E-KYC ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ; ಶಾಶ್ವತ ಪರಿಹಾರ ಕಲ್ಪಿಸಿ: ಸಚಿವ ರಿಜ್ವಾನ್ ಆರ್ಷದ್ ಬೆಂಗಳೂರು: ಇ-ಕೆವೈಸಿ ಪ್ರಕ್ರಿಯೆ ವೇಳೆ ಉಂಟಾಗುತ್ತಿರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಆರ್ಷದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ Targeted Public Distribution System (Control) Amendment Order ಅನ್ವಯ ಅರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಹಾಗೂ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸುವ ವ್ಯವಸ್ಥೆ ಜಾರಿಯಲ್ಲಿದೆ. ರಾಜ್ಯದಲ್ಲಿ ಐದು ವರ್ಷ ಪೂರ್ಣಗೊಂಡಿರುವ ಒಟ್ಟು 2,67,64,276 ಫಲಾನುಭವಿಗಳ ಮರು ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕೆ ಸೆ.30, 2026 ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು ಇಂದು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆ ಕಂಡುಬಂದ ತಕ್ಷಣ ಸಮನ್ವಯದಿಂದ ಕ್ರಮ ಕೈಗೊಂಡು ಪರಿಹರಿಸುವಂತೆ ಸೂಚಿಸಿದರು. 📱 ಮೊಬೈಲ್‌ನಲ್ಲೇ ಇ-ಕೆವೈಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಪದೇಪದೇ ತೆರಳುವ ಅಗತ್ಯ ಕಡಿಮೆ ಮಾಡುವ ಉದ್ದೇಶದಿಂದ ಮೊಬೈಲ್ ಮೂಲಕ Face Authentication ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. Directorate of Electronic Delivery of Citizen Services ಸಹಯೋಗದಲ್ಲಿ ಅಭಿವೃದ್ಧಿಪಡಿಸುತ್ತಿರುವ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ನೊಂದು ವಾರದೊಳಗೆ ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಫಲಾನುಭವಿಗಳು ತಮ್ಮ ಮೊಬೈಲ್‌ನಲ್ಲಿಯೇ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ. ಇ-ಕೆವೈಸಿ ಪ್ರಕ್ರಿಯೆ ಸುಗಮಗೊಳಿಸಲು ಆಹಾರ ಇಲಾಖೆಯ ಅಪ್ಲಿಕೇಶನ್‌ನಲ್ಲಿ ಪ್ರತ್ಯೇಕ URLಗಳನ್ನೂ ಒದಗಿಸಲಾಗಿದೆ. ಅಲ್ಲದೆ, ಆಹಾರ ಇಲಾಖೆಯ ಸರ್ವರ್‌ನ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸಲು Load Testing ನಡೆಸಲಾಗುತ್ತಿದೆ. 📊 ಶೇ.37ರಷ್ಟು ಇ-ಕೆವೈಸಿ ಪೂರ್ಣ ಇ-ಕೆವೈಸಿ ಮಾಡಿಸಬೇಕಿರುವ 2.67 ಕೋಟಿ ಫಲಾನುಭವಿಗಳ ಪೈಕಿ 97,54,197 ಮಂದಿ ಇದುವರೆಗೆ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಒಟ್ಟಾರೆ ಶೇ.37ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರತಿದಿನ ಸರಾಸರಿ 5.40 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ. ಆಹಾರ ಇಲಾಖೆಯ ಸರ್ವರ್‌ಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಿಂದಿನಿಂದಲೂ ಇದ್ದು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ 3rd Party Agencyಯನ್ನು ನೇಮಕ ಮಾಡಲಾಗಿದೆ ಎಂದು ಸಚಿವ ರಿಜ್ವಾನ್ ಆರ್ಷದ್ ತಿಳಿಸಿದರು. ಮುಂದಿನ ಒಂದು ತಿಂಗಳೊಳಗೆ ಆಹಾರ ಇಲಾಖೆಯ ಸರ್ವರ್ ಹಾಗೂ ತಾಂತ್ರಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ಸರಳ, ವೇಗದ ಹಾಗೂ ಪರಿಣಾಮಕಾರಿಯಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು. ಸಭೆಯಲ್ಲಿ ಕಾರ್ಯದರ್ಶಿ ಕನಗವಲ್ಲಿ ಸೇರಿದಂತೆ ಆಹಾರ ಇಲಾಖೆ, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
E-KYC ಸರ್ವರ್ ಸಮಸ್ಯೆಗೆ ತಕ್ಷಣ ಸ್ಪಂದಿಸಿ; ಶಾಶ್ವತ ಪರಿಹಾರ ಕಲ್ಪಿಸಿ: ಸಚಿವ ರಿಜ್ವಾನ್ ಆರ್ಷದ್ ಬೆಂಗಳೂರು: ಇ-ಕೆವೈಸಿ ಪ್ರಕ್ರಿಯೆ ವೇಳೆ ಉಂಟಾಗುತ್ತಿರುವ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಆರ್ಷದ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ Targeted Public Distribution System (Control) Amendment Order ಅನ್ವಯ ಅರ್ಹ ಪಡಿತರ ಚೀಟಿದಾರರ ಪಟ್ಟಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಹಾಗೂ ಪ್ರತಿ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸುವ ವ್ಯವಸ್ಥೆ ಜಾರಿಯಲ್ಲಿದೆ. ರಾಜ್ಯದಲ್ಲಿ ಐದು ವರ್ಷ ಪೂರ್ಣಗೊಂಡಿರುವ ಒಟ್ಟು 2,67,64,276 ಫಲಾನುಭವಿಗಳ ಮರು ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದ್ದು, ಇದಕ್ಕೆ ಸೆ.30, 2026 ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವೆಡೆ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು
ಇಂದು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳು, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಮಸ್ಯೆ ಕಂಡುಬಂದ ತಕ್ಷಣ ಸಮನ್ವಯದಿಂದ ಕ್ರಮ ಕೈಗೊಂಡು ಪರಿಹರಿಸುವಂತೆ ಸೂಚಿಸಿದರು. 📱 ಮೊಬೈಲ್‌ನಲ್ಲೇ ಇ-ಕೆವೈಸಿ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಪದೇಪದೇ ತೆರಳುವ ಅಗತ್ಯ ಕಡಿಮೆ ಮಾಡುವ ಉದ್ದೇಶದಿಂದ ಮೊಬೈಲ್ ಮೂಲಕ Face Authentication ಬಳಸಿ ಇ-ಕೆವೈಸಿ ಮಾಡಿಕೊಳ್ಳುವ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತಿದೆ. Directorate of Electronic Delivery of Citizen Services ಸಹಯೋಗದಲ್ಲಿ ಅಭಿವೃದ್ಧಿಪಡಿಸುತ್ತಿರುವ ಮೊಬೈಲ್ ಅಪ್ಲಿಕೇಶನ್ ಅನ್ನು ಇನ್ನೊಂದು ವಾರದೊಳಗೆ ಸಾರ್ವಜನಿಕರ ಬಳಕೆಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಫಲಾನುಭವಿಗಳು ತಮ್ಮ ಮೊಬೈಲ್‌ನಲ್ಲಿಯೇ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ. ಇ-ಕೆವೈಸಿ ಪ್ರಕ್ರಿಯೆ ಸುಗಮಗೊಳಿಸಲು ಆಹಾರ ಇಲಾಖೆಯ ಅಪ್ಲಿಕೇಶನ್‌ನಲ್ಲಿ ಪ್ರತ್ಯೇಕ URLಗಳನ್ನೂ ಒದಗಿಸಲಾಗಿದೆ. ಅಲ್ಲದೆ, ಆಹಾರ ಇಲಾಖೆಯ ಸರ್ವರ್‌ನ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸಲು Load Testing ನಡೆಸಲಾಗುತ್ತಿದೆ. 📊 ಶೇ.37ರಷ್ಟು ಇ-ಕೆವೈಸಿ ಪೂರ್ಣ ಇ-ಕೆವೈಸಿ ಮಾಡಿಸಬೇಕಿರುವ 2.67 ಕೋಟಿ ಫಲಾನುಭವಿಗಳ
ಪೈಕಿ 97,54,197 ಮಂದಿ ಇದುವರೆಗೆ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ಒಟ್ಟಾರೆ ಶೇ.37ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದ್ದು, ಪ್ರತಿದಿನ ಸರಾಸರಿ 5.40 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುತ್ತಿದ್ದಾರೆ. ಆಹಾರ ಇಲಾಖೆಯ ಸರ್ವರ್‌ಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಿಂದಿನಿಂದಲೂ ಇದ್ದು, ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ 3rd Party Agencyಯನ್ನು ನೇಮಕ ಮಾಡಲಾಗಿದೆ ಎಂದು ಸಚಿವ ರಿಜ್ವಾನ್ ಆರ್ಷದ್ ತಿಳಿಸಿದರು. ಮುಂದಿನ ಒಂದು ತಿಂಗಳೊಳಗೆ ಆಹಾರ ಇಲಾಖೆಯ ಸರ್ವರ್ ಹಾಗೂ ತಾಂತ್ರಿಕ ವ್ಯವಸ್ಥೆಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಮತ್ತಷ್ಟು ಸರಳ, ವೇಗದ ಹಾಗೂ ಪರಿಣಾಮಕಾರಿಯಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು. ಸಭೆಯಲ್ಲಿ ಕಾರ್ಯದರ್ಶಿ ಕನಗವಲ್ಲಿ ಸೇರಿದಂತೆ ಆಹಾರ ಇಲಾಖೆ, ಎನ್‌ಐಸಿ ಹಾಗೂ ಕೆಎಸ್‌ಡಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
- ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು1
- ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ1
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1