Shuru
Apke Nagar Ki App…
ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದ ಶಾಸಕ ಯಾಸೀರ್ ಖಾನ್ ಪಠಾಣ
H M ಹರಕುಣಿ
ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದ ಶಾಸಕ ಯಾಸೀರ್ ಖಾನ್ ಪಠಾಣ
More news from ಕರ್ನಾಟಕ and nearby areas
- Post by H M ಹರಕುಣಿ1
- ಶೀರ್ಷಿಕೆ: ಹುಬ್ಬಳ್ಳಿಯ ಈ ದರ್ಗಾದಲ್ಲಿ ಜಾತಿ-ಮತದ ಭೇದವಿಲ್ಲ! 🌙 ಅಂಬೇಡ್ಕರ್ ನಗರದ ಅದ್ಧೂರಿ ಉರುಸ್ 2026 | City Next News ವಿವರಣೆ: ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್‌ಗೆ ಸ್ವಾಗತ. ಹಳೆ ಹುಬ್ಬಳ್ಳಿಯ ಅಂಬೇಡ್ಕರ್ ನಗರದ ಚನ್ನಪೇಟೆಯಲ್ಲಿ ಇಂದು ಸೌಹಾರ್ದತೆಯ ಹಬ್ಬದ ಸಂಭ್ರಮ. ಕೋಮು ಸೌಹಾರ್ದತೆಯ ಪವಿತ್ರ ತಾಣವಾಗಿರುವ ಇಲ್ಲಿ, ನೂರಾರು ಭಕ್ತರ ಆರಾಧ್ಯ ದೈವ ಹಜರತ್ ಸೈಯದ್ ಹಿದಾಯತುಲ್ಲಾಹ ಖಾದ್ರಿಯ ಅಲ ಮಶೂರ್ ಕಮಲಿ ಪೀರ ಷಾ ವಲಿ ಅವರ ಉರುಸ್ ಮಹೋತ್ಸವವು 2026ರ ಈ ಸುದಿನದಂದು ಅತ್ಯಂತ ಸಡಗರದಿಂದ ಜರುಗಿತು. ಈ ವೀಡಿಯೊದಲ್ಲಿ ನೋಡಿ: ✅ ಸಾಂಪ್ರದಾಯಿಕ ವಾದ್ಯಗೋಷ್ಠಿಗಳೊಂದಿಗೆ ನಡೆದ ಭವ್ಯ ಸಂದಲ್ ಮೆರವಣಿಗೆ. ✅ ಸಾವಿರಾರು ಭಕ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪವಿತ್ರ ಲಂಗರ್ (ಅನ್ನದಾಸೋಹ). ✅ ರಾತ್ರಿ ನಡೆದ ಮಂತ್ರಮುಗ್ಧಗೊಳಿಸುವ ಕವ್ವಾಲಿ ಕಾರ್ಯಕ್ರಮದ ವಿಶೇಷ ದೃಶ್ಯಗಳು. ಜಾತಿ-ಮತದ ಭೇದವಿಲ್ಲದೆ ಎಲ್ಲರೂ ಒಂದಾಗಿ ಆಚರಿಸುತ್ತಿರುವ ಈ ಉರುಸ್, ಹುಬ್ಬಳ್ಳಿಯ ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸೌಹಾರ್ದತೆಯ ಸುಂದರ ಕ್ಷಣಗಳನ್ನು ಈ ವರದಿಯಲ್ಲಿ ವೀಕ್ಷಿಸಿ. ನಮ್ಮನ್ನು ಫಾಲೋ ಮಾಡಿ: 🔹 YouTube: @CityNextNews 🔹 Facebook: City Next News Hubli 🔹 Instagram: @CityNextNews_Official #HubliUrus2026 #OldHubballi #CityNextNews #CommunalHarmony #DargahUrus #SandalProcession #HubliNews #KarnatakaFestivals #UnityInDiversity #SufiNight2
- ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿಗ್ಗಾಂವಿ ಪ್ಲಾಟ್‌ನಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ ಘಟನೆ ಶನಿವಾರದಂದು ನಡೆದಿದೆ. ಸ್ಥಳೀಯ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಅದೇ ಬಡಾವಣೆಯ ಯುವತಿಗೆ ಸತತವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಮತ್ತು ಓರ್ವ ಮಹಿಳೆ, ಆತನನ್ನು ರಸ್ತೆಗೆ ಎಳೆದು ತಂದು ಧರ್ಮದೇಟು ನೀಡಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿದ್ಯಾನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಚಿಗರಿ ಬಸ್ ಪ್ರಯಾಣಿಕರೇ ಎಚ್ಚರ... ಎಚ್ಚರ ಏಕೆಂದರೆ ನಿಮ್ಮ ಪ್ರಯಾಣದ ಅವಸರದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ನಿಮಗೆ ಅಪಾಯ ಎದುರಾಗಬಹುದು. ಹೌದು... ಹುಬ್ಬಳ್ಳಿ - ಧಾರವಾಡ ಅವಳಿ ನಗರದ ಪ್ರಯಾಣಿಕರ ಹೆಚ್ಚಿನ ಅನುಕೂಲಕ್ಕಾಗಿ ಮಾಡಿದ ಬಿ.ಆರ್.ಟಿ.ಎಸ್ ಚಿಗರಿ ಬಸ್ ಸಂಚಾರ ಸ್ವಲ್ಪಮಟ್ಟಿಗೆ ಅನುಕೂಲವಾಗಿದೆ. ಆದರೇ ಬಸ್ ಹತ್ತಿ ಇಳಿಯುವುದೇ ದೊಡ್ಡ ಸಮಸ್ಯೆಯಾಗಿದೆ. ಇದರೊಂದಿಗೆ ನಿಲ್ದಾಣದಲ್ಲಿ ಬಸ್ ಹತ್ತಲು ನಿಲ್ಲುವುದು ಕೂಡಾ ಅಪಾಯ ಎನ್ನುವಂತಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ವಿವಿಧ ಕಡೆಗಳಲ್ಲಿರುವ ಬಿ.ಆರ್.ಟಿ.ಎಸ್ ಚಿಗರಿ ಬಸ್ ನಿಲ್ದಾಣದಲ್ಲಿ ಎಲ್ಲ ಗೇಟ್ ಸದಾ ತೆರೆದೆ ಇದೆ. ಇದರಿಂದ ಬಸ್ ಬಂದಿತು ಎಂದು ಹತ್ತಲು ನಿಂತವರು ಅವಸರ ಮಾಡಿದರೆ ಅಪಾಯ ಕಟ್ಟಿಟ್ಟದ್ದೆ ಎನ್ನುವಂತಾಗಿದೆ.1
- ಹಕ್ಕುಪತ್ರ ಕೊಡಲು 25 ವರ್ಷ ಬೇಕಾ? ವ್ಯವಸ್ಥೆಯ ‘ಕಿವುಡು’ತನಕ್ಕೆ ಬಡಿದ ತಮಟೆ! ನಮಸ್ಕಾರ, ಇವತ್ತು ನಾವು ತೋರಿಸಲಿರೋದು ಕೇವಲ ಒಂದು ಪ್ರತಿಭಟನೆಯಲ್ಲ, ಇದು ಒಂದು ಜನಾಂಗದ ಸಬ್ರೂರಿ ಪರೀಕ್ಷೆ! ಅಧಿಕಾರಿಗಳ ಮೇಜಿನ ಮೇಲೆ ಫೈಲುಗಳು ಧೂಳು ಹಿಡಿಯುತ್ತಿದ್ದರೆ, ಇಲ್ಲಿ ಬಡವರ ಬದುಕು ಬೀದಿಗೆ ಬಂದಿದೆ. 25 ವರ್ಷ ಅಂದ್ರೆ ಒಂದು ತಲೆಮಾರೇ ಬದಲಾಗಿ ಹೋಗುತ್ತೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಈ 61 ಕುಟುಂಬಗಳ ಹಣೆಬರಹ ಮಾತ್ರ ಬದಲಾಗಿಲ್ಲ. ಇವರ ತಾಳ್ಮೆ ಕಟ್ಟೆ ಹೊಡೆದಿದೆ, ಈಗ ಅಧಿಕಾರಿಗಳ ಕಿವಿಗೆ 'ತಮಟೆ' ಏಟು ಬೀಳುವ ಸಮಯ ಬಂದಿದೆ! ಅತಿಕ್ರಮಣಕಾರರಲ್ಲ, ಇವರು ಅನ್ಯಾಯಗಾರರಲ್ಲ. ಇವರು ತಮ್ಮ ಹಕ್ಕಿಗಾಗಿ 25 ವರ್ಷಗಳಿಂದ ಅಲೆದಾಡುತ್ತಿರುವ ಹೊಸ ಡಂಬಳದ ಮಾದಿಗ ಸಮಾಜದ ಮುಗ್ಧ ಜನ. ೧. ಮಂಜೂರಾದ ಜಾಗಕ್ಕೆ ಹಕ್ಕುಪತ್ರದ 'ಗ್ರಹಣ'! 2000ನೇ ಇಸವಿಯಲ್ಲೇ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಇವರಿಗೆ ಮನೆ ಕಟ್ಟಲು ಜಾಗವಿದೆ. ಆದರೆ ವಾಸ್ತವದಲ್ಲಿ ಕೈಗೆ ಹಕ್ಕುಪತ್ರವಿಲ್ಲ! ಅಧಿಕಾರಿಗಳೇ.. ನಿಮ್ಮ ಕಚೇರಿಯಿಂದ ಈ ಹಕ್ಕುಪತ್ರ ಜನರಿಗೆ ತಲುಪಲು ಕಾಲು ಶತಮಾನ ಬೇಕಾ? ನಿಮ್ಮ ಈ ಆಮೆಗತಿಯ ಕೆಲಸಕ್ಕೆ ಬಡವರ ಬದುಕು ಅತಂತ್ರವಾಗಿದೆ. ೨. ಅಂಬೇಡ್ಕರ್ ಕನಸಿನ ಭಾರತದಲ್ಲಿ ಇದೇನಾ ನ್ಯಾಯ? ಸಂವಿಧಾನ ನಮಗೆ ಹಕ್ಕುಗಳನ್ನು ಕೊಟ್ಟಿದೆ, ಆದರೆ ನೀವು ಆ ಹಕ್ಕುಗಳನ್ನು ಕಬೀಟಿನಲ್ಲಿ ಕೂಡಿಟ್ಟಿದ್ದೀರಿ. ಲಕ್ಷ್ಮಣ ತಗಡಿನಮನಿ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ತಮಟೆ ಚಳುವಳಿ, ಅಧಿಕಾರಶಾಹಿಯ ಅಹಂಕಾರಕ್ಕೆ ಹಿಡಿದ ಕನ್ನಡಿ. "ನಾವು ದುಡಿಯುವುದನ್ನು ಬಿಟ್ಟು ನಿಮ್ಮ ಕಚೇರಿ ಮುಂದೆ ನಿಲ್ಲಬೇಕಾ?" ಎಂಬ ಇವರ ಪ್ರಶ್ನೆಗೆ ಉತ್ತರ ಕೊಡುವವರು ಯಾರು? "ಸರ್ಕಾರ ಸವಲತ್ತು ಕೊಟ್ಟರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮಗೆ ನ್ಯಾಯ ಸಿಗುತ್ತಿಲ್ಲ. ಇದು ನಮ್ಮ ಹಕ್ಕಿನ ಜಾಗಕ್ಕಾಗಿ ನಡೆಯುತ್ತಿರುವ ಕೊನೆಯ ಎಚ್ಚರಿಕೆ!"ಎಂದು ಲಕ್ಷ್ಮಣ ತಗಡಿನಮನಿ ಮಾತನಾಡಿದರು ಈಗ ಚೆಂಡು ಅಧಿಕಾರಿಗಳ ಅಂಗಳದಲ್ಲಿದೆ. ಬರುವ ಏಪ್ರಿಲ್ 28ರ ಒಳಗಾಗಿ ಈ ಕುಟುಂಬಗಳ ಮುಖದಲ್ಲಿ ನಗು ಕಾಣಿಸದಿದ್ದರೆ, ಈ ಆಕ್ರೋಶ ವಿಧಾನಸೌಧದವರೆಗೂ ತಲುಪುವುದರಲ್ಲಿ ಅನುಮಾನವಿಲ್ಲ. ಜಿಲ್ಲಾಧಿಕಾರಿಗಳೇ ಹಾಗೂ ತಹಶೀಲ್ದಾರರೇ.. ಇನ್ನು ಮುಂದೆ ಭರವಸೆಗಳ ಮಾತು ಬೇಡ, ಫಲಾನುಭವಿಗಳ ಕೈಗೆ ಹಕ್ಕುಪತ್ರ ಸಿಗಲಿ. ನೋಡಿದ್ರಲ್ಲ, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಈ ಅಧಿಕಾರಿಗಳ ಮನಸ್ಥಿತಿ ಬದಲಾಗಬೇಕಿದೆ. ಒಂದು ಸಣ್ಣ ಕಾಗದಕ್ಕಾಗಿ 25 ವರ್ಷ ಕಾಯಿಸುವುದು ಆಡಳಿತ ಯಂತ್ರಕ್ಕೆ ದೊಡ್ಡ ಅವಮಾನ. ಈ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ಸಮಗ್ರ ನ್ಯೂಸ್ ಟೈಮ್ಸ್1
- ಹರಿಹರ/ಚನ್ನಗಿರಿ: ಕೆರೆಬೀಳಚಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ನೀರು ಪಾಲಾದ ದುರ್ಘಟನೆ ಸಂಭವಿಸಿದ್ದು, ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ. ತಂದೆಯ ಅಂತ್ಯಸಂಸ್ಕಾರ ಬಳಿಕ ಸೈಯದ್ ನಯಾಜ್ ತನ್ನ ಸ್ನೇಹಿತರಾದ ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕ್ಸುದ್ ಜೊತೆ ಸುಳೆಕೆರೆ ಕಡೆ ತೆರಳಿ ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಈಜಲು ಬಾರದ ಕಾರಣ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದರು. ನಂತರ ನಡೆದ ಶೋಧ ಕಾರ್ಯದಲ್ಲಿ ಇಬ್ಬರ ಶವಗಳನ್ನು ಪತ್ತೆ ಹಚ್ಚಲಾಗಿದೆ. NDRF ತಂಡ ಹಾಗೂ ಸ್ಥಳೀಯ ಯುವಕರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- Post by ನಾಗರಾಜ್ ಕುರಿ1
- ಯೂಥ್ ಕಾಂಗ್ರೆಸ್ ಮುಖಂಡ ಪೈರೋಜ ಪಠಾಣ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, “ಹತ್ಯಾಕಾಂಡದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದ ಬೇರುಗಳನ್ನು ಹುಡುಕಲಾಗುತ್ತಿದೆ” ಎಂದು ತಿಳಿಸಿದರು. ಈ ಹತ್ಯೆಯ ಹಿಂದೆ ನೇರವಾಗಿ ಭಾಗಿಯಾದವರಲ್ಲದೆ, ಪರೋಕ್ಷವಾಗಿ ಬೆಂಬಲ ನೀಡಿದವರು, ಸಂಚು ರೂಪಿಸಿದವರು ಹಾಗೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಕರಿಸಿದ ಯಾರೊಬ್ಬರನ್ನೂ ಪೊಲೀಸರು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.1