ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ಆರೋಪ ಬಳ್ಳಾರಿ ನಗರದ ಬಾಪೂಜಿ ನಗರ ಸರ್ಕಲ್‌ನಿಂದ ಆಂದ್ರಾಳ್ ಬ್ರಿಡ್ಜ್ ವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಕೆ ಕಳಪೆ ಗುಣಮಟ್ಟದಲ್ಲಿ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ದಿನಾಂಕ 24-02-2022 ರಂದು ಆರಂಭವಾದ ಈ ಕಾಮಗಾರಿಕೆ, ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದ್ದು, ತೆರೆದ ಚರಂಡಿ ಕೆಲಸವೂ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಮಣ್ಣು ಹಾಗೂ ಕಲ್ಲು ಬಿಂಚುಗಳನ್ನು ಹಾಕಿ ಕಾಮಗಾರಿಯನ್ನು ನಿಧಾನಗತಿಯಲ್ಲೇ ನಡೆಸಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ದಿನನಿತ್ಯ ಅಪಾಯವನ್ನು ಎದುರಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಈ ರಸ್ತೆ ಕಾಮಗಾರಿಕೆ ಗುತ್ತಿಗೆದಾರ ಕೆ.ಎಂ. ಪ್ರವೀಣ್ ಕುಮಾರ್ ಅವರ ಮೂಲಕ, ಪಿಡಬ್ಲ್ಯೂಡಿ ಎಡಬ್ಲ್ಯೂ ಬಸವ ರೆಡ್ಡಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಕಾಮಗಾರಿಕೆಯ ಗುಣಮಟ್ಟ ತೀರಾ ಕಳಪೆಯಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ. ಈ ಕುರಿತು ಸ್ಥಳೀಯರು ಬಾಪೂಜಿ ನಗರ ಏಳನೇ ವಾರ್ಡಿನ ಕಾರ್ಪೊರೇಟರ್ ಶ್ರೀಮತಿ ಉಮಾದೇವಿ ಶಿವರಾಜ್ ಅವರ ಗಮನಕ್ಕೆ ತಂದರೂ, ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗಲಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಪ್ರದೇಶದ ಮಾಜಿ ಕಾರ್ಪೊರೇಟರ್ ಶ್ರೀಮತಿ ನಾರಾಯಣಮ್ಮನ ಅವರ ಮಗ ಕಾಂಗ್ರೆಸ್ ಮುಖಂಡರಾದ ಬಾಪಜಿ ನಗರ್ ವೆಂಕಟೇಶ್ ಅವರು ಈ ಕುರಿತು ಪಿಡಬ್ಲ್ಯೂಡಿ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ಬೇಸತ್ತಿರುವ ಅವರು, ಸಾರ್ವಜನಿಕರ ಪರವಾಗಿ ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳಪೆ ಕಾಮಗಾರಿಯಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ಆರೋಪ ಬಳ್ಳಾರಿ ನಗರದ ಬಾಪೂಜಿ ನಗರ ಸರ್ಕಲ್‌ನಿಂದ ಆಂದ್ರಾಳ್ ಬ್ರಿಡ್ಜ್ ವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಕೆ ಕಳಪೆ ಗುಣಮಟ್ಟದಲ್ಲಿ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ದಿನಾಂಕ 24-02-2022 ರಂದು ಆರಂಭವಾದ ಈ ಕಾಮಗಾರಿಕೆ, ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದ್ದು, ತೆರೆದ ಚರಂಡಿ ಕೆಲಸವೂ ಅಪೂರ್ಣವಾಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ
ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಮಣ್ಣು ಹಾಗೂ ಕಲ್ಲು ಬಿಂಚುಗಳನ್ನು ಹಾಕಿ ಕಾಮಗಾರಿಯನ್ನು ನಿಧಾನಗತಿಯಲ್ಲೇ ನಡೆಸಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ದಿನನಿತ್ಯ ಅಪಾಯವನ್ನು ಎದುರಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಈ ರಸ್ತೆ ಕಾಮಗಾರಿಕೆ ಗುತ್ತಿಗೆದಾರ ಕೆ.ಎಂ. ಪ್ರವೀಣ್ ಕುಮಾರ್ ಅವರ ಮೂಲಕ, ಪಿಡಬ್ಲ್ಯೂಡಿ ಎಡಬ್ಲ್ಯೂ ಬಸವ ರೆಡ್ಡಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಕಾಮಗಾರಿಕೆಯ
ಗುಣಮಟ್ಟ ತೀರಾ ಕಳಪೆಯಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ. ಈ ಕುರಿತು ಸ್ಥಳೀಯರು ಬಾಪೂಜಿ ನಗರ ಏಳನೇ ವಾರ್ಡಿನ ಕಾರ್ಪೊರೇಟರ್ ಶ್ರೀಮತಿ ಉಮಾದೇವಿ ಶಿವರಾಜ್ ಅವರ ಗಮನಕ್ಕೆ ತಂದರೂ, ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗಲಿಲ್ಲವೆಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಪ್ರದೇಶದ ಮಾಜಿ ಕಾರ್ಪೊರೇಟರ್ ಶ್ರೀಮತಿ ನಾರಾಯಣಮ್ಮನ ಅವರ ಮಗ ಕಾಂಗ್ರೆಸ್ ಮುಖಂಡರಾದ ಬಾಪಜಿ ನಗರ್ ವೆಂಕಟೇಶ್ ಅವರು ಈ ಕುರಿತು ಪಿಡಬ್ಲ್ಯೂಡಿ ಇಲಾಖೆಗೆ
ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ಬೇಸತ್ತಿರುವ ಅವರು, ಸಾರ್ವಜನಿಕರ ಪರವಾಗಿ ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳಪೆ ಕಾಮಗಾರಿಯಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
- ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.1
- ಗ್ರಾಮಕ್ಕೆ ಯಾರು ಬಾರದಂತೆ ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ... ಕಾವಲುಗಾರರ ನೇಮಕ. ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ ದಿಗ್ಭಂಧನ ಹಾಕುತ್ತಾರೆ. ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ... ಸುರೇಶಬೆಳಗೆರೆ1
- ಸ್ವಚ್ಛ ಭಾರತ ಮಿಷನ್ ಹಾಗೂ ರಾಯಚೂರು ಉತ್ಸವ–2026ರ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದಾದ್ಯಂತ ಭವ್ಯವಾದ ಸ್ವಚ್ಛತಾ ಓಟ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಸಂಸದ ಜಿ.ಕುಮಾರ್ ನಾಯಕ್ ಅವರು ನೇತೃತ್ವವಹಿಸಿ ಸ್ವಚ್ಛತಾ ಓಟಕ್ಕೆ ಅಧಿಕೃತ ಚಾಲನೆ ನೀಡಿದರು. ಸ್ವಚ್ಛತಾ ಓಟದ ಅಂಗವಾಗಿ ಮಾತನಾಡಿದ ಸಂಸದರು, ಯುವಜನತೆಗೆ ಸ್ವಾಮಿ ವಿವೇಕಾನಂದರ ಆದರ್ಶಗಳು, ಸದೃಢ ದೇಹ–ಮನಸ್ಸಿನ ಮಹತ್ವ ಹಾಗೂ ಸ್ವಚ್ಛ ಮತ್ತು ಆರೋಗ್ಯಕರ ವಾತಾವರಣದ ಅಗತ್ಯತೆಯನ್ನು ನೆನಪಿಸಿದರು.1
- ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು1
- ಯಾದಗಿರಿ ಜಿಲ್ಲೆಯಲ್ಲಿ ಇಂದು ಪತ್ರಿಕ ಭವನದಲ್ಲಿ ಮಾತನಾಡುತ್ತಾ ನರೇಂದ್ರ ಮೋದಿಯವರು ಎಂ ನರೇಗಾ ಯೋಜನೆ ಹೆಸರು ತೆಗೆದು ಅದಕ್ಕೆ ಜಿ ರಾಮ್ ಜಿ ಎಂದು ಕೇಂದ್ರ ಸರ್ಕಾರದಿಂದ ಈ ಹೆಸರನ್ನು ಇಡಲಾಗಿದೆ1
- ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.1
- ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ1
- ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.1