logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಹಮ್ಮಿಕೊಳ್ಳಲಾಗಿತ್ತು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ರಾಜ್ಯದಲ್ಲಿ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಶಿಕ್ಷಣ ತರುವುದು ಅತ್ಯಗತ್ಯ ಎಂದು ತಿಳಿಸಿದರು. ಮಕ್ಕಳು ಬಾಲ್ಯದಲ್ಲಿದ್ದಾಗಲೇ ಅವರಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಮಾದಕ ವಸ್ತುಗಳ ವಿಜ್ಞಾನ ಹಾಗೂ ದುಷ್ಪರಿಣಾಮಗಳ ಅರಿವು ಮೂಡಿಸಬೇಕು ಎಂದು ತಿಳಿಸಿದರು.

1 hr ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
1 hr ago

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಹಮ್ಮಿಕೊಳ್ಳಲಾಗಿತ್ತು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ರಾಜ್ಯದಲ್ಲಿ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಶಿಕ್ಷಣ ತರುವುದು ಅತ್ಯಗತ್ಯ ಎಂದು ತಿಳಿಸಿದರು. ಮಕ್ಕಳು ಬಾಲ್ಯದಲ್ಲಿದ್ದಾಗಲೇ ಅವರಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಮಾದಕ ವಸ್ತುಗಳ ವಿಜ್ಞಾನ ಹಾಗೂ ದುಷ್ಪರಿಣಾಮಗಳ ಅರಿವು ಮೂಡಿಸಬೇಕು ಎಂದು ತಿಳಿಸಿದರು.

More news from ಕರ್ನಾಟಕ and nearby areas
  • ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಈಚಘಟ್ಟ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದ ಸರ್ವೆ ನಂಬರ್ 6ರಲ್ಲಿರುವ 52 ಎಕರೆ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಸರ್ಕಾರ ಅನುಮತಿ ನೀಡಿದೆ. 2022ರಲ್ಲಿ ಈ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದವರನ್ನು ಅರಣ್ಯ ಇಲಾಖೆಯಿಂದ ಸಸಿ ನೆಡಲಾಗುತ್ತದೆ ಎಂದು ಹೇಳಿ ಅಲ್ಲಿಂದ ಒಕ್ಕಲೆಬ್ಬಿಸಲಾಗಿತ್ತು. ಆದರೆ ಇದೀಗ ಸರ್ಕಾರ ಏಕಾಏಕಿ ಇದೇ ಜಾಗದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಅನುಮತಿ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಚಘಟ್ಟ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ದನಕರುಗಳನ್ನು ಮೇಯಿಸಲು ಈ ಜಾಗ ಬಿಟ್ಟರೆ ಬೇರೆ ಯಾವುದೇ ಜಾಗವಿಲ್ಲ. ಹೀಗಾಗಿ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    1
    ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ
ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ.  ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಈಚಘಟ್ಟ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದ ಸರ್ವೆ ನಂಬರ್ 6ರಲ್ಲಿರುವ 52 ಎಕರೆ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಸರ್ಕಾರ ಅನುಮತಿ ನೀಡಿದೆ. 2022ರಲ್ಲಿ ಈ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದವರನ್ನು ಅರಣ್ಯ ಇಲಾಖೆಯಿಂದ ಸಸಿ ನೆಡಲಾಗುತ್ತದೆ ಎಂದು ಹೇಳಿ ಅಲ್ಲಿಂದ ಒಕ್ಕಲೆಬ್ಬಿಸಲಾಗಿತ್ತು. ಆದರೆ ಇದೀಗ ಸರ್ಕಾರ ಏಕಾಏಕಿ ಇದೇ ಜಾಗದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಅನುಮತಿ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಚಘಟ್ಟ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ದನಕರುಗಳನ್ನು ಮೇಯಿಸಲು ಈ ಜಾಗ ಬಿಟ್ಟರೆ ಬೇರೆ ಯಾವುದೇ ಜಾಗವಿಲ್ಲ. ಹೀಗಾಗಿ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.
    1
    ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ
ಹಲವು ಸರ್ವ ಧರ್ಮ ಸಮಾನತೆ ಸಾರುವ.
ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ  ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    1
    ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ 
ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು
ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು 
ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    user_Nagesh BR Durgavara
    Nagesh BR Durgavara
    Photographer Chitradurga, Karnataka•
    18 hrs ago
  • ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-
*ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ  10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು  , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.
    1
    ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ
ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು.
ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.
ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. 
ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ  ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    16 hrs ago
  • ಭದ್ರಾವತಿ ಸರ್ ಎಂ ವಿ ಕಾಲೇಜಿನಲ್ಲಿ ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರ ಭದ್ರಾವತಿ: ನಗರದ ನ್ಯೂಟೌನ್‌ನಲ್ಲಿರುವ ಸರ್. ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQAC ಸಹಯೋಗದಲ್ಲಿ “Essentials of Scouting: A Pathway to Leadership, Spirit and Service” ಎಂಬ ವಿಷಯದ ಕುರಿತು ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರವನ್ನು ಸೆ.11ರಂದು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ, ತಂಡದ ಕೆಲಸ, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು. ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಜಿ., IQAC ಸಂಯೋಜಕ ಮೊಹಮ್ಮದ್ ನಜೀಬ್ ಎಂ., ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಕ್ಷತಾ ಬಿ.ಜಿ., RL ಹಾಗೂ ಶ್ರೀ ಚಿರಂಜೀವಿ ವಿ.ಬಿ., RSL ಸೇರಿದಂತೆ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಕೌಟಿಂಗ್ ಕ್ಷೇತ್ರದ ಅನುಭವಿಗಳಾದ ಶಿವಮೊಗ್ಗದ ಶ್ರೀ ಎಚ್. ಶಿವಶಂಕರಪ್ಪ, ALT (S), DTC ಹಾಗೂ ಶ್ರೀ ಸಿ.ಎಂ. ಪರಮೇಶ್ವರಯ್ಯ, A.L.T (S) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ್ಕೌಟಿಂಗ್‌ನ ಮೂಲತತ್ವಗಳು, ಉದ್ದೇಶಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ, ಸೇವಾ ಮನೋಭಾವ, ಸಮಾಜಮುಖಿ ಚಿಂತನೆ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ, ಸಾಹಸ, ಸ್ನೇಹ ಹಾಗೂ ಸಮಾಜದಲ್ಲಿ ಯುವಜನರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿಶೇಷ ಆಹ್ವಾನಿತರಾಗಿ ತರೀಕೆರೆಯ SJM ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಡಾ. ಸುಮತಿ ಕೆ., RL ಹಾಗೂ ಡಾ. ಶಿವರಾಜ್‌ಕುಮಾರ್ ಕೆ., RSL ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು. ಸ್ಕೌಟಿಂಗ್ ಮೂಲಕ ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಸ್ವಾವಲಂಬನೆ, ಸಹಕಾರ, ಸಹಾನುಭೂತಿ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಬಹುದು. ಮುಂದಿನ ದಿನಗಳಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ, ಸಮುದಾಯ ಸೇವೆ ಹಾಗೂ ವಿದ್ಯಾರ್ಥಿ ನಾಯಕತ್ವ ಚಟುವಟಿಕೆಗಳನ್ನು ಕೈಗೊಳ್ಳಲು ಈ ಕಾರ್ಯಾಗಾರ ಪ್ರೇರಣೆ ನೀಡಿತು. ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQACನ ಸಮನ್ವಯದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. “ಸ್ಕೌಟಿಂಗ್ ಉತ್ತಮ ನಾಯಕನನ್ನು ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
    1
    ಭದ್ರಾವತಿ ಸರ್ ಎಂ ವಿ ಕಾಲೇಜಿನಲ್ಲಿ ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರ 
ಭದ್ರಾವತಿ: ನಗರದ ನ್ಯೂಟೌನ್‌ನಲ್ಲಿರುವ ಸರ್. ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQAC ಸಹಯೋಗದಲ್ಲಿ “Essentials of Scouting: A Pathway to Leadership, Spirit and Service” ಎಂಬ ವಿಷಯದ ಕುರಿತು ಒಂದು ದಿನದ ಸ್ಕೌಟಿಂಗ್ ಕಾರ್ಯಾಗಾರವನ್ನು ಸೆ.11ರಂದು ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು, ಸೇವಾ ಮನೋಭಾವ, ತಂಡದ ಕೆಲಸ, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿತ್ತು.
ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಉಷಾದೇವಿ ಜಿ., IQAC ಸಂಯೋಜಕ ಮೊಹಮ್ಮದ್ ನಜೀಬ್ ಎಂ., ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಡಾ. ಅಕ್ಷತಾ ಬಿ.ಜಿ., RL ಹಾಗೂ ಶ್ರೀ ಚಿರಂಜೀವಿ ವಿ.ಬಿ., RSL ಸೇರಿದಂತೆ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ಕೌಟಿಂಗ್ ಕ್ಷೇತ್ರದ ಅನುಭವಿಗಳಾದ ಶಿವಮೊಗ್ಗದ ಶ್ರೀ ಎಚ್. ಶಿವಶಂಕರಪ್ಪ, ALT (S), DTC ಹಾಗೂ ಶ್ರೀ ಸಿ.ಎಂ. ಪರಮೇಶ್ವರಯ್ಯ, A.L.T (S) ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸ್ಕೌಟಿಂಗ್‌ನ ಮೂಲತತ್ವಗಳು, ಉದ್ದೇಶಗಳು ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಅದರ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಿಸ್ತು ಮತ್ತು ಜವಾಬ್ದಾರಿಯ ಮಹತ್ವ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ, ಸೇವಾ ಮನೋಭಾವ, ಸಮಾಜಮುಖಿ ಚಿಂತನೆ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ, ಸಾಹಸ, ಸ್ನೇಹ ಹಾಗೂ ಸಮಾಜದಲ್ಲಿ ಯುವಜನರ ಜವಾಬ್ದಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ವಿಶೇಷ ಆಹ್ವಾನಿತರಾಗಿ ತರೀಕೆರೆಯ SJM ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಡಾ. ಸುಮತಿ ಕೆ., RL ಹಾಗೂ ಡಾ. ಶಿವರಾಜ್‌ಕುಮಾರ್ ಕೆ., RSL ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸ್ಕೌಟಿಂಗ್ ಚಟುವಟಿಕೆಗಳಲ್ಲಿ ಹೆಚ್ಚಿನ ಉತ್ಸಾಹದಿಂದ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಸ್ಕೌಟಿಂಗ್ ಮೂಲಕ ವಿದ್ಯಾರ್ಥಿಗಳಲ್ಲಿ ಸಮಯಪಾಲನೆ, ಸ್ವಾವಲಂಬನೆ, ಸಹಕಾರ, ಸಹಾನುಭೂತಿ, ನಾಯಕತ್ವ ಹಾಗೂ ಸೇವಾ ಮನೋಭಾವ ಬೆಳೆಸಬಹುದು. ಮುಂದಿನ ದಿನಗಳಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಮತದಾರರ ಜಾಗೃತಿ, ಸಮುದಾಯ ಸೇವೆ ಹಾಗೂ ವಿದ್ಯಾರ್ಥಿ ನಾಯಕತ್ವ ಚಟುವಟಿಕೆಗಳನ್ನು ಕೈಗೊಳ್ಳಲು ಈ ಕಾರ್ಯಾಗಾರ ಪ್ರೇರಣೆ ನೀಡಿತು.
ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ IQACನ ಸಮನ್ವಯದಲ್ಲಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. “ಸ್ಕೌಟಿಂಗ್ ಉತ್ತಮ ನಾಯಕನನ್ನು ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಉತ್ತಮ ಸಮಾಜವನ್ನು ನಿರ್ಮಿಸುತ್ತದೆ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.
    user_Nandheesh kumar ac
    Nandheesh kumar ac
    ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    12 hrs ago
  • ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಹಮ್ಮಿಕೊಳ್ಳಲಾಗಿತ್ತು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ರಾಜ್ಯದಲ್ಲಿ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಶಿಕ್ಷಣ ತರುವುದು ಅತ್ಯಗತ್ಯ ಎಂದು ತಿಳಿಸಿದರು. ಮಕ್ಕಳು ಬಾಲ್ಯದಲ್ಲಿದ್ದಾಗಲೇ ಅವರಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಮಾದಕ ವಸ್ತುಗಳ ವಿಜ್ಞಾನ ಹಾಗೂ ದುಷ್ಪರಿಣಾಮಗಳ ಅರಿವು ಮೂಡಿಸಬೇಕು ಎಂದು ತಿಳಿಸಿದರು.
    1
    ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ 
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ಸಭೆ ಹಮ್ಮಿಕೊಳ್ಳಲಾಗಿತ್ತು. ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ವಿರುದ್ಧ ಜನಜಾಗೃತಿ ಮೂಡಿಸಲು ದುಂಡು ಮೇಜಿನ ಸಭೆ ಆಯೋಜಿಸುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ರಾಜ್ಯದಲ್ಲಿ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಶಿಕ್ಷಣ ತರುವುದು ಅತ್ಯಗತ್ಯ ಎಂದು ತಿಳಿಸಿದರು. ಮಕ್ಕಳು ಬಾಲ್ಯದಲ್ಲಿದ್ದಾಗಲೇ ಅವರಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಮಾದಕ ವಸ್ತುಗಳ ವಿಜ್ಞಾನ ಹಾಗೂ ದುಷ್ಪರಿಣಾಮಗಳ ಅರಿವು ಮೂಡಿಸಬೇಕು ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    4
    ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ

ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ
ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ.
ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.