logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ಇಳಕಲ್ ; ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ತಾಯಿಯವರು ನಿಧನದ ಹಿನ್ನೆಲೆ , ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

1 hr ago
user_ಶರಣಗೌಡ ಕಂದಕೂರ
ಶರಣಗೌಡ ಕಂದಕೂರ
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
1 hr ago
bfd5aff3-f58a-411b-8edb-a1bc5f4a987c
941ba810-95a5-49c3-9486-eec84acc8eb6

ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ಇಳಕಲ್ ; ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ತಾಯಿಯವರು ನಿಧನದ ಹಿನ್ನೆಲೆ , ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕುಷ್ಟಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಹೋರಾಟಗಾರರ ತ್ಯಾಗ-ಬಲಿದಾನ ಪಠ್ಯಕ್ಕೆ ಸೇರಿಸಿ - ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹ* *ಬರದ ನಡುವೆಯೂ ಉತ್ಸವ: ಕೂಡಲೇ ಬರ ಘೋಷಿಸಿ, ಗೋಶಾಲೆ ತೆರೆಯಿರಿ, ಇಲ್ಲದಿದ್ದರೆ ರೈತನ ಶಾಪ ತಟ್ಟುತ್ತದೆ - ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಶಾಸಕ* *ಕುಷ್ಟಗಿ, ಸೆ.17:* ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ 79ನೇ ವರ್ಷದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ *ದೊಡ್ಡನಗೌಡ ಪಾಟೀಲ* ಅವರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ  ಮಾತನಾಡಿ, ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸದಿಂದ ಹಿಡಿದು ಇಂದಿನ ಬರದ ಪರಿಸ್ಥಿತಿಯವರೆಗೆ ಎಲ್ಲಾ ವಿಷಯ ಪ್ರಸ್ತಾಪಿಸಿದರು. *ವಿಮೋಚನೆಯ ಇತಿಹಾಸ ಸ್ಮರಣೆ:* "ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಿಗಲಿಲ್ಲ. ನಿಜಾಮನ ದಬ್ಬಾಳಿಕೆ, ರಜಾಕಾರರ ಹಾವಳಿಯ ದುಷ್ಪರಿಣಾಮ ಈ ಭಾಗದ ಮೇಲೆ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಆಪರೇಷನ್ ಪೋಲೋ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ವಿಮೋಚನೆ ಸಿಕ್ಕಿತು ಸ್ವಾತಂತ್ರ್ಯವಾಯಿತು ಎಂದರು. *ಬರದ ಬವಣೆ - ಸರ್ಕಾರಕ್ಕೆ ಎಚ್ಚರಿಕೆ:* "ಈ ಉತ್ಸವವನ್ನು ನಾವು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರೂ ಕೂಡ, ಮತ್ತೊಂದು ಕಡೆ ಕಲ್ಯಾಣ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ನಮ್ಮೆಲ್ಲರಿಗೂ ಕಾಡುತ್ತಿದೆ. ನಿನ್ನೆ, ಮೊನ್ನೆ, ಇವತ್ತು ಹೊರಗಡೆ ಕಾಲಿಡೋದಕ್ಕೂ ಸಾಧ್ಯವಾಗದಷ್ಟು ಬಿಸಿಲು. ಇವತ್ತು ಹೆಚ್ಚಾಗುತ್ತಿದೆ ರೈತನ ಹೊಲದಲ್ಲಿ ಬೆಳೆಯಿಲ್ಲ, ದನಕರುಗಳಿಗೆ ಹಾಕೋದಕ್ಕೆ ಮೇವಿಲ್ಲ, ಕೆಲವೊಂದು ಗ್ರಾಮಗಳಲ್ಲಿ ಕುಡಿಯೋದಕ್ಕೆ ನೀರಿನ ಸಮಸ್ಯೆ ಆಗ್ತಾ ಇದೆ. ರೈತನಿಗೆ ಬೆಳೆ ಇಲ್ಲ, ಬೆಲೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಸ್ಯಾಟಲೈಟ್ ಸಮೀಕ್ಷೆಗೆ ಆಕ್ಷೇಪ:* "ಅಧಿಕಾರಿಗಳು ವೈಮಾನಿಕ ಸಮೀಕ್ಷೆಯಲ್ಲಿ ಸ್ಯಾಟಲೈಟ್ ನಲ್ಲಿ ಹಸಿರು ಕಾಣುತ್ತದೆ ಎಂದು ಹೇಳುತ್ತಾರೆ. ಹಸಿರು ಕಂಡ ಮಾತ್ರಕ್ಕೆ ಬೆಳೆ ಇದೆ ಎಂದಲ್ಲ. ಕೂಡಲೇ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಿಸಿ ವರದಿ ಕೊಡಬೇಕು. ಗೋಶಾಲೆಗಳನ್ನು ಪ್ರಾರಂಭ ಮಾಡಿ ಜಾನುವಾರುಗಳನ್ನು ಉಳಿಸಿ. ಇಲ್ಲದೇ ಹೋದರೆ ರೈತನ ಶಾಪ ನಿಮ್ಮೆಲ್ಲರಿಗೂ ತಟ್ಟುತ್ತದೆ" ಎಂದು ಎಚ್ಚರಿಕೆ ನೀಡಿದರು. *ನಿನ್ನೆ ನಡೆದ ಎತ್ತಿನ ಬಂಡಿ ಹೋರಾಟದ ಉಲ್ಲೇಖ:* "ನಿನ್ನೆ ನೂರಾರು ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದು ನಿಮ್ಮೆಲ್ಲರಿಗೂ ಗೊತ್ತು. ಮುಂಬರುವ ಬರ ಪಟ್ಟಿಯಲ್ಲಿ ಖಂಡಿತವಾಗಿ ಕುಷ್ಟಗಿ ಇರುತ್ತದೆ ಎಂಬ ಭಾವನೆ ವ್ಯಕ್ತಪಡಿಸುತ್ತೇನೆ" ಎಂದರು. *ಪಠ್ಯಪುಸ್ತಕಕ್ಕೆ ಸೇರಿಸಲು ಆಗ್ರಹ:* "ಈ ಉತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮುಂದಿನ ಪೀಳಿಗೆಗೆ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನವನ್ನು ಕಲಿಸಿಕೊಡಬೇಕು. ಅದನ್ನು ಮುಂದಿನ ಪಠ್ಯಪುಸ್ತಕಗಳಲ್ಲಿ ಸೇರಿಸುವ ಕೆಲಸ ಆಗಬೇಕು ಎಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ" ಎಂದು ಹೇಳಿದರು. *ತಹಶೀಲ್ದಾರ್ ಮಾತು:* ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ *ಅಶೋಕ ಶಿಗ್ಗಾವಿ* ಅವರು ಕಲ್ಯಾಣ ಕರ್ನಾಟಕ ವಿಮೋಚನೆಯ ಇತಿಹಾಸ ಹಾಗೂ 371(J) ಕಲಂನ ಮಹತ್ವದ ಬಗ್ಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ದೇಶ ಭಕ್ತಿ ಗೀತೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಓ ಅಮರೇಶ, ಸಿಡಿಪಿಓ ಯಲ್ಲಮ್ಮ ಹಂಡಿ, ಸಿಪಿಐ ವಿಶ್ವನಾಥ ಹಿರೇಗೌಡರ, ಪ್ರಭಾರಿ ಬಿಇಓ ಯಮನಪ್ಪ ಚೂರಿ, ದೈಹಿಕ ಶಿಕ್ಷಣ ಸಂಯೋಜಕ ನಾಗಪ್ಪ ಬಿಳಿಯಪ್ಪನವರ, ನಜೀರಸಾಬ ಮೂಲಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
    1
    ಕುಷ್ಟಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಹೋರಾಟಗಾರರ ತ್ಯಾಗ-ಬಲಿದಾನ ಪಠ್ಯಕ್ಕೆ ಸೇರಿಸಿ - ಶಾಸಕ ದೊಡ್ಡನಗೌಡ ಪಾಟೀಲ ಆಗ್ರಹ*

*ಬರದ ನಡುವೆಯೂ ಉತ್ಸವ: ಕೂಡಲೇ ಬರ ಘೋಷಿಸಿ, ಗೋಶಾಲೆ ತೆರೆಯಿರಿ, ಇಲ್ಲದಿದ್ದರೆ ರೈತನ ಶಾಪ ತಟ್ಟುತ್ತದೆ - ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಶಾಸಕ*

*ಕುಷ್ಟಗಿ, ಸೆ.17:* ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ 79ನೇ ವರ್ಷದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ *ದೊಡ್ಡನಗೌಡ ಪಾಟೀಲ* ಅವರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ  ಮಾತನಾಡಿ, ಕಲ್ಯಾಣ ಕರ್ನಾಟಕದ ವಿಮೋಚನೆಯ ಇತಿಹಾಸದಿಂದ ಹಿಡಿದು ಇಂದಿನ ಬರದ ಪರಿಸ್ಥಿತಿಯವರೆಗೆ ಎಲ್ಲಾ ವಿಷಯ ಪ್ರಸ್ತಾಪಿಸಿದರು.
*ವಿಮೋಚನೆಯ ಇತಿಹಾಸ ಸ್ಮರಣೆ:* "ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಸಿಕ್ಕರೂ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಿಗಲಿಲ್ಲ. ನಿಜಾಮನ ದಬ್ಬಾಳಿಕೆ, ರಜಾಕಾರರ ಹಾವಳಿಯ ದುಷ್ಪರಿಣಾಮ ಈ ಭಾಗದ ಮೇಲೆ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಆಪರೇಷನ್ ಪೋಲೋ ಕಾರ್ಯಾಚರಣೆಯಿಂದ 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ವಿಮೋಚನೆ ಸಿಕ್ಕಿತು ಸ್ವಾತಂತ್ರ್ಯವಾಯಿತು ಎಂದರು.
*ಬರದ ಬವಣೆ - ಸರ್ಕಾರಕ್ಕೆ ಎಚ್ಚರಿಕೆ:* "ಈ ಉತ್ಸವವನ್ನು ನಾವು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರೂ ಕೂಡ, ಮತ್ತೊಂದು ಕಡೆ ಕಲ್ಯಾಣ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ನಮ್ಮೆಲ್ಲರಿಗೂ ಕಾಡುತ್ತಿದೆ. ನಿನ್ನೆ, ಮೊನ್ನೆ, ಇವತ್ತು ಹೊರಗಡೆ ಕಾಲಿಡೋದಕ್ಕೂ ಸಾಧ್ಯವಾಗದಷ್ಟು ಬಿಸಿಲು. ಇವತ್ತು ಹೆಚ್ಚಾಗುತ್ತಿದೆ ರೈತನ ಹೊಲದಲ್ಲಿ ಬೆಳೆಯಿಲ್ಲ, ದನಕರುಗಳಿಗೆ ಹಾಕೋದಕ್ಕೆ ಮೇವಿಲ್ಲ, ಕೆಲವೊಂದು ಗ್ರಾಮಗಳಲ್ಲಿ ಕುಡಿಯೋದಕ್ಕೆ ನೀರಿನ ಸಮಸ್ಯೆ ಆಗ್ತಾ ಇದೆ. ರೈತನಿಗೆ ಬೆಳೆ ಇಲ್ಲ, ಬೆಲೆ ಇಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದರು.
*ಸ್ಯಾಟಲೈಟ್ ಸಮೀಕ್ಷೆಗೆ ಆಕ್ಷೇಪ:* "ಅಧಿಕಾರಿಗಳು ವೈಮಾನಿಕ ಸಮೀಕ್ಷೆಯಲ್ಲಿ ಸ್ಯಾಟಲೈಟ್ ನಲ್ಲಿ ಹಸಿರು ಕಾಣುತ್ತದೆ ಎಂದು ಹೇಳುತ್ತಾರೆ. ಹಸಿರು ಕಂಡ ಮಾತ್ರಕ್ಕೆ ಬೆಳೆ ಇದೆ ಎಂದಲ್ಲ. ಕೂಡಲೇ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಿಸಿ ವರದಿ ಕೊಡಬೇಕು. ಗೋಶಾಲೆಗಳನ್ನು ಪ್ರಾರಂಭ ಮಾಡಿ ಜಾನುವಾರುಗಳನ್ನು ಉಳಿಸಿ. ಇಲ್ಲದೇ ಹೋದರೆ ರೈತನ ಶಾಪ ನಿಮ್ಮೆಲ್ಲರಿಗೂ ತಟ್ಟುತ್ತದೆ" ಎಂದು ಎಚ್ಚರಿಕೆ ನೀಡಿದರು.
*ನಿನ್ನೆ ನಡೆದ ಎತ್ತಿನ ಬಂಡಿ ಹೋರಾಟದ ಉಲ್ಲೇಖ:* "ನಿನ್ನೆ ನೂರಾರು ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದು ನಿಮ್ಮೆಲ್ಲರಿಗೂ ಗೊತ್ತು. ಮುಂಬರುವ ಬರ ಪಟ್ಟಿಯಲ್ಲಿ ಖಂಡಿತವಾಗಿ ಕುಷ್ಟಗಿ ಇರುತ್ತದೆ ಎಂಬ ಭಾವನೆ ವ್ಯಕ್ತಪಡಿಸುತ್ತೇನೆ" ಎಂದರು.
*ಪಠ್ಯಪುಸ್ತಕಕ್ಕೆ ಸೇರಿಸಲು ಆಗ್ರಹ:* "ಈ ಉತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮುಂದಿನ ಪೀಳಿಗೆಗೆ ನಮ್ಮ ಹಿರಿಯರು ಮಾಡಿರುವ ತ್ಯಾಗ, ಬಲಿದಾನವನ್ನು ಕಲಿಸಿಕೊಡಬೇಕು. ಅದನ್ನು ಮುಂದಿನ ಪಠ್ಯಪುಸ್ತಕಗಳಲ್ಲಿ ಸೇರಿಸುವ ಕೆಲಸ ಆಗಬೇಕು ಎಂದು ಈ ವೇದಿಕೆ ಮೂಲಕ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ" ಎಂದು ಹೇಳಿದರು.
*ತಹಶೀಲ್ದಾರ್ ಮಾತು:* ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ *ಅಶೋಕ ಶಿಗ್ಗಾವಿ* ಅವರು ಕಲ್ಯಾಣ ಕರ್ನಾಟಕ ವಿಮೋಚನೆಯ ಇತಿಹಾಸ ಹಾಗೂ 371(J) ಕಲಂನ ಮಹತ್ವದ ಬಗ್ಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ದೇಶ ಭಕ್ತಿ ಗೀತೆಗಳು ಹಾಗೂ ಸಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಇಓ ಅಮರೇಶ, ಸಿಡಿಪಿಓ ಯಲ್ಲಮ್ಮ ಹಂಡಿ, ಸಿಪಿಐ ವಿಶ್ವನಾಥ ಹಿರೇಗೌಡರ, ಪ್ರಭಾರಿ ಬಿಇಓ ಯಮನಪ್ಪ ಚೂರಿ, ದೈಹಿಕ ಶಿಕ್ಷಣ ಸಂಯೋಜಕ ನಾಗಪ್ಪ ಬಿಳಿಯಪ್ಪನವರ, ನಜೀರಸಾಬ ಮೂಲಿಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    6 hrs ago
  • ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.
    2
    ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ.
ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 
1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. 
ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. 
ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    20 hrs ago
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ಕೊಪ್ಪಳ: ನಮ್ಮ ಒತ್ತಡದಿಂದಲೇ ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 'ಕೊಪ್ಪಳ: ಕೊಪ್ಪಳ ತಾಲೂಕ ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ. ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. "ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
    2
    ಕೊಪ್ಪಳ: ನಮ್ಮ ಒತ್ತಡದಿಂದಲೇ
ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 
'ಕೊಪ್ಪಳ: ಕೊಪ್ಪಳ ತಾಲೂಕ
ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ.
ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು 
ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು
ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
"ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    2 hrs ago
  • ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು. 14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ. ತಾಳಿಕೋಟಿ ವರದಿ ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು. 14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ. ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಟ್ಟಿದೆ. ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಪಕ್ಕದಲ್ಲಿ ನಡೆಯುತ್ತಿರುವ ಧರಣಿ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಅವರಿಗೆ ಬಿಸಿಲಿನ ತಾಪದಿಂದ ತಲೆ ಸುತ್ತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ರೈತ ಮುಖಂಡರು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಯ ಬಳಿಕ ಅರವಿಂದ ಕುಲಕರ್ಣಿ ಅವರು ಚೇತರಿಸಿಕೊಂಡಿದ್ದು, ಧರಣಿ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯ ಬರಗಾಲ ಘೋಷಣೆಯಿಂದ ಹೊರಗುಳಿದಿರುವ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಎಂದು ರೈತ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಹೋರಾಟ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ್ ಕುಲಕರ್ಣಿ, ಉಮೇಶ್ ವಾಲಿಕಾರ್, ಬಾಲಪ್ಪ ಗೌಡ ಲಿಂಗದಳ್ಳಿ ವಿಟ್ಟಲ್ ಬಿರಾದರ್, ಮಲ್ಲನಗೌಡ ಹಗರಟಿಗಿ, ಗುರುನಾಥ್ ರೆಡ್ಡಿ, ಪವಿತ್ರ ಬಡಿಗೇರ್, ಸಾವಿತ್ರಿ ಪಂದಗನೂರ್, ಬಸ್ಸು ಮಾಲಿ ಪಾಟೀಲ್, ಗುರುಲಿಂಗಪ್ಪ ಪಡಸಲಗಿ, ಮುತ್ತು ಗೌಡ ಪರ್ಸನಳ್ಳಿ, ರಾಜು ಗೌಡ ಆನಂದ್ ರೆಡ್ಡಿ, ಶಿವಶರಣಪ್ಪ ಸಾಹುಕಾರ್ ಇನ್ನು ಅನೇಕ ರೈತ ಮುಖಂಡರು ಭಾಗಿಯಾಗಿದ್ದರು
    1
    ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು.

14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ.
ತಾಳಿಕೋಟಿ ವರದಿ 
ರೈತ ಮುಖಂಡ ಅರವಿಂದ ಕುಲಕರ್ಣಿ ಆರೋಗ್ಯದಲ್ಲಿ ಏರುಪೇರು.
14ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ ಸತ್ಯಾಗ್ರಹ.
ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 14ನೇ ದಿನಕ್ಕೆ ಕಾಲಿಟ್ಟಿದೆ.
ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಪಕ್ಕದಲ್ಲಿ ನಡೆಯುತ್ತಿರುವ ಧರಣಿ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ ಅವರಿಗೆ ಬಿಸಿಲಿನ ತಾಪದಿಂದ ತಲೆ ಸುತ್ತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ನಡೆದಿದೆ.
ತಕ್ಷಣ ಸ್ಥಳದಲ್ಲಿದ್ದ ರೈತ ಮುಖಂಡರು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ.
ಚಿಕಿತ್ಸೆಯ ಬಳಿಕ ಅರವಿಂದ ಕುಲಕರ್ಣಿ ಅವರು ಚೇತರಿಸಿಕೊಂಡಿದ್ದು, ಧರಣಿ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.
ಇದೇ ವೇಳೆ, ವಿಜಯಪುರ ಜಿಲ್ಲೆಯ ಬರಗಾಲ ಘೋಷಣೆಯಿಂದ ಹೊರಗುಳಿದಿರುವ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ ಎಂದು ರೈತ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಈ ಹೋರಾಟ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಈ ಸಂದರ್ಭದಲ್ಲಿ ರೈತ ಮುಖಂಡ ಅರವಿಂದ್ ಕುಲಕರ್ಣಿ, ಉಮೇಶ್ ವಾಲಿಕಾರ್, ಬಾಲಪ್ಪ ಗೌಡ ಲಿಂಗದಳ್ಳಿ ವಿಟ್ಟಲ್ ಬಿರಾದರ್, ಮಲ್ಲನಗೌಡ ಹಗರಟಿಗಿ, ಗುರುನಾಥ್ ರೆಡ್ಡಿ, ಪವಿತ್ರ ಬಡಿಗೇರ್, ಸಾವಿತ್ರಿ ಪಂದಗನೂರ್, ಬಸ್ಸು ಮಾಲಿ ಪಾಟೀಲ್, ಗುರುಲಿಂಗಪ್ಪ ಪಡಸಲಗಿ, ಮುತ್ತು ಗೌಡ ಪರ್ಸನಳ್ಳಿ, ರಾಜು ಗೌಡ ಆನಂದ್ ರೆಡ್ಡಿ, ಶಿವಶರಣಪ್ಪ ಸಾಹುಕಾರ್ ಇನ್ನು ಅನೇಕ ರೈತ ಮುಖಂಡರು ಭಾಗಿಯಾಗಿದ್ದರು
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    4 hrs ago
  • ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ. ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ. ಸಿಂಧನೂರು,ಸೆ. 11- ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸೆಪ್ಟೆಂಬರ್ 5ರಂದು ಸಾರ್ವಜನಿಕವಾಗಿ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಕ್ಷಣವೇ ಯಾವುದೇ ಷರತ್ತಿಲ್ಲದೆ ಭೇಷರತ್ ಕ್ಷಮೆಯಾಚಿಸಬೇಕು ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಆಗ್ರಹಿಸಿ ಪ್ರತಿಭಟನೆ ಮೂಲಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಇವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಪೌರ ಕಾರ್ಮಿಕರು ನಗರದ ಕಸವನ್ನು ಮಾತ್ರ ತೆರವುಗೊಳಿಸುವವರಲ್ಲ. ನಗರವನ್ನು ಸ್ವಚ್ಛವಾಗಿ, ಆರೋಗ್ಯಕರವಾಗಿ ಮತ್ತು ನಾಗರಿಕ ಜೀವನಕ್ಕೆ ಯೋಗ್ಯವಾಗಿ ಇರಿಸುವ ಮುಂಚೂಣಿ ಶ್ರಮಿಕರು.ಆದರೆ ಸರ್ಕಾರ ಅವರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು, ನಗರದ ಸಮಸ್ಯೆಗಳಿಗೆ ಕಾರ್ಮಿಕರನ್ನೇ ಹೊಣೆಗಾರರನ್ನಾಗಿ ಮಾಡುತ್ತಿರುವುದು ಸರಿಯಲ್ಲ,ಕಾರ್ಮಿಕರ ಕೊರತೆ, ಖಾಲಿ ಹುದ್ದೆಗಳು, ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿ, ಕೆಲಸದ ಒತ್ತಡ, ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸುರಕ್ಷತಾ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳನ್ನು ಸರ್ಕಾರ ಮೊದಲು ಪರಿಹರಿಸಬೇಕು. ಕಾರ್ಮಿಕರ ಮೇಲೆ ಆರೋಪ ಹೊರಿಸುವ ಮೂಲಕ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು. ಈ ಸಂಧರ್ಭದಲ್ಲಿ ಆರ್ ಎಚ್ ಕಲಮಂಗಿ, ಮೌನೇಶ್ ಕವಿತಾಳ, ವಿರೇಶ ಕೇಸರಿ, ರಮೇಶ್, ಅಲ್ಲಾಸಾಬ, ಸುಗರಡ್ಡಿ, ಅಯ್ಯಣ್ಣ,ಸಿದ್ದು, ಯಂಕೋಬ ಹನುಮಂತ ವಿರೇಶ, ದಾನಪ್ಪ, ಮಹಾದೇವಮ್ಮ, ಲಕ್ಷ್ಮಿ ಮಕಾಳಮ್ಮ, ವಿಜಯಲಕ್ಷ್ಮಿ ಇತರರು ಇದ್ದರು.
    1
    ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ.
ಪೌರ ಕಾರ್ಮಿಕರ ಅವಮಾನ ಖಂಡಿಸಿ ಸಚಿವ ಕೃಷ್ಣ ಬೈರೇಗೌಡ ಕ್ಷಮೆ ಕೇಳಬೇಕು: ಎಐಸಿಸಿಟಿಯು ಪ್ರತಿಭಟನೆ.
ಸಿಂಧನೂರು,ಸೆ. 11-
ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸೆಪ್ಟೆಂಬರ್ 5ರಂದು ಸಾರ್ವಜನಿಕವಾಗಿ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಕ್ಷಣವೇ ಯಾವುದೇ ಷರತ್ತಿಲ್ಲದೆ ಭೇಷರತ್ ಕ್ಷಮೆಯಾಚಿಸಬೇಕು ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಆಗ್ರಹಿಸಿ ಪ್ರತಿಭಟನೆ ಮೂಲಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್  ಇವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಸಿಸಿಟಿಯು ರಾಜ್ಯ ಸಹ ಕಾರ್ಯದರ್ಶಿ ನಾಗರಾಜ ಪೂಜಾರ್ ಮಾತನಾಡಿ, ಪೌರ ಕಾರ್ಮಿಕರು ನಗರದ ಕಸವನ್ನು ಮಾತ್ರ ತೆರವುಗೊಳಿಸುವವರಲ್ಲ. ನಗರವನ್ನು ಸ್ವಚ್ಛವಾಗಿ, ಆರೋಗ್ಯಕರವಾಗಿ ಮತ್ತು ನಾಗರಿಕ ಜೀವನಕ್ಕೆ ಯೋಗ್ಯವಾಗಿ ಇರಿಸುವ ಮುಂಚೂಣಿ ಶ್ರಮಿಕರು.ಆದರೆ ಸರ್ಕಾರ ಅವರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ಬದಲು, ನಗರದ ಸಮಸ್ಯೆಗಳಿಗೆ ಕಾರ್ಮಿಕರನ್ನೇ ಹೊಣೆಗಾರರನ್ನಾಗಿ ಮಾಡುತ್ತಿರುವುದು ಸರಿಯಲ್ಲ,ಕಾರ್ಮಿಕರ ಕೊರತೆ, ಖಾಲಿ ಹುದ್ದೆಗಳು, ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿ, ಕೆಲಸದ ಒತ್ತಡ, ವೇತನ ಪಾವತಿಯಲ್ಲಿ ವಿಳಂಬ ಹಾಗೂ ಸುರಕ್ಷತಾ ಸೌಲಭ್ಯಗಳ ಕೊರತೆಯಂತಹ ಸಮಸ್ಯೆಗಳನ್ನು ಸರ್ಕಾರ ಮೊದಲು ಪರಿಹರಿಸಬೇಕು. ಕಾರ್ಮಿಕರ ಮೇಲೆ ಆರೋಪ ಹೊರಿಸುವ ಮೂಲಕ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಆರ್ ಎಚ್ ಕಲಮಂಗಿ, ಮೌನೇಶ್ ಕವಿತಾಳ, ವಿರೇಶ ಕೇಸರಿ, ರಮೇಶ್, ಅಲ್ಲಾಸಾಬ, ಸುಗರಡ್ಡಿ, ಅಯ್ಯಣ್ಣ,ಸಿದ್ದು, ಯಂಕೋಬ  ಹನುಮಂತ ವಿರೇಶ, ದಾನಪ್ಪ, ಮಹಾದೇವಮ್ಮ, ಲಕ್ಷ್ಮಿ ಮಕಾಳಮ್ಮ, ವಿಜಯಲಕ್ಷ್ಮಿ ಇತರರು ಇದ್ದರು.
    user_ಶಿವರಾಜ.ಕೆ
    ಶಿವರಾಜ.ಕೆ
    ಸಿಂಧನೂರು, ರಾಯಚೂರು, ಕರ್ನಾಟಕ•
    19 min ago
  • ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.
    3
    ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ  ವಿಘ್ನನಿವಾರಕನ ವಿಸಜ೯ನೆ

ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ  ಗಣೇಶನನ್ನ
ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    20 hrs ago
  • *ಕುಷ್ಟಗಿಯಲ್ಲಿ ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರ ಬೃಹತ್ ಪ್ರತಿಭಟನೆ: ಬರ ಘೋಷಣೆಗೆ ಆಗ್ರಹ* *ಇನ್ನೂ ಎರಡು ದಿನದಲ್ಲಿ ಘೋಷಿಸದಿದ್ದರೆ ಉಗ್ರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ* *ಕುಷ್ಟಗಿ, ಸೆ.16:* ರಾಜ್ಯ ಸರ್ಕಾರ ಕುಷ್ಟಗಿ ತಾಲೂಕನ್ನು ಮೊದಲನೇ ಮತ್ತು ಎರಡನೇ ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಷ್ಟಗಿಯಲ್ಲಿ ಸಾವಿರಾರು ರೈತರು ನೂರಾರು ಎತ್ತಿನ ಬಂಡಿಗಳ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಾರ್ಟಿ, ಕುಷ್ಟಗಿ ಮಂಡಲ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ಮಲ್ಲಯ್ಯ ವೃತ್ತದಿಂದ ಹಿಡಿದು ಬಸ್ ನಿಲ್ದಾಣ, ಮಾರುತಿ ವೃತ್ತ, ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಬಸವೇಶ್ವರ ಸರ್ಕಲ್ ವರೆಗೆ ಎತ್ತಿನ ಬಂಡಿಗಳ ಬೃಹತ್ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ, ಬಹಿರಂಗ ವೇದಿಕೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. *2-3 ತಾಸು ಪಟ್ಟಣ ಸ್ತಬ್ಧ:* ಈ ಬೃಹತ್ ಎತ್ತಿನ ಬಂಡಿ ಪ್ರತಿಭಟನೆಯಿಂದ ಸುಮಾರು ಎರಡು ಮೂರು ತಾಸುಗಳ ಕಾಲ ಕುಷ್ಟಗಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ಇದರಿಂದ ವಾಹನ ಸವಾರರು ಮತ್ತು ನಾಗರಿಕರು ತೀವ್ರ ಪರದಾಡಿದರು. ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ನಮ್ಮ ತಾಲೂಕಿಗೆ ಶೇ.1 ರಷ್ಟು ಕೂಡ ನೀರಾವರಿ ಇಲ್ಲ. ನಾವು ಕೇವಲ ಒಣ ಬೇಸಾಯ, ಮಳೆ ಆಧಾರಿತ ಬೆಳೆಯನ್ನೇ ನಂಬಿಕೊಂಡಿದ್ದೇವೆ. ರೈತರು ಸಾಲ-ಸೂಲ ಮಾಡಿ ಭೂಮಿಗೆ ಬೀಜ, ಗೊಬ್ಬರ ಹಾಕಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಎರಡೆರಡು ಬಾರಿ ಬಿತ್ತನೆ ಮಾಡಿದ ಎಲ್ಲಾ ಬೆಳೆ ಸಂಪೂರ್ಣ ಹಾಳಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲರೂ ಬಂದು ನೋಡಿ ಹೋದರೂ ಕುಷ್ಟಗಿಯನ್ನು ಪಟ್ಟಿಗೆ ಸೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡದೆ ಕೂಡಲೇ ಕುಷ್ಟಗಿಯನ್ನು ಬರ ಪೀಡಿತ ಎಂದು ಘೋಷಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ:* ಇನ್ನು ಎರಡು ದಿನದಲ್ಲಿ ಕುಷ್ಟಗಿ ಸೇರಿದಂತೆ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸುರಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ ನೀಡಿದರು. "ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ರಾಜ್ಯದಲ್ಲಿ ಕೇವಲ 101 ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿ, ಕಲ್ಯಾಣ ಕರ್ನಾಟಕದ ತಾಲೂಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಕ್ಷೇತ್ರ ಮಾತ್ರವಲ್ಲ ಕಾಂಗ್ರೆಸ್ ಕ್ಷೇತ್ರದ ತಾಲೂಕುಗಳನ್ನೂ ಬರ ಪಟ್ಟಿಯಿಂದ ಕೈಬಿಟ್ಟಿದೆ. ಮುಂಬರುವ ಎರಡು ದಿನದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸಬೇಕು" ಎಂದು ಆಗ್ರಹಿಸಿದರು. ಕೊನೆಯಲ್ಲಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. *ಪ್ರತಿಭಟನೆಯಲ್ಲಿ ಇದ್ದವರು:* ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರ, ಬಿಜೆಪಿ ಮುಖಂಡರಾದ ಬಸವರಾಜ ಕ್ಯಾವಟರ್, ಬಸವರಾಜ ಹಳ್ಳೂರು, ದೇವೇಂದ್ರಪ್ಪ ಬಳೂಟಗಿ, ಪಕೀರಪ್ಪ ಚಳಗೇರಿ ವಕೀಲರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬದಾಮಿ, ರವಿಕುಮಾರ ಹಿರೇಮಠ, ಮಲ್ಲಣ್ಣ ಪಲ್ಲೇದ್, ಮಾಜಿ ಪುರಸಭೆ ಅಧ್ಯಕ್ಷ ಕಲ್ಲೇಶ ತಾಳದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಮಹೇಶ ಕ್ಯಾವಟರ್, ವಿನಯಕುಮಾರ ಮೇಲಿನಮನಿ, ಭರಮಗೌಡ ಬ್ಯಾಲಿಹಾಳ, ಈರಣ್ಣ ಗಜೇಂದ್ರಗಡ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ಎತ್ತಿನ ಬಂಡಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    1
    *ಕುಷ್ಟಗಿಯಲ್ಲಿ ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರ ಬೃಹತ್ ಪ್ರತಿಭಟನೆ: ಬರ ಘೋಷಣೆಗೆ ಆಗ್ರಹ*
*ಇನ್ನೂ ಎರಡು ದಿನದಲ್ಲಿ ಘೋಷಿಸದಿದ್ದರೆ ಉಗ್ರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ*
*ಕುಷ್ಟಗಿ, ಸೆ.16:* ರಾಜ್ಯ ಸರ್ಕಾರ ಕುಷ್ಟಗಿ ತಾಲೂಕನ್ನು ಮೊದಲನೇ ಮತ್ತು ಎರಡನೇ ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಷ್ಟಗಿಯಲ್ಲಿ ಸಾವಿರಾರು ರೈತರು ನೂರಾರು ಎತ್ತಿನ ಬಂಡಿಗಳ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.
ಭಾರತೀಯ ಜನತಾ ಪಾರ್ಟಿ, ಕುಷ್ಟಗಿ ಮಂಡಲ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ಮಲ್ಲಯ್ಯ ವೃತ್ತದಿಂದ ಹಿಡಿದು ಬಸ್ ನಿಲ್ದಾಣ, ಮಾರುತಿ ವೃತ್ತ, ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಬಸವೇಶ್ವರ ಸರ್ಕಲ್ ವರೆಗೆ ಎತ್ತಿನ ಬಂಡಿಗಳ ಬೃಹತ್ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ, ಬಹಿರಂಗ ವೇದಿಕೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
*2-3 ತಾಸು ಪಟ್ಟಣ ಸ್ತಬ್ಧ:* ಈ ಬೃಹತ್ ಎತ್ತಿನ ಬಂಡಿ ಪ್ರತಿಭಟನೆಯಿಂದ ಸುಮಾರು ಎರಡು ಮೂರು ತಾಸುಗಳ ಕಾಲ ಕುಷ್ಟಗಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ಇದರಿಂದ ವಾಹನ ಸವಾರರು ಮತ್ತು ನಾಗರಿಕರು ತೀವ್ರ ಪರದಾಡಿದರು.
ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ನಮ್ಮ ತಾಲೂಕಿಗೆ ಶೇ.1 ರಷ್ಟು ಕೂಡ ನೀರಾವರಿ ಇಲ್ಲ. ನಾವು ಕೇವಲ ಒಣ ಬೇಸಾಯ, ಮಳೆ ಆಧಾರಿತ ಬೆಳೆಯನ್ನೇ ನಂಬಿಕೊಂಡಿದ್ದೇವೆ. ರೈತರು ಸಾಲ-ಸೂಲ ಮಾಡಿ ಭೂಮಿಗೆ ಬೀಜ, ಗೊಬ್ಬರ ಹಾಕಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಎರಡೆರಡು ಬಾರಿ ಬಿತ್ತನೆ ಮಾಡಿದ ಎಲ್ಲಾ ಬೆಳೆ ಸಂಪೂರ್ಣ ಹಾಳಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲರೂ ಬಂದು ನೋಡಿ ಹೋದರೂ ಕುಷ್ಟಗಿಯನ್ನು ಪಟ್ಟಿಗೆ ಸೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡದೆ ಕೂಡಲೇ ಕುಷ್ಟಗಿಯನ್ನು ಬರ ಪೀಡಿತ ಎಂದು ಘೋಷಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು.
*ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ:* ಇನ್ನು ಎರಡು ದಿನದಲ್ಲಿ ಕುಷ್ಟಗಿ ಸೇರಿದಂತೆ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸುರಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ ನೀಡಿದರು.
"ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ರಾಜ್ಯದಲ್ಲಿ ಕೇವಲ 101 ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿ, ಕಲ್ಯಾಣ ಕರ್ನಾಟಕದ ತಾಲೂಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಕ್ಷೇತ್ರ ಮಾತ್ರವಲ್ಲ ಕಾಂಗ್ರೆಸ್ ಕ್ಷೇತ್ರದ ತಾಲೂಕುಗಳನ್ನೂ ಬರ ಪಟ್ಟಿಯಿಂದ ಕೈಬಿಟ್ಟಿದೆ. ಮುಂಬರುವ ಎರಡು ದಿನದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸಬೇಕು" ಎಂದು ಆಗ್ರಹಿಸಿದರು.
ಕೊನೆಯಲ್ಲಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
*ಪ್ರತಿಭಟನೆಯಲ್ಲಿ ಇದ್ದವರು:* ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರ, ಬಿಜೆಪಿ ಮುಖಂಡರಾದ ಬಸವರಾಜ ಕ್ಯಾವಟರ್, ಬಸವರಾಜ ಹಳ್ಳೂರು, ದೇವೇಂದ್ರಪ್ಪ ಬಳೂಟಗಿ, ಪಕೀರಪ್ಪ ಚಳಗೇರಿ ವಕೀಲರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬದಾಮಿ, ರವಿಕುಮಾರ ಹಿರೇಮಠ, ಮಲ್ಲಣ್ಣ ಪಲ್ಲೇದ್, ಮಾಜಿ ಪುರಸಭೆ ಅಧ್ಯಕ್ಷ ಕಲ್ಲೇಶ ತಾಳದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಮಹೇಶ ಕ್ಯಾವಟರ್, ವಿನಯಕುಮಾರ ಮೇಲಿನಮನಿ, ಭರಮಗೌಡ ಬ್ಯಾಲಿಹಾಳ, ಈರಣ್ಣ ಗಜೇಂದ್ರಗಡ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ಎತ್ತಿನ ಬಂಡಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    11 hrs ago
  • ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ ನಿಯಮಿತ ಇದರ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ತಾಳಿಕೋಟಿ ವರದಿ ಲಿಂಗದಹಳ್ಳಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಆರಂಭಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶ್ರೀಮತಿ ಸೌಮ್ಯ ಆರ್.ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ ಸಂಘದ ಒಂದು ವರ್ಷದ ಚಟುವಟಿಕೆಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಹಾಜರಿದ್ದ ಶೇರುದಾರರು ಸಂಘದ ಅಭಿವೃದ್ಧಿಗಾಗಿ ಕೆಲವು ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಅಧ್ಯಕ್ಷತೆ ವಹಿಸಿದ ಬಸನಗೌಡ ಬಸರಕೋಡ ಅವರು ಮಾತನಾಡಿ ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು. ಶಿಕ್ಷಕ ಅಪ್ಪಸಾಹೇಬಗೌಡ ಮೂಲಿಮನಿ ಕಾರ್ಯಕ್ರಮವನ್ನು ಸುಂದರವಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಇವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ , ಗಂಗಮ್ಮ ನಾಡಗೌಡ ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ,ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
    1
    ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ ನಿಯಮಿತ ಇದರ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು.
ತಾಳಿಕೋಟಿ ವರದಿ 
ಲಿಂಗದಹಳ್ಳಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ.
ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಆರಂಭಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶ್ರೀಮತಿ ಸೌಮ್ಯ ಆರ್.ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ ಸಂಘದ ಒಂದು ವರ್ಷದ ಚಟುವಟಿಕೆಗಳನ್ನು ಸಭೆಯ ಮುಂದಿಟ್ಟರು.
ಸಭೆಯಲ್ಲಿ ಹಾಜರಿದ್ದ ಶೇರುದಾರರು ಸಂಘದ ಅಭಿವೃದ್ಧಿಗಾಗಿ ಕೆಲವು ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ ಬಸನಗೌಡ ಬಸರಕೋಡ ಅವರು ಮಾತನಾಡಿ ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು. 
ಶಿಕ್ಷಕ ಅಪ್ಪಸಾಹೇಬಗೌಡ  ಮೂಲಿಮನಿ ಕಾರ್ಯಕ್ರಮವನ್ನು ಸುಂದರವಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಇವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ , ಗಂಗಮ್ಮ ನಾಡಗೌಡ ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ,ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.