logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾಸಕರ ನೇತೃತ್ವದಲ್ಲಿ ಪ್ರಜಾ ಸೇವಾ ಕಾರ್ಯಕ್ರಮದ ಪೂರ್ವಭಾವಿ ಸಭೆ ರಾಮನಗರ : ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅವರ ನೇತೃತ್ವದಲ್ಲಿ ಮಾಸಿಕ ಎರಡನೇ ಶನಿವಾರದ ಪ್ರಜಾ ಸೇವಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಗರದ ಜಿಲ್ಲಾ ಪಂಚಾಯತಿ ಸುಭಾಂಗಣದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಮುಂಬರುವ ಕಾರ್ಯಕ್ರಮದ ಸಿದ್ಧತೆಗಳು, ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆ ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.

2 hrs ago
user_Ramanagsra News
Ramanagsra News
Photographer ರಾಮನಗರ, ರಾಮನಗರ, ಕರ್ನಾಟಕ•
2 hrs ago
2f5c6da0-b8f4-4744-9a92-f240cdf00a2c

ಶಾಸಕರ ನೇತೃತ್ವದಲ್ಲಿ ಪ್ರಜಾ ಸೇವಾ ಕಾರ್ಯಕ್ರಮದ ಪೂರ್ವಭಾವಿ ಸಭೆ ರಾಮನಗರ : ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅವರ ನೇತೃತ್ವದಲ್ಲಿ ಮಾಸಿಕ ಎರಡನೇ ಶನಿವಾರದ ಪ್ರಜಾ ಸೇವಾ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಗರದ ಜಿಲ್ಲಾ ಪಂಚಾಯತಿ ಸುಭಾಂಗಣದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಮುಂಬರುವ ಕಾರ್ಯಕ್ರಮದ ಸಿದ್ಧತೆಗಳು, ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆ ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.

More news from ಕರ್ನಾಟಕ and nearby areas
  • ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.
    1
    ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ
ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು.
ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.
    user_Ramanagsra News
    Ramanagsra News
    Photographer ರಾಮನಗರ, ರಾಮನಗರ, ಕರ್ನಾಟಕ•
    32 min ago
  • ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ  ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ.‌ ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ  ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು‌
    1
    ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ 
ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.
ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ  ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ.‌ ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು.
ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ  ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು‌
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    28 min ago
  • ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
    1
    ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ
ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ.
ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ.
ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    4 hrs ago
  • ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ
    1
    ಗಣಪತಿ ಮೆರವಣಿಗೆಯಲ್ಲಿ ಮಚ್ಚು, 
ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada 
ಗಣಪತಿ ಮೆರವಣಿಗೆಯಲ್ಲಿ ಮಚ್ಚು, 
ಚಾಕು ಹಿಡಿದು ಯುವಕರ ಹುಚ್ಚಾಟ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    51 min ago
  • ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಕ್ಕೆ ಸೇವಾಕಾರ್ಯ ಶಾಸಕಿ‌ ಮಂಜುಳಾ‌ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತ್ರತ್ವದಲ್ಲಿ ಆಯೋಜನೆ ಕ್ಷೇತ್ರ ವ್ಯಾಪ್ತಿ ಸುಮಾರು 134ಕ್ಕೂ ಹೆಚ್ಚು ಕಡೆ ಸೇವಾಕಾರ್ಯ ಕೆರೆ , ದೇವಾಲಯ ,ಶಾಲೆ , ಸ್ಮಶಾನ ಆವರಣ ಸ್ವಚ್ಛತೆ , ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ರಕ್ತದಾನ ಶಿಬಿರ , ಆರೋಗ್ಯ ಶಿಬಿರ , ಗೋಶಾಲೆಗಳಲ್ಲಿ‌ ಸೇವಾಕಾರ್ಯ ಗಿಡ ನೆಡುವ ಜೊತೆ ಶಾಲಾ ಮಕ್ಕಳಿಗೆ ಪುಸ್ತಕ ಸಿಹಿ ವಿತರಣೆ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆ ಇಡಿ‌ ತಿಂಗಳು ಸೇವಾಕಾರ್ಯ ಮಾಡಲು ಪಕ್ಷ ಕರೆ ನೀಡಿದೆ ಮಹದೇವಪುರ ಕ್ಷೇತ್ರದಲ್ಲಿ ‌ಒಂದೇ ದಿನ ನೂರಾರು ಸೇವಾಕಾರ್ಯ ಮಾಡಲಾಗಿದೆ ದೇಶದ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಚಿತ್ರಣವನ್ನೇ ಪ್ರಧಾನ ಮಂತ್ರಿಗಳು ಬದಲಾಯಿಸುತ್ತಾರೆ ಎಂದು ಮಾಜಿ ಸಚಿವ ಲಿಂಬಾವಳಿ ಆಡಿ ಹೊಗಳಿದ್ದಾರೆ
    1
    ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಕ್ಕೆ ಸೇವಾಕಾರ್ಯ
ಶಾಸಕಿ‌ ಮಂಜುಳಾ‌ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತ್ರತ್ವದಲ್ಲಿ ಆಯೋಜನೆ 
ಕ್ಷೇತ್ರ ವ್ಯಾಪ್ತಿ ಸುಮಾರು 134ಕ್ಕೂ ಹೆಚ್ಚು ಕಡೆ ಸೇವಾಕಾರ್ಯ   
ಕೆರೆ , ದೇವಾಲಯ ,ಶಾಲೆ , ಸ್ಮಶಾನ ಆವರಣ ಸ್ವಚ್ಛತೆ , ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ 
ರಕ್ತದಾನ ಶಿಬಿರ , ಆರೋಗ್ಯ ಶಿಬಿರ , ಗೋಶಾಲೆಗಳಲ್ಲಿ‌ ಸೇವಾಕಾರ್ಯ  
ಗಿಡ ನೆಡುವ ಜೊತೆ ಶಾಲಾ ಮಕ್ಕಳಿಗೆ ಪುಸ್ತಕ ಸಿಹಿ ವಿತರಣೆ  
ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆ ಇಡಿ‌ ತಿಂಗಳು ಸೇವಾಕಾರ್ಯ ಮಾಡಲು ಪಕ್ಷ ಕರೆ ನೀಡಿದೆ 
ಮಹದೇವಪುರ ಕ್ಷೇತ್ರದಲ್ಲಿ ‌ಒಂದೇ ದಿನ ನೂರಾರು ಸೇವಾಕಾರ್ಯ ಮಾಡಲಾಗಿದೆ  
ದೇಶದ  ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿ ಅವರು
ನಮ್ಮ ದೇಶದ ಚಿತ್ರಣವನ್ನೇ ಪ್ರಧಾನ ಮಂತ್ರಿಗಳು ಬದಲಾಯಿಸುತ್ತಾರೆ ಎಂದು ಮಾಜಿ ಸಚಿವ ಲಿಂಬಾವಳಿ ಆಡಿ ಹೊಗಳಿದ್ದಾರೆ
    user_The Reporter
    The Reporter
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.
    1
    ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ
ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು.
ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ  ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ,  ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.
    1
    ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ  ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು
ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ  ಬಿಜೆಪಿ ಪಕ್ಷದ ವತಿಯಿಂದ  ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು  ನೇತೃತ್ವದಲ್ಲಿ   ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ  ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ.
ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ  ಬಿಜೆಪಿ ತಾಲ್ಲೂಕು ಅಧ್ಯಕ್ಷ  ಮಧುಗಂಗಾಧರ್  ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ.
ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು,  ಈ ತಿಂಗಳು 17 ನೇ ತಾರೀಖಿನಿಂದ  ಮುಂದಿನ ತಿಂಗಳು 17 ರವರಗೆ  ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ  ಎಂದರು.
ಈ ವೇಳೆ  ಬಿಜೆಪಿ ಅಧ್ಯಕ್ಷ ಮಧುಗಂಗಾಧರ್,  ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    5 hrs ago
  • ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ  ಕಾಲು ತೊಳೆದು ಬಾಗಿನ ಅರ್ಪಣೆ ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು  ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ  ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ 35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ  ಮೋದಿ ಯವರಿಗೆ  ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು  ಹಗರಣದ  ಮುಕ್ತ,  ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ. ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು “ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    1
    ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ  ಕಾಲು ತೊಳೆದು ಬಾಗಿನ ಅರ್ಪಣೆ
ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು  ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ  ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ
35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ  ಮೋದಿ ಯವರಿಗೆ  ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು  ಹಗರಣದ  ಮುಕ್ತ,  ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ.
ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ.
ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ.
ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು
“ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    33 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.