logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಿಲ್ಲೆಯಲ್ಲಿ ಎಸ್.ಐ.ಆರ್ ಕಾರ್ಯ ನಿರ್ವಹಣೆ : 7,96,007 ಗಣತಿ ನಮೂನೆ ಡಿಜಿಟಲೀಕರಣ* *ಜಿಲ್ಲೆಯಲ್ಲಿ ಎಸ್.ಐ.ಆರ್ ಕಾರ್ಯ ನಿರ್ವಹಣೆ : 7,96,007 ಗಣತಿ ನಮೂನೆ ಡಿಜಿಟಲೀ ಚಾಮರಾಜನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈವರೆಗೆ 7,96,007 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,24,616 ಮತದಾರರಿದ್ದು, ಈ ಪೈಕಿ 2,03,462 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,21,151 ಮತದಾರರಿದ್ದು, ಇದರಲ್ಲಿ 1,97,591 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,17,852 ಮತದಾರರಿದ್ದು, ಈ ಪೈಕಿ 1,97,234 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,605 ಮತದಾರರಿದ್ದು, ಇದರಲ್ಲಿ 1,97,720 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. ಜಿಲ್ಲೆಯಲ್ಲಿ 983 ಮತಗಟ್ಟೆಗಳಿದ್ದು, ಒಟ್ಟಾರೆ 8,80,224 ಮತದಾರರಿದ್ದಾರೆ. ಇದರಲ್ಲಿ 7,96,007 ಗಣತಿ ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಗೈರು ಹಾಜರಿ, ಸ್ಥಳಾಂತರ, ಮರಣ ಹೊಂದಿರುವ ಹಾಗೂ ಎರಡು ಕಡೆ ನೋಂದಣಿಯಾಗಿರುವ ಹಾಗೂ ಇತರೆ ಸೇರಿದಂತೆ ಒಟ್ಟು 84,212 ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ 8,876 ಗೈರು ಹಾಜರಿ, 35,958 ಸ್ಥಳಾಂತರ, 31,083 ಮರಣ ಹೊಂದಿದವರು, 7,789 ಎರಡು ಕಡೆ ನೊಂದಣಿಯಾಗಿರುವವರು, ಇತರೆ 506 ಸೇರಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 514 ಗೈರು ಹಾಜರಿ, 11,320 ಸ್ಥಳಾಂತರ, 6,488 ಮರಣ ಹೊಂದಿದವರು, 2,794 ಎರಡು ಕಡೆ ನೊಂದಣಿಯಾಗಿರುವವರು, ಇತರೆ 38 ಸೇರಿದಂತೆ 21,154 ಮತದಾರರನ್ನು ಗುರುತಿಸಲಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 1,697 ಗೈರು ಹಾಜರಿ, 9,884 ಸ್ಥಳಾಂತರ, 10,249 ಮರಣ ಹೊಂದಿದವರು, 1,710 ಎರಡು ಕಡೆ ನೊಂದಣಿಯಾಗಿರುವವರು, ಇತರೆ 20 ಸೇರಿದಂತೆ 23,560 ಮತದಾರರನ್ನು ಗುರುತಿಸಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 2,253 ಗೈರು ಹಾಜರಿ, 8,839 ಸ್ಥಳಾಂತರ, 7,875 ಮರಣ ಹೊಂದಿದವರು, 1,574 ಎರಡು ಕಡೆ ನೊಂದಣಿಯಾಗಿರುವವರು, ಇತರೆ 77 ಸೇರಿದಂತೆ 20,618 ಮತದಾರರನ್ನು ಗುರುತಿಸಲಾಗಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 4,412 ಗೈರು ಹಾಜರಿ, 5,915 ಸ್ಥಳಾಂತರ, 6,471 ಮರಣ ಹೊಂದಿದವರು, 1,711 ಎರಡು ಕಡೆ ನೊಂದಣಿಯಾಗಿರುವವರು, ಇತರೆ 371 ಸೇರಿದಂತೆ 18,880 ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 hr ago
user_Nagesh BR Durgavara
Nagesh BR Durgavara
Photographer Chitradurga, Karnataka•
1 hr ago

ಜಿಲ್ಲೆಯಲ್ಲಿ ಎಸ್.ಐ.ಆರ್ ಕಾರ್ಯ ನಿರ್ವಹಣೆ : 7,96,007 ಗಣತಿ ನಮೂನೆ ಡಿಜಿಟಲೀಕರಣ* *ಜಿಲ್ಲೆಯಲ್ಲಿ ಎಸ್.ಐ.ಆರ್ ಕಾರ್ಯ ನಿರ್ವಹಣೆ : 7,96,007 ಗಣತಿ ನಮೂನೆ ಡಿಜಿಟಲೀ ಚಾಮರಾಜನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈವರೆಗೆ 7,96,007 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,24,616 ಮತದಾರರಿದ್ದು, ಈ ಪೈಕಿ 2,03,462 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,21,151 ಮತದಾರರಿದ್ದು, ಇದರಲ್ಲಿ 1,97,591 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,17,852 ಮತದಾರರಿದ್ದು, ಈ ಪೈಕಿ 1,97,234 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,605 ಮತದಾರರಿದ್ದು, ಇದರಲ್ಲಿ 1,97,720 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದೆ. ಜಿಲ್ಲೆಯಲ್ಲಿ 983 ಮತಗಟ್ಟೆಗಳಿದ್ದು, ಒಟ್ಟಾರೆ 8,80,224 ಮತದಾರರಿದ್ದಾರೆ. ಇದರಲ್ಲಿ 7,96,007 ಗಣತಿ ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಗೈರು ಹಾಜರಿ, ಸ್ಥಳಾಂತರ, ಮರಣ ಹೊಂದಿರುವ ಹಾಗೂ ಎರಡು ಕಡೆ ನೋಂದಣಿಯಾಗಿರುವ ಹಾಗೂ ಇತರೆ ಸೇರಿದಂತೆ ಒಟ್ಟು 84,212 ಮತದಾರರನ್ನು ಗುರುತಿಸಲಾಗಿದೆ. ಇವರಲ್ಲಿ 8,876 ಗೈರು ಹಾಜರಿ, 35,958 ಸ್ಥಳಾಂತರ, 31,083 ಮರಣ ಹೊಂದಿದವರು, 7,789 ಎರಡು ಕಡೆ ನೊಂದಣಿಯಾಗಿರುವವರು, ಇತರೆ 506 ಸೇರಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 514 ಗೈರು ಹಾಜರಿ, 11,320 ಸ್ಥಳಾಂತರ, 6,488 ಮರಣ ಹೊಂದಿದವರು, 2,794 ಎರಡು ಕಡೆ ನೊಂದಣಿಯಾಗಿರುವವರು, ಇತರೆ 38 ಸೇರಿದಂತೆ 21,154 ಮತದಾರರನ್ನು ಗುರುತಿಸಲಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 1,697 ಗೈರು ಹಾಜರಿ, 9,884 ಸ್ಥಳಾಂತರ, 10,249 ಮರಣ ಹೊಂದಿದವರು, 1,710 ಎರಡು ಕಡೆ ನೊಂದಣಿಯಾಗಿರುವವರು, ಇತರೆ 20 ಸೇರಿದಂತೆ 23,560 ಮತದಾರರನ್ನು ಗುರುತಿಸಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 2,253 ಗೈರು ಹಾಜರಿ, 8,839 ಸ್ಥಳಾಂತರ, 7,875 ಮರಣ ಹೊಂದಿದವರು, 1,574 ಎರಡು ಕಡೆ ನೊಂದಣಿಯಾಗಿರುವವರು, ಇತರೆ 77 ಸೇರಿದಂತೆ 20,618 ಮತದಾರರನ್ನು ಗುರುತಿಸಲಾಗಿದೆ. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 4,412 ಗೈರು ಹಾಜರಿ, 5,915 ಸ್ಥಳಾಂತರ, 6,471 ಮರಣ ಹೊಂದಿದವರು, 1,711 ಎರಡು ಕಡೆ ನೊಂದಣಿಯಾಗಿರುವವರು, ಇತರೆ 371 ಸೇರಿದಂತೆ 18,880 ಮತದಾರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from Karnataka and nearby areas
  • ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು! ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು! ಚಿತ್ರದುರ್ಗ : ನಗರದ ದವಳಗಿರಿ ಬಡಾವಣೆಯ ಮೂರನೇ ಹಂತದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿರುವ ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ) ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಪರಿಣಾಮವಾಗಿ ಇಡೀ ಬಡಾವಣೆಯಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸ್ಥಳೀಯರ ಆತಂಕ: ಶಾರ್ಟ್ ಸರ್ಕ್ಯೂಟ್ ಆದ ತಕ್ಷಣ ಟ್ರಾನ್ಸ್‌ಫಾರ್ಮರ್‌ನಿಂದ ಭಾರಿ ಪ್ರಮಾಣದಲ್ಲಿ ಕಿಡಿಗಳು ಸಿಡಿದು, ಹೊಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳ ಗಮನಕ್ಕೆ ಮನವಿ:ವಿದ್ಯುತ್ ಕೈಕೊಟ್ಟಿರುವುದರಿಂದ ಇಡೀ ಬಡಾವಣೆ ಕತ್ತಲಲ್ಲಿ ಮುಳುಗಿದೆ. ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು. ಹಾನಿಗೊಳಗಾದ ಟ್ರಾನ್ಸ್‌ಫಾರ್ಮರ್ ಅನ್ನು ದುರಸ್ತಿಗೊಳಿಸಿ, ಬಡಾವಣೆಗೆ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾರ್ವಜನಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ.
    3
    ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು!
ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು!
ಚಿತ್ರದುರ್ಗ : ನಗರದ ದವಳಗಿರಿ ಬಡಾವಣೆಯ ಮೂರನೇ ಹಂತದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿರುವ ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ) ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಪರಿಣಾಮವಾಗಿ ಇಡೀ ಬಡಾವಣೆಯಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.
ಸ್ಥಳೀಯರ ಆತಂಕ:
ಶಾರ್ಟ್ ಸರ್ಕ್ಯೂಟ್ ಆದ ತಕ್ಷಣ ಟ್ರಾನ್ಸ್‌ಫಾರ್ಮರ್‌ನಿಂದ ಭಾರಿ ಪ್ರಮಾಣದಲ್ಲಿ ಕಿಡಿಗಳು ಸಿಡಿದು, ಹೊಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. 
ಅಧಿಕಾರಿಗಳ ಗಮನಕ್ಕೆ ಮನವಿ:ವಿದ್ಯುತ್ ಕೈಕೊಟ್ಟಿರುವುದರಿಂದ ಇಡೀ ಬಡಾವಣೆ ಕತ್ತಲಲ್ಲಿ ಮುಳುಗಿದೆ. ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು. ಹಾನಿಗೊಳಗಾದ ಟ್ರಾನ್ಸ್‌ಫಾರ್ಮರ್ ಅನ್ನು ದುರಸ್ತಿಗೊಳಿಸಿ, ಬಡಾವಣೆಗೆ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾರ್ವಜನಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    52 min ago
  • ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ . ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ. ​ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು.ಸಂಚರಿಸುತ್ತಿರುವುದು ಕಂಡುಬಂದಿದೆ. ​ ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ. ​ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
    1
    ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ .
ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
​ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು.ಸಂಚರಿಸುತ್ತಿರುವುದು ಕಂಡುಬಂದಿದೆ.
​
ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ.
​ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    55 min ago
  • Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    1
    Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ
ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ
*" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " ,  ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು     ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ ,  ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    13 hrs ago
  • ಕ್ಷೇತ್ರ ಪುನರ್‌ವಿಂಗಡಣೆ ಬೆಂಬಲಿಸುವವರು ದ್ರೋಹಿಗಳು : ರಾಹುಲ್ ಗಾಂಧಿ ವಾಗ್ದಾಳಿ ನೀವು ಒದಗಿಸಿದ ಸುದ್ದಿಯ ಆಧಾರದಲ್ಲಿ, ವರದಿಯನ್ನು ಮತ್ತಷ್ಟು ಸ್ಪಷ್ಟವಾಗಿ, ವೃತ್ತಿಪರ ಪತ್ರಿಕೋದ್ಯಮದ ಶೈಲಿಯಲ್ಲಿ ಪುನರ್ ರಚಿಸಿ ನೀಡಲಾಗಿದೆ: --- ಚೆಂಗಲ್ಪಟ್ಟು (ತಮಿಳುನಾಡು): "ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್‌ವಿಂಗಡಣೆಯನ್ನು ಯಾವುದೇ ತಮಿಳರು ಬೆಂಬಲಿಸಬಾರದು. ಇದನ್ನು ಬೆಂಬಲಿಸುವ ಪ್ರತಿಯೊಬ್ಬರೂ ತಮಿಳುನಾಡಿಗೆ ಮಾಡುವ ದ್ರೋಹಿಗಳು ('ಎಟಾಪರ್‌ಗಳು')" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಮಲ್ಲಪುರಂನಲ್ಲಿ ಆಯೋಜಿಸಲಾಗಿದ್ದ ತಮಿಳುನಾಡು ಕಾಂಗ್ರೆಸ್ ಜಿಲ್ಲಾ ನಾಯಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. "ಬಿಜೆಪಿ ಜಾರಿಗೆ ತರಲು ಹೊರಟಿರುವ ಕ್ಷೇತ್ರ ಪುನರ್‌ವಿಂಗಡಣೆ ಯೋಜನೆಯು ತಮಿಳುನಾಡಿನ ಮೇಲೆ ಗಂಭೀರವಾದ ದುಷ್ಪರಿಣಾಮ ಬೀರಲಿದೆ. ಇದು ತಮಿಳುನಾಡಿನ ಜನರಿಗಿರುವ ರಾಜಕೀಯ ಅಧಿಕಾರ ಹಾಗೂ ಪ್ರಾತಿನಿಧ್ಯವನ್ನು ಕಸಿದುಕೊಳ್ಳುವ ಸ್ಪಷ್ಟ ಸಂಚು ಆಗಿದೆ ಎಂದರು. ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಸೋಲಿಸಲು ದೇಶದ ಪ್ರತಿಯೊಂದು ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ಒಂದಾಗಬೇಕು ಎಂದು ಅವರು ಕರೆ ನೀಡಿದರು. "ಇದು ಕೇವಲ ರಾಜಕೀಯ ವಿಷಯವಲ್ಲ, ತಮಿಳುನಾಡಿನ ಜನರ ಭವಿಷ್ಯ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಪ್ರಶ್ನೆ. ಹೀಗಾಗಿ ಯಾವುದೇ ತಮಿಳರು ಇದನ್ನು ಒಪ್ಪಬಾರದು," ಎಂದು ನುಡಿದರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಇದಕ್ಕೂ ಮುನ್ನ, ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ತಮಿಳುನಾಡು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಅಲ್ಲಿಂದ ನೇರವಾಗಿ ಮಾಮಲ್ಲಪುರಂ ತರಬೇತಿ ಶಿಬಿರಕ್ಕೆ ತೆರಳಿದ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
    1
    ಕ್ಷೇತ್ರ ಪುನರ್‌ವಿಂಗಡಣೆ ಬೆಂಬಲಿಸುವವರು ದ್ರೋಹಿಗಳು : ರಾಹುಲ್ ಗಾಂಧಿ ವಾಗ್ದಾಳಿ
ನೀವು ಒದಗಿಸಿದ ಸುದ್ದಿಯ ಆಧಾರದಲ್ಲಿ, ವರದಿಯನ್ನು ಮತ್ತಷ್ಟು ಸ್ಪಷ್ಟವಾಗಿ, ವೃತ್ತಿಪರ ಪತ್ರಿಕೋದ್ಯಮದ ಶೈಲಿಯಲ್ಲಿ ಪುನರ್ ರಚಿಸಿ ನೀಡಲಾಗಿದೆ:
---
ಚೆಂಗಲ್ಪಟ್ಟು (ತಮಿಳುನಾಡು): "ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕ್ಷೇತ್ರ ಪುನರ್‌ವಿಂಗಡಣೆಯನ್ನು ಯಾವುದೇ ತಮಿಳರು ಬೆಂಬಲಿಸಬಾರದು. ಇದನ್ನು ಬೆಂಬಲಿಸುವ ಪ್ರತಿಯೊಬ್ಬರೂ ತಮಿಳುನಾಡಿಗೆ ಮಾಡುವ ದ್ರೋಹಿಗಳು ('ಎಟಾಪರ್‌ಗಳು')" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಧುರೀಣ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಮಲ್ಲಪುರಂನಲ್ಲಿ ಆಯೋಜಿಸಲಾಗಿದ್ದ ತಮಿಳುನಾಡು ಕಾಂಗ್ರೆಸ್ ಜಿಲ್ಲಾ ನಾಯಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.
"ಬಿಜೆಪಿ ಜಾರಿಗೆ ತರಲು ಹೊರಟಿರುವ ಕ್ಷೇತ್ರ ಪುನರ್‌ವಿಂಗಡಣೆ ಯೋಜನೆಯು ತಮಿಳುನಾಡಿನ ಮೇಲೆ ಗಂಭೀರವಾದ ದುಷ್ಪರಿಣಾಮ ಬೀರಲಿದೆ. ಇದು ತಮಿಳುನಾಡಿನ ಜನರಿಗಿರುವ ರಾಜಕೀಯ ಅಧಿಕಾರ ಹಾಗೂ ಪ್ರಾತಿನಿಧ್ಯವನ್ನು ಕಸಿದುಕೊಳ್ಳುವ ಸ್ಪಷ್ಟ ಸಂಚು ಆಗಿದೆ ಎಂದರು.
ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಸೋಲಿಸಲು ದೇಶದ ಪ್ರತಿಯೊಂದು ಪ್ರಾದೇಶಿಕ ಹಾಗೂ ರಾಷ್ಟ್ರೀಯ ಪಕ್ಷಗಳು ಒಂದಾಗಬೇಕು ಎಂದು ಅವರು ಕರೆ ನೀಡಿದರು.
"ಇದು ಕೇವಲ ರಾಜಕೀಯ ವಿಷಯವಲ್ಲ, ತಮಿಳುನಾಡಿನ ಜನರ ಭವಿಷ್ಯ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಪ್ರಶ್ನೆ. ಹೀಗಾಗಿ ಯಾವುದೇ ತಮಿಳರು ಇದನ್ನು ಒಪ್ಪಬಾರದು," ಎಂದು ನುಡಿದರು
ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ
ಇದಕ್ಕೂ ಮುನ್ನ, ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ತಮಿಳುನಾಡು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಅಲ್ಲಿಂದ ನೇರವಾಗಿ ಮಾಮಲ್ಲಪುರಂ ತರಬೇತಿ ಶಿಬಿರಕ್ಕೆ ತೆರಳಿದ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    28 min ago
  • ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು. ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು. ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು. ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು
    1
    ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ
ಸೊರಬ: ದೇಶಕ್ಕೆ ಅನ್ನ ನೀಡುವ ರೈತ ಮಳೆಯನ್ನೇ ನಂಬಿ ಕೃಷಿ ಚಟುವಟಿಕೆ ಮಾಡಬೇಕಾಗಿದೆ. ಆದರೆ ಈ ವರ್ಷ ಮಳೆಯ ಕೊರತೆಯಿಂದ ರೈತ ಆತಂಕ ಪಡುವಂತಾಗಿದೆ. ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಗೂ ನಾಟಿ ಮಾಡುವ ಮಹಿಳೆಯರಿಗೆ ಹಲವು ಸಲಕರಣೆ ನೀಡಲಾಗಿದೆ ಎಂದು ದಂತ ವೈದ್ಯ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ| ಜ್ಞಾನೇಶ್ ಎಚ್.ಈ. ಹೇಳಿದರು.
ತಾಲೂಕಿನ ಕೊಡಕಣಿಯ ವೀರಭದ್ರಪ್ಪ ಗೌಡರ ಹೊಲದಲ್ಲಿ ನಡೆದ ‘ನಾಟಿ ಸಂಭ್ರಮ' ಕಾರ್ಯಕ್ರಮದಲ್ಲಿ ನಾಟಿ ಮಾಡುವ ಮಹಿಳೆಯರಿಗೆ ರೋಟರಿ ವತಿಯಿಂದ ಹಲವು ವಸ್ತುಗಳನ್ನು ನೀಡಿ ಅವರೊಂದಿಗೆ ನಾಟಿ ಮಾಡುವ ಮೂಲಕ ಅವರು ಮಾತನಾಡಿದರು.
ರೈತ ಇಂದು ಸಂಕಷ್ಟ ಅನುಭವಿಸು ವಂತಾಗಿದೆ. ರೈತರ ಕಣ್ಣೀರನ್ನು ಒರೆಸುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಾಗಬೇಕು ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್ ಕೊಡಕಣಿ ಮಾತನಾಡಿ, ರೋಟರಿ ಸಂಸ್ಥೆ ಹಲವು ಸಮಾಜಮುಖಿ ಚಿಂತನೆ ಹೊಂದಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ಇನ್ನು ಮುಂದೆ ಯೂ ಇದೇ ರೀತಿ ರೈತಸ್ನೇಹಿಯಾಗಿ ಕಾರ್ಯಕ್ರಮ ಮಾಡುತ್ತದೆ ಎಂದರು.
ರೋಟರಿ ಕ್ಲಬ್ ನೂತನ ಅಧ್ಯಕ್ಷ ಮಾಲತೇಶ್ ಕೊಡಕಣಿ, ಕಾರ್ಯದರ್ಶಿ ಪ್ರಕಾಶ್ ಬಿಳವಗೋಡು, ಡಾ। ನಾಗರಾಜ್, ನಿಕಟಪೂರ್ವ ಕಾರ್ಯದರ್ಶಿ ಕೃಷ್ಣಪ್ಪ ಓಟೂರು, ರೋಟರಿ ಮಾಜಿ ಅಧ್ಯಕ್ಷರಾದ ಸಂತೋಷ್, ವೀರಭದ್ರಪ್ಪ ಗೌಡ, ಪರಶುರಾಮ್, ಹಾಲಮ್ಮ, ಶೃತಿ, ಪದ್ಮಾ, ಜಯಮ್ಮ, ಅನ್ನಪೂರ್ಣ, ಶಿಲ್ಪಾ ಕುಮಾರ್ ಮೊದಲಾದವರಿದ್ದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    3 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ
    4
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    14 hrs ago
  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    2
    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ
ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:*
***********"
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.
ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.
ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.