logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸೆ.21ರಂದು ಮಲ್ಲಾಬಾದ ಕನಕಚೌಕದಲ್ಲಿ ಬೃಹತ್ ಪ್ರತಿಭಟನೆ | 12 ಇಂಚಿನ ಪೈಪ್‌ಲೈನ್, 60 ಕೆರೆಗಳಿಗೆ ನೀರು, ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ ಸೆ.21ರಂದು ಮಲ್ಲಾಬಾದ ಕನಕಚೌಕದಲ್ಲಿ ಬೃಹತ್ ಪ್ರತಿಭಟನೆ | 12 ಇಂಚಿನ ಪೈಪ್‌ಲೈನ್, 60 ಕೆರೆಗಳಿಗೆ ನೀರು, ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ (ಹೆದ್ದಾರಿ ಬಂದ್: ರೈತ ಸಂಘದ ಎಚ್ಚರಿಕೆ) ಅಫಜಲಪುರ: ತಾಲೂಕಿನ ರೈತರ ಹಾಗೂ ಸಾರ್ವಜನಿಕರ ನೀರಿನ ಅಗತ್ಯಗಳನ್ನು ಕಡೆಗಣಿಸಿ ಭೀಮಾ ನದಿಯ ಬೋರಿ ನೀರನ್ನು ಹೊರತಾಲೂಕಿಗೆ ಹರಿಸುವುದನ್ನು ವಿರೋಧಿಸಿ ಹಾಗೂ ವಿವಿಧ ನೀರಾವರಿ ಮತ್ತು ಬರ ಪರಿಹಾರದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಫಜಲಪುರ ತಾಲೂಕು ಘಟಕದಿಂದ ಸೆ.21ರಂದು ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಬುಧವಾರ ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರರ ಮೂಲಕ ಮುನ್ಸೂಚನಾ ಪತ್ರ ಸಲ್ಲಿಸಿರುವ ರೈತ ಸಂಘದ ಪದಾಧಿಕಾರಿಗಳು, ಸೆ.21ರಂದು ಬೆಳಿಗ್ಗೆ 11 ಗಂಟೆಗೆ ಮಲ್ಲಾಬಾದ ಕನಕಚೌಕದ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ತಾಲೂಕಿನಲ್ಲಿ ಬರದ ಪರಿಸ್ಥಿತಿ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಫಜಲಪುರದ ನೀರಿನ ಅಗತ್ಯವನ್ನು ಮೊದಲು ಪೂರೈಸದೆ ಹೊರತಾಲೂಕಿಗೆ ಭೀಮಾ ನೀರು ಹರಿಸುವ ಕ್ರಮವನ್ನು ಖಂಡಿಸಿರುವ ಸಂಘ, ಅಫಜಲಪುರದ ಬಾಯಾರಿಕೆ ತೀರಿದ ಬಳಿಕವೇ ಆಳಂದ ಭಾಗಕ್ಕೆ ನೀರು ಹರಿಸಬೇಕು ಎಂದು ಆಗ್ರಹಿಸಿದೆ. 60 ಕೆರೆಗಳಿಗೆ ತಕ್ಷಣ ನೀರು ತುಂಬಿಸಿ ತಾಲೂಕಿನ ಸುಮಾರು 60 ಕೆರೆಗಳು ನೀರಿಲ್ಲದೆ ಬತ್ತಿಹೋಗಿವೆ. ಭೀಮಾ ನದಿಯಿಂದ ಈ ಕೆರೆಗಳಿಗೆ ತಕ್ಷಣ ನೀರು ಹರಿಸಿ ತುಂಬಿಸಬೇಕು. ಕೆರೆಗಳಿಗೆ ಅಳವಡಿಸಿರುವ 2–3 ಇಂಚಿನ ಪೈಪ್‌ಗಳಿಂದ ಸಮರ್ಪಕ ಪ್ರಮಾಣದಲ್ಲಿ ನೀರು ಹರಿಯುತ್ತಿಲ್ಲ. ಆದ್ದರಿಂದ ಅವುಗಳನ್ನು ತೆರವುಗೊಳಿಸಿ ಕನಿಷ್ಠ 12 ಇಂಚಿನ ಪೈಪ್‌ಲೈನ್ ಅಳವಡಿಸಬೇಕು ಎಂದು ಒತ್ತಾಯಿಸಲಾಗಿದೆ. ಅಲ್ಲದೆ, ತಾಲೂಕಿನ ಸುಮಾರು 80 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವುದರಿಂದ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಅಫಜಲಪುರ ಪಟ್ಟಣದಲ್ಲಿಯೂ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. 25 ವರ್ಷಗಳಿಂದ ವಂಚಿತ ಭಾಗಗಳಿಗೆ ನೀರು ನೀಡಿ ಕಳೆದ 25 ವರ್ಷಗಳಿಂದ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಕುಡುಗನೂರು, ಸಿಂಧನೂರು ಹಾಗೂ ಅಂಕಲಗಿ ಭಾಗದ ಕ್ಯಾನಲ್‌ಗಳಿಗೆ ತಕ್ಷಣ ನೀರು ಬಿಡುಗಡೆ ಮಾಡಬೇಕು. ನೀರಾವರಿ ಕೊರತೆಯಿಂದ ತಾಲೂಕಿನ ಹಲವು ಗ್ರಾಮಗಳ ರೈತರು ಮತ್ತು ಕೂಲಿಕಾರ್ಮಿಕರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯೋಗ ಹಾಗೂ ನೀರಾವರಿ ಮೂಲಸೌಕರ್ಯ ಕಲ್ಪಿಸುವ ಮೂಲಕ ವಲಸೆ ತಡೆಯಬೇಕು ಎಂದು ಆಗ್ರಹಿಸಲಾಗಿದೆ. ಅಮರ್ಜಾ ಜಲಾಶಯ ಹಾಗೂ ಕೆರೆಗಳಿಗೆ ನೀರು ಹರಿಸುವ ಸಲುವಾಗಿ ಚಿಂಚೋಳಿ, ಬಳರ್ಗಿ, ಬಡದಾಳ ಹಾಗೂ ರೇವೂರ ಭಾಗದಲ್ಲಿ ಪೈಪ್‌ಲೈನ್ ಅಳವಡಿಕೆಯಿಂದ ಜಮೀನು ಕಳೆದುಕೊಂಡ ಅಥವಾ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅಫಜಲಪುರ ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಎಂದು ಅಧಿಕೃತವಾಗಿ ಘೋಷಿಸಬೇಕು. ಕಲಬುರಗಿ ಜಿಲ್ಲೆಯ ಎಲ್ಲ ತಾಲೂಕುಗಳ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಸಂಕಷ್ಟದಲ್ಲಿರುವ ರೈತರಿಗೆ ಕನಿಷ್ಠ ಮೂರು ವರ್ಷಗಳ ಕಾಲ ಬಡ್ಡಿರಹಿತ ಕೃಷಿ ಸಾಲ ನೀಡಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ವಿಶೇಷ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ತೆರೆಯಬೇಕು ಎಂದು ರೈತ ಸಂಘ ಆಗ್ರಹಿಸಿದೆ. ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಬೇಡಿಕೆಗಳ ಈಡೇರಿಕೆ ಕುರಿತು ಲಿಖಿತ ಭರವಸೆ ನೀಡುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಾಂತೇಶ್ ಎಸ್. ಜಮಾದಾರ್, ತಾಲೂಕು ಅಧ್ಯಕ್ಷ ಮಂಜುನಾಥ ನಾಯ್ಕೋಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ್ ಗೋಳೇ, ತಾಲೂಕು ಗೌರವಾಧ್ಯಕ್ಷ ಅರವಿಂದ್ ದೊಡ್ಮನಿ, ಉಪಾಧ್ಯಕ್ಷ ದತ್ತು ಪೂಜಾರಿ, ಪ್ರಶಾಂತ ರಾಚಗೋಳ, ಲಕ್ಷ್ಮೀಪುತ್ರ ಜಮಾದಾರ, ಮಲ್ಲಾಬಾದ, ರೇವಣಸಿದ್ದ ಕಲಶೆಟ್ಟಿ, ಬಡದಾಳ ಸೇರಿದಂತೆ ತಾಲೂಕಿನ ಸಮಸ್ತ ರೈತ ಬಾಂಧವರು ಉಪಸ್ಥಿತರಿದ್ದರು.

7 hrs ago
user_Y..k.pujari
Y..k.pujari
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
7 hrs ago
4bbf0720-7897-4477-9627-9cdc1dc9ea68

More news from ಕರ್ನಾಟಕ and nearby areas
  • ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. #ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. DK Shivakumar Star Kannada News 24×7 Star Kannada News 24×7 Yash
    1
    ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. 
#ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. DK Shivakumar Star Kannada News 24×7 Star Kannada News 24×7 Yash
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
    1
    ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    1
    ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ 
ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು  ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು.
“ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ  ಶುಭ ಹಾರೈಸಿದರು.
ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    8 hrs ago
  • ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    1
    ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ  ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು
ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ.  ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ  ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    20 hrs ago
  • Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    1
    Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? 
Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    12 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ತಾಳಿಕೋಟಿ ವರದಿ 
ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು  ಪೂರ್ವಭಾವಿ ಸಭೆ.
ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    16 hrs ago
  • ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು
    1
    ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ  ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು 
ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು
    user_User1523
    User1523
    Chittapur, Kalaburagi•
    16 hrs ago
  • ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....! ವೀಕ್ಷಿಸಿ.. ವಿಶೇಷ.. ವರದಿ.... ವರದಿ: ರವಿಕುಮಾರ್ ಬಡಿಗೇರ. ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....! ವೀಕ್ಷಿಸಿ.. ವಿಶೇಷ.. ವರದಿ.... ವರದಿ: ರವಿಕುಮಾರ್ ಬಡಿಗೇರ.
    1
    ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....!

ವೀಕ್ಷಿಸಿ.. ವಿಶೇಷ.. ವರದಿ....

ವರದಿ: ರವಿಕುಮಾರ್ ಬಡಿಗೇರ.
ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....!
ವೀಕ್ಷಿಸಿ.. ವಿಶೇಷ.. ವರದಿ....
ವರದಿ: ರವಿಕುಮಾರ್ ಬಡಿಗೇರ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.