ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವಲ್ಲಿ ಅಡುಗೆ ಸಿಬ್ಬಂದಿಯ ಪಾತ್ರ ಮಹತ್ವದ್ದು:ಶಾಸಕ ಟಿ. ರಘುಮೂರ್ತಿ.. ಚಳ್ಳಕೆರೆ:ಶಾಲಾ ಮಕ್ಕಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಒದಗಿಸುವಲ್ಲಿ ಅಡುಗೆ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ಸ್ವಾಮಿ ವಿವೇಕಾನಂದ ಶಾಲಾ ಆವರಣದ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಚಳ್ಳಕೆರೆ ಇವರ ವತಿಯಿಂದ ಆಯೋಜಿಸಲಾದ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮಧ್ಯಾಹ್ನದ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಗೆ ತರಬೇತಿ ಹಾಗೂ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಬೆಳವಣಿಗೆಯಲ್ಲಿ ಮಧ್ಯಾಹ್ನದ ಉಪಾಹಾರ ಯೋಜನೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಅಡುಗೆ ಮಾಡುವ ವೇಳೆ ಸ್ವಚ್ಛತೆ, ಗುಣಮಟ್ಟ ಮತ್ತು ಪೌಷ್ಟಿಕಾಂಶಗಳ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು. ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಆಹಾರವು ಆರೋಗ್ಯಕರವಾಗಿದ್ದು, ಉತ್ತಮ ಗುಣಮಟ್ಟದಲ್ಲಿರಬೇಕು. ಈ ನಿಟ್ಟಿನಲ್ಲಿ ಅಡುಗೆ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಸರ್ಕಾರ ಬಿಸಿ ಊಟ ತಯಾರಿಕರಿಗೆ ನೀಡುತ್ತಿರುವ ವೇತನ ಕಡಿಮೆ ಇದೆ ಕೇಂದ್ರ ಸರ್ಕಾರ ಬಿಸಿಊಟ ತಯಾರಿಕರಿಗೆ ಕೇವಲ 600 ರೂಗಳು ನೀಡುತ್ತಿದ್ದು ರಾಜ್ಯ ಸರ್ಕಾರ 4000 ಸೇರಿಸಿ ನೀಡುತ್ತಿದೆ ರಾಜ್ಯ ಸರ್ಕಾರದ ಪಾಲು ವೇತನದಲ್ಲಿ ಹೆಚ್ಚು ನೀಡುತ್ತಿದೆ ವೇತನ ಕಡಿಮೆ ಇರುವುದರಿಂದಲೇ ನಿವೃತ್ತ ನೌಕರರಿಗೆ ರಾಜ್ಯದಲ್ಲಿ 16.30 ಲಕ್ಷ ಹಿಡಿಗಂಟನ್ನು ನೀಡಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಾಲೂಕಿಗೆ ವರ್ಷಕ್ಕೆ ರೂ.240 ಕೋಟಿ ಮಂಜೂರಾಗುತ್ತಿದ್ದು ಇದರಿಂದ ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ.ಮಹಿಳಾ ದಿನಾಚರಣೆಯು ವಿಶೇಷವಾದ ದಿನವಾಗಿದ್ದು ಪುರುಷ ಪ್ರಧಾನವಾದ ಸಮಾಜದಲ್ಲಿ ಮಹಿಳೆಯರು ತಾವು ಯಾವುದಕ್ಕೂ ಕಡಿಮೆ ಇಲ್ಲ ಎಂಬಂತೆ ಸಾಧಿಸಿ ತೋರಿಸಿದ್ದಾರೆ. ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಅಡುಗೆ ತಯಾರಿಕರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಸೀರೆ ಒದಗಿಸುವ ಭರವಸೆ ನೀಡಿದರು. ಎಐಟಿಯುಸಿ ಸಂಘಟನೆಯ ಅಧ್ಯಕ್ಷ ಶಿವರುದ್ರಪ್ಪ ಮಾತನಾಡಿ ಅಡುಗೆ ಸಹಾಯಕರು ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಸರ್ಕಾರದಿಂದ ಯಾವುದೇ ವೈದ್ಯಕೀಯ ಸೌಲಭ್ಯ ಪಿಂಚಣಿ ಸೌಲಭ್ಯ ಸೇರಿದಂತೆ ಸರ್ಕಾರಿ ನೌಕರರಿಗೆ ದೊರೆಯುವ ಯಾವುದೇ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಅವರ ಜೀವನ ಮಟ್ಟ ಇಂದಿಗೂ ಸುಧಾರಣೆ ಕಾಣುವಲ್ಲಿ ಹಿಂದೆ ಬಿದ್ದಿದೆ ಅವರಿಗೆ ನೀಡುತ್ತಿರುವ ಕಡಿಮೆ ವೇತನದಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ 2024ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಅಂಗನವಾಡಿ ನೌಕರರಿಗೆ 15000 ಅಡುಗೆ ಸಹಾಯಕರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ 10,000 ವೇತನ ಒದಗಿಸುವುದಾಗಿ ಭರವಸೆ ನೀಡಿದ್ದರು ಆದರೆ ಅದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಇಂದಿಗೂ ಜಾರಿಯಾಗಿಲ್ಲ ಶಾಸಕರು ಇದರ ಬಗ್ಗೆ ಸದನದಲ್ಲಿ ಧ್ವನಿ ಎತ್ತಬೇಕು ಹಾಗೂ ಅಡುಗೆ ಸಹಾಯಕರಿಗೆ ಶಾಸಕರು ತಮ್ಮ ಸ್ವಂತ ಖರ್ಚಿನಲ್ಲಿ ಸೀರೆ ಒದಗಿಸುವ ಭರವಸೆ ನೀಡಿದ್ದರು ಇದನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು. ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿ 20೦3ರ ಅವಧಿಯಲ್ಲಿನ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿದ್ದ ಎಸ್ಎಮ್ ಕೃಷ್ಣ ಹಾಗೂ ಅಂದಿನ ಶಿಕ್ಷಣ ಸಚಿವ ವಿಶ್ವನಾಥ್ ರವರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಊಟ ಯೋಜನೆಯನ್ನು ಜಾರಿಗೊಳಿಸಿದ್ದರಿಂದ ಶಿಕ್ಷಣ ವ್ಯವಸ್ಥೆ ಸುಧಾರಣೆ ಕಾಣಲು ಕಾರಣವಾಯಿತು ಕೇಂದ್ರದ ಮನ್ಮೋಹನ್ ಸಿಂಗ್ ಸರ್ಕಾರದ ಆಹಾರ ಭದ್ರತೆ ಒದಗಿಸಿತ್ತು ಬಿಸಿಊಟ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಿದ್ದರಿಂದ ಸರ್ಕಾರಿ ಶಾಲೆಗಳ ಉಳಿವಿಗೆ ಕಾರಣವಾಗಿದೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಬಿಸಿಊಟ ನೌಕರರ ಶ್ರಮದ ಫಲವಾಗಿದೆ ಇಂದಿನ ಸಿದ್ದರಾಮಯ್ಯನವರ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಅನುಕೂಲವಾಗಿದೆ ಇದನ್ನು ಸಹಿಸಲಾಗಿದೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ ಸರ್ಕಾರ ಬಿಸಿಯೂಟ ಯೋಜನೆ ಅಡಿಯಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಲು ಮೊಟ್ಟೆ ಬಾಳೆಹಣ್ಣು ರಾಕಿ ಮಾಲ್ಟ್ ಬಿಸಿಊಟ ಸೇರಿದಂತೆ ಉಚಿತ ಪಠ್ಯಪುಸ್ತಕ ಶೂ ನೀಡುತ್ತಿದೆ ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಸಿವು ನೀಗುತ್ತಿರುವುದಲ್ಲದೆ ಹಾಗೂ ವಿದ್ಯೆಯ ಕನಸು ಈಡೇರಿವಂತಾಗಿದ್ದು ಬಿಸಿ ಊಟ ಯೋಜನೆ ಶಾಲೆಗಳಲ್ಲಿ ನಿತ್ಯ ದಾಸೋಹದಂತೆ ನಡೆಯುತ್ತಿದೆ ಇದರಲ್ಲಿ ಅಡುಗೆ ಸಹಾಯಕರ ಪಾತ್ರ ಪ್ರಮುಖವಾಗಿದ್ದು ಕಾರ್ಯಕ್ರಮದ ಯಶಸ್ವಿಗೆ ಶಾಲೆಯ ಶಿಕ್ಷಕರು ಎಸ್ ಡಿ ಎಂ ಸಿ ಸದಸ್ಯರ ಸಹಕಾರ ಉತ್ತಮವಾಗಿದೆ ಎಂದರು. ಈ ವೇಳೆ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೆ ಸ್ವಚ್ಛತೆ, ಪೌಷ್ಟಿಕ ಆಹಾರದ ತಯಾರಿ ವಿಧಾನ ಮತ್ತು ಗ್ಯಾಸ್ ಸುರಕ್ಷತಾ ಕ್ರಮಗಳ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಣಕಲ್ ಮಠದ ಸ್ವಾಮೀಜಿ ಬಸವ ರಮಾನಂದ ಸ್ವಾಮೀಜಿ ತಾಲೂಕು ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸಣ್ಣ ಸೂರಮ್ಮ ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಸೇರಿದಂತೆ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

- ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು. ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು. ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು. ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು. ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು. ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್‌ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು. .1
- ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ1
- ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು. ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ. ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.1
- Post by Harisha Y1
- ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.1
- ಬಳ್ಳಾರಿ ಕೋಟೆಯ ಪ್ರದೇಶದಲ್ಲಿ ಬೆಂಕಿ ಅವಘಡ.1
- ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ1
- ರೈತ ಮುಖಂಡ ಕೆ ಟಿ ತಿಪ್ಪೇಸ್ವಾಮಿ ಅಸ್ವಸ್ಥರಾಗಲು ಜಿಲ್ಲಾಡಳಿತ ಹೊಣೆ ಎಂದು ಆರೋಪಿಸಿ ಹೆದ್ದರಿ ತಡೆದು ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಭದ್ರೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ನಿರತ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಮುಗಿಸುವಂತೆ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು1