ಪ್ರಜಾಪ್ರಭುತ್ವದ ಬಲವರ್ಧನೆಗೆ ಸಂವಿಧಾನದ ಆಶಯಗಳನ್ನು ಈಡೇರಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ವರದಿ: ಹೊಮ್ಮನಂಜುಂಡನಾಯಕ ಪ್ರಜಾಪ್ರಭುತ್ವದ ಬಲವರ್ಧನೆಗೆ ಸಂವಿಧಾನದ ಆಶಯಗಳನ್ನು ಈಡೇರಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಚಾಮರಾಜನಗರ: ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬ ನಾಗರಿಕರು ಮುಂದಾಗುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವದಾದ್ಯಂತ ಇಂದು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ದಿನಕ್ಕೆ ಇತಿಹಾಸವಿದೆ. ಭಾರತ ಸಂವಿಧಾನದ ಪ್ರಮುಖ ಆಶಯಗಳಾಗಿರುವ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಸಾಮಾಜಿಕ ನ್ಯಾಯ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಅಂಶಗಳನ್ನು ಪ್ರಜಾಪ್ರಭುತ್ವದಲ್ಲಿ ಅಡಕಗೊಳಿಸಲಾಗಿದೆ. ಸಂವಿಧಾನದ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಮಹತ್ವವನ್ನು ನಾವೆಲ್ಲರೂ ಅರಿಯಬೇಕು ಎಂದರು. 12ನೇ ಶತಮಾನದಲ್ಲಿ ಸಾಂಸ್ಕøತಿಕ ನಾಯಕ ಬಸವಣ್ಣನವರು ಎಲ್ಲಾ ವರ್ಗಗಳ ಜನರನ್ನು ಒಟ್ಟುಗೂಡಿಸಿ ಅನುಭವ ಮಂಟಪದ ಮೂಲಕ ಮೊದಲ ಸಂಸತ್ತು ಸ್ಥಾಪಿಸಿದ್ದರು. ಅಮೇರಿಕಾದ ಅಬ್ರಹಾಂ ಲಿಂಕನ್ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಸರ್ಕಾರ ರಚಿಸಿ ಆಧುನಿಕ ಜಗತ್ತಿನ ಮೊದಲ ಪ್ರಜಾಪ್ರಭುತ್ವ ಜಾರಿಗೊಳಿಸಿದ್ದರು. ಭಾರತ ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಸಾಮಾಜಿಕ ನ್ಯಾಯದಡಿ ಎಲ್ಲರಿಗೂ ಸಮಾನತೆ ಒದಗಿಸಲು ಮುಂದಾದರು. ಪ್ರಜಾಪ್ರಭುತ್ವದ ಆದರ್ಶಗಳನ್ನು ಅರ್ಥೈಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿಯುವಂತೆ ಸಚಿವರಾದ ಪುಟ್ಟರಂಗಶೆಟ್ಟಿ ಹೇಳಿದರು. ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಮಾತನಾಡಿ ವಿಶ್ವದಲ್ಲಿ ಪ್ರಜಾಪ್ರಭುತ್ವ ಆಡಳಿತ ಹೊಂದಿರುವ ಎಲ್ಲಾ ದೇಶಗಳು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿವೆ. ಭಾರತವು ಪ್ರಪಂಚದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನ ಹೊಂದಿರುವ ದೇಶವಾಗಿದ್ದು, ದೇಶದಲ್ಲಿ ನಾವೆಲ್ಲರೂ ಶಾಂತಿ, ನೆಮ್ಮದಿಯಿಂದ ಬದುಕಲು ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣವಾಗಿದೆ. ಪ್ರಜಾಪ್ರಭುತ್ವದಡಿ ಕಾನೂನಿನ ಚೌಕಟ್ಟಿನೊಳಗೆ ಎಲ್ಲರೂ ಸಮಾನರು. ಸಮಾನತೆ, ಜಾತ್ಯಾತೀತ ಮನೋಭಾವದಿಂದ ಸ್ತ್ರೀಸಾಮಾನ್ಯರ ಹಕ್ಕುಗಳನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಂದಿನ ಯುವಕರು, ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಹೆಚ್ಚಿನ ಅರಿವು ಪಡೆಯಲು ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯಬೇಕು ಎಂದರು. ಮುಖ್ಯ ಭಾಷಣ ಮಾಡಿದ ಭೋಗಾಪುರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ಮಾತನಾಡಿ 1997ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸಿತು. 1998ರಲ್ಲಿ ಸಮಿತಿ ಅಂತರಾಷ್ಟ್ರೀಯ ಮಟ್ಟದಲ್ಲಿ ದಿನಾಚರಣೆ ಆಚರಿಸಲು ಶಿಫಾರಸು ಮಾಡಿತ್ತು. 2008ರಲ್ಲಿ ಭಾರತದಲ್ಲಿ ಮೊದಲಬಾರಿಗೆ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. ಪ್ರಜಾಪ್ರಭುತ್ವದ ಯಶಸ್ಸಿಗೆ ಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ತಮ್ಮ ಹಕ್ಕುಗಳನ್ನು ಪ್ರತಿಪಾದಿಸಬೇಕು. ಚುನಾವಣೆಗಳ ಏರುಪೇರುಗಳ ಪರಿಣಾಮಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು. ಕರ್ನಾಟಕ ಸರ್ಕಾರವು 2024ರಲ್ಲಿ ಮೊದಲಬಾರಿಗೆ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಿ ಬೀದರ್‍ನಿಂದ ಚಾಮರಾಜನಗರದವರೆಗೆ ಸಾರ್ವಜನಿಕರು, ಅಧಿಕಾರಿ, ನೌಕರರು, ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಸಂವಿಧಾನ ಜಾಗೃತಿ ಕುರಿತ ಮಾನವ ಸರಪಳಿ ರಚಿಸಿ ರಾಷ್ಟ್ರಮಟ್ಟದಲ್ಲಿ ವ್ಯಾಪಕ ಗಮನ ಸೆಳೆಯಿತು. ಪ್ರಸ್ತುತ 2026ರಲ್ಲಿ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ರಾಜ್ಯಸರ್ಕಾರವು ಎಲ್ಲಾ ಶಾಲಾ ಕಾಲೇಜುಗಳಲ್ಲಿ ‘ಯುವ ಸಂಸತ್ತು’ ರಚನೆ ಮೂಲಕ ಮಕ್ಕಳಿಗೆ ವಿಧಾನಸಭೆಯ ಕಾರ್ಯಕಲಾಪಗಳನ್ನು ವಿದ್ಯಾರ್ಥಿಹಂತದಲ್ಲಿಯೇ ಪರಿಚಯಿಸುವ ಮಹತ್ವದ ಕಾರ್ಯ ಕೈಗೊಂಡಿದೆ ಎಂದು ಡಾ. ಪಿ. ದೇವರಾಜು ಅವರು ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಮಸಮುದ್ರ ಪುಟ್ಟಸ್ವಾಮಿ ಅವರು ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಿ.ಎಸ್. ರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರಾದ ಸೋಮೇಶ್ವರ, ತಹಶೀಲ್ದಾರ್ ಬಿ. ಗಿರಿಜಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಾಂಸ್ಕøತಿಕ ನಾಯಕ ಬಸವಣ್ಣನವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಪ್ರಜಾಪ್ರಭುತ್ವದ ಬಲವರ್ಧನೆಗೆ ಸಂವಿಧಾನದ ಆಶಯಗಳನ್ನು ಈಡೇರಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ವರದಿ: ಹೊಮ್ಮನಂಜುಂಡನಾಯಕ ಪ್ರಜಾಪ್ರಭುತ್ವದ ಬಲವರ್ಧನೆಗೆ ಸಂವಿಧಾನದ ಆಶಯಗಳನ್ನು ಈಡೇರಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಚಾಮರಾಜನಗರ: ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಈಡೇರಿಸಲು ಪ್ರತಿಯೊಬ್ಬ ನಾಗರಿಕರು ಮುಂದಾಗುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವದಾದ್ಯಂತ ಇಂದು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವ ದಿನಕ್ಕೆ ಇತಿಹಾಸವಿದೆ. ಭಾರತ ಸಂವಿಧಾನದ ಪ್ರಮುಖ ಆಶಯಗಳಾಗಿರುವ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಸಾಮಾಜಿಕ ನ್ಯಾಯ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಅಂಶಗಳನ್ನು ಪ್ರಜಾಪ್ರಭುತ್ವದಲ್ಲಿ ಅಡಕಗೊಳಿಸಲಾಗಿದೆ. ಸಂವಿಧಾನದ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ
ಬಲವರ್ಧನೆಗಾಗಿ ಸಂವಿಧಾನದ ಆಶಯಗಳನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಮಹತ್ವವನ್ನು ನಾವೆಲ್ಲರೂ ಅರಿಯಬೇಕು ಎಂದರು. 12ನೇ ಶತಮಾನದಲ್ಲಿ ಸಾಂಸ್ಕøತಿಕ ನಾಯಕ ಬಸವಣ್ಣನವರು ಎಲ್ಲಾ ವರ್ಗಗಳ ಜನರನ್ನು ಒಟ್ಟುಗೂಡಿಸಿ ಅನುಭವ ಮಂಟಪದ ಮೂಲಕ ಮೊದಲ ಸಂಸತ್ತು ಸ್ಥಾಪಿಸಿದ್ದರು. ಅಮೇರಿಕಾದ ಅಬ್ರಹಾಂ ಲಿಂಕನ್ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಸರ್ಕಾರ ರಚಿಸಿ ಆಧುನಿಕ ಜಗತ್ತಿನ ಮೊದಲ ಪ್ರಜಾಪ್ರಭುತ್ವ ಜಾರಿಗೊಳಿಸಿದ್ದರು. ಭಾರತ ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿ ಸಾಮಾಜಿಕ ನ್ಯಾಯದಡಿ ಎಲ್ಲರಿಗೂ ಸಮಾನತೆ ಒದಗಿಸಲು ಮುಂದಾದರು. ಪ್ರಜಾಪ್ರಭುತ್ವದ ಆದರ್ಶಗಳನ್ನು ಅರ್ಥೈಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿಯುವಂತೆ ಸಚಿವರಾದ ಪುಟ್ಟರಂಗಶೆಟ್ಟಿ ಹೇಳಿದರು. ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಮಾತನಾಡಿ ವಿಶ್ವದಲ್ಲಿ ಪ್ರಜಾಪ್ರಭುತ್ವ ಆಡಳಿತ ಹೊಂದಿರುವ ಎಲ್ಲಾ ದೇಶಗಳು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿವೆ. ಭಾರತವು ಪ್ರಪಂಚದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ಹಾಗೂ ಶ್ರೇಷ್ಠ ಸಂವಿಧಾನ ಹೊಂದಿರುವ ದೇಶವಾಗಿದ್ದು, ದೇಶದಲ್ಲಿ ನಾವೆಲ್ಲರೂ ಶಾಂತಿ, ನೆಮ್ಮದಿಯಿಂದ ಬದುಕಲು ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣವಾಗಿದೆ. ಪ್ರಜಾಪ್ರಭುತ್ವದಡಿ ಕಾನೂನಿನ ಚೌಕಟ್ಟಿನೊಳಗೆ ಎಲ್ಲರೂ ಸಮಾನರು. ಸಮಾನತೆ,
ಜಾತ್ಯಾತೀತ ಮನೋಭಾವದಿಂದ ಸ್ತ್ರೀಸಾಮಾನ್ಯರ ಹಕ್ಕುಗಳನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಂದಿನ ಯುವಕರು, ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಹೆಚ್ಚಿನ ಅರಿವು ಪಡೆಯಲು ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯಬೇಕು ಎಂದರು. ಮುಖ್ಯ ಭಾಷಣ ಮಾಡಿದ ಭೋಗಾಪುರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ಮಾತನಾಡಿ 1997ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸಿತು. 1998ರಲ್ಲಿ ಸಮಿತಿ ಅಂತರಾಷ್ಟ್ರೀಯ ಮಟ್ಟದಲ್ಲಿ ದಿನಾಚರಣೆ ಆಚರಿಸಲು ಶಿಫಾರಸು ಮಾಡಿತ್ತು. 2008ರಲ್ಲಿ ಭಾರತದಲ್ಲಿ ಮೊದಲಬಾರಿಗೆ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. ಪ್ರಜಾಪ್ರಭುತ್ವದ ಯಶಸ್ಸಿಗೆ ಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ತಮ್ಮ ಹಕ್ಕುಗಳನ್ನು ಪ್ರತಿಪಾದಿಸಬೇಕು. ಚುನಾವಣೆಗಳ ಏರುಪೇರುಗಳ ಪರಿಣಾಮಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು. ಕರ್ನಾಟಕ ಸರ್ಕಾರವು 2024ರಲ್ಲಿ ಮೊದಲಬಾರಿಗೆ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಿ ಬೀದರ್‍ನಿಂದ ಚಾಮರಾಜನಗರದವರೆಗೆ ಸಾರ್ವಜನಿಕರು, ಅಧಿಕಾರಿ, ನೌಕರರು, ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಸಂವಿಧಾನ ಜಾಗೃತಿ ಕುರಿತ ಮಾನವ ಸರಪಳಿ ರಚಿಸಿ ರಾಷ್ಟ್ರಮಟ್ಟದಲ್ಲಿ ವ್ಯಾಪಕ ಗಮನ ಸೆಳೆಯಿತು.
ಪ್ರಸ್ತುತ 2026ರಲ್ಲಿ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ರಾಜ್ಯಸರ್ಕಾರವು ಎಲ್ಲಾ ಶಾಲಾ ಕಾಲೇಜುಗಳಲ್ಲಿ ‘ಯುವ ಸಂಸತ್ತು’ ರಚನೆ ಮೂಲಕ ಮಕ್ಕಳಿಗೆ ವಿಧಾನಸಭೆಯ ಕಾರ್ಯಕಲಾಪಗಳನ್ನು ವಿದ್ಯಾರ್ಥಿಹಂತದಲ್ಲಿಯೇ ಪರಿಚಯಿಸುವ ಮಹತ್ವದ ಕಾರ್ಯ ಕೈಗೊಂಡಿದೆ ಎಂದು ಡಾ. ಪಿ. ದೇವರಾಜು ಅವರು ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಮಸಮುದ್ರ ಪುಟ್ಟಸ್ವಾಮಿ ಅವರು ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಿ.ಎಸ್. ರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷರಾದ ಸೋಮೇಶ್ವರ, ತಹಶೀಲ್ದಾರ್ ಬಿ. ಗಿರಿಜಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಾಂಸ್ಕøತಿಕ ನಾಯಕ ಬಸವಣ್ಣನವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
- ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಅಬ್ದುಲ್‌ಅಜೀಜ್ ದೀನಾ ವರದಿ: ಹೊಮ್ಮನಂಜುಂಡನಾಯಕ ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಅಬ್ದುಲ್‌ಅಜೀಜ್ ದೀನಾ ರೋಟರಿ ಸಂಸ್ಥೆ ವತಿಯಿಂದ ಇಂಜಿನಿಯರ್ ದಿನಾಚರಣೆ ಚಾಮರಾಜನಗರ: ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರವಾಗಿದೆ' ಎಂದು ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ ಹೇಳಿದರು. ನಗರದ ರೋಟರಿ ಭವನದಲ್ಲಿ ನಡೆದ ರೋಟರಿ ಸಂಸ್ಥೆ ವತಿಯಿಂದ ನಡೆದ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಮಹಾನ್ ಇಂಜಿನಿಯರ್, ಭಾರತರತ್ನ ಮೊಕ್ಷಗುಂಡಂವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿಗಾಗಿ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರವು 1986ರಲ್ಲಿ ಸೆ.15 ನ್ನು ರಾಷ್ಟ್ರೀಯ ಇಂಜಿನಿಯರ್ ದಿನವೆಂದು ಘೋಷಿಸಿದೆ ಎಂದರು. ದೇಶದ ಮೂಲಭೂತ ಸೌಲಭ್ಯ, ನೀರಾವರಿ ವ್ಯವಸ್ಥೆ, ಸುಂದರ ಕಟ್ಟಡಗಳ ನಿರ್ಮಾಣ ಕೈಗಾರಿಕಾ ಅಭಿವೃದ್ಧಿಗೆ ಇಂಜಿನಿಯರ್ ಗಳು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದರು. ಸನ್ಮಾನ ಸ್ವೀಕರಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್ ಮಾತನಾಡಿ, ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯು ಇಂಜಿನಿಯರ್‌ಗಳ ಸೇವೆಯನ್ನು ಗುರುತಿಸಿ ತಮ್ಮಗಳನ್ನು ಸನ್ಮಾನಿಸಿ ತಮ್ಮಗಳ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ. ಇದಕ್ಕಾಗಿ ರೋಟರಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ರೋಟರಿ ಸಂಸ್ಥೆಯು ಮತ್ತಷ್ಟು ಸೇವಾ ಕಾರ್ಯಗಳ ಮೂಲಕ ಜನಸೇವೆ ಮಾಡುವಂತಾಗಲಿ ಎಂದು ಆಶಿಸಿದರು. ಸನ್ಮಾನ: ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್, ಹರದನಹಳ್ಳಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿ. ಧ್ರುಪದ್, ಕಿರಿಯ ಇಂಜಿನಿಯರ್ ಎಸ್.ಮಂಜುನಾಥ್, ರೋಟರಿ ಸಂಸ್ಥೆಯ ಇಂಜಿನಿಯರ್‌ಗಳಾದ ಮೋಹನ್, ರಾಜುವರ್ಗೀಸ್, ಪ್ರವೀಣ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥಾಪಕ ಸದಸ್ಯರಾದ ಜಿ.ಆರ್.ಅಶ್ವಥನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ,ಕಾರ್ಯದರ್ಶಿ ಅಂಕಶೆಟ್ಟಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.4
- ಕಿಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಎಸ್ಇಪಿ ಯೋಜನೆಯಡಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಅವರು ರಸ್ತೆಗಳು ಗ್ರಾಮೀಣ ಜನರ ಜೀವನಾಡಿಯಾಗಿದೆ ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇತುವೆ ಅಭಿವೃದ್ಧಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜನರ ಅಭಿವೃದ್ಧಿ ಕೆಲಸಗಳೆ ನನ್ನ ಗುರಿಯಾಗಿದ್ದು ವಿವಿಧ ಅಭಿವೃದ್ಧಿ ಯೋಜನೆಯಡಿ ಅನುದಾನ ತಂದು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು2
- ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು. ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.1
- ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.1
- ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.1
- All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*1
- 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju1
- ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ ವರದಿ: ಹೊಮ್ಮನಂಜುಂಡನಾಯಕ ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಿ: ಡಾ.ಪಿ.ಚಂದ್ರಶೇಖರ್ ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ ಚಾಮರಾಜನಗರ: ಆತ್ಮಹತ್ಯೆ ತಡೆಗಟ್ಟಲು ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಪಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾಕಾಲೇಜು ಸಭಾಂಗಣದಲ್ಲಿ ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸೋಣ' ಧ್ಯೇಯ ವಾಕ್ಯದಡಿ, ನಡೆದ 'ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಗಿಡಕ್ಕೆ ನೀರಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಶುಶ್ರೂಷಕರು ಆತ್ಮಹತ್ಯೆಗೆ ಪ್ರಯತ್ನ ಮಾಡುವವರ ಜತೆ ಸಮಾಲೋಚನೆ ನಡೆಸಿ, ಅವರಿಗೆ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಆಯೋಜಿಸಬೇಕು, ಆ ಮೂಲಕ ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಬೇಕು ಎಂದರು. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಸಕಾರಾತ್ಮಕ ಚಿಂತನೆಗಳು ಎಲ್ಲದಕ್ಕೂ ಸೂಕ್ತ ಪರಿಹಾರ ನೀಡುತ್ತವೆ.ಮಾನಸಿಕ ಖಿನ್ನತೆ ಒಂಟಿತನ, ಕೌಟುಂಬಿಕ ಕಲಹ ಇದರಲ್ಲಿ ಸಿಲುಕುವವರು ಆತ್ಮಹತ್ಯೆಗೆ ಶರಣಾಗುವ ಸಾಧ್ಯತೆ ಇದೆ. ಇಲಾಖೆ ಸಂಗ್ರಹಿಸಿರುವ ಅಂಕಿ ಅಂಕಿಆಂಶಗಳ ಪ್ರಕಾರ ಜುಲೈನಲ್ಲಿ ಗಂಡುಮಕ್ಕಳು-61 ಹೆಣ್ಣುಮಕ್ಕಳು-66, ಆಗಸ್ಟ್ ನಲ್ಲಿ ಗಂಡುಮಕ್ಕಳು -66, ಹೆಣ್ಣು ಮಕ್ಕಳು -70 ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತಿ ಮಂಗಳವಾರ, ಶುಕ್ರವಾರ, ಬುಧವಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮನೋಚೈತನ್ಯ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಆತ್ಮ ಹತ್ಯೆಗೆ ಪ್ರಯತ್ನಪಟ್ಟವರ ಜತೆ ಆಪ್ತಸಮಾಲೋಚನೆ ನಡೆಸುವ ಮೂಲಕ ಅವರ ಸಮಸ್ಯೆಗೆ ಪರಿಹಾರ ಕೊಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಮೈಸೂರು ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಶಿವಾನಂದ ಜೆ.ಮನೋಹರ್, ರಕ್ಷಿತಾಪೂಜಾರಿ ಮಾತನಾಡಿದರು. ಅಧ್ಯಕ್ಷ ತೆ ವಹಿಸಿದ್ದ ಪ್ರಾಂಶುಪಾಲ ಜಿ.ವಿನಯಕುಮಾರ್ ಮಾತನಾಡಿದರು. ಉಪನ್ಯಾಸಕಿ ಹೇಮಾವತಿ, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ನಿಧಿಶ್ರೀ ಪ್ರಾರ್ಥಿಸಿದರು.ದಿವ್ಯ ಸ್ವಾಗತಿಸಿದರು. ಮಾದಲಾಂಬಿಕೆ ವಂದಿಸಿದರು.4