ಮೂರು ದಲಿತ ದೌರ್ಜನ್ಯ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಪದವೀಧರೆ ಅಶ್ವಿನಿ ಅವರ ಅನುಮಾನಾಸ್ಪದ ಸಾವು, ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಭೀಕರ ಕೊಲೆ ಹಾಗೂ ಲಿಂಗಸುಗೂರು ತಾಲೂಕಿನ ಕರಡಿಕಲ್ ಗ್ರಾಮದ ರಾಣೆಮ್ಮ ಅವರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳನ್ನು ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪ್ರಶಸ್ತಿ ವಿಜೇತ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಳಿ, ರಾಂಪುರ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ರಾಂಪುರದ ಅಂಬೇಡ್ಕರ್ ವೃತ್ತದಿಂದ ಬೈಕ್ ರ‍್ಯಾಲಿ ಮೂಲಕ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಯಿತು. ನಿಜಲಿಂಗಪ್ಪ ಕಾಲೋನಿ, ಕೃಷಿ ವಿಶ್ವವಿದ್ಯಾಲಯ ಹಾಗೂ ಆಸ್ಕಿಹಾಳ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಯುವಕರು, ಮೂರು ಪ್ರಕರಣಗಳಲ್ಲೂ ಸತ್ಯಾಂಶ ಹೊರಬಂದು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವಕ ಮಂಡಳಿಯ ಪದಾಧಿಕಾರಿಗಳು, ಅಶ್ವಿನಿ ಅವರ ಸಾವಿನ ಕುರಿತು ಕುಟುಂಬಸ್ಥರು ಹಾಗೂ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿರುವ ಹಿನ್ನೆಲೆಯಲ್ಲಿ ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು. ಸಾವಿನ ನಿಜವಾದ ಕಾರಣವನ್ನು ವೈಜ್ಞಾನಿಕ ಹಾಗೂ ನಿಷ್ಪಕ್ಷಪಾತ ತನಿಖೆಯ ಮೂಲಕ ಬಹಿರಂಗಪಡಿಸಬೇಕು. ಯಾವುದೇ ಪ್ರಭಾವ, ಒತ್ತಡ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ದಲಿತ ಸಮುದಾಯದವರ ಮೇಲೆ ಕೊಲೆ, ಅತ್ಯಾಚಾರ ಹಾಗೂ ವಿವಿಧ ರೀತಿಯ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರಕರಣಗಳಲ್ಲಿ ತ್ವರಿತ ಮತ್ತು ಪರಿಣಾಮಕಾರಿ ಕಾನೂನು ಕ್ರಮ ಕೈಗೊಳ್ಳದಿದ್ದರೆ, ದೌರ್ಜನ್ಯ ನಡೆಸುವವರಿಗೆ ಮತ್ತಷ್ಟು ಧೈರ್ಯ ಬರುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ಹಾಗೂ ಜಿಲ್ಲಾಡಳಿತವು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಕುಟುಂಬಗಳಿಗೆ ಕಾನೂನುಬದ್ಧ ನ್ಯಾಯ ಮತ್ತು ಸೂಕ್ತ ರಕ್ಷಣೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಲಾಯಿತು. ಅಶ್ವಿನಿ, ಭೂಮಾನಂದ ಹಾಗೂ ರಾಣೆಮ್ಮ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸಿ, ಲಭ್ಯವಿರುವ ಸಾಕ್ಷ್ಯಾಧಾರಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಯಾವುದೇ ಮುಲಾಜಿಲ್ಲದೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ, ರಕ್ಷಣೆ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

- ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರಾಯಚೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಕುರುಬರ ಸಂಘ ಹಾಗೂ ಜಿಲ್ಲಾ ಕನಕ ನೌಕರರ ಸಂಘದ ಸಹಯೋಗದಲ್ಲಿ ಆ.30ರಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು ಮತ್ತು ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹನುಮಂತಪ್ಪ ಜಾಲಿಬೆಂಚಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ನೀಡುವುದರಿಂದ ಅವರಲ್ಲಿ ಇನ್ನಷ್ಟು ಸಾಧನೆ ಮಾಡುವ ಉತ್ಸಾಹ ಮೂಡಲಿದ್ದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಮಾಜದ ಶೈಕ್ಷಣಿಕ ಪ್ರಗತಿ, ಯುವಜನರ ಸಾಧನೆ ಹಾಗೂ ಸೇವಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪೂಜ್ಯರು, ಸಚಿವರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು, ಮಾಜಿ ಸಂಸದರು ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕುರುಬರ ಸಮಾಜದ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕನಕ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ತಾಲೂಕುಗಳ ಕುರುಬರ ಸಂಘ ಹಾಗೂ ಕನಕ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲೆಯ ಕುರುಬ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕೆ. ಬಸವಂತಪ್ಪ, ರಾಮಣ್ಣ ರಘುನಾಥ್ ಹಳ್ಳಿ ಸೇರಿದಂತೆ ಇತರರು ಇದ್ದರು.1
- ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ2
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ನೇಪಾಳ ಪ್ರವಾಹದಲ್ಲಿ ಬದುಕುಳಿದ ಕಾಳಗಿ ತಾಲೂಕಿನ ಮಲ್ಲಿನಾಥ ಕೊಲಕುಂದಿ ಜೊತೆ ಸಿಎಮ್ ವಿಡಿಯೋ ಕಾಲ್ ಮಾತನಾಡಿ ಧೈರ್ಯ ತುಂಬಿದರು ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಮಲ್ಲಿನಾಥ ಕೊಲಕುಂದಿ ಅವರು ನೇಪಾಳ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಉಂಟಾದ ಭೀಕರ ಪ್ರವಾಹದಿಂದ ಪಾರಾಗಿ ಅದೃಷ್ಟವಶಾತ್ ಬದುಕುಳಿದ ಕನ್ನಡಿಗ ಮಲ್ಲಿನಾಥ ಕೊಲಕುಂದಿ ಅವರೊಂದಿಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ.1
- ಇಳಕಲ್ಲ ಪೊಲೀಸ್ ಠಾಣೆಗೆ ಬೆಳಗಾವಿ ಉತ್ತರ ವಲಯ ವಿಭಾಗದ ಐಜಿಪಿ ಸಂದೀಪ್ ಪಾಟೀಲ್ ಭೇಟಿ ಇಳಕಲ್ಲ : ಇಲ್ಲಿನ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗೆ ಆಗಮಿಸಿದ ಐಜಿಪಿ ಅವರನ್ನು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಗೌರವ ಸಲ್ಲಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ, ಸಿಪಿಐ ಸಂತೋಷ ಅಜೂರ, ಪಿಎಸ್‌ಐ ಮಂಜುನಾಥ ಪಾಟೀಲ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಎಸ್.ಆರ್. ನಾಯಕ ಹಾಗೂ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.1
- ಭೂಮಾನಂದ, ಅಶ್ವಿನಿ, ರಾಣೆಮ್ಮ ಪ್ರಕರಣ: ಸಿಐಡಿ ತನಿಖೆಗೆ ಒತ್ತಾಯ ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭೂಮಾನಂದನ ಕೊಲೆ ಹಾಗೂ ಅಶ್ವಿನಿ, ರಾಣೆಮ್ಮ ಅವರ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದಲಿತ ಸಮುದಾಯದಲ್ಲಿ ಆತಂಕ ಮೂಡಿಸಿವೆ. ಈ ಮೂರು ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಲು ಸಿಐಡಿಗೆ ವಹಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.4ರಂದು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದನನ್ನು ಹತ್ಯೆ ಮಾಡಲಾಗಿದ್ದು, ಆ.19ರಂದು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರು ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಬಲಿಯಾಗಿದ್ದಾರೆ. ಕೇವಲ 15 ದಿನಗಳ ಅವಧಿಯಲ್ಲಿ ನಡೆದ ಈ ಘಟನೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿವೆ. ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಪ್ರಕರಣಗಳ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕೌಂಟರ್ ಕೇಸ್ ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಭೂಮಾನಂದ, ಅಶ್ವಿನಿ ಹಾಗೂ ರಾಣೆಮ್ಮ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು, ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ರಾಯಚೂರು ಜಿಲ್ಲೆಯನ್ನು ದಲಿತರ ಮೇಲಿನ ದೌರ್ಜನ್ಯಕ್ಕೆ ತುತ್ತಾಗುವ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೊಷ್ಟಿಯಲ್ಲಿ ರವೀಂದ್ರನಾಥ್ ಪಟ್ಟಿ, ಎಂ. ಆರ್ ಭೇರಿ, ಹೇಮರಾಜ್ ಆಸ್ಕಿಹಾಳ್, ಜೈಭೀಮ್ ವಲ್ಲಭ, ನರಸಿಂಹಲು ಸೇರಿದಂತೆ ಇತರರು ಇದ್ದರು.1