ಇರಾನ್–ಇಸ್ರೇಲ್ ಯುದ್ಧದ ಎಫೆಕ್ಟ್ – ಚಳ್ಳಕೆರೆಯಲ್ಲಿ ಕಮರ್ಷಿಯಲ್ ಗ್ಯಾಸ್ ಅಭಾವ, ಹೋಟೆಲ್‌ಗಳಲ್ಲಿ ಸೌದೆ ಒಲೆ ಮೊರೆ ಇರಾನ್–ಇಸ್ರೇಲ್ ಯುದ್ಧದ ಎಫೆಕ್ಟ್ – ಚಳ್ಳಕೆರೆಯಲ್ಲಿ ಕಮರ್ಷಿಯಲ್ ಗ್ಯಾಸ್ ಅಭಾವ, ಹೋಟೆಲ್‌ಗಳಲ್ಲಿ ಸೌದೆ ಒಲೆ ಮೊರೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ Iran–Israel conflict ಪರಿಣಾಮದಿಂದ ಕಮರ್ಷಿಯಲ್ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಚಳ್ಳಕೆರೆ ನಗರದ ಹೋಟೆಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾಸ್ ಸಿಲಿಂಡರ್ ಸಿಗದೇ ಹೋಟೆಲ್‌ಗಳಲ್ಲಿ ಅಡುಗೆ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಮಾಲೀಕರು ಸೌದೆ ಒಲೆಗಳ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇದು Challakere ನಗರದ ಸಾರಿಗೆ ಬಸ್ ನಿಲ್ದಾಣದ ಸಮೀಪದ ಅರಮನೆ ಹೋಟೆಲ್‌ನಲ್ಲಿ ಕಂಡುಬಂದ ದೃಶ್ಯ. ಇಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ಯಾಸ್ ಬಳಸಿ ಅಡುಗೆ ಮಾಡುವ ಒಲೆಗಳನ್ನು ಬಂದ್ ಮಾಡಲಾಗಿದೆ. ಪರಿಣಾಮವಾಗಿ ಹೋಟೆಲ್ ಸಿಬ್ಬಂದಿ ಸೌದೆ ಬಳಸಿ ಉಪಹಾರ ಹಾಗೂ ಊಟವನ್ನು ತಯಾರಿಸುತ್ತಿದ್ದಾರೆ. ಗ್ಯಾಸ್ ಲಭ್ಯವಿಲ್ಲದ ಕಾರಣದಿಂದ ಹೆಚ್ಚು ಗ್ಯಾಸ್ ಬಳಸುವ ಹಲವು ಆಹಾರ ಪದಾರ್ಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚೈನೀಸ್ ಪದಾರ್ಥಗಳು, ಸೂಪ್‌ಗಳು, ದೋಸೆ ಸೇರಿದಂತೆ ಹೆಚ್ಚಿನ ಗ್ಯಾಸ್ ಅಗತ್ಯವಿರುವ ಉಪಹಾರಗಳನ್ನು ಮೆನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಸೌದೆ ಬಳಸಿ ಅಡುಗೆ ಮಾಡುವುದರಿಂದ ಸಮಯ ಹಾಗೂ ಶ್ರಮ ಹೆಚ್ಚು ಬೇಕಾಗುತ್ತಿರುವುದರಿಂದ ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ಯಾಸ್ ಸರಬರಾಜು ಶೀಘ್ರದಲ್ಲೇ ಸಾಮಾನ್ಯವಾಗದಿದ್ದರೆ ಹೋಟೆಲ್ ಉದ್ಯಮಕ್ಕೆ ಮತ್ತಷ್ಟು ತೊಂದರೆ ಎದುರಾಗುವ ಸಾಧ್ಯತೆ ಇದೆ.

- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್‍ಯಾಲಿ #jb_news_kannada #bidar #bhalki1
- ಬಳ್ಳಾರಿ ಮಹಾನಗರ ಪಾಲಿಕೆ 2026-27ನೇ ಸಾಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ 💰 👉 ಏಪ್ರಿಲ್ 1 ರಿಂದ 30ರವರೆಗೆ ಪಾವತಿಸಿದರೆ 5% ರಿಯಾಯಿತಿ 👉 ಮೇ 1 ರಿಂದ ಜೂನ್ 30ರವರೆಗೆ ದಂಡವಿಲ್ಲದೆ ಪಾವತಿ ಅವಕಾಶ 👉 ಜುಲೈ 1ರಿಂದ ಪ್ರತಿ ತಿಂಗಳು 2% ದಂಡ ಪಾಲಿಕೆ ಆಯುಕ್ತರು, ನಗರದ ಅಭಿವೃದ್ಧಿಗೆ ನಾಗರಿಕರ ಸಹಕಾರ ಅಗತ್ಯ ಎಂದು ಮನವಿ ಮಾಡಿ, ಸಕಾಲದಲ್ಲಿ ತೆರಿಗೆ ಪಾವತಿಸಿ ಲಾಭ ಪಡೆಯಲು ಕರೆ ನೀಡಿದ್ದಾರೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- Post by Onlinetv24x71
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1