logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರಿನಿಂದ ಪ್ರಧಾನಿಗೆ ಡಿಕೆಶಿ ಮನವಿ: "ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ" ಮೈಸೂರು: "ಕರ್ನಾಟಕವು ದೇಶದ ಪ್ರಮುಖ ಹಾಗೂ ಅಭಿವೃದ್ಧಿಶೀಲ ರಾಜ್ಯ. ಕರ್ನಾಟಕ ಬೆಳೆದರೆ ಇಡೀ ಭಾರತ ಬೆಳೆದಂತೆ. ಹೀಗಾಗಿ ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ" ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದ ವಿದ್ಯಾಶಾಲಾ ಆವರಣದಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಇಡೀ ದೇಶವೇ ಇಂದು ಕರ್ನಾಟಕದತ್ತ ನೋಡುತ್ತಿದೆ. ಇಲ್ಲಿನ ಸಂಸ್ಕೃತಿ, ವಾತಾವರಣ ಹಾಗೂ ಜನರ ಸಂಕಲ್ಪ ಶಕ್ತಿ ಅನನ್ಯವಾದದ್ದು. ನಾವು-ನೀವು ಕೈಜೋಡಿಸಿ ಕರ್ನಾಟಕವನ್ನು ಇನ್ನಷ್ಟು ಬೆಳೆಸೋಣ. ನಮಗೆ ನಿಮ್ಮ (ಕೇಂದ್ರದ) ಸಂಪೂರ್ಣ ಸಹಕಾರ ಬೇಕು" ಎಂದು ಪ್ರಧಾನಿಯವರಲ್ಲಿ ಕೋರಿದರು. "ಸ್ವಾಮಿ ವಿವೇಕಾನಂದರ ಚಿಂತನೆಗಳು ಹಾಗೂ ತ್ಯಾಗವೇ ನಮಗೆ ಪ್ರೇರಣೆ. ಅವರ ತತ್ತ್ವಗಳ ಅಡಿಯಲ್ಲೇ ಯುವಶಕ್ತಿಯನ್ನು ಬಳಸಿಕೊಂಡು ಹೊಸ ಯುಗದ ಆಡಳಿತ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಯುವಜನತೆಯ ಶಕ್ತಿಯನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಗ್ರಾಮ ಪಂಚಾಯಿತಿ ಮತ್ತು ನಗರ ಮಟ್ಟದಲ್ಲಿ ಯುವಜನ ಪಡೆಗಳನ್ನು ಕಟ್ಟುವ ಸಂಕಲ್ಪ ಮಾಡಲಾಗಿದೆ ಎಂದು ವಿವರಿಸಿದರು. "ಮೈಸೂರಿನ ಇತಿಹಾಸಕ್ಕೆ ಜಾಗತಿಕ ಮಟ್ಟದ ಗೌರವವಿದೆ. ಸ್ವಾಮಿ ವಿವೇಕಾನಂದರು ಮೈಸೂರಿನಿಂದಲೇ ನೇರವಾಗಿ ಚಿಕಾಗೋಗೆ ತೆರಳಿ ವಿಶ್ವವಿಖ್ಯಾತ ಭಾಷಣ ಮಾಡಿದ್ದರು. ಇಂದು ನಿರ್ಮಾಣವಾಗುತ್ತಿರುವ ವಿವೇಕ ಸ್ಮಾರಕ ಮತ್ತು ಈ ರಾಮಕೃಷ್ಣ ಆಶ್ರಮ ಬರಿ ಕರ್ನಾಟಕದ ಆಸ್ತಿಯಲ್ಲ, ಇಡೀ ದೇಶದ ಆಸ್ತಿ" ಎಂದು ಬಣ್ಣಿಸಿದರು. ರಾಮಕೃಷ್ಣ ಆಶ್ರಮದ ಪರವಾಗಿ ರಾಜ್ಯ ಸರ್ಕಾರ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ ಅವರು, ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದು ತಮ್ಮ ಪಾಲಿನ ದೊಡ್ಡ ಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು.

2 hrs ago
user_Lavanya
Lavanya
Local News Reporter ಪಾವಗಡ, ತುಮಕೂರು, ಕರ್ನಾಟಕ•
2 hrs ago

ಮೈಸೂರಿನಿಂದ ಪ್ರಧಾನಿಗೆ ಡಿಕೆಶಿ ಮನವಿ: "ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ" ಮೈಸೂರು: "ಕರ್ನಾಟಕವು ದೇಶದ ಪ್ರಮುಖ ಹಾಗೂ ಅಭಿವೃದ್ಧಿಶೀಲ ರಾಜ್ಯ. ಕರ್ನಾಟಕ ಬೆಳೆದರೆ ಇಡೀ ಭಾರತ ಬೆಳೆದಂತೆ. ಹೀಗಾಗಿ ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ" ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದ ವಿದ್ಯಾಶಾಲಾ ಆವರಣದಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಇಡೀ ದೇಶವೇ ಇಂದು ಕರ್ನಾಟಕದತ್ತ ನೋಡುತ್ತಿದೆ. ಇಲ್ಲಿನ ಸಂಸ್ಕೃತಿ, ವಾತಾವರಣ ಹಾಗೂ ಜನರ ಸಂಕಲ್ಪ ಶಕ್ತಿ ಅನನ್ಯವಾದದ್ದು. ನಾವು-ನೀವು ಕೈಜೋಡಿಸಿ ಕರ್ನಾಟಕವನ್ನು ಇನ್ನಷ್ಟು ಬೆಳೆಸೋಣ. ನಮಗೆ ನಿಮ್ಮ (ಕೇಂದ್ರದ) ಸಂಪೂರ್ಣ ಸಹಕಾರ ಬೇಕು" ಎಂದು ಪ್ರಧಾನಿಯವರಲ್ಲಿ ಕೋರಿದರು. "ಸ್ವಾಮಿ ವಿವೇಕಾನಂದರ ಚಿಂತನೆಗಳು ಹಾಗೂ ತ್ಯಾಗವೇ ನಮಗೆ ಪ್ರೇರಣೆ. ಅವರ ತತ್ತ್ವಗಳ ಅಡಿಯಲ್ಲೇ ಯುವಶಕ್ತಿಯನ್ನು ಬಳಸಿಕೊಂಡು ಹೊಸ ಯುಗದ ಆಡಳಿತ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಯುವಜನತೆಯ ಶಕ್ತಿಯನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಗ್ರಾಮ ಪಂಚಾಯಿತಿ ಮತ್ತು ನಗರ ಮಟ್ಟದಲ್ಲಿ ಯುವಜನ ಪಡೆಗಳನ್ನು ಕಟ್ಟುವ ಸಂಕಲ್ಪ ಮಾಡಲಾಗಿದೆ ಎಂದು ವಿವರಿಸಿದರು. "ಮೈಸೂರಿನ ಇತಿಹಾಸಕ್ಕೆ ಜಾಗತಿಕ ಮಟ್ಟದ ಗೌರವವಿದೆ. ಸ್ವಾಮಿ ವಿವೇಕಾನಂದರು ಮೈಸೂರಿನಿಂದಲೇ ನೇರವಾಗಿ ಚಿಕಾಗೋಗೆ ತೆರಳಿ ವಿಶ್ವವಿಖ್ಯಾತ ಭಾಷಣ ಮಾಡಿದ್ದರು. ಇಂದು ನಿರ್ಮಾಣವಾಗುತ್ತಿರುವ ವಿವೇಕ ಸ್ಮಾರಕ ಮತ್ತು ಈ ರಾಮಕೃಷ್ಣ ಆಶ್ರಮ ಬರಿ ಕರ್ನಾಟಕದ ಆಸ್ತಿಯಲ್ಲ, ಇಡೀ ದೇಶದ ಆಸ್ತಿ" ಎಂದು ಬಣ್ಣಿಸಿದರು. ರಾಮಕೃಷ್ಣ ಆಶ್ರಮದ ಪರವಾಗಿ ರಾಜ್ಯ ಸರ್ಕಾರ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ ಅವರು, ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದು ತಮ್ಮ ಪಾಲಿನ ದೊಡ್ಡ ಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು.

More news from ಕರ್ನಾಟಕ and nearby areas
  • *ಗಣಕೀಕರಿಸುವಲ್ಲಿ ಶೇ 100%  ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ* ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು  18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು. ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.
    3
    *ಗಣಕೀಕರಿಸುವಲ್ಲಿ ಶೇ 100%  ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ*




ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು  18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ ತಿಳಿಸಿದ್ದಾರೆ.


ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ.


ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು.


ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.
    user_Govindappa K
    Govindappa K
    Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    1
    Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ
ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    2
    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ
ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:*
***********"
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.
ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.
ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    4 hrs ago
  • ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    1
    ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.

ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ  ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ ..
ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ  ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ   ತಕ್ಷಣ  ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು
ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.
ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು
    1
    ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 
1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ  ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    7 hrs ago
  • ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ. ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ. ದೇವನಹಳ್ಳಿ. ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ. ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ. ಡ್ರಗ್ಸ್ ಬೇಡ ಬ್ರೊ ಎಂದು ಜಾಗೃತಿ ಮೂಡಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ಇಲಾಖೆ. ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ನೋಡಿ ಕೊಳ್ಳುವುದು ಶೈಕ್ಷಣಿಕ ಸಂಸ್ಥೆ ಹಾಗೂ ಸಮಾಜದ ಜವಾಬ್ದಾರಿ. ಮಕ್ಕಳು ದೇಶದ ಆಸ್ತಿ,ನಮ್ಮ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿ ಇದೆ. ಡ್ರಗ್ಸ್ ಪೇಡ್ಲರ್ ಗಳು ಹೆಚ್ಚು ವಿದ್ಯಾರ್ಥಿಗಳೇನೆ ಟಾರ್ಗೆಟ್ ಮಾಡುವುದು. ಶಾಲಾ ಕಾಲೇಜು ಬಳಿ ಹೆಚ್ಚು ನಿಗಾ ವಹಿಸಿ ಎಂದು ಜಿಲ್ಲಾ ಎಸ್,ಪಿ ಗೆ ಸೂಚನೆ ನೀಡಿದ ಸಚಿವ ಕೆ ಹೆಚ್ ಮುನಿಯಪ್ಪ ಮಾದಕ ವ್ಯಾಸನ ಮುಕ್ತ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಅಮಿಟಿ ಯೂನಿವರ್ಸಿಟಿ.
    3
    ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ.
ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ.
ದೇವನಹಳ್ಳಿ.
ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ.
ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ.
ಡ್ರಗ್ಸ್ ಬೇಡ ಬ್ರೊ ಎಂದು ಜಾಗೃತಿ ಮೂಡಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ಇಲಾಖೆ.
ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ನೋಡಿ ಕೊಳ್ಳುವುದು ಶೈಕ್ಷಣಿಕ ಸಂಸ್ಥೆ ಹಾಗೂ ಸಮಾಜದ ಜವಾಬ್ದಾರಿ.
ಮಕ್ಕಳು ದೇಶದ ಆಸ್ತಿ,ನಮ್ಮ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿ ಇದೆ.
ಡ್ರಗ್ಸ್ ಪೇಡ್ಲರ್ ಗಳು ಹೆಚ್ಚು ವಿದ್ಯಾರ್ಥಿಗಳೇನೆ ಟಾರ್ಗೆಟ್ ಮಾಡುವುದು. 
ಶಾಲಾ ಕಾಲೇಜು ಬಳಿ ಹೆಚ್ಚು ನಿಗಾ ವಹಿಸಿ ಎಂದು ಜಿಲ್ಲಾ ಎಸ್,ಪಿ ಗೆ  ಸೂಚನೆ ನೀಡಿದ ಸಚಿವ ಕೆ ಹೆಚ್ ಮುನಿಯಪ್ಪ 
ಮಾದಕ ವ್ಯಾಸನ ಮುಕ್ತ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಅಮಿಟಿ ಯೂನಿವರ್ಸಿಟಿ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 min ago
  • ಕ್ಷೇತ್ರ ಪುನರ್‌ವಿಂಗಡಣೆ ಬೆಂಬಲಿಸುವವರು ದ್ರೋಹಿಗಳು : ರಾಹುಲ್ ಗಾಂಧಿ ವಾಗ್ದಾಳಿ ನೀವು ಒದಗಿಸಿದ ಸುದ್ದಿಯ ಆಧಾರದಲ್ಲಿ, ವರದಿಯನ್ನು ಮತ್ತಷ್ಟು ಸ್ಪಷ್ಟವಾಗಿ, ವೃತ್ತಿಪರ ಪತ್ರಿಕೋದ್ಯಮದ ಶೈಲಿಯಲ್ಲಿ ಪುನರ್ ರಚಿಸಿ ನೀಡಲಾಗಿದೆ: --- ಚೆಂಗಲ್ಪಟ್ಟು (ತಮಿಳುನಾಡು): "ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್‌ವಿಂಗಡಣೆಯನ್ನು ಯಾವುದೇ ತಮಿಳರು ಬೆಂಬಲಿಸಬಾರದು. ಇದನ್ನು ಬೆಂಬಲಿಸುವ ಪ್ರತಿಯೊಬ್ಬರೂ ತಮಿಳುನಾಡಿಗೆ ಮಾಡುವ ದ್ರೋಹಿಗಳು ('ಎಟಾಪರ್‌ಗಳು')" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಮಲ್ಲಪುರಂನಲ್ಲಿ ಆಯೋಜಿಸಲಾಗಿದ್ದ ತಮಿಳುನಾಡು ಕಾಂಗ್ರೆಸ್ ಜಿಲ್ಲಾ ನಾಯಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. "ಬಿಜೆಪಿ ಜಾರಿಗೆ ತರಲು ಹೊರಟಿರುವ ಕ್ಷೇತ್ರ ಪುನರ್‌ವಿಂಗಡಣೆ ಯೋಜನೆಯು ತಮಿಳುನಾಡಿನ ಮೇಲೆ ಗಂಭೀರವಾದ ದುಷ್ಪರಿಣಾಮ ಬೀರಲಿದೆ. ಇದು ತಮಿಳುನಾಡಿನ ಜನರಿಗಿರುವ ರಾಜಕೀಯ ಅಧಿಕಾರ ಹಾಗೂ ಪ್ರಾತಿನಿಧ್ಯವನ್ನು ಕಸಿದುಕೊಳ್ಳುವ ಸ್ಪಷ್ಟ ಸಂಚು ಆಗಿದೆ ಎಂದರು. ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಸೋಲಿಸಲು ದೇಶದ ಪ್ರತಿಯೊಂದು ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ಒಂದಾಗಬೇಕು ಎಂದು ಅವರು ಕರೆ ನೀಡಿದರು. "ಇದು ಕೇವಲ ರಾಜಕೀಯ ವಿಷಯವಲ್ಲ, ತಮಿಳುನಾಡಿನ ಜನರ ಭವಿಷ್ಯ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಪ್ರಶ್ನೆ. ಹೀಗಾಗಿ ಯಾವುದೇ ತಮಿಳರು ಇದನ್ನು ಒಪ್ಪಬಾರದು," ಎಂದು ನುಡಿದರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಇದಕ್ಕೂ ಮುನ್ನ, ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ತಮಿಳುನಾಡು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಅಲ್ಲಿಂದ ನೇರವಾಗಿ ಮಾಮಲ್ಲಪುರಂ ತರಬೇತಿ ಶಿಬಿರಕ್ಕೆ ತೆರಳಿದ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
    1
    ಕ್ಷೇತ್ರ ಪುನರ್‌ವಿಂಗಡಣೆ ಬೆಂಬಲಿಸುವವರು ದ್ರೋಹಿಗಳು : ರಾಹುಲ್ ಗಾಂಧಿ ವಾಗ್ದಾಳಿ
ನೀವು ಒದಗಿಸಿದ ಸುದ್ದಿಯ ಆಧಾರದಲ್ಲಿ, ವರದಿಯನ್ನು ಮತ್ತಷ್ಟು ಸ್ಪಷ್ಟವಾಗಿ, ವೃತ್ತಿಪರ ಪತ್ರಿಕೋದ್ಯಮದ ಶೈಲಿಯಲ್ಲಿ ಪುನರ್ ರಚಿಸಿ ನೀಡಲಾಗಿದೆ:
---
ಚೆಂಗಲ್ಪಟ್ಟು (ತಮಿಳುನಾಡು): "ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್‌ವಿಂಗಡಣೆಯನ್ನು ಯಾವುದೇ ತಮಿಳರು ಬೆಂಬಲಿಸಬಾರದು. ಇದನ್ನು ಬೆಂಬಲಿಸುವ ಪ್ರತಿಯೊಬ್ಬರೂ ತಮಿಳುನಾಡಿಗೆ ಮಾಡುವ ದ್ರೋಹಿಗಳು ('ಎಟಾಪರ್‌ಗಳು')" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಮಲ್ಲಪುರಂನಲ್ಲಿ ಆಯೋಜಿಸಲಾಗಿದ್ದ ತಮಿಳುನಾಡು ಕಾಂಗ್ರೆಸ್ ಜಿಲ್ಲಾ ನಾಯಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
"ಬಿಜೆಪಿ ಜಾರಿಗೆ ತರಲು ಹೊರಟಿರುವ ಕ್ಷೇತ್ರ ಪುನರ್‌ವಿಂಗಡಣೆ ಯೋಜನೆಯು ತಮಿಳುನಾಡಿನ ಮೇಲೆ ಗಂಭೀರವಾದ ದುಷ್ಪರಿಣಾಮ ಬೀರಲಿದೆ. ಇದು ತಮಿಳುನಾಡಿನ ಜನರಿಗಿರುವ ರಾಜಕೀಯ ಅಧಿಕಾರ ಹಾಗೂ ಪ್ರಾತಿನಿಧ್ಯವನ್ನು ಕಸಿದುಕೊಳ್ಳುವ ಸ್ಪಷ್ಟ ಸಂಚು ಆಗಿದೆ ಎಂದರು.
ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಸೋಲಿಸಲು ದೇಶದ ಪ್ರತಿಯೊಂದು ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ಒಂದಾಗಬೇಕು ಎಂದು ಅವರು ಕರೆ ನೀಡಿದರು.
"ಇದು ಕೇವಲ ರಾಜಕೀಯ ವಿಷಯವಲ್ಲ, ತಮಿಳುನಾಡಿನ ಜನರ ಭವಿಷ್ಯ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಪ್ರಶ್ನೆ. ಹೀಗಾಗಿ ಯಾವುದೇ ತಮಿಳರು ಇದನ್ನು ಒಪ್ಪಬಾರದು," ಎಂದು ನುಡಿದರು
ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ
ಇದಕ್ಕೂ ಮುನ್ನ, ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ತಮಿಳುನಾಡು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಅಲ್ಲಿಂದ ನೇರವಾಗಿ ಮಾಮಲ್ಲಪುರಂ ತರಬೇತಿ ಶಿಬಿರಕ್ಕೆ ತೆರಳಿದ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    3 hrs ago
  • ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌ ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    1
    ಧರ್ಮಸ್ಥಳ ಬುರುಡೇ ಕೇಸ್ ಫಂಡಿಂಗ್ ಆರೋಪದಿಂದ ರಮಾ ನಾಗರಾಜ್ ನಿರ್ದೋಷಿ
ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಚಿತ್ರದುರ್ಗದ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.‌ ಇನ್ನೂ ಧರ್ಮಸ್ಥಳದ ಬುರುಡೆ ಕೇಸ್ ಗೆ ಚಿತ್ರದುರ್ಗದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾಗಿ ಮಾಸ್ಕ್ ಮ್ಯಾನ್ ಚನ್ನಯ್ಯ ಆರೋಪ ಮಾಡಿದ್ದು ಈ ಆರೋಪ ಸುಳ್ಳು ಎಂದು ಉಚ್ಚ ನ್ಯಾಯಾಲಯದಿಂದ ರಮಾ ನಾಗರಾಜ್ ನಿರ್ದೋಷಿ ಎಂದು ತೀರ್ಪು ನೀಡಿದೆ.‌
ರಮಾ ನಾಗರಾಜ್, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ, ಜಯಂತಿ, ವಿಠ್ಠಲ ಗೌಡ, ಪ್ರಕಾಶ್ ರೈ ಆರೋಪ ಮುಕ್ತ ಎಂದು ಹೈಕೋರ್ಟ್ ಆದೇಶ ನೀಡಿದ್ದು ಈ ಕುರಿತು ಚಿತ್ರದುರ್ಗದಲ್ಲಿ ರಮಾ ನಾಗರಾಜ್ ಹಾಗೂ ಗಿರೀಶ್ ಮಟ್ಟಣ್ಣನವರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಸಮಾಜಿಕ ಹೋರಾಟಗಾರ್ತಿ ರಮಾ ನಾಗರಾಜ್ ಅವರು ಮಾತನಾಡಿದ್ದು
ಧರ್ಮಸ್ಥಳ ಸಂಘದ ಬಗ್ಗೆ ಹೋರಾಟ ಮಾಡಿದ್ದಕ್ಕೆ ನನ್ನ ಮೇಲೆ ವಿನಾಃ ಕಾರಣ ಆರೋಪ ಮಾಡಿದ್ದರು ಎಂದು ರಮಾ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* *ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ* *ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ* *-ಜಿಲ್ಲಾಧಿಕಾರಿ ಟಿ.ವೆಂಕಟೇಶ್* ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01: ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    1
    ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
*ಪೊಲೀಸ್ ಕಾನ್ಸ್‍ಟೇಬಲ್(ಸಿವಿಲ್) ನೇಮಕಾತಿ ಪರೀಕ್ಷೆ*
*ಕೆ.ಇ.ಎ. ಮಾರ್ಗಸೂಚಿಗಳ ಪಾಲನೆ ಕಡ್ಡಾಯ*
*-ಜಿಲ್ಲಾಧಿಕಾರಿ ಟಿ.ವೆಂಕಟೇಶ್*
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.01:
ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2 ರಂದು ಪೊಲೀಸ್  ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆ.ಇ.ಎ) ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಗಳನ್ನು  ನಿರ್ಧಿಷ್ಟ ಪಡಿಸಿದ ವಾಹನ ಹಾಗೂ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಾಗಿಸಬೇಕು. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಕೊಠಡಿ ಮೇಲ್ವಾಚರಕರು ಹಾಗೂ ವಸ್ತ್ರಸಂಹಿತೆ ಅಧಿಕಾರಿಗಳು ಸಭೆ ನಡೆಸಿ, ಪರೀಕ್ಷ ಕೇಂದ್ರಗಳಲ್ಲಿ, ನಿರ್ವಹಿಸಬೇಕಾದ ಕರ್ತವ್ಯಗಳು ಬಗ್ಗೆ ತಿಳಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಹಾಗೂ ಮೊಬೈಲ್ ನೆಟ್‍ವರ್ಕ ಜಾಮರ್‌ಗಳು ಸುಸ್ಥಿತಿಯಲ್ಲಿ ಇದ್ದು ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.