ್ವಜನಿಕರನ್ನ ಹೈರಾಣು ಮಾಡಿದೆ. ಶರಾವತಿ ನಗರದ 7 ತಿರುವಿನಲ್ಲಿದ್ದ ಗೌರಮ್ಮ,ಮಂಜುನಾಥ್,ಪದ್ಮಮ್ಮ, ಮಾದಯ್ಯ, ಲಿಲ್ಲಿ ಎಂಬುವರ ಮನೆಗೆ ನೀರು ನುಗ್ಗಿದ ಕಾರಣ ಮನೆಗಳ, ಫ್ರಿಡ್ಜು, ಟಿವಿ, ವಾಷಿಂಗ್ ಮಿಷನ್ ಮೊದಲಾದ ಯಂತ್ರೋ ಪಕರಣಗಳು ಹಾಳಾಗಿವೆ. ಇಲ್ಲಿನ ಮನೆಗಳು ತಗ್ಗಿನ ಪ್ರದೇಶ ದಲ್ಲಿರುವುದರಿಂದ ಮಳೆ ನೀರು ಸಲೀಸಾಗಿ ನುಗ್ಗುಲಿದೆ. ಇನ್ನು ಸಾಗರ ರಸ್ತೆಯಲ್ಲಿರುವ ಎಸ್ ಎಸ್ ಇಂಡಸ್ಟ್ರೀಸ್ ಗೆ ನಿನ್ನೆ ಸುರಿದ ಅಧಿಕ ಮಳೆಯಿಂದ ಇಂಡಸ್ಟ್ರಿ ಯಲ್ಲಿ ನೀರು ಒಳಗೆ ನುಗ್ಗಿದೆ. ಮುಳ್ಳು ತಂತಿ ಮತ್ತು ಚೈನ್ ಲಿಂಕ್ ಮೆಶ್ ತಯಾರಿಸುವ ಇಂಡಸ್ಟ್ರೀಸ್ ನಲ್ಲಿ ತಯಾರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ತಂತಿಗಳು ಮತ್ತು ಇತರೆ ವಸ್ತುಗಳಿಗೆ ಮಳೆ ನೀರು ನುಗ್ಗಿ ಹಾನಿಗೊಳಗಾಗಿದೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೀರನ್ನು ಫ್ಲೋಟಿಂಗ್ ಪಂಪ್ ಸಹಾಯದಿಂದ ಹೊರಕ್ಕೆ ಹಾಕಿದ್ದಾರೆ. ಕಾರ್ಯಚರಣೆಯಲ್ಲಿ ಅಧಿಕಾರಿ ಸಿಬ್ಬಂದಿ ಹುಸೇನ್ ಅಶೋಕ್ ನೂರುಲ್ಲಾ, ಸುನಿಲ್, ಸತೀಶ್, ಅಭಿಷೇಕ್ ಭಾಗಿ ಯಾಗಿದ್ದರು. ಆಲ್ಕೊಳ ವೃತ್ತದಿಂದ ವಿಕಾಸ ಶಾಲೆಗೆ ಹೋಗುವ ರಸ್ತೆಯಲ್ಲಿ ಎಫ್ ಸಿಐ ಕಾಂಪೌಂಡ್ ಕುಸಿದಿದೆ. ಎಫ್ ಸಿಐ ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಟಾಟಾ ಏಸ್ ಮೇಲೆ ಕಂಪೌಂಡ್ ಉರುಳಿದೆ. ವಾಹನ ಜಖಂ ಆಗಿದೆ. ಅದರ ಜೊತೆಗೆ ಗೋಡೆ ಬಿದ್ದ ರಭಸಕ್ಕೆ ಲೈಟ್ ಕಂಬ ಸಹ ಉರುಳಿದೆ.
ಶಿವಮೊಗ್ಗ-ಮಧ್ಯರಾತ್ರಿ ವರುಣನ ಆರ್ಭಟ:ಹಲವೆಡೆ ಅವಾಂತರ ಶಿವಮೊಗ್ಗ: ನಗರದಲ್ಲಿ ಮಧ್ಯರಾತ್ರಿ ಯಲ್ಲಿ ಹೊಡೆದ ಮಳೆ ಶರಾವತಿ ನಗರದ ನಿವಾಸಿಗಳ ನಿದ್ದೆ ಕಡೆಸಿದೆ. ರಾಜಾಕಾಲುವೆ ಸ್ವಚ್ಛಗೊಳಿಸದ ಹಿನ್ನಲೆಯಲ್ಲಿ 10-15 ಮನೆಗಳಿಗೆ ಗಲೀಜು ನೀರು ನುಗ್ಗಿದೆ. ಅಲ್ಲದೆ ಸಾಗರ ರಸ್ತೆಯ ಎಸ್ ಎಸ್ ಇಂಡಸ್ಟ್ರಿಯಲ್ ಗೆ ಮಳೆ ನೀರು ನುಗ್ಗಿದೆ. ಎಫ್ ಸಿ ಐ ಕಾಂಪೌಂಡ್ ಸಹ ಕುಸಿದು ಬಿದ್ದಿದೆ. ಗೋಡೆ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಟಾಟಾ ಏಸ್ ಜಖಂ ಗೊಂಡಿದೆ. ಮಧ್ಯರಾತ್ರಿ ಗುಡುಗು ಮಿಂಚು ಸಮೇತ ಹೊಡೆದ ಮಳೆ ಅಕ್ಷರಶಃ ಸಾರ್ವಜನಿಕರನ್ನ ಹೈರಾಣು ಮಾಡಿದೆ. ಶರಾವತಿ
ನಗರದ 7 ತಿರುವಿನಲ್ಲಿದ್ದ ಗೌರಮ್ಮ,ಮಂಜುನಾಥ್,ಪದ್ಮಮ್ಮ, ಮಾದಯ್ಯ, ಲಿಲ್ಲಿ ಎಂಬುವರ ಮನೆಗೆ ನೀರು ನುಗ್ಗಿದ ಕಾರಣ ಮನೆಗಳ, ಫ್ರಿಡ್ಜು, ಟಿವಿ, ವಾಷಿಂಗ್ ಮಿಷನ್ ಮೊದಲಾದ ಯಂತ್ರೋ ಪಕರಣಗಳು ಹಾಳಾಗಿವೆ. ಇಲ್ಲಿನ ಮನೆಗಳು ತಗ್ಗಿನ ಪ್ರದೇಶ ದಲ್ಲಿರುವುದರಿಂದ ಮಳೆ ನೀರು ಸಲೀಸಾಗಿ ನುಗ್ಗುಲಿದೆ. ಇನ್ನು ಸಾಗರ ರಸ್ತೆಯಲ್ಲಿರುವ ಎಸ್ ಎಸ್ ಇಂಡಸ್ಟ್ರೀಸ್ ಗೆ ನಿನ್ನೆ ಸುರಿದ ಅಧಿಕ ಮಳೆಯಿಂದ ಇಂಡಸ್ಟ್ರಿ ಯಲ್ಲಿ ನೀರು ಒಳಗೆ ನುಗ್ಗಿದೆ. ಮುಳ್ಳು ತಂತಿ ಮತ್ತು ಚೈನ್ ಲಿಂಕ್ ಮೆಶ್ ತಯಾರಿಸುವ ಇಂಡಸ್ಟ್ರೀಸ್ ನಲ್ಲಿ ತಯಾರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ತಂತಿಗಳು ಮತ್ತು ಇತರೆ
ವಸ್ತುಗಳಿಗೆ ಮಳೆ ನೀರು ನುಗ್ಗಿ ಹಾನಿಗೊಳಗಾಗಿದೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೀರನ್ನು ಫ್ಲೋಟಿಂಗ್ ಪಂಪ್ ಸಹಾಯದಿಂದ ಹೊರಕ್ಕೆ ಹಾಕಿದ್ದಾರೆ. ಕಾರ್ಯಚರಣೆಯಲ್ಲಿ ಅಧಿಕಾರಿ ಸಿಬ್ಬಂದಿ ಹುಸೇನ್ ಅಶೋಕ್ ನೂರುಲ್ಲಾ, ಸುನಿಲ್, ಸತೀಶ್, ಅಭಿಷೇಕ್ ಭಾಗಿ ಯಾಗಿದ್ದರು. ಆಲ್ಕೊಳ ವೃತ್ತದಿಂದ ವಿಕಾಸ ಶಾಲೆಗೆ ಹೋಗುವ ರಸ್ತೆಯಲ್ಲಿ ಎಫ್ ಸಿಐ ಕಾಂಪೌಂಡ್ ಕುಸಿದಿದೆ. ಎಫ್ ಸಿಐ ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಟಾಟಾ ಏಸ್ ಮೇಲೆ ಕಂಪೌಂಡ್ ಉರುಳಿದೆ. ವಾಹನ ಜಖಂ ಆಗಿದೆ. ಅದರ ಜೊತೆಗೆ ಗೋಡೆ ಬಿದ್ದ ರಭಸಕ್ಕೆ ಲೈಟ್ ಕಂಬ ಸಹ ಉರುಳಿದೆ.
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- ಏಪ್ರಿಲ್1 ರಿಂದ 15 ನೇ ತಾರೀಖಿನವರೆಗೆ ಸ್ವಯಂ ಜನಗಣತೆ..1
- ಚಪ್ಪಲಿ ಪೊರಕೆ ತೋರಿಸುವುದು ಬಿಜೆಪಿ ಸಂಸ್ಕೃತಿ ಎಂದು ಚಿತ್ರದುರ್ಗದಲ್ಲಿ ಯೋಗೀಶ್ ಬಾಬು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ದ್ರಾಕ್ಷ ರಸ ಮಂಡಳಿ ಅಧ್ಯಕ್ಷರಾದ ಯೋಗೀಶ್ ಬಾಬು ಅವರು ಮಾತನಾಡಿದ್ದು ಯಾರಿಗೂ ಕೂಡ ಅಲ್ಲಿಗೆ ಬರ್ರಿ ಇಲ್ಲಿಗೆ ಬರ್ರಿ ಎಂದು ಸವಾಲ್ ಹಾಕುವುದು ಸರಿಯಲ್ಲ, ಎಲ್ಲರಿಗೂ ಕೂಡ ವಾಕ್ ಸ್ವಾತಂತ್ರ್ಯ ಇರುತ್ತದೆ. ದಾವಣಗೆರೆಗೆ ಬನ್ನಿ ಎಂದು ಹೇಳುವುದು ತಪ್ಪು ಎಂದು ಟಾಂಗ್ ಕೊಟ್ಟಿದ್ದಾರೆ1
- ಶಿಗ್ಗಾವ್ ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಅವರು ದಾವಣಗೆರೆಯ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಇವರ ಪರ ಪ್ರಚಾರ ಕೈಗೊಳ್ಳಲು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು,1
- ಮಂಗಳೂರಿನ ಮೀನುಗಾರಿಕಾ ಧಕ್ಕೆಯಲ್ಲಿರುವ ಸಂದೇಶ್ ಎಂಬವರ ಮಾಲಿಕತ್ವದ 'ಗುರುರಾಜ್’ ಎಂಬ ಆಳಸಮುದ್ರ ಮೀನುಗಾರಿಕಾ ಬೋಟ್‍ನಲ್ಲಿ ಗೋಬಿಂದ ದಾಸ್(42) ಎಂಬವರು ಮಾರ್ಚ್ 6 ರಂದು ರಾತ್ರಿ ಒಟ್ಟು 9 ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿರುತ್ತಾರೆ. ಮೀನುಹಿಡಿಯುವ ಸಲುವಾಗಿ ಬಲೆ ಬೀಸಲು ತೊಡಗಿದಾಗ ಗೋಬಿಂದ ದಾಸ್ ಬೋಟ್‍ನಲ್ಲಿ ಇರದೇ ಕಾಣೆಯಾಗಿದ್ದಾರೆ. ಅಥವಾ ರಾತ್ರಿ ಸಮಯ ಗೋಬಿಂದ ದಾಸ್ ಆಕಸ್ಮಿಕವಾಗಿ ಬೋಟ್‍ನಿಂದ ಜಾರಿ ಆಳ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಪ್ಪು ಬಿಳಿ ಮಿಶ್ರಿತ ಕೂದಲು, ಹಿಂದಿ, ಬೆಂಗಾಳಿ ಭಾಷೆ ಮಾತನಾಡುತ್ತಾರೆ. ನೀಲಿ ಬಣ್ಣದ ಟೀಶರ್ಟ್,ಮತ್ತು ಕಪ್ಪು ಬಣ್ಣದ ಬರ್ಮುಡಾ ಚಡ್ಡಿ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್‌ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು. ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು. #dharmasthala #ksrtc1
- Post by Suresh Belagere1