ಶಿವಮೊಗ್ಗ-ಭಗವಂತನ ಕೃಪೆಯಿಲ್ಲದೆ ಪ್ರಯತ್ನ ನಡೆಯದು: ಪೇಜಾವರ ಶ್ರಿ ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ವಿಷ್ಣು ಸಹಸ್ರ ನಾಮ ಪಾರಾಯಣ ಮತ್ತು ಉಭಯ ಶ್ರೀಗಳ ಆಶೀರ್ವಚನ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಶ್ರೀಗಂಧ ಸಂಸ್ಥೆ, ವಿಷ್ಣು ಸಹಸ್ರ ನಾಮ ಗ್ಲೋಬಲ್ ಟ್ರಸ್ಟ್ ಹಾಗೂ ಭಜನಾ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಈ ಪೂಜೆಯ ಪುಣ್ಯ ಫಲವು ನಾಡಿನ ಸಮಸ್ತ ಜನರಿಗೂ ಪ್ರಾಪ್ತವಾಗಲಿ ಹಾಗೂ ಎಲ್ಲೆಡೆ ಸುಖ ಮತ್ತು ಶಾಂತಿ ನೆಲೆಸುವಂತಾಗಲಿ ಎಂದು ಹಾರೈಸಿದರು. ಮಹಾಭಾರತದ ಕುರುಕ್ಷೇತ್ರ ಮಹಾ ಯುದ್ಧವು ಮುಕ್ತಾಯಗೊಂಡ ಬಳಿಕ, ಮುಂದಿನ ಹಾದಿಯ ಬಗ್ಗೆ ಮಾರ್ಗದರ್ಶನ ನೀಡುವಂತೆ ಧರ್ಮರಾಯನು ಶ್ರೀಕೃಷ್ಣನನ್ನು ಪ್ರಾರ್ಥಿಸಿದನು. ಆ ಸಂದರ್ಭದಲ್ಲಿ ಕೃಷ್ಣನು ಭೀಷ್ಮಾಚಾರ್ಯರ ಬಳಿ ತೆರಳಿ ಸಲಹೆ ಪಡೆಯುವಂತೆ ಸೂಚಿಸಿದನು. ಭೀಷ್ಮರು ಧರ್ಮ ರಾಯನಿಗೆ ಉಪದೇಶಿಸುತ್ತಾ, ಈ ಜಗತ್ತಿನಲ್ಲಿ ವಿಷ್ಣು ಸಹಸ್ರನಾಮವು ಅತ್ಯಂತ ಶ್ರೇಷ್ಠವಾದದ್ದು ಎಂದು ಅರ್ಥಸಹಿತವಾಗಿ ವಿವರಿಸಿದರು. ಆಕಾಶದಲ್ಲಿ ಹಕ್ಕಿಯೊಂದು ಮುಕ್ತವಾಗಿ ಹಾರಾಡಲು ಎರಡು ರೆಕ್ಕೆಗಳ ಅವಶ್ಯಕತೆ ಇರುವಂತೆ ಯೇ, ಮನುಷ್ಯನ ಜೀವನದಲ್ಲಿ ಕೇವಲ ಪ್ರಯತ್ನವಿದ್ದರೆ ಸಾಲದು, ಅದರ ಜೊತೆಗೆ ಭಗವಂತನ ಕೃಪಾಕಟಾಕ್ಷವೂ ಅಷ್ಟೇ ಮುಖ್ಯ ವಾಗಿದೆ. (ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀಗಳು) ಬಾಳಗಾರ ಮಠದ ಕಿರಿಯ ಪೀಠಾಧಿಪತಿ ಅಶೋಭರಾಮ ಪ್ರಿಯತೀರ್ಥ ಶ್ರೀಪಾದರು ಮಾತನಾಡುತ್ತಾ ಭಗವಂತನನ್ನು ನಿರಂತರ ವಾಗಿ ಆರಾಧಿಸುವ ಭಕ್ತರಿಗೆ ಶ್ರೀ ವಿಷ್ಣುವು ಎಂದಿಗೂ ಕಷ್ಟಗಳನ್ನು ನೀಡುವುದಿಲ್ಲ. ಸಮಾಜದಲ್ಲಿ ಯಾವುದೇ ವ್ಯಕ್ತಿಯನ್ನು ಕೀಳಾಗಿ ಕಾಣುವುದು ಸರಿಯಲ್ಲ. ಸಮಸ್ತ ಹಿಂದೂ ಸಮಾಜವನ್ನು ಒಗ್ಗೂಡಿಸುವುದೇ ಈ ವಿಷ್ಣು ಸಹಸ್ರನಾಮ ಪಾರಾ ಯಣದ ಮುಖ್ಯ ಆಶಯವಾಗಿದೆ. ಮನುಷ್ಯನ ಜೀವನದಲ್ಲಿ ತಾಳ್ಮೆ ಯನ್ನು ಕಳೆದುಕೊಳ್ಳದಿರುವುದೇ ಅತಿದೊಡ್ಡ ತಪಸ್ಸು ಎಂದರು. ಮುಂದಿನ ದಿನಗಳಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ 5,000 ಜನರನ್ನು ಸೇರಿಸಿ ಬೃಹತ್ ಮಟ್ಟದ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಬೃಹತ್ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಎಲ್ಲಾ ಜಾತಿ ಹಾಗೂ ಸಮುದಾಯ ಗಳ ಭಕ್ತರು ಒಟ್ಟಾಗಿ ಸೇರಿ ಪಾರಾಯಣ ಪಠಣ ಮಾಡಲಿದ್ದಾರೆ ಎಂದು ಶ್ರೀಗಂಧ ಸಂಸ್ಥೆಯ ಅಧ್ಯಕ್ಷರೂ ಆದ ಕೆ.ಎಸ್. ಈಶ್ವರಪ್ಪ ಘೋಷಿಸಿದರು.
ಶಿವಮೊಗ್ಗ-ಭಗವಂತನ ಕೃಪೆಯಿಲ್ಲದೆ ಪ್ರಯತ್ನ ನಡೆಯದು: ಪೇಜಾವರ ಶ್ರಿ ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ವಿಷ್ಣು ಸಹಸ್ರ ನಾಮ ಪಾರಾಯಣ ಮತ್ತು ಉಭಯ ಶ್ರೀಗಳ ಆಶೀರ್ವಚನ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಶ್ರೀಗಂಧ ಸಂಸ್ಥೆ, ವಿಷ್ಣು ಸಹಸ್ರ ನಾಮ ಗ್ಲೋಬಲ್ ಟ್ರಸ್ಟ್ ಹಾಗೂ ಭಜನಾ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಈ ಪೂಜೆಯ ಪುಣ್ಯ ಫಲವು ನಾಡಿನ ಸಮಸ್ತ ಜನರಿಗೂ ಪ್ರಾಪ್ತವಾಗಲಿ ಹಾಗೂ ಎಲ್ಲೆಡೆ ಸುಖ ಮತ್ತು ಶಾಂತಿ ನೆಲೆಸುವಂತಾಗಲಿ ಎಂದು ಹಾರೈಸಿದರು. ಮಹಾಭಾರತದ ಕುರುಕ್ಷೇತ್ರ ಮಹಾ ಯುದ್ಧವು ಮುಕ್ತಾಯಗೊಂಡ
ಬಳಿಕ, ಮುಂದಿನ ಹಾದಿಯ ಬಗ್ಗೆ ಮಾರ್ಗದರ್ಶನ ನೀಡುವಂತೆ ಧರ್ಮರಾಯನು ಶ್ರೀಕೃಷ್ಣನನ್ನು ಪ್ರಾರ್ಥಿಸಿದನು. ಆ ಸಂದರ್ಭದಲ್ಲಿ ಕೃಷ್ಣನು ಭೀಷ್ಮಾಚಾರ್ಯರ ಬಳಿ ತೆರಳಿ ಸಲಹೆ ಪಡೆಯುವಂತೆ ಸೂಚಿಸಿದನು. ಭೀಷ್ಮರು ಧರ್ಮ ರಾಯನಿಗೆ ಉಪದೇಶಿಸುತ್ತಾ, ಈ ಜಗತ್ತಿನಲ್ಲಿ ವಿಷ್ಣು ಸಹಸ್ರನಾಮವು ಅತ್ಯಂತ ಶ್ರೇಷ್ಠವಾದದ್ದು ಎಂದು ಅರ್ಥಸಹಿತವಾಗಿ ವಿವರಿಸಿದರು. ಆಕಾಶದಲ್ಲಿ ಹಕ್ಕಿಯೊಂದು ಮುಕ್ತವಾಗಿ ಹಾರಾಡಲು ಎರಡು ರೆಕ್ಕೆಗಳ ಅವಶ್ಯಕತೆ ಇರುವಂತೆ ಯೇ, ಮನುಷ್ಯನ ಜೀವನದಲ್ಲಿ ಕೇವಲ ಪ್ರಯತ್ನವಿದ್ದರೆ ಸಾಲದು, ಅದರ ಜೊತೆಗೆ ಭಗವಂತನ ಕೃಪಾಕಟಾಕ್ಷವೂ ಅಷ್ಟೇ ಮುಖ್ಯ ವಾಗಿದೆ. (ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀಗಳು) ಬಾಳಗಾರ ಮಠದ ಕಿರಿಯ ಪೀಠಾಧಿಪತಿ ಅಶೋಭರಾಮ ಪ್ರಿಯತೀರ್ಥ ಶ್ರೀಪಾದರು ಮಾತನಾಡುತ್ತಾ ಭಗವಂತನನ್ನು ನಿರಂತರ ವಾಗಿ ಆರಾಧಿಸುವ
ಭಕ್ತರಿಗೆ ಶ್ರೀ ವಿಷ್ಣುವು ಎಂದಿಗೂ ಕಷ್ಟಗಳನ್ನು ನೀಡುವುದಿಲ್ಲ. ಸಮಾಜದಲ್ಲಿ ಯಾವುದೇ ವ್ಯಕ್ತಿಯನ್ನು ಕೀಳಾಗಿ ಕಾಣುವುದು ಸರಿಯಲ್ಲ. ಸಮಸ್ತ ಹಿಂದೂ ಸಮಾಜವನ್ನು ಒಗ್ಗೂಡಿಸುವುದೇ ಈ ವಿಷ್ಣು ಸಹಸ್ರನಾಮ ಪಾರಾ ಯಣದ ಮುಖ್ಯ ಆಶಯವಾಗಿದೆ. ಮನುಷ್ಯನ ಜೀವನದಲ್ಲಿ ತಾಳ್ಮೆ ಯನ್ನು ಕಳೆದುಕೊಳ್ಳದಿರುವುದೇ ಅತಿದೊಡ್ಡ ತಪಸ್ಸು ಎಂದರು. ಮುಂದಿನ ದಿನಗಳಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ 5,000 ಜನರನ್ನು ಸೇರಿಸಿ ಬೃಹತ್ ಮಟ್ಟದ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಬೃಹತ್ ಕಾರ್ಯಕ್ರಮದಲ್ಲಿ ಹಿಂದೂ ಧರ್ಮದ ಎಲ್ಲಾ ಜಾತಿ ಹಾಗೂ ಸಮುದಾಯ ಗಳ ಭಕ್ತರು ಒಟ್ಟಾಗಿ ಸೇರಿ ಪಾರಾಯಣ ಪಠಣ ಮಾಡಲಿದ್ದಾರೆ ಎಂದು ಶ್ರೀಗಂಧ ಸಂಸ್ಥೆಯ ಅಧ್ಯಕ್ಷರೂ ಆದ ಕೆ.ಎಸ್. ಈಶ್ವರಪ್ಪ ಘೋಷಿಸಿದರು.
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- Post by Suresh Belagere1
- ಚಪ್ಪಲಿ ಪೊರಕೆ ತೋರಿಸುವುದು ಬಿಜೆಪಿ ಸಂಸ್ಕೃತಿ ಎಂದು ಚಿತ್ರದುರ್ಗದಲ್ಲಿ ಯೋಗೀಶ್ ಬಾಬು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ದ್ರಾಕ್ಷ ರಸ ಮಂಡಳಿ ಅಧ್ಯಕ್ಷರಾದ ಯೋಗೀಶ್ ಬಾಬು ಅವರು ಮಾತನಾಡಿದ್ದು ಯಾರಿಗೂ ಕೂಡ ಅಲ್ಲಿಗೆ ಬರ್ರಿ ಇಲ್ಲಿಗೆ ಬರ್ರಿ ಎಂದು ಸವಾಲ್ ಹಾಕುವುದು ಸರಿಯಲ್ಲ, ಎಲ್ಲರಿಗೂ ಕೂಡ ವಾಕ್ ಸ್ವಾತಂತ್ರ್ಯ ಇರುತ್ತದೆ. ದಾವಣಗೆರೆಗೆ ಬನ್ನಿ ಎಂದು ಹೇಳುವುದು ತಪ್ಪು ಎಂದು ಟಾಂಗ್ ಕೊಟ್ಟಿದ್ದಾರೆ1
- ಶಿಗ್ಗಾವ್ ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಅವರು ದಾವಣಗೆರೆಯ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಇವರ ಪರ ಪ್ರಚಾರ ಕೈಗೊಳ್ಳಲು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು,1
- ಚಳ್ಳಕೆರೆ ನಗರದಲ್ಲಿ ನಗರಸಭೆ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಮಂಗಳವಾರ ಬೆಳ್ಳಂ ಬೆಳಗ್ಗೆ ಜೋರಾಗಿ ಆರಂಭವಾಗಿದೆ. ಜೆಸಿಬಿ ಯಂತ್ರಗಳ ಸದ್ದು ಮಧ್ಯೆ ಕಾರ್ಯಾಚರಣೆ ಮುಂದುವರಿದಿದ್ದು, ನಗರದಲ್ಲಿ ಚಟುವಟಿಕೆ ಹೆಚ್ಚಾಗಿದೆ. ಚಳ್ಳಕೆರೆ ನಗರಸಭೆಗೆ ಸೇರಿದ ನೆಹರು ಬೆಂಗಳೂರು ರಸ್ತೆ, ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಯಲ್ಲಿರುವ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಬಹುಕಾಲದಿಂದ ನಿರೀಕ್ಷಿಸಿದ್ದ ಕ್ರಮ ಇದೀಗ ಕೈಗೆತ್ತಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ದಿಟ್ಟ ಮಹಿಳಾ ಪೌರಾಕ್ತೆ ನಾಗವೇಣಿ ಮುಂದಾಳತ್ವ ವಹಿಸಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪೋಲಿಸ್ ಇಲಾಖೆಯ ಬಿಗಿ ಬಂದೋಬಸ್ತಿನೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ನಗರಸಭೆ ಆಸ್ತಿಗಳ ಮೇಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ಈ ಕ್ರಮದಿಂದ ನಡುಕ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.1
- ಮಂಗಳೂರಿನ ಮೀನುಗಾರಿಕಾ ಧಕ್ಕೆಯಲ್ಲಿರುವ ಸಂದೇಶ್ ಎಂಬವರ ಮಾಲಿಕತ್ವದ 'ಗುರುರಾಜ್’ ಎಂಬ ಆಳಸಮುದ್ರ ಮೀನುಗಾರಿಕಾ ಬೋಟ್‍ನಲ್ಲಿ ಗೋಬಿಂದ ದಾಸ್(42) ಎಂಬವರು ಮಾರ್ಚ್ 6 ರಂದು ರಾತ್ರಿ ಒಟ್ಟು 9 ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿರುತ್ತಾರೆ. ಮೀನುಹಿಡಿಯುವ ಸಲುವಾಗಿ ಬಲೆ ಬೀಸಲು ತೊಡಗಿದಾಗ ಗೋಬಿಂದ ದಾಸ್ ಬೋಟ್‍ನಲ್ಲಿ ಇರದೇ ಕಾಣೆಯಾಗಿದ್ದಾರೆ. ಅಥವಾ ರಾತ್ರಿ ಸಮಯ ಗೋಬಿಂದ ದಾಸ್ ಆಕಸ್ಮಿಕವಾಗಿ ಬೋಟ್‍ನಿಂದ ಜಾರಿ ಆಳ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಪ್ಪು ಬಿಳಿ ಮಿಶ್ರಿತ ಕೂದಲು, ಹಿಂದಿ, ಬೆಂಗಾಳಿ ಭಾಷೆ ಮಾತನಾಡುತ್ತಾರೆ. ನೀಲಿ ಬಣ್ಣದ ಟೀಶರ್ಟ್,ಮತ್ತು ಕಪ್ಪು ಬಣ್ಣದ ಬರ್ಮುಡಾ ಚಡ್ಡಿ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಶಿವಮೊಗ್ಗ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿ ರುವ ಜಿಲ್ಲೆಯ ಶಂಕರ ಘಟ್ಟದ ನಮ್ಮ ದೀನಬಂಧು ಸೇವಾ ಟ್ರಸ್ಟ್ ಸಾರ್ಥಕವಾದ 25 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ತನ್ನ ಬೆಳ್ಳಿ ಹಬ್ಬವನ್ನು ಆಚರಿಸಿ ಕೊಳ್ಳುತ್ತಿದೆ. ಸಮಾಜದ ಋಣವನ್ನು ತೀರಿಸಲು ವಿಶೇಷವಾಗಿ ದೀನ ದಲಿತರ ಮತ್ತು ಸಮಾಜದ ಶೋಷಿತ ವರ್ಗದವರ ಸೇವೆಗಾಗಿ ಕಟಿಬದ್ಧರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಂಕರಘಟ್ಟದಿಂದ ಪಾದಯಾತ್ರೆ ಮೂಲಕ ತೆರಳಿ, ಧರ್ಮಾಧಿಕಾರಿಗಳಾದ ಡಾ: ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ, ದಿನಾಂಕ 2.10.1999 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ದಂದು ದೀನಬಂಧು ಸೇವಾ ಟ್ರಸ್ಟ್‍ನ್ನು ಸ್ಥಾಪಿಸಲಾಯಿತು. ದೀನಬಂಧು, ದೀನರ, ವೃದ್ಧರ ಹಾಗೂ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾದ ಹಾಗೂ ಅವರ ಸಂಕಷ್ಟ ಗಳಿಗೆ ನೆರವಾಗುತ್ತಾ, ಪ್ರೋತ್ಸಾಹಿ ಸುತ್ತಾ, ಅನೇಕ ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ರಚನಾತ್ಮಕ ಕಾರ್ಯ ಗಳನ್ನು ನಡೆಸುವ ಉದ್ದೇಶದ ಹಿನ್ನೆಲೆಯಲ್ಲಿ ಈ ದೀನಬಂಧು ಸೇವಾ ಟ್ರಸ್ಟ್(ರಿ)ನ್ನು ಸ್ಥಾಪಿಸ ಲಾಗಿತ್ತು. ಈಗ ಟ್ರಸ್ಟ್ ಗೆ 25 ವರ್ಷಗಳು ತುಂಬಿದೆ. ಬೆಳ್ಳಿಹಬ್ಬದ ಅಂಗವಾಗಿ ಇಂದು ಸಂಜೆ 4.00 ಘಂಟೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದ್ದು, ಉಡುಪಿಯ ಡಾ.ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ. ಶಂಕರ್ ಇವರಿಗೆ ದೀನಬಂಧು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ.1 ಲಕ್ಷ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿ ರುತ್ತದೆ. ರಾಜ್ಯದಲ್ಲಿ ಸಮಾಜಸೇವೆ ಯಲ್ಲಿ ತೊಡಗಿರುವ ಸಮಾಜ ಸೇವಕರೊಬ್ಬರನ್ನು ಆಯ್ಕೆ ಮಾಡುವ ಸಲುವಾಗಿ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಗಳಾದ ಪ್ರೊ.ಎಂ.ವೆಂಕಟೇಶ್ವರಲು ಇವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಆ ಸಮಿತಿಯ ಸದಸ್ಯ ರನ್ನಾಗಿ ಬೆಂಗಳೂರು ವಿಶ್ವವಿದ್ಯಾ ನಿಲಯದ ಕುಲಪತಿಗಳಾದ ಪ್ರೊ.ಬಿ.ರಮೇಶ್, ಕುವೆಂಪು ವಿಶ್ವವಿದ್ಯಾ ಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಿ.ಪ್ರಶಾಂತ ನಾಯಕ್ ಹಾಗೂ ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಪಕರಾದ ಪ್ರೊ.ಪ್ರಭಾಕರ್ ಇವರನ್ನು ನೇಮಿಸಲಾಗಿತ್ತು. ಆ ಸಮಿತಿಯ ಶಿಫಾರಸ್ಸಿನ ಮೇರೆಗೆ ಡಾ.ಜಿ. ಶಂಕರ್ ಇವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸ ಲಾಗುತ್ತಿದೆ. ಇದೇ ಸಂದರ್ಭದಲ್ಲಿ ಮಾಜಿ ಸಭಾಪತಿ ಗಳಾದ ಡಿ.ಎಚ್.ಶಂಕರ ಮೂರ್ತಿ ಯವರನ್ನು, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ರಾದ ಡಾ.ಬೋಜ್ಯಾ ನಾಯಕ್ ಹಾಗೂ ಶಿಕ್ಷಣತಜ್ಞರಾದ ಪ್ರೊ. ಜೆ.ಎಲ್. ಪದ್ಮನಾಭ್ ಇವರನ್ನು ಕೂಡ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲ ನಂದನಾಥ ಮಹಾಸ್ವಾಮೀಜಿಯವರು, ಸಾಣೇಹಳ್ಳಿಯ ಶ್ರೀ ಡಾ.ಪಂಡಿತಾ ರಾಧ್ಯ ಶಿವಾಚಾರ್ಯ ಸ್ವಾಮಿಗಳು, ಆದಿಚುಂಚನ ಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಬಾರ್ಕೂರು ಮಹಾಸಂಸ್ಥಾನದ ಡಾ.ವಿಶ್ವಸಂತೋಷ ಭಾರತಿ ಶ್ರೀ ಪಾದಂಗಳು ಹಾಗೂ ಕೊಪ್ಪದ ಗೌರಿಗದ್ದೆಯ ಸ್ವರ್ಣಪೀಠಿಕಾಪುರ ದತ್ತಾಶ್ರಮದ ಅವಧೂತರಾದ ಶ್ರೀ ವಿನಯ್ ಗುರೂಜಿಯವರು ವಹಿಸಲ್ಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧುಬಂಗಾರಪ್ಪ ನೆರವೇರಿಸಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ಬಿ.ಕೆ. ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಎಸ್.ಎನ್. ಚನ್ನಬಸಪ್ಪ, ವಿಧಾನಪರಿಷತ್ ಶಾಸಕರುಗಳಾದಡಾ.ಮಂಜುನಾಥ ಭಂಡಾರಿ, ಬಲ್ಕೀಶ್‍ಬಾನು, ಡಾ.ಧನಂಜಯ ಸರ್ಜಿ, ಡಿ.ಎಸ್. ಅರುಣ್, ಆಯನೂರು ಮಂಜುನಾಥ್, ಸುಧಾಕರ ಎಸ್ ಶೆಟ್ಟಿ, ಸಿ.ಎಸ್. ಚಂದ್ರಭೂಪಾಲ್, ಎಸ್. ರುದ್ರೇಗೌಡರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿಯವರು, ಎಂ.ಶ್ರೀಕಾಂತ್, ಆರ್. ಪ್ರಸನ್ನ ಕುಮಾರ್, ಹೆಚ್.ಎನ್. ವಿದ್ಯಾದರ್, ಕೆ.ಮರಿಯಪ್ಪ, ಎಸ್. ಓಂಕಾರಪ್ಪ, ಎನ್. ರಮೇಶ್ ಹಾಗೂ ಎಸ್ ಪಿ ದಿನೇಶ್ ಭಾಗವಹಿಸಲ್ಲಿದ್ದಾರೆ. ಸರಿಗಮಪ ಗಾಯಕರಿಂದ ಗಾನಸಂಜೆ ಹಾಗೂ ಯಕ್ಷಗಾನ ನಾಟ್ಯ ವೈಭವ: ಕಾರ್ಯಕ್ರಮವು ನಿಗದಿತ ಸಮಯದಲ್ಲಿ ಸಂಜೆ 4.00 ಘಂಟೆಗೆ ಆರಂಭವಾಗಲ್ಲಿದ್ದು, ಸರಿಗಮಪ ಖ್ಯಾತಿಯ ಕಾರ್ತಿಕ್ ನಾಗಲಪುರ, ಸವಿಶ್ರೀ ಕುಂದಾಪುರ, ಆಮೀಶ್ ಕುಮಾರ್ ಇನ್ನಿತರ ಗಾಯಕ-ಗಾಯಕಿಯರಿಂದ ಗಾನಸಂಜೆ, 5.00 ಘಂಟೆಗೆ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರಿಂದ ಯಕ್ಷಗಾನ ನೃತ್ಯ ವೈಭವ ಹಾಗೂ ಇನ್ನಿತರ ಸಾಂಸ್ಕøತಿಕ ಕಾರ್ಯಕ್ರಮಗಳು ಇರುತ್ತವೆ. ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು ಗಳಾದ ಡಾ. ಶೇಖರ್, ಡಾ. ಹಸೀನಾ, ಜಿ.ಡಿ. ಮಂಜು ನಾಥ್, ಯು ಶಿವಾನಂದ, ಜಿತೇಂದ್ರ, ಎಂ ಎಂ ಸ್ವಾಮಿ, ಪ್ರಸನ್ನ, ಎಂ ಸಿದ್ದರಾಮು, ಮಂಜುನಾಥ್ ಇರಲಿದ್ದಾರೆ.1