Shuru
Apke Nagar Ki App…
ಅಪರಿಚಿತ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವು.. ಚಿತ್ರದುರ್ಗ ನಗರದ ಹೊರವಲಯದಲ್ಲಿ ಕಣಿವೆ ಮಾರಮ್ಮ ನಗರ ಮುಂಭಾಗದ ಕುರಿ ತಿಮ್ಮಪ್ಪ ಬಡಾವಣೆ ಮುಂದೆ ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಹೋಗುವ ಹಳೇ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್-48 ರಸ್ತೆಯನ್ನು ದಾಟುತಿದ್ದ ಸುಮಾರು 50-55 ವಯಸ್ಸಿನ ಅಪರಿಚಿತ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುರಿತು ಪೊಲೀಸ್ ವೃತ್ತ ನಿರೀಕ್ಷಕರು, ಬಡಾವಣೆ ವೃತ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Suresh Belagere
ಅಪರಿಚಿತ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವು.. ಚಿತ್ರದುರ್ಗ ನಗರದ ಹೊರವಲಯದಲ್ಲಿ ಕಣಿವೆ ಮಾರಮ್ಮ ನಗರ ಮುಂಭಾಗದ ಕುರಿ ತಿಮ್ಮಪ್ಪ ಬಡಾವಣೆ ಮುಂದೆ ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಹೋಗುವ ಹಳೇ ರಾಷ್ಟ್ರೀಯ ಹೆದ್ದಾರಿ ಎನ್‌ಹೆಚ್-48 ರಸ್ತೆಯನ್ನು ದಾಟುತಿದ್ದ ಸುಮಾರು 50-55 ವಯಸ್ಸಿನ ಅಪರಿಚಿತ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಮಹಿಳೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಕುರಿತು ಪೊಲೀಸ್ ವೃತ್ತ ನಿರೀಕ್ಷಕರು, ಬಡಾವಣೆ ವೃತ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
More news from ಕರ್ನಾಟಕ and nearby areas
- Post by Suresh Belagere1
- ಚಪ್ಪಲಿ ಪೊರಕೆ ತೋರಿಸುವುದು ಬಿಜೆಪಿ ಸಂಸ್ಕೃತಿ ಎಂದು ಚಿತ್ರದುರ್ಗದಲ್ಲಿ ಯೋಗೀಶ್ ಬಾಬು ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ದ್ರಾಕ್ಷ ರಸ ಮಂಡಳಿ ಅಧ್ಯಕ್ಷರಾದ ಯೋಗೀಶ್ ಬಾಬು ಅವರು ಮಾತನಾಡಿದ್ದು ಯಾರಿಗೂ ಕೂಡ ಅಲ್ಲಿಗೆ ಬರ್ರಿ ಇಲ್ಲಿಗೆ ಬರ್ರಿ ಎಂದು ಸವಾಲ್ ಹಾಕುವುದು ಸರಿಯಲ್ಲ, ಎಲ್ಲರಿಗೂ ಕೂಡ ವಾಕ್ ಸ್ವಾತಂತ್ರ್ಯ ಇರುತ್ತದೆ. ದಾವಣಗೆರೆಗೆ ಬನ್ನಿ ಎಂದು ಹೇಳುವುದು ತಪ್ಪು ಎಂದು ಟಾಂಗ್ ಕೊಟ್ಟಿದ್ದಾರೆ1
- ಚಳ್ಳಕೆರೆ ನಗರದಲ್ಲಿ ನಗರಸಭೆ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಮಂಗಳವಾರ ಬೆಳ್ಳಂ ಬೆಳಗ್ಗೆ ಜೋರಾಗಿ ಆರಂಭವಾಗಿದೆ. ಜೆಸಿಬಿ ಯಂತ್ರಗಳ ಸದ್ದು ಮಧ್ಯೆ ಕಾರ್ಯಾಚರಣೆ ಮುಂದುವರಿದಿದ್ದು, ನಗರದಲ್ಲಿ ಚಟುವಟಿಕೆ ಹೆಚ್ಚಾಗಿದೆ. ಚಳ್ಳಕೆರೆ ನಗರಸಭೆಗೆ ಸೇರಿದ ನೆಹರು ಬೆಂಗಳೂರು ರಸ್ತೆ, ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಯಲ್ಲಿರುವ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಬಹುಕಾಲದಿಂದ ನಿರೀಕ್ಷಿಸಿದ್ದ ಕ್ರಮ ಇದೀಗ ಕೈಗೆತ್ತಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ದಿಟ್ಟ ಮಹಿಳಾ ಪೌರಾಕ್ತೆ ನಾಗವೇಣಿ ಮುಂದಾಳತ್ವ ವಹಿಸಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪೋಲಿಸ್ ಇಲಾಖೆಯ ಬಿಗಿ ಬಂದೋಬಸ್ತಿನೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ನಗರಸಭೆ ಆಸ್ತಿಗಳ ಮೇಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ಈ ಕ್ರಮದಿಂದ ನಡುಕ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.1
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ #JB_News_Kannada #ಬೆಳ್ತಂಗಡಿ1
- ಕುಣಿಗಲ್ ತಾಲ್ಲೂಕಿನ ಉಜ್ಜನಿ ಗ್ರಾಮದಲ್ಲಿ ಚೌಡೇಶ್ವರಿ ದೇವಿ ಜಾತ್ರೆ ಪ್ರಯುಕ್ತ ಇಂದು ಅಗ್ನಿಕೊಂಡ ಉತ್ಸವಕ್ಕೆ ಚಾಲನೆ ನೀಡಲಾಯಿತು. ಏಷ್ಯಾದಲ್ಲಿ ಅತಿ ಎತ್ತರದ ಅಗ್ನಿಕೊಂಡ ಉತ್ಸವ ಎಂದು ಪ್ರಸಿದ್ಧಿ ಪಡೆದಿದೆ. ಈ ಅಗ್ನಿಕೊಂಡಕ್ಕೆ ಹುಲಿಯೂರುದುರ್ಗ, ಚೌಡನಕುಪ್ಪೆ, ಉಜ್ಜನಿಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕೊಂಡಕ್ಕೆ ಸೌದೆ ಸಮರ್ಪಿಸಿ ತಾಯಿ ಚೌಡೇಶ್ವರಿ ದೇವಿ ಯ ಕೃಪೆ ಗೆ ಪಾತ್ರರಾದರು....1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- ಚಳ್ಳಕೆರೆ ನಗರಸಭೆ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳನ್ನು ಮಂಗಳವಾರ ಬೆಳಗ್ಗೆ ನೆಲಸಮ ಮಾಡಲಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ವರ್ತಕರಲ್ಲಿ ಆತಂಕದ ವಾತಾವರಣದಲ್ಲಿ ರಾತ್ರಿಯಿಡೀ ಜಾಗರಣೆ ಮಾಡುತ್ತಾ ನಿದ್ದೆಗೆಟ್ಟು ಹಲವು ವರ್ತಕರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನ ತುರ್ತುಗತಿಯಲ್ಲಿ ಖಾಲಿ ಮಾಡಿದ್ದಾರೆ.1