ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.
ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ
ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.
- ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್.. ನರೇಂದ್ರ ಮೋದಿಯವರ ಜನ್ಮದಿನ ; ಅನಾಥಾಶ್ರಮ&ಆಸ್ಪತ್ರೆಯಲ್ಲಿ ಹಣ್ಣು ಹಂಪಲ ವಿತರಿಸಿದ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಇಳಕಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಹಾಗೂ ಅವರ ಹುಟ್ಟು ಹಬ್ಬದ ಅಂಗವಾಗಿ ಇಳಕಲ್ ನಗರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳ ಜೊತೆಗೆ ಅನಾಥಾಶ್ರಮದಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಹಣ್ಣು ಹಂಪಲ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.1
- ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪಿಸಿ: ಸರಕಾರಕ್ಕೆ ಸಿವಿಸಿ ಒತ್ತಾಯ ಕೊಪ್ಪಳ: ಹೈದರಾಬಾದ್ ಕರ್ನಾಟಕ (ಹೈ-ಕ) ವಿಮೋಚನೆಗೆ ನಿರ್ಣಾಯಕ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ಶಾಶ್ವತವಾಗಿರಿಸಲು ಕೊಪ್ಪಳದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಗುರುವಾರ ಸರಕಾರಕ್ಕೆ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಹೈ-ಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೈ-ಕ ವಿಮೋಚನೆಗೊಂಡು ಏಳು ದಶಕಗಳಾದರೂ ಪಟೇಲ್ ಅವರ ಕೊಡುಗೆಗಳನ್ನು ಸ್ಮರಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನ ಹೋರಾಟದ ಸಂದರ್ಭದಲ್ಲಿ ಕವಲೂರಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಸ್ಮಾರಕವನ್ನು ಆ ಗ್ರಾಮದಲ್ಲಿ ಸ್ಥಾಪಿಸಬೇಕು. ಒಂದು ವೇಳೆ ಸರಕಾರ ಇದನ್ನು ಮಾಡದಿದ್ದರೆ ಜೆಡಿಎಸ್ ಈ ಕೆಲಸ ಮಾಡಲಿದೆ," ಎಂದರು. "ವೈಜನಾಥ ಪಾಟೀಲ್ ಹೈ-ಕ ಪ್ರದೇಶಕ್ಕೆ ವಿಶೇಷ ಸೌಕರ್ಯಗಳು ಬೇಕೆಂದು ಕನಸು ಕಂಡು ತಮ್ಮ ಸರ್ವಸ್ವವನ್ನೇ ಧಾರೆಯಾದವರು. ತಮ್ಮ ಆಸ್ತಿಯನ್ನು ಮಾರಿ ಈ ಭಾಗದ ಸೌಕರ್ಯಗಳಿಗೆ ಹೋರಾಡಿದರು. ಆದರೆ ಸರಕಾರ ಅವರನ್ನು ಸಂಪೂರ್ಣವಾಗಿ ಮರೆತಿದೆ. ಸಂವಿಧಾನಾತ್ಮಕವಾಗಿ ಸಿಗಬೇಕಾದ ಸವಲತ್ತುಗಳು ಇಂದಿಗೂ ಮರೀಚಿಕೆಯಾಗಿವೆ. ಹೈ-ಕ ಭಾಗದ ಏಳು ಜಿಲ್ಲೆಗಳ ಎಲ್ಲಾ ಶಾಸಕರು ಸಭೆ ಸೇರಿ ಈ ಭಾಗದ ಅಭಿವೃದ್ಧಿ ಯೋಜನೆಗಳ ಕುರಿತು ನೀಲನಕ್ಷೆ ತಯಾರಿಸಬೇಕು," ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಹೇಳಿದರು. ಸರಕಾರದ ನಿರ್ಧಾರಗಳಿಗೆ ಕಾಯದೆ ಈ ಭಾಗಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಮಾಡಲು ನಾಯಕರು ಮುಂದೆ ಬರಬೇಕೆಂದು ಯುವ ಮುಖಂಡ ಬಸವರಾಜ್ ಹೇಳಿದರು. ಹೈ-ಕ ವಿಮೋಚನಾ ಅಂಗವಾಗಿ ಹೋರಾಟಗಾರರ ಕುರಿತು ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿದರು. ಹೈ-ಕ ವಿಮೋಚನ ಸಂಘರ್ಷದ ಕುರಿತು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಸಿಇಓ ಡಾ. ಜಗದೀಶ ಅಂಗಡಿ ಉಪನ್ಯಾಸ ನೀಡಿದರು. ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಾಲಾ ಮೇದಾರ, ನಗರ ಮಹಿಳಾ ಘಟಕದ ಗೌರವ ಅಧ್ಯಕ್ಷೆ ರತ್ನಮ್ಮ ಹಿರೇಮಠ, ತಾಲೂಕು ಎಸ್ ಸಿ ಘಟಕ ಅಧ್ಯಕ್ಷ ಸುರೇಶ ದದಗಲ್, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಂಜುನಾಥ ಮಾಲಿಪಾಟೀಲ, ಮುಖಂಡರಾದ ಭಾಗ್ಯಲಕ್ಷ್ಮಿ, ಸಿದ್ದು ಪಾಟೀಲ್, ಭರತ ಕುಮಾರ ಗೊಂದಿಹೊಸಳ್ಳಿ, ಶ್ರೀನಿವಾಸ ಗೊಂದಳ್ಳಿ, ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.2
- ಮಸ್ಕಿಯಲ್ಲಿ ಮೊಳಗಿದ ದೇಶಭಕ್ತಿಯ ಘೋಷಣೆ: ಯುವ ಬ್ರಿಗೇಡ್‌ನಿಂದ ಬೃಹತ್ ತಿರಂಗಾ ಯಾತ್ರೆ ಮಸ್ಕಿಯಲ್ಲಿ ಮೊಳಗಿದ ದೇಶಭಕ್ತಿಯ ಘೋಷಣೆ: ಯುವ ಬ್ರಿಗೇಡ್‌ನಿಂದ ಬೃಹತ್ ತಿರಂಗಾ ಯಾತ್ರೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಯುವ ಬ್ರಿಗೇಡ್ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಬುಧವಾರ ಬೃಹತ್ ತಿರಂಗಾ ಯಾತ್ರೆ ಹಾಗೂ ‘ವಿಜಯೀ ಭವ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಟ್ಟಣದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಿಂದ ಬೆಳಿಗ್ಗೆ 9.30ಕ್ಕೆ ಆರಂಭವಾದ ತಿರಂಗಾ ಯಾತ್ರೆಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಚಾಲನೆ ನೀಡಿದರು. ರಾಷ್ಟ್ರಧ್ವಜ ಹಿಡಿದು ಸಾಗಿದ ಯಾತ್ರೆಯಲ್ಲಿ ಯುವಕರು, ವಿದ್ಯಾರ್ಥಿಗಳು ಹಾಗೂ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ತಿರಂಗಾ ಯಾತ್ರೆಯು ದೇವಸ್ಥಾನದಿಂದ ಆರಂಭವಾಗಿ ಕನಕ ವೃತ್ತ, ದೈವದಕಟ್ಟೆ, ಅಗಸಿ, ಅಶೋಕ ವೃತ್ತ ಹಾಗೂ ಹಳೆ ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸಿ, ಮರಳಿ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮುಕ್ತಾಯಗೊಂಡಿತು. ಯಾತ್ರೆಯುದ್ದಕ್ಕೂ ದೇಶಭಕ್ತಿ ಘೋಷಣೆಗಳು ಮೊಳಗಿದವು. ನಂತರ ದೇವಸ್ಥಾನದ ಆವರಣದಲ್ಲಿ ನಡೆದ ‘ವಿಜಯೀ ಭವ’ ಕಾರ್ಯಕ್ರಮಕ್ಕೆ ಶ್ರೀ ವರದ ರುದ್ರಮುನಿ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು. ವೇದಿಕೆಯಲ್ಲಿ ಡಾ. ಮಲ್ಲಿಕಾರ್ಜುನ ಇಥಿಲಿ ಸೇರಿದಂತೆ ಚಕ್ರವರ್ತಿ ಸೂಲಿಬೆಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಐತಿಹಾಸಿಕ ಹಿನ್ನೆಲೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಿಜಾಮನ ಆಡಳಿತ, ರಜಾಕಾರರ ದೌರ್ಜನ್ಯ, ಬ್ರಿಟಿಷರ ಆಡಳಿತ ಹಾಗೂ ವಿವಿಧ ಪ್ರಾಂತ್ಯಗಳ ಅಂದಿನ ರಾಜಕೀಯ ಪರಿಸ್ಥಿತಿಗಳ ಕುರಿತು ವಿವರಿಸಿದರು. 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಹೈದರಾಬಾದ್ ಸಂಸ್ಥಾನವು ತಕ್ಷಣ ಭಾರತ ಒಕ್ಕೂಟಕ್ಕೆ ಸೇರ್ಪಡೆಯಾಗಿರಲಿಲ್ಲ. 1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ಸಂಸ್ಥಾನ ಭಾರತ ಒಕ್ಕೂಟಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಈ ದಿನವನ್ನು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವಾಗಿ ಆಚರಿಸಲಾಗುತ್ತದೆ. ಈ ಇತಿಹಾಸವನ್ನು ಯುವಜನತೆ ಅರಿತುಕೊಳ್ಳುವುದು ಅಗತ್ಯವಾಗಿದೆ ಎಂದುರು ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ಇತಿಹಾಸದ ಅರಿವು ಮೂಡಿಸುವ ಉದ್ದೇಶದಿಂದ ತಿರಂಗಾ ಯಾತ್ರೆ ಆಯೋಜಿಸಲಾಗಿದೆ ಎಂದು ಯುವ ಬ್ರಿಗೇಡ್ ಪದಾಧಿಕಾರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ತಾಲ್ಲೂಕು ಘಟಕದ ಸಂಚಾಲಕ ಅಶೋಕ ಬೆಳಗಲ್, ದೇವರಾಜ್ ಮಡಿವಾಳ, ಯಮನೂರ ಕನ್ನಾರಿ, ಅಮರೇಶ ಬ್ಯಾಳಿ, ವಿನೋದ ಹಳ್ಳಿ, ಮಲ್ಲಿಕಾರ್ಜುನ ಶೆಟ್ಟಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.4
- ಬಿಜೆಪಿ ಕಾರ್ಯಾಗದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ3
- ಮುಂಬರುವ ಸರ್ಕಾರಕ್ಕೆ ಒಳ್ಳೆಯ ಭವಿಷ್ಯವಿಲ್ಲ ಶಾಸಕ ಸಿ ಸಿ ಪಾಟೀಲ. ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿ ಜಮಾ ಕೊಟ್ಟಿತ್ತು,ಪ್ರಸ್ತುತ ಸರ್ಕಾರದ್ದು 9 ಲಕ್ಷ ಕೋಟಿ ಮಾಡಿದೆ. ಮುಂಬರುವ ಸರ್ಕಾರಕ್ಕೆ ಒಳ್ಳೆಯ ಭವಿಷ್ಯವಿಲ್ಲ ಶಾಸಕ ಸಿ ಸಿ ಪಾಟೀಲ. ಪ್ರಸ್ತುತ ಸರ್ಕಾರದ್ದು 9 ಲಕ್ಷ ಕೋಟಿ ಸಾಲವಿದೆ,ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿ ಜಮಾ ಇತ್ತು. ಗದಗ : ಪಂಚ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕ ಸ್ಥಿತಿ ಸರಿಯಾಗಿ ಉಳಿದಿಲ್ಲ, ಅಧಿಕಾರದ ದುರಾಸೆಗೆ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿದು ಆರ್ಥಿಕವಾಗಿ ದುರ್ಬಲವಾಗಿದೆ ಇದರಿಂದ ಮುಂಬರುವ ಸರ್ಕಾರಕ್ಕೆ ಒಳ್ಳೆಯ ಭವಿಷ್ಯವಿಲ್ಲ ಎಂದು ಶಾಸಕ ಸಿ ಸಿ ಪಾಟೀಲ ಹೇಳಿದರು. ತಾಲೂಕಿನ ಕದಡಿ ಗ್ರಾಮದಲ್ಲಿ ನೀಲಾಂಬಿಕಾ ದೇವಸ್ಥಾನದ ಬಯಲು ಜಾಗೆಯಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಐದು ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿ ಅದರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು. ಸರ್ಕಾರದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನವಿರುವದಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಯಾರು ಏನೇ ಅಭಿವೃದ್ಧಿ ಕೆಲಸಕ್ಕೆ ಬೇಡಿಕೆ ಇಟ್ಟರೆ ಇಲ್ಲಾ ಎಂದ ಉದಾಹರಣೆ ಸಿಗುತ್ತಿರಲಿಲ್ಲ,ಆದರೆ ಪ್ರಸಕ್ತ ನಮ್ಮ ಪರಿಸ್ಥಿತಿ ಮನೆಗೆ ಯಾರಾದರೂ ಕಾರ್ಯಕರ್ತರು ಬಂದರೆ ಎಲ್ಲಿ ಏನ ಕೇಳುವರೋ ಎಂಬ ಹೆದರಿಕೆ ಪಡುವಂತಾಗಿದೆ,ಆದರೂ ಕೂಡಾ ಇವತ್ತು ಎರಡು ಕೋಟಿ ಐವತ್ತು ಲಕ್ಷರೂ ಕದಡಿ ಹೊನ್ನಾಪುರ ಸಂಪರ್ಕ ರಸ್ತೆಯ 1300 ಮೀಟರ್ ರಸ್ತೆ ದುರಸ್ಥಿಗೆ ಹಾಗೂ ಸಮುದಾಯ ಭವನದ ಕಟ್ಟಡ ನಿರ್ಮಾಣಕ್ಕೆ ಐದು ಲಕ್ಷ ಬಿಡುಗಡೆ ಮಾಡಿದ್ದೇನೆ ಅಲ್ಲದೇ ಮುಂಬರುವ ಶಾಸಕರ ನಿಧಿಯಲ್ಲಿ ಇನ್ನೂ ಐದು ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಹಾಗೂ ನೂತನ ಗಡ್ಡಿ ತೇರಿನ ನಿರ್ಮಾಣಕ್ಕೆ ವೈಯಕ್ತಿಕ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡುವೆ ಎಂದರು. ನಮಗೆ ಶಾಸಕ ನಿಧಿಗೆ ಸರ್ಕಾರ ಬರೀ ಐವತ್ತು ಲಕ್ಷ ಮಾತ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತದೆ ಅದರಲ್ಲಿ ಬರೀ ಹತ್ತು ಲಕ್ಷ ಮಾತ್ರ ನೀಡಿದೆ ಅದರಲ್ಲಿ ನಮ್ಮ ಕ್ಷೇತ್ರದ 105 ಹಳ್ಳಿಗಳಿಗೂ ಹಂಚಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರದ ಅಸಹಾಯಕತೆ ಎತ್ತಿ ತೋರಿಸುವ ಕೆಲಸ ಮಾಡಿದರು. ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾದ ಸಮಯದಲ್ಲಿ ಅಧಿಕಾರಿಗಳ ಮೇಲೆ ಹಿಡಿತವಿದ್ದಿಲ್ಲ, ಪ್ರಸ್ತುತ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರವರು ಸ್ವಲ್ಪ ಹಿಡಿತ ಸಾಧಿಸುತ್ತಿದ್ದಾರೆ ಎಂದರು. ನಾನು ಆರು ಭಾರೀ ಸಚಿವನಾಗಿ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ ಸಮಯದಲ್ಲಿ ಅಧಿಕಾರಿಗಳೊಂದಿಗೆ ಹೊಂದಿದ್ದ ಉತ್ತಮ ಭಾಂದವ್ಯವೇ ಹಿಂದಿನ ಈ ಅನುದಾನ ತರುವಲ್ಲಿ ಸಾಧ್ಯವಾಗಿದೆ ಇಲ್ಲವಾದರೆ ಇವತ್ತು ಈ ಅನುದಾನ ತರಲು ಸಾಧ್ಯವಾಗುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ದ ಆರ್ಥಿಕ ದುರ್ಬಲತೆ ಎತ್ತಿ ತೋರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಾನಿಧ್ಯ ವೇದಮೂರ್ತಿ ಮಹಾದೇವಯ್ಯ ಸ್ವಾಮಿಗಳು ವಹಿಸಿದ್ದರು, ವಸಂತಗೌಡ ಪೊಲೀಸಪಾಟೀಲ, ವಿರೂಪಾಕ್ಷಪ್ಪ ಗೊಜನೂರು,ಶೇಕಣ್ಣ ಹುಲಗೂರು,ವಸಂತ ಮೇಟಿ, ಗ್ರಾಮ ಪಂಚಾಯ್ತಿ ಪಿ ಡಿ ಓ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು,ಹಾಗೂ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.2
- ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ. ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ. ಸಿಂಧನೂರು,ಸೆ. 11- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸೆಪ್ಟೆಂಬರ್ 5ರಂದು ಸಾರ್ವಜನಿಕವಾಗಿ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಕ್ಷಣವೇ ಯಾವುದೇ ಷರತ್ತಿಲ್ಲದೆ ಭೇಷರತ್ ಕ್ಷಮೆಯಾಚಿಸಬೇಕು ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಆಗ್ರಹಿಸಿ ಪ್ರತಿಭಟನೆ ಮೂಲಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಇವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಪೌರ ಕಾರ್ಮಿಕರು ನಗರದ ಕಸವನ್ನು ಮಾತ್ರ ತೆರವುಗೊಳಿಸುವವರಲ್ಲ. ನಗರವನ್ನು ಸ್ವಚ್ಛವಾಗಿ, ಆರೋಗ್ಯಕರವಾಗಿ ಮತ್ತು ನಾಗರಿಕ ಜೀವನಕ್ಕೆ ಯೋಗ್ಯವಾಗಿ ಇರಿಸುವ ಮುಂಚೂಣಿ ಶ್ರಮಿಕರು.ಆದರೆ ಸರ್ಕಾರ ಅವರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು, ನಗರದ ಸಮಸ್ಯೆಗಳಿಗೆ ಕಾರ್ಮಿಕರನ್ನೇ ಹೊಣೆಗಾರರನ್ನಾಗಿ ಮಾಡುತ್ತಿರುವುದು ಸರಿಯಲ್ಲ,ಕಾರ್ಮಿಕರ ಕೊರತೆ, ಖಾಲಿ ಹುದ್ದೆಗಳು, ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿ, ಕೆಲಸದ ಒತ್ತಡ, ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸುರಕ್ಷತಾ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳನ್ನು ಸರ್ಕಾರ ಮೊದಲು ಪರಿಹರಿಸಬೇಕು. ಕಾರ್ಮಿಕರ ಮೇಲೆ ಆರೋಪ ಹೊರಿಸುವ ಮೂಲಕ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು. ಈ ಸಂಧರ್ಭದಲ್ಲಿ ಆರ್ ಎಚ್ ಕಲಮಂಗಿ, ಮೌನೇಶ್ ಕವಿತಾಳ, ವಿರೇಶ ಕೇಸರಿ, ರಮೇಶ್, ಅಲ್ಲಾಸಾಬ, ಸುಗರಡ್ಡಿ, ಅಯ್ಯಣ್ಣ,ಸಿದ್ದು, ಯಂಕೋಬ ಹನುಮಂತ ವಿರೇಶ, ದಾನಪ್ಪ, ಮಹಾದೇವಮ್ಮ, ಲಕ್ಷ್ಮಿ ಮಕಾಳಮ್ಮ, ವಿಜಯಲಕ್ಷ್ಮಿ ಇತರರು ಇದ್ದರು.1
- *ಕುಷ್ಟಗಿಯಲ್ಲಿ ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರ ಬೃಹತ್ ಪ್ರತಿಭಟನೆ: ಬರ ಘೋಷಣೆಗೆ ಆಗ್ರಹ* *ಇನ್ನೂ ಎರಡು ದಿನದಲ್ಲಿ ಘೋಷಿಸದಿದ್ದರೆ ಉಗ್ರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ* *ಕುಷ್ಟಗಿ, ಸೆ.16:* ರಾಜ್ಯ ಸರ್ಕಾರ ಕುಷ್ಟಗಿ ತಾಲೂಕನ್ನು ಮೊದಲನೇ ಮತ್ತು ಎರಡನೇ ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಷ್ಟಗಿಯಲ್ಲಿ ಸಾವಿರಾರು ರೈತರು ನೂರಾರು ಎತ್ತಿನ ಬಂಡಿಗಳ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಾರ್ಟಿ, ಕುಷ್ಟಗಿ ಮಂಡಲ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ಮಲ್ಲಯ್ಯ ವೃತ್ತದಿಂದ ಹಿಡಿದು ಬಸ್ ನಿಲ್ದಾಣ, ಮಾರುತಿ ವೃತ್ತ, ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಬಸವೇಶ್ವರ ಸರ್ಕಲ್ ವರೆಗೆ ಎತ್ತಿನ ಬಂಡಿಗಳ ಬೃಹತ್ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ, ಬಹಿರಂಗ ವೇದಿಕೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. *2-3 ತಾಸು ಪಟ್ಟಣ ಸ್ತಬ್ಧ:* ಈ ಬೃಹತ್ ಎತ್ತಿನ ಬಂಡಿ ಪ್ರತಿಭಟನೆಯಿಂದ ಸುಮಾರು ಎರಡು ಮೂರು ತಾಸುಗಳ ಕಾಲ ಕುಷ್ಟಗಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ಇದರಿಂದ ವಾಹನ ಸವಾರರು ಮತ್ತು ನಾಗರಿಕರು ತೀವ್ರ ಪರದಾಡಿದರು. ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ನಮ್ಮ ತಾಲೂಕಿಗೆ ಶೇ.1 ರಷ್ಟು ಕೂಡ ನೀರಾವರಿ ಇಲ್ಲ. ನಾವು ಕೇವಲ ಒಣ ಬೇಸಾಯ, ಮಳೆ ಆಧಾರಿತ ಬೆಳೆಯನ್ನೇ ನಂಬಿಕೊಂಡಿದ್ದೇವೆ. ರೈತರು ಸಾಲ-ಸೂಲ ಮಾಡಿ ಭೂಮಿಗೆ ಬೀಜ, ಗೊಬ್ಬರ ಹಾಕಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಎರಡೆರಡು ಬಾರಿ ಬಿತ್ತನೆ ಮಾಡಿದ ಎಲ್ಲಾ ಬೆಳೆ ಸಂಪೂರ್ಣ ಹಾಳಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲರೂ ಬಂದು ನೋಡಿ ಹೋದರೂ ಕುಷ್ಟಗಿಯನ್ನು ಪಟ್ಟಿಗೆ ಸೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡದೆ ಕೂಡಲೇ ಕುಷ್ಟಗಿಯನ್ನು ಬರ ಪೀಡಿತ ಎಂದು ಘೋಷಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ:* ಇನ್ನು ಎರಡು ದಿನದಲ್ಲಿ ಕುಷ್ಟಗಿ ಸೇರಿದಂತೆ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸುರಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ ನೀಡಿದರು. "ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ರಾಜ್ಯದಲ್ಲಿ ಕೇವಲ 101 ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿ, ಕಲ್ಯಾಣ ಕರ್ನಾಟಕದ ತಾಲೂಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಕ್ಷೇತ್ರ ಮಾತ್ರವಲ್ಲ ಕಾಂಗ್ರೆಸ್ ಕ್ಷೇತ್ರದ ತಾಲೂಕುಗಳನ್ನೂ ಬರ ಪಟ್ಟಿಯಿಂದ ಕೈಬಿಟ್ಟಿದೆ. ಮುಂಬರುವ ಎರಡು ದಿನದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸಬೇಕು" ಎಂದು ಆಗ್ರಹಿಸಿದರು. ಕೊನೆಯಲ್ಲಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. *ಪ್ರತಿಭಟನೆಯಲ್ಲಿ ಇದ್ದವರು:* ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರ, ಬಿಜೆಪಿ ಮುಖಂಡರಾದ ಬಸವರಾಜ ಕ್ಯಾವಟರ್, ಬಸವರಾಜ ಹಳ್ಳೂರು, ದೇವೇಂದ್ರಪ್ಪ ಬಳೂಟಗಿ, ಪಕೀರಪ್ಪ ಚಳಗೇರಿ ವಕೀಲರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬದಾಮಿ, ರವಿಕುಮಾರ ಹಿರೇಮಠ, ಮಲ್ಲಣ್ಣ ಪಲ್ಲೇದ್, ಮಾಜಿ ಪುರಸಭೆ ಅಧ್ಯಕ್ಷ ಕಲ್ಲೇಶ ತಾಳದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಮಹೇಶ ಕ್ಯಾವಟರ್, ವಿನಯಕುಮಾರ ಮೇಲಿನಮನಿ, ಭರಮಗೌಡ ಬ್ಯಾಲಿಹಾಳ, ಈರಣ್ಣ ಗಜೇಂದ್ರಗಡ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ಎತ್ತಿನ ಬಂಡಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಕೊಪ್ಪಳ : ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ ಕೊಪ್ಪಳ: ಕೊಪ್ಪಳದಲ್ಲಿ ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇರವೇರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸಿದರು.1
- 371 ಜೆ ಕಲಂ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಲಕ್ಷ್ಮೀದೇವಿ ಯಾದವ್ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿಯಲ್ಲಿ ಧ್ವಜಾರೋಹಣ 371 ಜೆ ಕಲಂ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಲಕ್ಷ್ಮೀದೇವಿ ಯಾದವ್ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿಯಲ್ಲಿ ಧ್ವಜಾರೋಹಣ ಕಾರಟಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ವಿಶೇಷ ಅನುದಾನ ನೀಡಲಾಗುತ್ತಿದ್ದು, ಸಂವಿಧಾನದ 371 ಜೆ ಕಲಂ ಅಡಿಯಲ್ಲಿ ದೊರೆಯುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ಯಾದವ್ ಹೇಳಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗವು ಹೈದರಾಬಾದ್ ನಿಜಾಮನ ಆಡಳಿತದಲ್ಲಿತ್ತು. ನಿಜಾಮನ ಆಡಳಿತದಿಂದ ಈ ಪ್ರದೇಶವನ್ನು ಮುಕ್ತಗೊಳಿಸಿ ಭಾರತ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವಲ್ಲಿ ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ನಡೆದ ಪೋಲೋ ಕಾರ್ಯಾಚರಣೆ ಮಹತ್ವದ ಪಾತ್ರ ವಹಿಸಿತು. 1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ಸಂಸ್ಥಾನ ಭಾರತ ಒಕ್ಕೂಟಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದರು. 371 ಜೆ ಕಲಂ ಅಡಿಯಲ್ಲಿ ಉದ್ಯೋಗದಲ್ಲಿ ಮೀಸಲಾತಿ ಮಾತ್ರವಲ್ಲದೆ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಹಲವು ಸೌಲಭ್ಯಗಳು ದೊರೆಯುತ್ತವೆ. ಈ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನಗಳನ್ನು ಪಡೆಯಬೇಕು ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಧ್ವಜಾರೋಹಣದ ಬಳಿಕ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶ್ರೀ ಗುರು ವಿಶ್ವಕರ್ಮ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ವೈ. ವನಜಾ, ಕೆಡಿಪಿ ಸದಸ್ಯ ಬಸವರಾಜ್ ಗುಂಡೂರು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯೆ ರೇಣುಕಮ್ಮ, ತಾಲೂಕು ಪಂಚಾಯಿತಿಯ ವಿವಿಧ ಯೋಜನೆಗಳ ವಿಷಯ ನಿರ್ವಾಹಕರು, ವಿಬಿ-ಜಿ ರಾಮ್-ಜಿ ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.1