ಹಾವೇರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ: ಅನ್ನದಾತರ ಪರವಾಗಿ ಸರ್ಕಾರಕ್ಕೆ ಧನ್ಯವಾದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ. ಹಾವೇರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ: ಅನ್ನದಾತರ ಪರವಾಗಿ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ: ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಬೆಳೆಗಳು ಒಣಗಿ ಕಂಗಾಲಾಗಿದ್ದ ಅನ್ನದಾತರ ನೋವಿಗೆ ಸ್ಪಂದಿಸಿ, ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಸಮಸ್ತ ರೈತಬಾಂಧವರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಸಲ್ಲಿಸಿದರು. ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್ಲ, ಶಿಗ್ಗಾಂವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಹಾಗೂ ಹಾವೇರಿ ರಾಣೇಬೆನ್ನೂರ, ಸವಣೂರು ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಕೃಷಿ ಚಟುವಟಿಕೆಗಳು ಸಂಪೂರ್ಣ ಕುಸಿದು ಬಿದ್ದಿದ್ದವು. ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹತ್ತಿ, ಮೆಕ್ಕೆಜೋಳ, ಬ್ಯಾಡಗಿ ಮೆಣಸಿನಕಾಯಿ ಹಾಗೂ ಶೇಂಗಾ ಬೆಳೆಗಳು ಮಳೆಯಿಲ್ಲದೆ ನೆಲಕಚ್ಚಿದ್ದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರು ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದರು. ರೈತರ ಸಂಕಷ್ಟಕ್ಕೆ ತಕ್ಷಣ ಧಾವಿಸಿ, ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಖುದ್ದು ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ಹೊಲ-ಗದ್ದೆಗಳಲ್ಲಿ ಒಣಗಿದ ಬೆಳೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ವಸ್ತುಸ್ಥಿತಿಯ ಸಮಗ್ರ ವಿವರವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹಾವೇರಿಯನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಲು ನಿರಂತರವಾಗಿ ಒತ್ತಡ ತಂದು ಸತತ ಪ್ರಯತ್ನ ನಡೆಸಲಾಗಿತ್ತು. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಇಂದು ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಿ ರೈತರ ಕೈಹಿಡಿದಿದ್ದಾರೆ. ಸರ್ಕಾರದ ಈ ನಿರ್ಧಾರದಿಂದಾಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ, ಬೆಳೆ ನಷ್ಟ ಪರಿಹಾರ (ಇನ್ಪುಟ್ ಸಬ್ಸಿಡಿ), ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಉದ್ಯೋಗ ಖಾತರಿ (ನರೇಗಾ) ಯೋಜನೆಗಳು ಶೀಘ್ರವಾಗಿ ತಲುಪಲು ಅನುಕೂಲವಾಗಲಿದೆ.
ಹಾವೇರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ: ಅನ್ನದಾತರ ಪರವಾಗಿ ಸರ್ಕಾರಕ್ಕೆ ಧನ್ಯವಾದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ. ಹಾವೇರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ: ಅನ್ನದಾತರ ಪರವಾಗಿ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ: ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಬೆಳೆಗಳು ಒಣಗಿ ಕಂಗಾಲಾಗಿದ್ದ ಅನ್ನದಾತರ ನೋವಿಗೆ ಸ್ಪಂದಿಸಿ, ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಸಮಸ್ತ ರೈತಬಾಂಧವರ
ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ ಸಲ್ಲಿಸಿದರು. ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್ಲ, ಶಿಗ್ಗಾಂವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಹಾಗೂ ಹಾವೇರಿ ರಾಣೇಬೆನ್ನೂರ, ಸವಣೂರು ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಾದ್ಯಂತ ಮಳೆಯಿಲ್ಲದೆ ಕೃಷಿ ಚಟುವಟಿಕೆಗಳು ಸಂಪೂರ್ಣ ಕುಸಿದು ಬಿದ್ದಿದ್ದವು. ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹತ್ತಿ, ಮೆಕ್ಕೆಜೋಳ, ಬ್ಯಾಡಗಿ ಮೆಣಸಿನಕಾಯಿ ಹಾಗೂ ಶೇಂಗಾ ಬೆಳೆಗಳು ಮಳೆಯಿಲ್ಲದೆ ನೆಲಕಚ್ಚಿದ್ದರಿಂದ ತೀವ್ರ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರು ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದರು. ರೈತರ ಸಂಕಷ್ಟಕ್ಕೆ ತಕ್ಷಣ ಧಾವಿಸಿ, ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಖುದ್ದು ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಗಳಿಗೆ ಭೇಟಿ ನೀಡಿ ಹೊಲ-ಗದ್ದೆಗಳಲ್ಲಿ ಒಣಗಿದ ಬೆಳೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ವಸ್ತುಸ್ಥಿತಿಯ ಸಮಗ್ರ ವಿವರವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಹಾವೇರಿಯನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸಲು
ನಿರಂತರವಾಗಿ ಒತ್ತಡ ತಂದು ಸತತ ಪ್ರಯತ್ನ ನಡೆಸಲಾಗಿತ್ತು. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳು ಇಂದು ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಿ ರೈತರ ಕೈಹಿಡಿದಿದ್ದಾರೆ. ಸರ್ಕಾರದ ಈ ನಿರ್ಧಾರದಿಂದಾಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ, ಬೆಳೆ ನಷ್ಟ ಪರಿಹಾರ (ಇನ್ಪುಟ್ ಸಬ್ಸಿಡಿ), ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಉದ್ಯೋಗ ಖಾತರಿ (ನರೇಗಾ) ಯೋಜನೆಗಳು ಶೀಘ್ರವಾಗಿ ತಲುಪಲು ಅನುಕೂಲವಾಗಲಿದೆ.
- ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಕುಂದಗೋಳ ತಾಲೂಕು ಶಿರೂರು ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತಹಶೀಲ್ದಾರ್ ವಾಹನ ತಡೆದು ಗ್ರಾಮಸ್ಥರ ಆಕ್ರೋಶ! ಹಲವು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿರೂರು ಗ್ರಾಮದ ನವಗ್ರಾಮದ ನಿವಾಸಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಶಿರೂರು ಮಾರ್ಗವಾಗಿ ತೆರಳುತ್ತಿದ್ದ ಕುಂದಗೋಳ ತಹಶೀಲ್ದಾರ್ ರಾಜು ಮಾವರ್ಕರ್ ಅವರ ವಾಹನವನ್ನು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ತಡೆದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದರು. ಸ್ಥಳೀಯ ಆಡಳಿತ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು , ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಅಹವಾಲು ಆಲಿಸಿದ ತಹಶೀಲ್ದಾರ್, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದರು. ಬಳಿಕ ಸಮಸ್ಯಾತ್ಮಕ ಶೀಘ್ರ ಬಗೆಹರಿಯದಿದ್ದರೆ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.1
- ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ಕಾರ್ಯಕ್ರಮದಲ್ಲಿ ಶ್ರೀ ಗಳ ಆಶೀರ್ವಚನ. ದೇವರ ಅನುಗ್ರಹ ಪಡೆಯಲು ಸುಲಭ ಮಾರ್ಗ ಭಜನೆ ಡಾ : ಶಿವಕುಮಾರ ಮಹಾಸ್ವಾಮಿಜಿ. ಗದಗ : ಭಾರತೀಯ ಸಂಸ್ಕೃತಿಯಲ್ಲಿ ಪಾವಿತ್ರತೆ ಪಡೆದ ತಿಂಗಳು ಈ ಶ್ರಾವಣ ಮಾಸ,ಮಾಸ ಪರ್ಯಂತ ಭಗವಂತನ ನಾಮಸ್ಮರಣೆಯಿಂದ ಅನುಗ್ರಹ ಪಡೆಯಲು ಸುಲಭವಾದ ಮಾರ್ಗ ಭಜನೆ ಎಂದು ಶ್ರೀ ಡಾ ಶಿವಕುಮಾರ ಮಾಹಾಸ್ವಾಮಿಗಳು ನುಡಿದರು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮಂಡಳಿಯ ಆಯೋಜಿಸಲಾದ ಭಜನಾ ಮಹಾ ಮಂಗಲ ಕಾರ್ಯಕ್ರಮದ ಸಮಾರೋಪ ಸಮಾರಂಭದ saದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನೆರದಿದ್ದ ಭಕ್ತರಿಗೆ ಆಶೀರ್ವಚನದಲ್ಲಿ ಮಾತನಾಡಿದ ಅವರು. ಭಜನೆ ಎಂದರೆ ಭಜ್ ಎಂಬುವ ಧಾತುವಿನಿಂದ ಬಂದಿರುವ ಪದ ಅಂದರೆ ಭಜನೆ ಅಂದರೆ ಭಗವಂತನ ನಾಮಸ್ಮರಣೆ, ಆ ಭಗವಂತನ ಕೃಪೆಗೆ ಪಾತ್ರರಾಗಲು ಭಜನೆ ಅತೀ ಶ್ರೇಷ್ಠ ಮಾರ್ಗ ಎಂದರು. ಯಾರಿಗೂ ನಮ್ಮಿಂದ ನೋವಾಗದ ರೀತಿಯ ಬದುಕುವದು ಅಸಾಧ್ಯ ಆದರೂ ಉದ್ದೇಶ ಪೂರ್ವಕವಾಗಿ ಯಾರಿಗೂ ನೋವುಂಟು ಮಾಡಬಾರದು ಏಕೆಂದರೆ ಈ ಪ್ರಪಂಚದಲ್ಲಿ ನಕಾರಾತ್ಮಕ ಹಾಗೂ ಸಕರಾತ್ಮಕ ಚಿಂತನೆಗಳು ಒಂದಕ್ಕೊಂದು ಅಂಟಿಕೊಂಡೆ ಬಂದಿರುತ್ತವೆ, ಹೇಗೆ ರಾತ್ರಿಯ ಜೊತೆಗೆ ಹಗಲು,ಸುಖದ ಜೊತೆಗೆ ದುಃಖ,ಜನನದ ಜೊತೆಗೆ ಮರಣ ಇದೆಯೋ ಹಾಗೇ ಅದಕ್ಕಾಗಿ ಯಾವುದೇ ವ್ಯಕ್ತಿಗೂ ಬರೀ ಸುಖವೇ ಸಿಗುವದಿಲ್ಲ ಆದರೆ ಜೊತೆಗೆ ದುಃಖ ಬೆನ್ನ ಹತ್ತಿರುತ್ತದೆ ಕಾರಣ ಇಷ್ಟೇ ಪ್ರತಿ ಜೀವಿಗೂ ಹುಟ್ಟು ಅನಿಶ್ಚಿತ ಸಾವು ಖಚಿತ ಅಂತೆಯೇ ತಾವೆಲ್ಲರೂ ಪವಿತ್ರ ಶ್ರಾವಣ ಮಾಸದಲ್ಲಿ ನೀವಷ್ಟೇ ಭಜನೆ ಮಾಡದೇ ಇಡೀ ಗ್ರಾಮದ ಜನರ ಮನ ತಲುಪುವಂತೆ ಭಜನೆಯೊಂದಿಗೆ ಭಕ್ತಿಯ ಗೀತೆಗಳನ್ನು ಹಾಡುತ್ತಾ ವಠಾರಗಳಲ್ಲಿ ಸಂಚರಿಸಿ ಭಕ್ತಿಯ ಪರಾಕಷ್ಠೆ ಮೆರೆದು ಕೊನೆಯ ಹಂತ ಭಜನಾ ಮುಕ್ತಾಯ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ಸಂಭ್ರಮ ವಿಚಾರ ಎಂದರು. ರಾತ್ರಿಯಿಡೀ ಸಪ್ತಾಹ ಮಾಡಿ ಬೆಳಿಗ್ಗೆ ಗ್ರಾಮದ ತುಂಬೆಲ್ಲಾ ಭಜನೆಯೊಂದಿಗೆ ಮಾರುತೇಶ್ವರನ ಎಂಟು ಅಡಿ ಹಾಗೂ ಬಸವೇಶ್ವರನ ಭಾವಚಿತ್ರ ಮೆರವಣಿಗೆ ನೆರವೇರಿಸಿ ನಮ್ಮ ಪ್ರವಚನಕ್ಕಾಗಿ ಶಾಂತಿ ಸಹನೆಯಿಂದ ಕುಳಿತಿದ್ದು ನೋಡಿದರೆ ಆ ಮಾರುತೇಶ್ವರನ ಕೃಪೆಗೆ ತಾವೆಲ್ಲರೂ ಪಾತ್ರರಾಗಿದ್ದಿರಿ ಎನ್ನಬಹುದು. ನಮ್ಮ ರಾಜ್ಯದಲ್ಲಿ ನಿರಂತರ ಸಪ್ತಾಹ ಮಾಡುವ ಏಕೈಕ ಮಠ ಹುಬ್ಬಳ್ಳಿ ಸಿದ್ದಾರೂಢರ ಮಠ ಸುಮಾರು 94 ವರ್ಷಗಳ ಕಾಲ ಪ್ರತಿ ನಿತ್ಯ ಸಪ್ತಾಹ ಮಾಡುತ್ತಿರುವುದು ಇಂದಿಗೂ ಕಾಣಬಹುದು ಎಂದರು. ದಿವ್ಯ ಸಾನಿಧ್ಯವಹಿಸಿದ್ದ ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ನಿರಂಜನ ಮಹಾಸ್ವಾಮಿಗಳು ಭಜನಾ ಸಮಾರೋಪ ಕುರಿತು ಆಶೀರ್ವಚನ ನೀಡಿದರು ಕಾರ್ಯಕ್ರಮದಲ್ಲಿ ಶ್ರೀ ವೇದ ಮೂರ್ತಿ ಮಹಾದೇವಯ್ಯನವರು ಸಾನಿಧ್ಯ ವಹಿಸಿಕೊಂಡು ಅವರೂ ಕೂಡ ಆಶೀರ್ವಚನ ನೀಡಿದರು. ಕಾರ್ಯಕ್ರಮದ ನಿರೂಪಣೆ ವೀರಭದ್ರಯ್ಯ ಸಾಲಿಮಠ ನೆಡೆಸಿದರೆ ಎಸ್ ಎಸ್ ಅಂಗಡಿ ಶಿಕ್ಷಕರು ಸ್ವಾಗತಿಸಿದರು. ಶಿವಕುಮಾರಗೌಡ ಚಿಕ್ಕನಗೌಡರ ವಂದಿಸಿದರು. ಡಾ ಅಂಬೇಡ್ಕರ್ ಭಜನಾ ಸಂಘದ ಸದಸ್ಯರು, ಶ್ರೀ ದುರ್ಗಾದೇವಿ ಭಜನಾ ಮಂಡಳಿಯವರು ಹಾಗೂ ಹೊನ್ನಾಪುರ ಗ್ರಾಮದ ಶ್ರೀ ಮಲ್ಲಜ್ಜೇಶ್ವರ ಭಜನಾ ಮಂಡಳಿಯವರು,ಗ್ರಾಮದ ಹಿರಿಯರಾದ ವಿ ಎನ್ ಗೊಜನೂರು,ಅಶೋಕ ಗೊಜನೂರು, ಮಹೇಶಗೌಡ ಚಿಕ್ಕನಗೌಡರ ಶೇಕಪ್ಪ ಹುಲಗೂರು, (ಕೆಮ್ಮಣ್ಣವರ )ಭಜನಾ ಮಂಡಳಿ ಅಧ್ಯಕ್ಷ ಸಿದ್ದು ದುಂಡಪ್ಪನವರ, ವಿನೋದ ಗೊಜನೂರು ಪರಪ್ಪ ಬರಡ್ವಾದ ಕುರಗೋಡೆಪ್ಪ ಮುಕ್ಕಣ್ಣವರ ಸಿ ಬಿ ಮುಕ್ಕಣ್ಣವರ, ಬಸವರಾಜ ಹಡಪದ, ವೀರಪ್ಪ ದೇಸಾಯಿ ಸೇರಿದಂತೆ ಇನ್ನುಳಿದ ಸರ್ವ ಸದಸ್ಯರು, ಮಹಿಳೆಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.2
- ಶಿಕಾರಿಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಭಂಡಾರಿ ಮಾಲತೇಶ್.B.G. ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀಯುತ ಡಿ.ಕೆ ಶಿವಕುಮಾರ್ ರವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಮಧು ಬಂಗಾರಪ್ಪ ನವರು ದಿನಾಂಕ:19-09-2026 ರ ಶನಿವಾರ ರಂದು ಬೆಳಿಗ್ಗೆ 09-30 ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಆಗಮಿಸುತ್ತಿದ್ದು, ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಜಾರಿಯಾದರೆ ನಮ್ಮ ಮಲೆನಾಡಿನ ರೈತರು. ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರ ಬದುಕಿಗೆ ದೊಡ್ಡ ಸಂಕಷ್ಟ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಜನರ ನೈಜ ಪರಿಸ್ಥಿತಿ ಮತ್ತು ಅಹವಾಲುಗಳನ್ನು ಖುದ್ದು ಆಲಿಸಲಿದ್ದಾರೆ. ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು ಕೃಷಿಕರು ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ ಎಂದರು. ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲ್ಲೂಕ್ ಹಾಗೂ ಶಿವಮೊಗ್ಗ ಜಿಲ್ಲೆ ಮತ್ತು ಪಶ್ಚಿಮ ಘಟ್ಟ ಮತ್ತು ಮಲೆನಾಡಿನ ಸಮಸ್ತ ರೈತರು, ಕೃಷಿಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಈ ವರದಿಯನ್ನು ಒಗ್ಗಟ್ಟಿನಿಂದ ವಿರೋಧಿಸೋಣ. ಈ ಸಂದರ್ಭದಲ್ಲಿ ಕೆಡಿಸಿ ಜಿಲ್ಲಾ ಸದಸ್ಯರಾದ ಮಾರವಳ್ಳಿ ಉಮೇಶ್, ಶಿಕಾರಿಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರೋಷನ್ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಿತ್ರೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜನಾಯ್ಕ, ಶಿರಾಳಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್, ಕಸಬಾ ಸೊಸೈಟಿ ಹಾಲಿ ನಿರ್ದೇಶಕರಾದ ಬಡಗಿ ಪಾಲಾಕ್ಷಪ್ಪ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್, ಹಾಗೂ ಕಾಂಗ್ರೆಸ್ ಮುಖಂಡರಾದ ಅತಾವುಲ್ಲಾ ,ರಬ್ಬಾನಿ ,ಮುಜೀಬ್, ಶಫಿವುಲ್ಲಾ, ಸಂದೀಪ್, ರವಿ ಬಗನಕಟ್ಟೆ, ಶಬ್ಬೀರ್ ಉಪಸ್ಥಿತರಿದ್ದರು.1
- ಕೊಪ್ಪಳ: ನಮ್ಮ ಒತ್ತಡದಿಂದಲೇ ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 'ಕೊಪ್ಪಳ: ಕೊಪ್ಪಳ ತಾಲೂಕ ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ. ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. "ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.2
- ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.1
- ಶಿವಮೊಗ್ಗ-ಪ್ರಧಾನಮಂತ್ರಿ ಮೋದಿಜಿಯವರ ಜನ್ಮದಿನ: ಬಿಜೆಪಿ ವತಿಯಿಂದ ಭಜನೆ ಕಾರ್ಯಕ್ರಮ ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಹಾಗೂ ದೀಪಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಗರ ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಜಿ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಹೆಚ್. ತೀರ್ಥಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರಿಗೆ ದೀರ್ಘಾ ಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಕಾರ್ಯಕ್ರಮಕ್ಕೆ ವಿವಿಧ ಭಜನಾ ತಂಡಗಳ ಸದಸ್ಯರು ಭಜನೆ ಹಾಗೂ ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷ ಮೆರುಗು ನೀಡಿದರು.1
- ಎಸ್ ಆರ್ ಕೆ ನಗರದ ಸರಕಾರಿ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿನಿಯರಿಗೆ ಬಸ್ ನಿಲ್ಲಿಸುವಂತೆ ಪ್ರತಿಭಟನೆ. ರಾಣಿಬೆನ್ನೂರು: ನಗರದ SRK ನಗರದ ಬಳಿ ಬರುವ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿನಿಯರಿಗೆ ಬಸ್ ನಿಲ್ಲಿಸುವಂತೆ ಹಾಗೂ ಬಸ್ ಚಾಲಕ, ಕಂಡಕ್ಟರ್ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ, ಕೆಟ್ಟಪದಗಳನ್ನು ಮಾತಾಡುವ ಸಿಂಬಂದಿಗಳ ಮೇಲೆ ಕ್ರಮಕೈಗೊಳ್ಳವಂತೆ ಘಟಕದ ವ್ಯವಸ್ಥಕರ ಮೂಲಕ ಮನವಿ ಪತ್ರ ಸಲ್ಲಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು.1
- ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪಿಸಿ: ಸರಕಾರಕ್ಕೆ ಸಿವಿಸಿ ಒತ್ತಾಯ ಕೊಪ್ಪಳ: ಹೈದರಾಬಾದ್ ಕರ್ನಾಟಕ (ಹೈ-ಕ) ವಿಮೋಚನೆಗೆ ನಿರ್ಣಾಯಕ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ಶಾಶ್ವತವಾಗಿರಿಸಲು ಕೊಪ್ಪಳದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಗುರುವಾರ ಸರಕಾರಕ್ಕೆ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಹೈ-ಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೈ-ಕ ವಿಮೋಚನೆಗೊಂಡು ಏಳು ದಶಕಗಳಾದರೂ ಪಟೇಲ್ ಅವರ ಕೊಡುಗೆಗಳನ್ನು ಸ್ಮರಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನ ಹೋರಾಟದ ಸಂದರ್ಭದಲ್ಲಿ ಕವಲೂರಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಸ್ಮಾರಕವನ್ನು ಆ ಗ್ರಾಮದಲ್ಲಿ ಸ್ಥಾಪಿಸಬೇಕು. ಒಂದು ವೇಳೆ ಸರಕಾರ ಇದನ್ನು ಮಾಡದಿದ್ದರೆ ಜೆಡಿಎಸ್ ಈ ಕೆಲಸ ಮಾಡಲಿದೆ," ಎಂದರು. "ವೈಜನಾಥ ಪಾಟೀಲ್ ಹೈ-ಕ ಪ್ರದೇಶಕ್ಕೆ ವಿಶೇಷ ಸೌಕರ್ಯಗಳು ಬೇಕೆಂದು ಕನಸು ಕಂಡು ತಮ್ಮ ಸರ್ವಸ್ವವನ್ನೇ ಧಾರೆಯಾದವರು. ತಮ್ಮ ಆಸ್ತಿಯನ್ನು ಮಾರಿ ಈ ಭಾಗದ ಸೌಕರ್ಯಗಳಿಗೆ ಹೋರಾಡಿದರು. ಆದರೆ ಸರಕಾರ ಅವರನ್ನು ಸಂಪೂರ್ಣವಾಗಿ ಮರೆತಿದೆ. ಸಂವಿಧಾನಾತ್ಮಕವಾಗಿ ಸಿಗಬೇಕಾದ ಸವಲತ್ತುಗಳು ಇಂದಿಗೂ ಮರೀಚಿಕೆಯಾಗಿವೆ. ಹೈ-ಕ ಭಾಗದ ಏಳು ಜಿಲ್ಲೆಗಳ ಎಲ್ಲಾ ಶಾಸಕರು ಸಭೆ ಸೇರಿ ಈ ಭಾಗದ ಅಭಿವೃದ್ಧಿ ಯೋಜನೆಗಳ ಕುರಿತು ನೀಲನಕ್ಷೆ ತಯಾರಿಸಬೇಕು," ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಹೇಳಿದರು. ಸರಕಾರದ ನಿರ್ಧಾರಗಳಿಗೆ ಕಾಯದೆ ಈ ಭಾಗಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಮಾಡಲು ನಾಯಕರು ಮುಂದೆ ಬರಬೇಕೆಂದು ಯುವ ಮುಖಂಡ ಬಸವರಾಜ್ ಹೇಳಿದರು. ಹೈ-ಕ ವಿಮೋಚನಾ ಅಂಗವಾಗಿ ಹೋರಾಟಗಾರರ ಕುರಿತು ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿದರು. ಹೈ-ಕ ವಿಮೋಚನ ಸಂಘರ್ಷದ ಕುರಿತು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಸಿಇಓ ಡಾ. ಜಗದೀಶ ಅಂಗಡಿ ಉಪನ್ಯಾಸ ನೀಡಿದರು. ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಾಲಾ ಮೇದಾರ, ನಗರ ಮಹಿಳಾ ಘಟಕದ ಗೌರವ ಅಧ್ಯಕ್ಷೆ ರತ್ನಮ್ಮ ಹಿರೇಮಠ, ತಾಲೂಕು ಎಸ್ ಸಿ ಘಟಕ ಅಧ್ಯಕ್ಷ ಸುರೇಶ ದದಗಲ್, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಂಜುನಾಥ ಮಾಲಿಪಾಟೀಲ, ಮುಖಂಡರಾದ ಭಾಗ್ಯಲಕ್ಷ್ಮಿ, ಸಿದ್ದು ಪಾಟೀಲ್, ಭರತ ಕುಮಾರ ಗೊಂದಿಹೊಸಳ್ಳಿ, ಶ್ರೀನಿವಾಸ ಗೊಂದಳ್ಳಿ, ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.2
- 🚨 ಹಳ್ಳೂರಿನ ಗ್ರಾಮೀಣ ರಸ್ತೆಯಲ್ಲೇ ಹೆಲ್ಮೆಟ್ ತಪಾಸಣೆ! ಗದ್ದೆಗೆ ಹೋಗುವವರಿಗೂ ದಂಡ #Hallur #Mudalagi #HelmetCheck #PoliceAction #TrafficRules #VillageRoad #KarnatakaNews #BelagaviNews #PSIYamanappa #HelmetFine #RoadSafety #VillageNews #KannadaNews #BreakingNews #ViralNews #PublicReaction #MudalagiNews #HallurVillage #TrafficPolice #NewsUpdate #BreakingNews ಹಳ್ಳೂರು ಹೆಲ್ಮೆಟ್ ತಪಾಸಣೆ, ಮೂಡಲಗಿ ಸುದ್ದಿ, ಗ್ರಾಮೀಣ ರಸ್ತೆ ಹೆಲ್ಮೆಟ್ ದಂಡ, PSI ಯಮನಪ್ಪ ಬಿಸನ್ಯಾಳ, ಬೆಳಗಾವಿ ಜಿಲ್ಲೆ ಸುದ್ದಿ, ಕನ್ನಡ ವೈರಲ್ ಸುದ್ದಿ, ಟ್ರಾಫಿಕ್ ನಿಯಮಗಳು, ಗ್ರಾಮಸ್ಥರ ಆಕ್ರೋಶ, ಹೆಲ್ಮೆಟ್ ಫೈನ್ ಕರ್ನಾಟಕ, Mudalagi Helmet Check.1