ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಸಿದ್ದಾಪುರ ಗ್ರಾಮದಲ್ಲಿರುವ ಮುರಾರ್ಜಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉತ್ತಮ ಆರೋಗ್ಯವನ್ನು ವೃದ್ಧಿಸುವ ಮತ್ತು ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಶಿವಕುಮಾರ್ ತಿಳಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂಶುಪಾಲ ಶಿವಕುಮಾರ್, ಯೋಗವು ಕೇವಲ ದೈಹಿಕ ಕಸರತ್ತಲ್ಲ, ಅದು ದೇಹ ಮತ್ತು ಮನಸ್ಸನ್ನು ಜೋಡಿಸುವ ಅದ್ಭುತ ಕಲೆ. ಪ್ರತಿಯೊಬ್ಬರೂ ದಿನದಲ್ಲಿ ಕನಿಷ್ಠ 30 ನಿಮಿಷಗಳನ್ನು ಯೋಗಕ್ಕಾಗಿ ಮೀಸಲಿಟ್ಟರೆ ಸದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ದೈಹಿಕ ಶಿಕ್ಷಕಿ ಅನಿತಾ ಸಹ ಮಕ್ಕಳಿಗೆ ಯೋಗದ ಮಹತ್ವವನ್ನು ಇದೇ ರೀತಿ ವಿವರಿಸಿದರು. ಮುರಾರ್ಜಿ ವಸತಿ ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಪ್ರವೀಣ್, ಶಿಕ್ಷಕರಾದ ತಿಪ್ಪೇರುದ್ರಪ್ಪ, ಪ್ರಕಾಶ್, ರವಿ ಪ್ರಕಾಶ್, ವೆಂಕಟೇಶ್, ನಿಲಯ ಪಾಲಕರಾದ ಮಧು ಕುಮಾರ್, ಕಂಪ್ಯೂಟರ್ ಶಿಕ್ಷಕಿ ಶಿವಕುಮಾರಿ, ನವೀನ್ ಕುಮಾರ್, ಆರೋಗ್ಯ ಸಹಾಯಕಿ ಸುಜಾತಾ, ಮಂಜುನಾಥ್, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಸಿದ್ದಾಪುರ ಗ್ರಾಮದಲ್ಲಿರುವ ಮುರಾರ್ಜಿ ವಸತಿ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉತ್ತಮ ಆರೋಗ್ಯವನ್ನು ವೃದ್ಧಿಸುವ ಮತ್ತು ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಶಿವಕುಮಾರ್ ತಿಳಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂಶುಪಾಲ ಶಿವಕುಮಾರ್, ಯೋಗವು ಕೇವಲ ದೈಹಿಕ ಕಸರತ್ತಲ್ಲ, ಅದು ದೇಹ ಮತ್ತು ಮನಸ್ಸನ್ನು ಜೋಡಿಸುವ ಅದ್ಭುತ ಕಲೆ. ಪ್ರತಿಯೊಬ್ಬರೂ ದಿನದಲ್ಲಿ ಕನಿಷ್ಠ 30 ನಿಮಿಷಗಳನ್ನು ಯೋಗಕ್ಕಾಗಿ ಮೀಸಲಿಟ್ಟರೆ ಸದೃಢ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ
ಸಾಧ್ಯ ಎಂದು ತಿಳಿಸಿದರು. ದೈಹಿಕ ಶಿಕ್ಷಕಿ ಅನಿತಾ ಸಹ ಮಕ್ಕಳಿಗೆ ಯೋಗದ ಮಹತ್ವವನ್ನು ಇದೇ ರೀತಿ ವಿವರಿಸಿದರು. ಮುರಾರ್ಜಿ ವಸತಿ ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮತ್ತು ಶಿಕ್ಷಕರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ಪ್ರವೀಣ್, ಶಿಕ್ಷಕರಾದ ತಿಪ್ಪೇರುದ್ರಪ್ಪ, ಪ್ರಕಾಶ್, ರವಿ ಪ್ರಕಾಶ್, ವೆಂಕಟೇಶ್, ನಿಲಯ ಪಾಲಕರಾದ ಮಧು ಕುಮಾರ್, ಕಂಪ್ಯೂಟರ್ ಶಿಕ್ಷಕಿ ಶಿವಕುಮಾರಿ, ನವೀನ್ ಕುಮಾರ್, ಆರೋಗ್ಯ ಸಹಾಯಕಿ ಸುಜಾತಾ, ಮಂಜುನಾಥ್, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂನ್ 20 ರಂದು ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಕೂಡ್ಲಿಗಿ ಪೊಲೀಸ್ ಉಪವಿಭಾಗ, ಪೊಲೀಸ್ ಠಾಣೆ, ತಾಲೂಕಾಡಳಿತ ಹಾಗೂ ವಿವಿಧ ಸಮುದಾಯಗಳ ಮುಖಂಡರು ಮತ್ತು ನಾಗರಿಕರ ಸಹಯೋಗದಲ್ಲಿ ಈ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಡಿ.ವೈ.ಎಸ್ಪಿ ಮಲ್ಲೇಶಪ್ಪ ದೊಡ್ಡಮನೆ ಅವರು, ಹಬ್ಬವು ಸಂಭ್ರಮದ ಸಂಕೇತವಾಗಿದ್ದು, ಯಾವುದೇ ಕಾರಣಕ್ಕೂ ಶಾಂತಿ ಭಂಗವಾಗಬಾರದು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ ಎಂದು ಸೂಚಿಸಿದರು. ಸರ್ವಜನಾಂಗದವರು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕಿದ್ದು, ಮೊಹರಂ ಸುಲಲಿತವಾಗಿ ನಡೆಯಲು ಇಲಾಖೆಯು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು. ಸಮುದಾಯಗಳ ಹಿರಿಯರು, ಪ್ರಭಾವಿಗಳು, ಪೋಷಕರು, ಮುಖಂಡರು, ಜನಪ್ರತಿನಿಧಿಗಳು ಮತ್ತು ಎಲ್ಲಾ ಸಮುದಾಯಗಳ ಪ್ರಮುಖರು ಇಲಾಖೆಯೊಂದಿಗೆ ಸಹಕರಿಸಬೇಕು ಹಾಗೂ ತಮ್ಮ ಯುವಕರನ್ನು ಹದ್ದುಬಸ್ತಿನಲ್ಲಿಟ್ಟು, ಹಬ್ಬದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ತಿಳಿಹೇಳಬೇಕು ಎಂದು ಅವರು ಕರೆ ನೀಡಿದರು. ಶಾಂತಿ ಭಂಗ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿ.ವೈ.ಎಸ್ಪಿ ಕಠಿಣ ಎಚ್ಚರಿಕೆ ನೀಡಿದರು. ಹಬ್ಬದ ಸಂದರ್ಭದಲ್ಲಿ ಕೋಮುಗಲಭೆ, ದಂಗೆ, ದೊಂಬಿ, ಗುಂಪು ಘರ್ಷಣೆ, ಹೊಡೆದಾಟ, ಹಲ್ಲೆಗಳಂತಹ ದುಷ್ಕೃತ್ಯಗಳಲ್ಲಿ ಭಾಗಿಯಾದವರಿಗೆ ಮತ್ತು ಘಟನೆಗಳಿಗೆ ಕುಮ್ಮಕ್ಕು ನೀಡಿದವರಿಗೆ, ಉತ್ತೇಜಿಸಿದವರಿಗೆ ಅಥವಾ ಸಹಕರಿಸಿದವರಿಗೆ ಕಾನೂನಿನಲ್ಲಿ ಯಾವುದೇ ಕ್ಷಮೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಬ್ಬದ ಸಂದರ್ಭದಲ್ಲಿ ಯಾರೂ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಮತ್ತು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಎಂದರು. ಶಾಂತಿ ಸೌಹಾರ್ದತೆಗೆ ಹೆಚ್ಚು ಆದ್ಯತೆ ನೀಡಬೇಕು ಮತ್ತು ನಾಗರಿಕರು, ಸರ್ವಧರ್ಮೀಯರು ಇಲಾಖೆಯೊಂದಿಗೆ ಎಲ್ಲಾ ರೀತಿಯಲ್ಲಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಹಬ್ಬದ ಸಂದರ್ಭದಲ್ಲಿ ಎಲ್ಲರ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಾನೂನಿನ ಗಾಂಭೀರ್ಯ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸಿ, ಸಂಯಮ, ಶಾಂತಿ ಹಾಗೂ ಸೌಹಾರ್ದತೆಯಿಂದ ವರ್ತಿಸುವಂತೆ ಜಾಗೃತಿ ಮೂಡಿಸಬೇಕು. ಪ್ರಭಾವಿಗಳು, ಸಂಘ ಸಂಸ್ಥೆಗಳ ಪ್ರಮುಖರು, ರಾಜಕಾರಣಿಗಳು, ಹಿರಿಯರು ಮತ್ತು ಮುಖಂಡರು ತಮ್ಮ ಯುವಕರನ್ನು ನಿಯಂತ್ರಣದಲ್ಲಿಟ್ಟು, ಇಲಾಖೆಯೊಂದಿಗೆ ಸಹಕರಿಸಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ವಹಿಸಬೇಕು ಎಂದರು. ಮೊಹರಂ ಹಬ್ಬ ಆಚರಣೆ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಭದ್ರತೆಯನ್ನು ಜರುಗಿಸಲಾಗಿದೆ. ಪ್ರಮುಖ ಬೀದಿಗಳು, ಧಾರ್ಮಿಕ ಕೇಂದ್ರಗಳ ಬಳಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅಗತ್ಯವಿರುವ ಕಡೆ ಮೀಸಲು ಪೊಲೀಸ್ ಪಡೆಯನ್ನು ನೇಮಿಸಿ ಸೂಕ್ತ ಬಿಗಿ ಭದ್ರತೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ ತೀವ್ರ ನಿಗಾ ವಹಿಸಲಾಗಿರುತ್ತದೆ ಎಂದು ಡಿ.ವೈ.ಎಸ್ಪಿ ತಿಳಿಸಿದರು. ಈ ಶಾಂತಿ ಸಭೆಯಲ್ಲಿ ತಹಶಿಲ್ದಾರರಾದ ವಿ.ಕೆ. ನೇತ್ರಾವತಿ ಹಾಗೂ ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ಅವರು ಮಾತನಾಡಿದರು. ಹಲವು ಮುಖಂಡರು ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಪಿಎಸ್ಐ ಸಿ ಪ್ರಕಾಶ ಸೇರಿದಂತೆ ಮುಸ್ಲಿಂ ಧರ್ಮದ ಪ್ರಮುಖರು, ವಿವಿಧ ಧರ್ಮಗಳ ಗುರುಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ಹಿರಿಯರು, ನಾಗರಿಕರು, ವಿವಿಧ ಪಕ್ಷಗಳ ಪ್ರಮುಖರು ಮತ್ತು ಯುವಕರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.4
- ಕೂಡ್ಲಿಗಿ ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆರಾಯನ ಆಗಮನಕ್ಕಾಗಿ ತಾಲ್ಲೂಕಿನಾದ್ಯಂತ ವಿವಿಧ ಆಚರಣೆಗಳು ಮತ್ತು ಪೂಜೆಗಳನ್ನು ನಡೆಸಲಾಗುತ್ತಿದ್ದು, ಅದರ ಭಾಗವಾಗಿ ಶನಿವಾರ ಅಮ್ಮನಕೆರಿ ಗ್ರಾಮದಲ್ಲಿ ವಿಶೇಷ ಗುರ್ಜಿ ಪೂಜೆ ಸಲ್ಲಿಸಲಾಯಿತು. ಈ ಆಚರಣೆಯಲ್ಲಿ, ಜೋಳದ ರೊಟ್ಟಿ ಬೇಯಿಸುವ ಹಂಚಿನ ಮೇಲೆ ಸೆಗಣಿಯಿಂದ ತಯಾರಿಸಿದ ಗುರ್ಜಿಯನ್ನು ಒಬ್ಬ ಯುವಕನ ತಲೆಯ ಮೇಲೆ ಇಟ್ಟುಕೊಂಡು ಮನೆ ಮನೆಗೆ ಹೋಗಲಾಯಿತು. ಈ ವೇಳೆ ಮಹಿಳೆಯರು "ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ. ಹಳ್ಳಕೊಳ್ಳ ಸುತ್ತಾಡಿ ಬಂದೆ. ಕಾರ ಮಳೆಯೋ ಕಪ್ಪತ್ತ ಮಳೆಯೋ.. ಸುರಿ ಸುರಿ ಸುರಿಯೋ ಮಳೆರಾಯ, ಬಣ್ಣ ಕೊಡ್ತೀನಿ ಬಾರಲೇ ಮಳೆಯೇ ಸುಣ್ಣ ಕೊಡ್ತೀನಿ ಸುರಿಯಲೇ ಮಳೆಯೇ" ಎಂದು ಹಾಡುತ್ತಾ ಮಳೆಗಾಗಿ ಪ್ರಾರ್ಥಿಸಿದರು. ಅಮ್ಮನಕೆರಿ ಗ್ರಾಮದಲ್ಲಿ ಬೇಗ ಮಳೆ ಬರುವಂತೆ ಕೋರಿ ಈ ಗುರ್ಜಿ ಪೂಜೆಯನ್ನು ಆಚರಿಸಲಾಯಿತು.1
- ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.1
- ಚಳ್ಳಕೆರೆ ತಾಲೂಕಿನ ರೈತ ಸಂಘಟನೆಗಳ ಮನವಿಗೆ ಸ್ಪಂದಿಸಿದ ಸರ್ಕಾರ, ಶೇಂಗಾ ಬಿತ್ತನೆ ಬೀಜದ ದರವನ್ನು ಕಡಿತಗೊಳಿಸಿದ್ದು, ಇದು ರೈತರಿಗೆ ಸಂತಸ ತಂದಿದೆ. ತಾಲೂಕಿನ ರೈತ ಸಂಘಟನೆಗಳ ಕೋರಿಕೆಯ ಮೇರೆಗೆ ಮಾನ್ಯ ಶಾಸಕ ಟಿ. ರಘುಮೂರ್ತಿಯವರು ಸರ್ಕಾರಕ್ಕೆ ಪತ್ರ ಬರೆದು ದರ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಇದರ ಪರಿಣಾಮವಾಗಿ, ಸರ್ಕಾರವು ಪ್ರತಿ ಕ್ವಿಂಟಲ್ ಶೇಂಗಾ ಬಿತ್ತನೆ ಬೀಜದ ದರವನ್ನು ₹11,300 ರಿಂದ ₹10,800ಕ್ಕೆ ಇಳಿಸಿದೆ. ಸಾಮಾನ್ಯ ವರ್ಗದ ರೈತರಿಗೆ ₹1,400 ಸಹಾಯಧನ ದೊರೆಯಲಿದ್ದು, ಅವರು ತಮ್ಮ ಪಾಲಿನ ₹9,400 ಪಾವತಿಸಿ ಬಿತ್ತನೆ ಬೀಜ ಪಡೆಯಬಹುದಾಗಿದೆ. ಅದೇ ರೀತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ₹2,100 ಸಹಾಯಧನ ದೊರೆಯಲಿದ್ದು, ಅವರು ಕೇವಲ ₹8,700 ಪಾವತಿಸಿ ಬಿತ್ತನೆ ಬೀಜವನ್ನು ಪಡೆಯಲು ಸಾಧ್ಯವಿದೆ. ಸಹಾಯಕ ಕೃಷಿ ನಿರ್ದೇಶಕ ಡಾ. ಎಸ್.ಟಿ. ರಮೇಶ್ ಅವರು, ಶೇಂಗಾ ಬೆಳೆ ಬೆಳೆಯುವ ರೈತರು ಸರ್ಕಾರದ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿ ಸರ್ಕಾರವು ಶೇಂಗಾ ಬಿತ್ತನೆ ಬೀಜದ ದರ ಕಡಿತಗೊಳಿಸಿರುವುದು ರೈತರಿಗೆ ದೊಡ್ಡ ನಿರಾಳತೆ ತಂದಿದೆ.1
- ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಈ ಕುರಿತು ಶುಕ್ರವಾರ ರಾತ್ರಿ 8:30 ಕ್ಕೆ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಳ್ಳಕೆರೆ ತಾಲ್ಲೂಕಿನ ಎನ್.ಗೌರೀಪುರ ಗ್ರಾಮದಲ್ಲಿ ಶ್ರೀ ಉಮಾ ಮಹೇಶ್ವರ ದೇವರ ಕಾರ್ತಿಕೋತ್ಸವದ ಸಂದರ್ಭದಲ್ಲಿ ಆದಿಕರ್ನಾಟಕ ಜಾತಿಗೆ ಸೇರಿದ ಡಿ.ಓಬಣ್ಣ ಮತ್ತು ಇತರರು ದೇವರಿಗೆ ಡ್ರಮ್, ವಾದ್ಯ ಹಾಗೂ ತಮಟೆಗಳಿಂದ ಸೇವೆ ಸಲ್ಲಿಸುತ್ತಿದ್ದ ವೇಳೆ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ, ಲಿಂಗಾಯತ ಜಾತಿಗೆ ಸೇರಿದ ಆರೋಪಿಗಳು ಜಾತಿ ನಿಂದನೆ ಮಾಡಿ, ಕೈಕಾಲುಗಳಿಂದ ಹಲ್ಲೆ ನಡೆಸಿದ್ದರು ಎಂದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಚಳ್ಳಕೆರೆ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀಧರ ವೆಂಕಟರಮಣ ಶೆಟ್ಟಿ ಅವರು ಕೈಗೊಂಡಿದ್ದರು. ಅವರು ಆರೋಪಿಗಳನ್ನು ಬಂಧಿಸಿ, ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.1
- ಗದಗ್ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೊಂಚಿಗೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಳವಡಿಸಲಾಗಿರುವ ಹೈ ಮಾಸ್ಕ್ ದೀಪ ಇಂದಿಗೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಹೈ ಮಾಸ್ಕ್ ದೀಪ ಸರಿಯಾಗಿ ಆನ್ ಆಗದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರು 'ನೋಡೋಣ' ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ.1
- ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದ ಹತ್ತಿರವಿರುವ ಹಾವೇರಿ ಜಿಲ್ಲಾ ಹಾಲು ಒಕ್ಕೂಟದ ಮೇಗಾ ಡೈರಿ ಘಟಕಕ್ಕೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕೆ.ಎಂ.ಎಫ್. ಅಧ್ಯಕ್ಷರಾದ ಶ್ರೀ ಮಂಜನಗೌಡ ಪಾಟೀಲ್, ಉಪಾಧ್ಯಕ್ಷರಾದ ಶ್ರೀ ಉಜ್ಜನಗೌಡ ಮಾವೀನತೋಪ, ಎಂ.ಡಿ. ಶ್ರೀ ಪ್ರದೀಪ ಎಸ್.ಎಂ. ಸೇರಿದಂತೆ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.4
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಗ್ರಾಮದಲ್ಲಿ, ಮಳೆಗಾಗಿ 'ಗೊರ್ಜೆವ್ವ' (ಗೌರವ್ವ) ಹೊತ್ತ ಮಕ್ಕಳಿಗೆ ಗಂಗೆ ಪೂಜೆ ನೆರವೇರಿಸಲಾಯಿತು. ಗೊರ್ಜೆವ್ವಳ ಮೂರ್ತಿ ಹೊತ್ತ ಬಾಲಕ ಗ್ರಾಮದಾದ್ಯಂತ ಮನೆ ಮನೆಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ವರುಣ ದೇವರ ಕೃಪೆಗೆ ಪ್ರಾರ್ಥಿಸಲಾಯಿತು. 'ಗೊರ್ಜೆಮ್ಮ' ಅಥವಾ ಗೌರಮ್ಮ ಆರಾಧನೆಯು ಕರ್ನಾಟಕದ ಗ್ರಾಮೀಣ ಜಾನಪದ ಸಂಪ್ರದಾಯದ ಒಂದು ವಿಶಿಷ್ಟ ಭಾಗವಾಗಿದೆ. ಇದು ಮುಖ್ಯವಾಗಿ ಮಹಿಳಾ ಶಕ್ತಿಯ ಆರಾಧನೆಯನ್ನು, ಗ್ರಾಮೀಣ ಪಶುಪಾಲನಾ ಸಮುದಾಯಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ, ಪ್ರಕೃತಿ, ಕೃಷಿ ಮತ್ತು ದೈವಭಕ್ತಿಯ ಸಂಗಮವಾಗಿರುವ ಆಚರಣೆಯಾಗಿದೆ. ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಗೊರ್ಜೆವ್ವ ಆಚರಣೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಸಲಾಗುತ್ತದೆ. ಗೊರ್ಜೆವ್ವ (ಗೌರವ್ವ) ದೇವಿಯನ್ನು ಪಶುಪಾಲಕರ ಮತ್ತು ಅವರ ಜಾನುವಾರುಗಳ ರಕ್ಷಕಿಯಾಗಿ ಪೂಜಿಸಲಾಗುತ್ತದೆ. ಈ ಸಂದರ್ಭದಲ್ಲಿ, ಮಹಿಳೆಯರು, ಯುವತಿಯರು ಮತ್ತು ಮಕ್ಕಳು ಒಗ್ಗೂಡಿ ಅರಿಶಿನ, ಮಣ್ಣು ಮತ್ತು ನೈಸರ್ಗಿಕ ಸಾಮಗ್ರಿಗಳನ್ನು ಬಳಸಿ ಗೌರಮ್ಮಳ (ಗೊರ್ಜೆಮ್ಮ) ವಿಗ್ರಹವನ್ನು ಸರಳ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ತಯಾರಿಸುತ್ತಾರೆ. ಗೊರ್ಜೆವ್ವ ಉತ್ಸವವನ್ನು ರಾತ್ರಿ ಸಮಯದಲ್ಲಿ ಆಚರಿಸಲಾಗುತ್ತದೆ. ದೇವಿಯ ವಿಗ್ರಹವನ್ನು ಗ್ರಾಮದ ವಿವಿಧ ದೇವಾಲಯಗಳಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಮೆರವಣಿಗೆಯಲ್ಲಿ ಮಹಿಳೆಯರು ಕೈಯಲ್ಲಿ ತೈಲದೀಪಗಳನ್ನು ಹಿಡಿದು, ಹೂವುಗಳನ್ನು ಅರ್ಪಿಸಿ ಭಕ್ತಿಭಾವದಿಂದ ಸಾಗುತ್ತಾರೆ. ಹಬ್ಬದ ಪ್ರಮುಖ ಆಕರ್ಷಣೆಯಾಗಿ, ಪುರುಷ ಭಕ್ತರು ದೇವಿಯ ಮೇಲಿನ ಅಚಲ ಭಕ್ತಿಯ ಸಂಕೇತವಾಗಿ ಮುಖ್ಯ ದೇವಾಲಯದ ಎದುರು 'ಉರುಳು ಸೇವೆ' ಮಾಡುತ್ತಾರೆ. ಜಾನಪದ ಹಾಡುಗಳು ಮತ್ತು ಸೋಬಾನೆ ಪದಗಳ ಮೂಲಕ ಗೊರ್ಜೆವ್ವಳನ್ನು ಆರಾಧಿಸಲಾಗುತ್ತದೆ. ಮಹಿಳೆಯರು ವಿಶೇಷವಾಗಿ ಸೋಬಾನೆ ಪದಗಳನ್ನು ಹಾಗೂ ದೇವಿಯ ಮಹಿಮೆಯನ್ನು ಸಾರುವ ಜಾನಪದ ಗೀತೆಗಳನ್ನು ಹಾಡುತ್ತಾರೆ. "ಗಂಗಮ್ಮ ಗೌರಮ್ಮ" ಮುಂತಾದ ಭಕ್ತಿಗೀತೆಗಳನ್ನು ಹಾಡಿ, ಭಜನೆ ಮಾಡುವ ಮೂಲಕ ಮಳೆ ದೇವರನ್ನು ಆಹ್ವಾನಿಸಲಾಗುತ್ತದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ, ಮಕ್ಕಳು ಅರೆಬೆತ್ತಲಾಗಿ ಮಣ್ಣಿನ ಗೊರ್ಜೆವ್ವಳನ್ನು ಕಟ್ಟಿಗೆಯ ಹಲಗೆಯ ಮೇಲೆ ಪ್ರತಿಷ್ಠಾಪಿಸಿಕೊಂಡು ವಿಶೇಷವಾಗಿ ಪೂಜಿಸುತ್ತಾರೆ. ಒಬ್ಬ ಅರೆಬೆತ್ತಲೆಯ ಬಾಲಕ ಅದನ್ನು ತನ್ನ ತಲೆಯ ಮೇಲೆ ಹೊತ್ತು ಗ್ರಾಮದ ಮನೆ ಮನೆಗೆ ತೆರಳಿ ಗೊರ್ಜೆವ್ವಳನ್ನು ಆರಾಧಿಸುತ್ತಾನೆ. ಮನೆಯ ಬಾಗಿಲಿಗೆ ಬಂದ ಗೊರ್ಜೆವ್ವಳಿಗೆ ಪೂಜೆ ಸಲ್ಲಿಸುವಂತೆ ಕೋರಲಾಗುತ್ತದೆ. ಮನೆಯವರು ಗೊರ್ಜೆವ್ವಳನ್ನು ಭಕ್ತಿಯಿಂದ ಸ್ವಾಗತಿಸಿ, ಹೊತ್ತವರಿಗೆ ಗಂಗಾಭಿಷೇಕ ಮಾಡಿ ನಮಿಸುತ್ತಾರೆ ಮತ್ತು ಆರಾಧಕರಿಗೆ ಧಾನ್ಯಗಳು ಹಾಗೂ ದಕ್ಷಿಣೆಯನ್ನು ನೀಡಿ ಕಳುಹಿಸಿಕೊಡುತ್ತಾರೆ. ಗೊರ್ಜೆವ್ವಳ ಆರಾಧಕರು ಜನರು ನೀಡಿದ ಧಾನ್ಯಗಳನ್ನು ಸಂಗ್ರಹಿಸಿ, ನಂತರ ಒಗ್ಗೂಡಿ ತಿಂಡಿ ತಿನಿಸುಗಳನ್ನು ತಯಾರಿಸಿ ಗೊರ್ಜೆವ್ವಳಿಗೆ ಎಡೆ ಮಾಡಿ ನಮಿಸುತ್ತಾರೆ. ನಂತರ ಶ್ರದ್ಧಾಭಕ್ತಿಯಿಂದ ಪ್ರಸಾದವನ್ನು ಸೇವಿಸುತ್ತಾರೆ. ಈ ಆರಾಧನೆಯಲ್ಲಿ ಬಾಲಕರು ಮತ್ತು ಬಾಲೆಯರ ದಂಡೇ ಭಾಗಿಯಾಗಿರುತ್ತದೆ. ಗೊರ್ಜೆವ್ವಳ ಆರಾಧಕರು ಗ್ರಾಮವೆಲ್ಲಾ ಅಲೆದಾಡಿದ ನಂತರ ಕೊನೆಗೆ ಗ್ರಾಮದಾಚೆಯ ದೇವಸ್ಥಾನದಲ್ಲಿ ತಂಗುತ್ತಾರೆ. ಇದು ಒಂದು ವಿಶಿಷ್ಟ ಮತ್ತು ವಿಶೇಷ ಜಾನಪದ ಆಚರಣೆಯಾಗಿದೆ.4