ತುಂಗಭದ್ರಾ ಎಡದಂಡೆ ಕಾಲುವೆಗೆ ತಕ್ಷಣ ನೀರು ಹರಿಸಲು ಸಿರವಾರ ಭಾಗದ ರೈತರು ರಾಯಚೂರಿನಲ್ಲಿ ಆಗ್ರಹ ರಾಯಚೂರು : 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸಬೇಕು ಎಂದು ತುಂಗಭದ್ರಾ ಎಡದಂಡೆ ಕಾಲುವೆ ರೈತರ ವೇದಿಕೆಯ ರಾಜ್ಯಾಧ್ಯಕ್ಷ ಶಂಕರಗೌಡ ಹರವಿ ರಾಜ್ಯ ಸರ್ಕಾರವನ್ನು ಮಂಗಳವಾರ 10.30 ನಿಮಿಷಕ್ಕೆ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ ಸುಮಾರು 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯೊಂದಿಗೆ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಕಾಲುವೆಯ ಗೇಜ್‌ಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ, ನೀರಿನ ಪ್ರಮಾಣವನ್ನು ನಿಖರವಾಗಿ ಅಳೆಯುವ ವ್ಯವಸ್ಥೆ ಕಲ್ಪಿಸಬೇಕು. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. 1970-80ರ ದಶಕಗಳಲ್ಲಿ ಜಲಾಶಯದಲ್ಲಿ 25ರಿಂದ 30 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹವಾದ ಕೂಡಲೇ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ನಂತರ ಬಂದ ಒಳಹರಿವಿನಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಈಗ ಅಧಿಕಾರಿಗಳು ಅತಿಯಾದ ಮುನ್ನೆಚ್ಚರಿಕೆ ಹಾಗೂ ರಕ್ಷಣಾತ್ಮಕ ನಿಲುವಿನಿಂದ ಕಾಲುವೆಗೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು. ಈಗಾಗಲೇ ಹತ್ತಿ, ಭತ್ತ ಸೇರಿದಂತೆ ವಿವಿಧ ಮುಂಗಾರು ಬೆಳೆಗಳ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆಗಳು 25ರಿಂದ 45 ದಿನಗಳ ಬೆಳವಣಿಗೆಯ ಹಂತದಲ್ಲಿವೆ. ಈ ಸಂದರ್ಭದಲ್ಲಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕಾಲುವೆಗೆ ನೀರು ಹರಿಸುವುದರಲ್ಲಿ ಮತ್ತಷ್ಟು ವಿಳಂಬವಾದರೆ ಕೃಷಿ ಉತ್ಪಾದನೆ ಕುಸಿತ, ಆಹಾರ ಧಾನ್ಯಗಳ ಕೊರತೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಕೃಷಿ ಕೂಲಿಕಾರರಿಗೆ ಉದ್ಯೋಗದ ಅಭಾವ, ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಲಿವೆ ಎಂದು ಅವರು ಹೇಳಿದರು. ಆದ್ದರಿಂದ ನಕಾರಾತ್ಮಕ ಮನೋಭಾವ ತೊರೆದು, ಪ್ರಕೃತಿಯ ಮೇಲೆ ವಿಶ್ವಾಸವಿಟ್ಟು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಶಂಕರಗೌಡ ಹರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವೈ. ಬಸನಗೌಡ, ರಮೇಶ್ ನಾಡಗೌಡ, ನಾಗನಗೌಡ, ಶರಣಪ್ಪಗೌಡ, ಅಮರೇಶ್ ಹೊಸಮನಿ, ವೀರೇಂದ್ರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- ಕಲಬುರಗಿ:ಎರಡನೇ ಸಚಿವ ಸಂಪುಟ ವಿಸ್ತರಣೆ- ಶಾಸಕ ಬಸವರಾಜ್ ಮತ್ತಿಮೂಡ್ ಲೇವಡಿ ಡಿಕೆ ಶಿವಕುಮಾರ್ ಅವರ ಮಂತ್ರಿ ಮಂಡಲದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.ಡಿಕೆ ಸಂಪುಟ ವಿಸ್ತರಣೆಯನ್ನು ಪೇಮೆಂಟ್ ಸಿಟ್ ಎಂದ ಬಿಜೆಪಿ ಶಾಸಕ ಕೆಲವರು ಹೇಳ್ತಿದ್ದಾರೆ ಪೇಮೆಂಟ್ ಸಿಟ್, ಪೇಮೆಂಟ್ ಸಿಟ್ ಅಂತಾ ಸಹಜವಾಗಿ ನೋಡಿದ್ರೆ ಅನಿಸುತ್ತದೆ,ಕೆಲವರು ಮಾತಾಡ್ತಿದ್ದಾರೆ ಮಂತ್ರಿಗಳದು ಪೇಮೆಂಟ್ ಸಿಟ್ ಅಂತಾ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು. ಅವರ ಹೈ ಕಮಾಂಡ್ ಅವರ ಸಚಿವ ಸಂಪುಟ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು1
- ಚಿಂಚೋಳಿ ತಹಸೀಲ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಚಿಂಚೋಳಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಚಿಂಚೋಳಿ ತಹಸೀಲ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.3
- ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"1
- ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!1
- ತುಂಗಭದ್ರಾ ಎಡದಂಡೆ ಕಾಲುವೆಗೆ ತಕ್ಷಣ ನೀರು ಹರಿಸಲು ಸಿರವಾರ ಭಾಗದ ರೈತರು ರಾಯಚೂರಿನಲ್ಲಿ ಆಗ್ರಹ ರಾಯಚೂರು : 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸಬೇಕು ಎಂದು ತುಂಗಭದ್ರಾ ಎಡದಂಡೆ ಕಾಲುವೆ ರೈತರ ವೇದಿಕೆಯ ರಾಜ್ಯಾಧ್ಯಕ್ಷ ಶಂಕರಗೌಡ ಹರವಿ ರಾಜ್ಯ ಸರ್ಕಾರವನ್ನು ಮಂಗಳವಾರ 10.30 ನಿಮಿಷಕ್ಕೆ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ ಸುಮಾರು 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯೊಂದಿಗೆ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಕಾಲುವೆಯ ಗೇಜ್‌ಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ, ನೀರಿನ ಪ್ರಮಾಣವನ್ನು ನಿಖರವಾಗಿ ಅಳೆಯುವ ವ್ಯವಸ್ಥೆ ಕಲ್ಪಿಸಬೇಕು. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. 1970-80ರ ದಶಕಗಳಲ್ಲಿ ಜಲಾಶಯದಲ್ಲಿ 25ರಿಂದ 30 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹವಾದ ಕೂಡಲೇ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ನಂತರ ಬಂದ ಒಳಹರಿವಿನಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಈಗ ಅಧಿಕಾರಿಗಳು ಅತಿಯಾದ ಮುನ್ನೆಚ್ಚರಿಕೆ ಹಾಗೂ ರಕ್ಷಣಾತ್ಮಕ ನಿಲುವಿನಿಂದ ಕಾಲುವೆಗೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು. ಈಗಾಗಲೇ ಹತ್ತಿ, ಭತ್ತ ಸೇರಿದಂತೆ ವಿವಿಧ ಮುಂಗಾರು ಬೆಳೆಗಳ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆಗಳು 25ರಿಂದ 45 ದಿನಗಳ ಬೆಳವಣಿಗೆಯ ಹಂತದಲ್ಲಿವೆ. ಈ ಸಂದರ್ಭದಲ್ಲಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕಾಲುವೆಗೆ ನೀರು ಹರಿಸುವುದರಲ್ಲಿ ಮತ್ತಷ್ಟು ವಿಳಂಬವಾದರೆ ಕೃಷಿ ಉತ್ಪಾದನೆ ಕುಸಿತ, ಆಹಾರ ಧಾನ್ಯಗಳ ಕೊರತೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಕೃಷಿ ಕೂಲಿಕಾರರಿಗೆ ಉದ್ಯೋಗದ ಅಭಾವ, ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಲಿವೆ ಎಂದು ಅವರು ಹೇಳಿದರು. ಆದ್ದರಿಂದ ನಕಾರಾತ್ಮಕ ಮನೋಭಾವ ತೊರೆದು, ಪ್ರಕೃತಿಯ ಮೇಲೆ ವಿಶ್ವಾಸವಿಟ್ಟು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಶಂಕರಗೌಡ ಹರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವೈ. ಬಸನಗೌಡ, ರಮೇಶ್ ನಾಡಗೌಡ, ನಾಗನಗೌಡ, ಶರಣಪ್ಪಗೌಡ, ಅಮರೇಶ್ ಹೊಸಮನಿ, ವೀರೇಂದ್ರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ1