Shuru
Apke Nagar Ki App…
ಹಾವೇರಿ: ನೇಪಾಳಕ್ಕೆ ಪ್ರವಾಸ ಹೋಗಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ 12 ಮಂದಿ ಸುರಕ್ಷಿತವಾಗಿದ್ದಾರೆ. ಹಾವೇರಿ: ನೇಪಾಳಕ್ಕೆ ಪ್ರವಾಸ ಹೋಗಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ 12 ಮಂದಿ ಸುರಕ್ಷಿತವಾಗಿದ್ದಾರೆ. ಭೀಕರ ಪ್ರವಾಹದಿಂದ ಅದೃಷ್ಟವಶಾತ್ ತಾವು ಪಾರಾಗಿರುವುದಾಗಿ ಪ್ರವಾಸಿಗ ಶಿವನಗೌಡ ಎಂಬುವರು ಫೋನ್ ಮೂಲಕ ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 14 ಮಂದಿ ನೇಪಾಳ ಪ್ರವಾಸಕ್ಕೆ ಆಗಮಿಸಿದ್ದು, ಇವರಲ್ಲಿ ರಟ್ಟಿಹಳ್ಳಿ ಪಟ್ಟಣದ 12 ಮಂದಿಯ ತಂಡ ಪ್ರಕೃತಿ ವಿಕೋಪದ ನಡುವೆ ಸುರಕ್ಷಿತವಾಗಿದೆ ಎಂದು ಪ್ರವಾಸಿಗ ಶಿವನಗೌಡ ಅಲ್ಲಿಂದ ಮಾಹಿತಿ ಹಂಚಿಕೊಂಡಿದ್ದಾರೆ. ವ್ಯಾಪಾರಸ್ಥರು, ಗುತ್ತಿಗೆದಾರರು ಸೇರಿದಂತೆ ಆರು ಕುಟುಂಬಗಳ ಸದಸ್ಯರು ಪ್ರವಾಸ ಕೈಗೊಂಡಿದ್ದು, ಇದೀಗ ನೇಪಾಳದ ಪೊಖ್ರಾದಿಂದ 50 ಕಿ.ಮೀ ದೂರದಲ್ಲಿದ್ದೇವೆ. ಕೆಲವೇ ಹೊತ್ತಿನಲ್ಲಿ ಸೋನಾಲಿಗೆ ಬಂದು ತಲುಪುತ್ತೇವೆ. ಸದ್ಯದಲ್ಲೇ ಕರ್ನಾಟಕಕ್ಕೆ ವಾಪಸಾಗುವುದಾಗಿ ಶಿವನಗೌಡ ಮತ್ತು ವಿನಾಯಕ ಎಂಬವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಕೃಪೆ:etv bharath
Gurushanth hiremath
ಹಾವೇರಿ: ನೇಪಾಳಕ್ಕೆ ಪ್ರವಾಸ ಹೋಗಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ 12 ಮಂದಿ ಸುರಕ್ಷಿತವಾಗಿದ್ದಾರೆ. ಹಾವೇರಿ: ನೇಪಾಳಕ್ಕೆ ಪ್ರವಾಸ ಹೋಗಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ 12 ಮಂದಿ ಸುರಕ್ಷಿತವಾಗಿದ್ದಾರೆ. ಭೀಕರ ಪ್ರವಾಹದಿಂದ ಅದೃಷ್ಟವಶಾತ್ ತಾವು ಪಾರಾಗಿರುವುದಾಗಿ ಪ್ರವಾಸಿಗ ಶಿವನಗೌಡ ಎಂಬುವರು ಫೋನ್ ಮೂಲಕ ತಿಳಿಸಿದ್ದಾರೆ. ಜಿಲ್ಲೆಯ ಒಟ್ಟು 14 ಮಂದಿ ನೇಪಾಳ ಪ್ರವಾಸಕ್ಕೆ ಆಗಮಿಸಿದ್ದು, ಇವರಲ್ಲಿ ರಟ್ಟಿಹಳ್ಳಿ ಪಟ್ಟಣದ 12 ಮಂದಿಯ ತಂಡ ಪ್ರಕೃತಿ ವಿಕೋಪದ ನಡುವೆ ಸುರಕ್ಷಿತವಾಗಿದೆ ಎಂದು ಪ್ರವಾಸಿಗ ಶಿವನಗೌಡ ಅಲ್ಲಿಂದ ಮಾಹಿತಿ ಹಂಚಿಕೊಂಡಿದ್ದಾರೆ. ವ್ಯಾಪಾರಸ್ಥರು, ಗುತ್ತಿಗೆದಾರರು ಸೇರಿದಂತೆ ಆರು ಕುಟುಂಬಗಳ ಸದಸ್ಯರು ಪ್ರವಾಸ ಕೈಗೊಂಡಿದ್ದು, ಇದೀಗ ನೇಪಾಳದ ಪೊಖ್ರಾದಿಂದ 50 ಕಿ.ಮೀ ದೂರದಲ್ಲಿದ್ದೇವೆ. ಕೆಲವೇ ಹೊತ್ತಿನಲ್ಲಿ ಸೋನಾಲಿಗೆ ಬಂದು ತಲುಪುತ್ತೇವೆ. ಸದ್ಯದಲ್ಲೇ ಕರ್ನಾಟಕಕ್ಕೆ ವಾಪಸಾಗುವುದಾಗಿ ಶಿವನಗೌಡ ಮತ್ತು ವಿನಾಯಕ ಎಂಬವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಕೃಪೆ:etv bharath
More news from ಕರ್ನಾಟಕ and nearby areas
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ1
- ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು1
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1
- ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”1