Shuru
Apke Nagar Ki App…
ಮಲ್ಲಣ್ಣ ಬಿರಂಜಗಿ ಕನ್ನಡಗಿ ಮಲ್ಲಿಕಾರ್ಜುನ ಭಕ್ತ ಶ್ರಾವಣಮಾಸ ಜಾತ್ರೆ ಭಾಗವಹಿಸಿದ್ದರು ಕಾಳಗಿ(ಇಂಗನಕಲ್) ಸಮಾಜ ಸೇವಕ ಸ್ನೇಹಜೀವಿ ರಾಜಕೀಯ ಮುಖಂಡ ಮಲ್ಲಣ್ಣ ಬಿರಂಜಗಿ ಅವರು ಕನ್ನಡಗಿ ಶ್ರೀ ಮಲ್ಲಿಕಾರ್ಜುನ ಪರಮ ಭಕ್ತ ಶ್ರಾವಣ ಸೋಮವಾರ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿದ್ದರು
User1523
ಮಲ್ಲಣ್ಣ ಬಿರಂಜಗಿ ಕನ್ನಡಗಿ ಮಲ್ಲಿಕಾರ್ಜುನ ಭಕ್ತ ಶ್ರಾವಣಮಾಸ ಜಾತ್ರೆ ಭಾಗವಹಿಸಿದ್ದರು ಕಾಳಗಿ(ಇಂಗನಕಲ್) ಸಮಾಜ ಸೇವಕ ಸ್ನೇಹಜೀವಿ ರಾಜಕೀಯ ಮುಖಂಡ ಮಲ್ಲಣ್ಣ ಬಿರಂಜಗಿ ಅವರು ಕನ್ನಡಗಿ ಶ್ರೀ ಮಲ್ಲಿಕಾರ್ಜುನ ಪರಮ ಭಕ್ತ ಶ್ರಾವಣ ಸೋಮವಾರ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿದ್ದರು
More news from ಕರ್ನಾಟಕ and nearby areas
- ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು. ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ, ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.1
- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಕುಂಬಾರ ರವರ 46ನೇ ಜನ್ಮದಿನ ಅದ್ದೂರಿ ಆಚರಣೆ1
- ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ1
- ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ ಬೀದರ್: ಎಐಸಿಸಿ ಅಧ್ಯಕ್ಷ ಖರ್ಗೆಗೆ ಅವಮಾನ ಖಂಡಿಸಿ ನಗರದಲ್ಲಿ ಪ್ರಗತಿಪರ ನಾಗರಿಕರ ವೇದಿಕೆಯಿಂದ ಖಂಡನಾ ಸಮಾವೇಶ1
- ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು. ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.1
- ವಿಶೇಷ ದರ್ಶನಕ್ಕೆ ಗಲಾಟೆ: ಮಹಿಳಾ ಪೊಲೀಸ್ ಅಧಿಕಾರಿಗೆ ಶಾಸಕನ ಮಗಳಿಂದ ಕಪಾಳಮೋಕ್ಷ! ವಿಶೇಷ ದರ್ಶನಕ್ಕೆ ಗಲಾಟೆ: ಮಹಿಳಾ ಪೊಲೀಸ್ ಅಧಿಕಾರಿಗೆ ಶಾಸಕನ ಮಗಳಿಂದ ಕಪಾಳಮೋಕ್ಷ!1