logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು. ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು. ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. #KitturUtsava #KitturRaniChennamma #SatishJarkiholi #Belagavi

3 hrs ago
user_ಹೋರಾಟದ ಕಿಚ್ಚು
ಹೋರಾಟದ ಕಿಚ್ಚು
Chikodi, Belagavi•
3 hrs ago
9649e2b9-212d-41a5-9364-c7e9522e64dd

ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು

d0ce2200-ee3e-473f-943e-5afaaae3d4a8

ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು. ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು.

6a14308a-f32f-4393-80b0-67df301c631b

ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು. ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. #KitturUtsava #KitturRaniChennamma #SatishJarkiholi #Belagavi

More news from ಕರ್ನಾಟಕ and nearby areas
  • ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ
    1
    ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ

ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    20 hrs ago
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    5 hrs ago
  • ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ​ಗಣ್ಯರ ಉಪಸ್ಥಿತಿ ​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    4
    ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ
​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು.
​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು
​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು.
​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು.
​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ
​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
​ಗಣ್ಯರ ಉಪಸ್ಥಿತಿ
​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    1 hr ago
  • 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 #suddipoint #crimenews #crime SP Belagavi District
    1
    2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢
2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢
#suddipoint #crimenews #crime SP Belagavi District
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    12 hrs ago
  • ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಚಿವರಾದ ಸತೀಶ್ ಜಾರಕಿಹೊಳಿ ಸಾಹುಕಾರ್. 🏏❤️ ಯಾವುದೇ ರೀತಿಯ ಒತ್ತಡವಿಲ್ಲದೆ, ಮಕ್ಕಳೊಂದಿಗೆ ಬೆರೆತು ಆರಾಮಾಗಿ ಕೆಲ ಸಮಯ ಕಳೆದು, ಅವರ ಉತ್ಸಾಹವನ್ನು ಹೆಚ್ಚಿಸಿದರು. Satish Jarkiholi
    1
    ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ  ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಚಿವರಾದ ಸತೀಶ್ ಜಾರಕಿಹೊಳಿ ಸಾಹುಕಾರ್. 🏏❤️ ಯಾವುದೇ ರೀತಿಯ ಒತ್ತಡವಿಲ್ಲದೆ, ಮಕ್ಕಳೊಂದಿಗೆ ಬೆರೆತು ಆರಾಮಾಗಿ ಕೆಲ ಸಮಯ ಕಳೆದು, ಅವರ ಉತ್ಸಾಹವನ್ನು ಹೆಚ್ಚಿಸಿದರು. 
Satish Jarkiholi
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    23 hrs ago
  • ಭಾವೈಕ್ಯತೆ ಸಾರುವ ಅಥಣಿಯ ಭವ್ಯ "ಅಥಣಿ ಚಾ ರಾಜಾ" ಗಣಪತಿ ವೈಭವದ ಪ್ರತಿಷ್ಠಾಪನೆ ಅಥಣಿ ::  ತಾಲೂಕಿನ ಗ್ರಾಮೀಣ   ಹಾಗೂ ಪಟ್ಟಣ ಸೇರಿದಂತೆ ವಿವಿಧೆಡೆ ಗಣೇಶ ಉತ್ಸವವನ್ನು ಸರಳ ಮತ್ತು ಶ್ರದ್ಧಾ, ಭಕ್ತಿಯಿಂದ ಭಾವೈಕ್ಯತೆಯ ಮೂಲಕ ಹಲವೆಡೆ ಹಿಂದೂ ಮುಸ್ಲಿಂ ಹಾಗೂ ವಿವಿಧ ಕೋಮಿನ ಯುವಕರು ಸಾಮರಸ್ಯದಿಂದ ಗಣೇಶ ಹಬ್ಬ  ಆಚರಿಸಲಾಗುತ್ತಿದೆ .  ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸುಪುತ್ರ ಚಿದಾನಂದ ಸವದಿ ಸ್ವತಹ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಗಣೇಶನ ಬರಮಾಡಿಕೊಂಡರು. ಯುವಕರು ಕುಣಿದು ಕುಪ್ಪಳಿಸುತ್ತಾ ಸಂಭ್ರಮದಿಂದ ಭವ್ಯ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು. ಈ ವೇಳೆ ಮುಖಂಡ ಚಿದಾನಂದ ಸವದಿ ಅವರು "ಅಥಣಿ ಚಾ ರಾಜಾ" ಜಾತ್ಯಾತೀತವಾಗಿ ಅಥಣಿಯ ಎಲ್ಲಾ ಯುವಕರ ಹೆಮ್ಮೆಯ ಗಣಪತಿ ಉತ್ಸವ ವಾಗಿದ್ದು ಯುವಕರ ಒಗ್ಗಟ್ಟು ಭಕ್ತಿ ಹಾಗೂ ಸಂಭ್ರಮ ಸಂತಸವನ್ನುಂಟು ಮಾಡುತ್ತದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಯುವಕರು ಸೇರಿಕೊಂಡು ಪ್ರತಿ ವರ್ಷ ಈ ಗಣಪತಿ ಉತ್ಸವ ಆಚರಿಸುತ್ತಿದ್ದು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು. ಈ ವರ್ಷವೂ ವಿಜೃಂಭಣೆಯಿಂದ ಭವ್ಯ ಮೆರವಣಿಗೆ ಮೂಲಕ ಹಾಡು ನೃತ್ಯ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪಿಸಿದರು.
    1
    ಭಾವೈಕ್ಯತೆ ಸಾರುವ ಅಥಣಿಯ ಭವ್ಯ "ಅಥಣಿ ಚಾ ರಾಜಾ" ಗಣಪತಿ ವೈಭವದ ಪ್ರತಿಷ್ಠಾಪನೆ 
ಅಥಣಿ ::  ತಾಲೂಕಿನ ಗ್ರಾಮೀಣ   ಹಾಗೂ ಪಟ್ಟಣ ಸೇರಿದಂತೆ ವಿವಿಧೆಡೆ ಗಣೇಶ ಉತ್ಸವವನ್ನು ಸರಳ ಮತ್ತು ಶ್ರದ್ಧಾ, ಭಕ್ತಿಯಿಂದ ಭಾವೈಕ್ಯತೆಯ ಮೂಲಕ ಹಲವೆಡೆ ಹಿಂದೂ ಮುಸ್ಲಿಂ ಹಾಗೂ ವಿವಿಧ ಕೋಮಿನ ಯುವಕರು ಸಾಮರಸ್ಯದಿಂದ ಗಣೇಶ ಹಬ್ಬ  ಆಚರಿಸಲಾಗುತ್ತಿದೆ . 
ಸಹಕಾರ ಸಚಿವ ಲಕ್ಷ್ಮಣ ಸವದಿ ಅವರ ಸುಪುತ್ರ ಚಿದಾನಂದ ಸವದಿ ಸ್ವತಹ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಗಣೇಶನ ಬರಮಾಡಿಕೊಂಡರು. ಯುವಕರು ಕುಣಿದು ಕುಪ್ಪಳಿಸುತ್ತಾ ಸಂಭ್ರಮದಿಂದ ಭವ್ಯ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು.
ಈ ವೇಳೆ ಮುಖಂಡ ಚಿದಾನಂದ ಸವದಿ ಅವರು "ಅಥಣಿ ಚಾ ರಾಜಾ" ಜಾತ್ಯಾತೀತವಾಗಿ ಅಥಣಿಯ ಎಲ್ಲಾ ಯುವಕರ ಹೆಮ್ಮೆಯ ಗಣಪತಿ ಉತ್ಸವ ವಾಗಿದ್ದು ಯುವಕರ ಒಗ್ಗಟ್ಟು ಭಕ್ತಿ ಹಾಗೂ ಸಂಭ್ರಮ ಸಂತಸವನ್ನುಂಟು ಮಾಡುತ್ತದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಯುವಕರು ಸೇರಿಕೊಂಡು ಪ್ರತಿ ವರ್ಷ ಈ ಗಣಪತಿ ಉತ್ಸವ ಆಚರಿಸುತ್ತಿದ್ದು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು. 
ಈ ವರ್ಷವೂ ವಿಜೃಂಭಣೆಯಿಂದ ಭವ್ಯ ಮೆರವಣಿಗೆ ಮೂಲಕ ಹಾಡು ನೃತ್ಯ ಜೊತೆಗೆ ಪಟಾಕಿ ಸಿಡಿಸಿ  ಸಂಭ್ರಮದಿಂದ ಗಣೇಶನನ್ನು ಪ್ರತಿಷ್ಠಾಪಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    21 hrs ago
  • ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    1
    ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ 
ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ 
ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ 
ಸಚಿವ ಸತೀಶ ಜಾರಕಿಹೊಳಿ 
.
.
..
....
.
.
..
..
..
..
..
..
..
..
.
.
.
.
.
.
..
..
..
..
..
.
.
.
.
....
..
.
.
#reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP 
#muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    1
    ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.