600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್ ತಯಾರಿಕೆ, ಆರ್ & ಡಿ ಘಟಕಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಮಶೀನ್ ಟೂಲ್ ತಯಾರಿಕೆಗೆ ಹೆಸರಾಗಿರುವ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯೊಂದಿಗೆ ಎರಡು ವರ್ಷಗಳ ಹಿಂದೆ ನಾನು ಕೊರಿಯಾ ಪ್ರವಾಸ ಕೈಗೊಂಡಿದ್ದಾಗ ಈ ಒಡಂಬಡಿಕೆ ಆಗಿತ್ತು. ಇಷ್ಟು ಕ್ಷಿಪ್ರ ಅವಧಿಯಲ್ಲಿ ತಯಾರಿಕೆ ಮತ್ತು ಆರ್ & ಡಿ ಘಟಕಗಳು ಸಿದ್ಧವಾಗಿರುವುದು ದೊಡ್ಡ ದಾಖಲೆಯಾಗಿದೆ. ಹೀಗೆ ಎರಡೂ ಸ್ಥಾವರಗಳು ಒಂದೆಡೆ ಸಾಕಾರಗೊಂಡಿರುವುದು ವಿಶಿಷ್ಟ ಸಂಗತಿಯಾಗಿದೆʼ ಎಂದಿದ್ದಾರೆ. ರಾಜ್ಯವು ಸೇವಾಧಾರಿತ ಆರ್ಥಿಕತೆಯಿಂದ ಉತ್ಪಾದನೆ ಆಧರಿತ ಆರ್ಥಿಕತೆಯಾಗಿ ರೂಪಾಂತರಗೊಳ್ಳುತ್ತಿರುವ ಸಂಕ್ರಮಣಾವಸ್ಥೆಯಲ್ಲಿದೆ. ತಯಾರಿಕೆ ವಲಯದಲ್ಲಿ ಬರುವ ಆಟೋಮೊಬೈಲ್, ಹೆವಿ ಎಂಜಿನಿಯರಿಂಗ್, ಏರೋಸ್ಪೇಸ್, ರಕ್ಷಣೋದ್ಯಮ, ಪ್ರಿಸಿಷನ್ ತಯಾರಿಕೆ ಹೀಗೆ ಪ್ರತಿಯೊಂದರಲ್ಲೂಮಶೀನ್ ಟೂಲ್ಸ್ ನಿರ್ಣಾಯಕ ಪಾತ್ರ ವಹಿಸುತ್ತದೆ. ನಾವು ಹೆಚ್ಚಾಗಿ ಈ ಸ್ವರೂಪದ ಬಂಡವಾಳ ಹೂಡಿಕೆಗೇ ಆದ್ಯತೆ ಕೊಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. ದೇಶದ ಒಟ್ಟಾರೆ ಮಶೀನ್ ಟೂಲ್ಸ್ ತಯಾರಿಕೆ ವಲಯಕ್ಕೆ ರಾಜ್ಯವು ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಡಿ.ಎನ್.ಸೊಲ್ಯೂಷನ್ಸ್ ತನ್ನ ಹೂಡಿಕೆಗೆ ನಮ್ಮಲ್ಲಿಗೆ ಬರಲು ಇದು ಪ್ರಮುಖ ಕಾರಣವಾಗಿದೆ. ಇಲ್ಲಿ ಈಗಾಗಲೇ 350 ಮಂದಿ ಉದ್ಯೋಗನಿರತರಾಗಿರುವುದು ಸಂತಸದ ಸಂಗತಿಯಾಗಿದೆ. ಕಂಪನಿಯು ಇಲ್ಲಿಂದಲೇ ತನ್ನ ಜಾಗತಿಕ ಮಟ್ಟದ ಪೂರೈಕೆಯನ್ನು ನಿರ್ವಹಿಸಬೇಕು. ಜತೆಗೆ ನಮ್ಮಲ್ಲಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳು, ಪ್ರಶಿಕ್ಷಣ, ತರಬೇತಿ ಮತ್ತು ಉದ್ಯಮಸಂಬಂಧಿ ಕಾರ್ಯಕ್ರಮಗಳಲ್ಲಿ ಕಂಪನಿಯು ಸಕ್ರಿಯ ಭಾಗವಾಗಬೇಕು ಎಂದು ಅವರು ನುಡಿದಿದ್ದಾರೆ. ಸರಕಾರವು ಕೈಗಾರಿಕಾಸ್ನೇಹಿ ನೀತಿಗಳಲ್ಲಿ ಮುಂಚೂಣಿಯಲ್ಲಿದೆ. ಏಕಗವಾಕ್ಷಿ ವ್ಯವಸ್ಥೆ ಮತ್ತು ತಿದ್ದುಪಡಿಯ ಮೂಲಕ ರೂಪಿಸಿರುವ ಕೈಗಾರಿಕಾ ಸೌಲಭ್ಯ ವಿಧೇಯಕಗಳು ಹೂಡಿಕೆದಾರರಿಗೆ ಬೆರಳತುದಿಯಲ್ಲಿ ಸೇವೆ ಒದಗಿಸುತ್ತಿವೆ. ಇದು ನಮ್ಮ ಸುಗಮ ವಾಣಿಜ್ಯ ಸಂಸ್ಕೃತಿಯ ಭಾಗವಾಗಿದ್ದು, ಅಗತ್ಯ ಪ್ರಕ್ರಿಯೆಗಳನ್ನೆಲ್ಲ ತುಂಬಾ ಸರಳಗೊಳಿಸಲಾಗಿದೆ ಎಂದು ಪಾಟೀಲ ಅಭಿಪ್ರಾಯಪಟ್ಟಿದ್ದಾರೆ. ಡಿ ಎನ್ ಸಲ್ಯೂಷನ್ಸ್ ಕಂಪನಿಯ ಅಧ್ಯಕ್ಷ ವೊನ್ ಜಾಂಗ್ ಕಿಮ್ ಅವರು ಸಂಸ್ಥೆ ನಡೆದು ಬಂದ ಹಾದಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಮಿಷಿನ್ ಟೂಲ್ ಉತ್ಪಾದನೆಯಲ್ಲಿ 2035ರ ವೇಳೆಗೆ ದೇಶದಲ್ಲೇ ಮೊದಲ ಸ್ಥಾನಕ್ಕೇರುವ ವಿಶ್ವಾಸ ಇದ್ದು, ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಸಾಗಲಿವೆ ಎಂದು ಜಾಂಗ್ ಹೇಳಿದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕ್ರಾಫ್ಟ್ಸ್ ಮ್ಯಾನ್ ಅಟೊಮೇಷನ್ ಅಧ್ಯಕ್ಷ ಶ್ರೀನಿವಾಸನ್ ರವಿ, ಸಫರನ್ ಏರ್ ಕ್ರಾಫ್ಟ್ ಎಂಜಿನ್ಸ್ ವ್ಯವಸ್ಥಾಪಕ ನಿರ್ದೇಶಕ ಅಶುತೋಷ್ ಕುಮಾರ್, ಫಾನುಕ್ ಕಾರ್ಪೊರೇಷನ್ ಅಧ್ಯಕ್ಷ ಕುಂಜ್ ಯಮಗುಜಿ ಮಾತನಾಡಿದರು. ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು. *ಕೋರಿಯಾ ಕೈಗಾರಿಕಾ ಪಾರ್ಕ್ ಸ್ಥಾಪನೆ* ಬೆಂಗಳೂರು: ಜಪಾನ್ ಟೂಲ್ಸ್ ಪಾರ್ಕ್ ಮಾದರಿಯಲ್ಲೇ ಕೋರಿಯಾ ದೇಶದ ಕಂಪನಿಗಳ ಸಲುವಾಗಿ ರಾಜ್ಯದಲ್ಲಿ ಪ್ರತ್ಯೇಕ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ತುಮಕೂರು ಸಮೀಪ ಸ್ಥಾಪಿಸಿರುವ ಜಪಾನ್ ಟೂಲ್ಸ್ ಕೈಗಾರಿಕಾ ಪಾರ್ಕ್ ಈಗ ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿ ಕೋರಿಯಾ ಪಾರ್ಕ್ ಕೂಡ ಅಭಿವೃದ್ಧಿ ಪಡಿಸಲಾಗುವುದು. ಎಲ್ಲಿ ಮಾಡಬೇಕು ಎಂಬುದನ್ನು ನಂತರದ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್ ತಯಾರಿಕೆ, ಆರ್ & ಡಿ ಘಟಕಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಮಶೀನ್ ಟೂಲ್ ತಯಾರಿಕೆಗೆ ಹೆಸರಾಗಿರುವ ಡಿ.ಎನ್.ಸೊಲ್ಯೂಷನ್ಸ್ ಕಂಪನಿಯೊಂದಿಗೆ ಎರಡು ವರ್ಷಗಳ ಹಿಂದೆ ನಾನು ಕೊರಿಯಾ ಪ್ರವಾಸ ಕೈಗೊಂಡಿದ್ದಾಗ ಈ ಒಡಂಬಡಿಕೆ ಆಗಿತ್ತು. ಇಷ್ಟು ಕ್ಷಿಪ್ರ ಅವಧಿಯಲ್ಲಿ ತಯಾರಿಕೆ ಮತ್ತು ಆರ್ &
ಡಿ ಘಟಕಗಳು ಸಿದ್ಧವಾಗಿರುವುದು ದೊಡ್ಡ ದಾಖಲೆಯಾಗಿದೆ. ಹೀಗೆ ಎರಡೂ ಸ್ಥಾವರಗಳು ಒಂದೆಡೆ ಸಾಕಾರಗೊಂಡಿರುವುದು ವಿಶಿಷ್ಟ ಸಂಗತಿಯಾಗಿದೆʼ ಎಂದಿದ್ದಾರೆ. ರಾಜ್ಯವು ಸೇವಾಧಾರಿತ ಆರ್ಥಿಕತೆಯಿಂದ ಉತ್ಪಾದನೆ ಆಧರಿತ ಆರ್ಥಿಕತೆಯಾಗಿ ರೂಪಾಂತರಗೊಳ್ಳುತ್ತಿರುವ ಸಂಕ್ರಮಣಾವಸ್ಥೆಯಲ್ಲಿದೆ. ತಯಾರಿಕೆ ವಲಯದಲ್ಲಿ ಬರುವ ಆಟೋಮೊಬೈಲ್, ಹೆವಿ ಎಂಜಿನಿಯರಿಂಗ್, ಏರೋಸ್ಪೇಸ್, ರಕ್ಷಣೋದ್ಯಮ, ಪ್ರಿಸಿಷನ್ ತಯಾರಿಕೆ ಹೀಗೆ ಪ್ರತಿಯೊಂದರಲ್ಲೂಮಶೀನ್ ಟೂಲ್ಸ್ ನಿರ್ಣಾಯಕ ಪಾತ್ರ ವಹಿಸುತ್ತದೆ. ನಾವು ಹೆಚ್ಚಾಗಿ ಈ ಸ್ವರೂಪದ ಬಂಡವಾಳ ಹೂಡಿಕೆಗೇ ಆದ್ಯತೆ ಕೊಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. ದೇಶದ ಒಟ್ಟಾರೆ ಮಶೀನ್ ಟೂಲ್ಸ್ ತಯಾರಿಕೆ ವಲಯಕ್ಕೆ ರಾಜ್ಯವು ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಡಿ.ಎನ್.ಸೊಲ್ಯೂಷನ್ಸ್ ತನ್ನ ಹೂಡಿಕೆಗೆ ನಮ್ಮಲ್ಲಿಗೆ ಬರಲು ಇದು ಪ್ರಮುಖ ಕಾರಣವಾಗಿದೆ. ಇಲ್ಲಿ ಈಗಾಗಲೇ 350 ಮಂದಿ ಉದ್ಯೋಗನಿರತರಾಗಿರುವುದು ಸಂತಸದ ಸಂಗತಿಯಾಗಿದೆ. ಕಂಪನಿಯು ಇಲ್ಲಿಂದಲೇ ತನ್ನ ಜಾಗತಿಕ ಮಟ್ಟದ ಪೂರೈಕೆಯನ್ನು
ನಿರ್ವಹಿಸಬೇಕು. ಜತೆಗೆ ನಮ್ಮಲ್ಲಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳು, ಪ್ರಶಿಕ್ಷಣ, ತರಬೇತಿ ಮತ್ತು ಉದ್ಯಮಸಂಬಂಧಿ ಕಾರ್ಯಕ್ರಮಗಳಲ್ಲಿ ಕಂಪನಿಯು ಸಕ್ರಿಯ ಭಾಗವಾಗಬೇಕು ಎಂದು ಅವರು ನುಡಿದಿದ್ದಾರೆ. ಸರಕಾರವು ಕೈಗಾರಿಕಾಸ್ನೇಹಿ ನೀತಿಗಳಲ್ಲಿ ಮುಂಚೂಣಿಯಲ್ಲಿದೆ. ಏಕಗವಾಕ್ಷಿ ವ್ಯವಸ್ಥೆ ಮತ್ತು ತಿದ್ದುಪಡಿಯ ಮೂಲಕ ರೂಪಿಸಿರುವ ಕೈಗಾರಿಕಾ ಸೌಲಭ್ಯ ವಿಧೇಯಕಗಳು ಹೂಡಿಕೆದಾರರಿಗೆ ಬೆರಳತುದಿಯಲ್ಲಿ ಸೇವೆ ಒದಗಿಸುತ್ತಿವೆ. ಇದು ನಮ್ಮ ಸುಗಮ ವಾಣಿಜ್ಯ ಸಂಸ್ಕೃತಿಯ ಭಾಗವಾಗಿದ್ದು, ಅಗತ್ಯ ಪ್ರಕ್ರಿಯೆಗಳನ್ನೆಲ್ಲ ತುಂಬಾ ಸರಳಗೊಳಿಸಲಾಗಿದೆ ಎಂದು ಪಾಟೀಲ ಅಭಿಪ್ರಾಯಪಟ್ಟಿದ್ದಾರೆ. ಡಿ ಎನ್ ಸಲ್ಯೂಷನ್ಸ್ ಕಂಪನಿಯ ಅಧ್ಯಕ್ಷ ವೊನ್ ಜಾಂಗ್ ಕಿಮ್ ಅವರು ಸಂಸ್ಥೆ ನಡೆದು ಬಂದ ಹಾದಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಮಿಷಿನ್ ಟೂಲ್ ಉತ್ಪಾದನೆಯಲ್ಲಿ 2035ರ ವೇಳೆಗೆ ದೇಶದಲ್ಲೇ ಮೊದಲ ಸ್ಥಾನಕ್ಕೇರುವ ವಿಶ್ವಾಸ ಇದ್ದು, ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಸಾಗಲಿವೆ
ಎಂದು ಜಾಂಗ್ ಹೇಳಿದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕ್ರಾಫ್ಟ್ಸ್ ಮ್ಯಾನ್ ಅಟೊಮೇಷನ್ ಅಧ್ಯಕ್ಷ ಶ್ರೀನಿವಾಸನ್ ರವಿ, ಸಫರನ್ ಏರ್ ಕ್ರಾಫ್ಟ್ ಎಂಜಿನ್ಸ್ ವ್ಯವಸ್ಥಾಪಕ ನಿರ್ದೇಶಕ ಅಶುತೋಷ್ ಕುಮಾರ್, ಫಾನುಕ್ ಕಾರ್ಪೊರೇಷನ್ ಅಧ್ಯಕ್ಷ ಕುಂಜ್ ಯಮಗುಜಿ ಮಾತನಾಡಿದರು. ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು. *ಕೋರಿಯಾ ಕೈಗಾರಿಕಾ ಪಾರ್ಕ್ ಸ್ಥಾಪನೆ* ಬೆಂಗಳೂರು: ಜಪಾನ್ ಟೂಲ್ಸ್ ಪಾರ್ಕ್ ಮಾದರಿಯಲ್ಲೇ ಕೋರಿಯಾ ದೇಶದ ಕಂಪನಿಗಳ ಸಲುವಾಗಿ ರಾಜ್ಯದಲ್ಲಿ ಪ್ರತ್ಯೇಕ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. ತುಮಕೂರು ಸಮೀಪ ಸ್ಥಾಪಿಸಿರುವ ಜಪಾನ್ ಟೂಲ್ಸ್ ಕೈಗಾರಿಕಾ ಪಾರ್ಕ್ ಈಗ ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿ ಕೋರಿಯಾ ಪಾರ್ಕ್ ಕೂಡ ಅಭಿವೃದ್ಧಿ ಪಡಿಸಲಾಗುವುದು. ಎಲ್ಲಿ ಮಾಡಬೇಕು ಎಂಬುದನ್ನು ನಂತರದ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.
- ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು: ನಟ ಚಿರಂಜೀವಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪೌರಕಾರ್ಮಿಕರಿಗೆ ಸೀರೆ ವಿತರಣೆ ಪಾವಗಡ: ಸಿನಿಮಾ ನಟನೆಯನ್ನು ಮೆಚ್ಚಿ ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುವುದಷ್ಟೇ ಅಲ್ಲದೆ, ನಟರು ಮಾಡುವ ಸಾಮಾಜಿಕ ಸೇವಾ ಕಾರ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜಕ್ಕೆ ನೈಜ ಒಳಿತಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಶಮಿ ವೃಕ್ಷ ಅಭಿವೃದ್ಧಿ ಸಮಿತಿ ಟ್ರಸ್ಟ್ ಕಾರ್ಯದರ್ಶಿ ಸತ್ಯ ಲೋಕೇಶ್ ತಿಳಿಸಿದರು. ಪಟ್ಟಣದ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ 71ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ಮಹಿಳಾ ಪೌರಕಾರ್ಮಿಕರಿಗೆ ಹಾಗೂ ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆಗಳನ್ನು ವಿತರಿಸುವ ಮೂಲಕ ಹಬ್ಬದ ಸಡಗರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ರೂವಾರಿ, ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ, "ಚಿರಂಜೀವಿ ಅವರು ಕೇವಲ ನಟನಾಗಿ ಉಳಿಯದೆ, ಬ್ಲಡ್ ಬ್ಯಾಂಕ್ ಸ್ಥಾಪಿಸಿ ರಕ್ತದ ಅಗತ್ಯವಿರುವ ಸಾವಿರಾರು ಜನರಿಗೆ ನೆರವಾಗುವ ಮೂಲಕ ದೇಶಾದ್ಯಂತ ರಕ್ತದಾನದ ಮಹತ್ವ ಸಾರಿದ್ದಾರೆ. ಮುಂಬರುವ ವರಮಹಾಲಕ್ಷ್ಮಿ ಹಬ್ಬವನ್ನು ಬಡ ಮಹಿಳಾ ಕಾರ್ಮಿಕರು ಸಂಭ್ರಮದಿಂದ ಆಚರಿಸಲಿ ಎಂಬ ಉದ್ದೇಶದಿಂದ ಈ ಸಮಾಜ ಸೇವೆಗೆ ಮುನ್ನುಡಿ ಬರೆದಿದ್ದೇವೆ" ಎಂದರು. ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳ್ಳೇಕಾರ ಲೋಕೇಶ್ ಮಾತನಾಡಿ, ಸೇವಾ ಟ್ರಸ್ಟ್ ವತಿಯಿಂದ ಇದುವರೆಗೆ ಸುಮಾರು 13,500 ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಬಡವರ ಸೇವೆ ಮಾಡುತ್ತಿರುವ ಮಾನಂ ಶಶಿಕಿರಣ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅಂಗನವಾಡಿಗೆ ಧನಸಹಾಯ & ಸಾಂಸ್ಕೃತಿಕ ಸಂಭ್ರಮ: ಇದೇ ವೇಳೆ ಪಟ್ಟಣದ ಆದರ್ಶ ನಗರದ ಅಂಗನವಾಡಿ ಕೇಂದ್ರದ ನವೀಕರಣಕ್ಕಾಗಿ ₹15,000 ಮೊತ್ತದ ಚೆಕ್ ಅನ್ನು ಶಿಕ್ಷಕಿ ಭೂಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸುಮಾರು 100 ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆ ವಿತರಿಸಲಾಯಿತು. ಉನ್ನತಿ ತರಬೇತಿಯ ವಿದ್ಯಾರ್ಥಿನಿಯರು ಚಿರಂಜೀವಿ ಅವರ ಜನಪ್ರಿಯ ಗೀತೆಗಳಿಗೆ ಸಖತ್ ನೃತ್ಯ ಮಾಡಿ ಸಭಿಕರನ್ನು ರಂಜಿಸಿದರು. ಅತ್ಯುತ್ತಮವಾಗಿ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಷಾ ಬಾಬು ಹಾಗೂ ಗಣ್ಯರು ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರು. ಕೊನೆಯಲ್ಲಿ 71ನೇ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯಿತು. ಕಾರ್ಯಕ್ರಮದಲ್ಲಿ ಚಿರಂಜೀವಿ ಅಭಿಮಾನಿಗಳಾದ ಮಾಜಿ ಪುರಸಭಾ ಸದಸ್ಯರಾದ ರಿಜ್ವಾನ್ ಹುಲ್ಲಾ, ಷಾ ಬಾಬು, ನಂದೀಶ್, ಮುತ್ಯಾಲಪ್ಪ ಹಾಗೂ ಪ್ರಮುಖರಾದ ಶ್ರೀಧರ್ ಗುಪ್ತ, ಸೋಲಾರ್ ರಾಜಶೇಖರ್ ರೆಡ್ಡಿ, ಅಮಿಲಿನೇನಿ ನರೇಶ್, ಶಾರು, ಸಂಧ್ಯಾ ಮಾನಂ, ವಿಶಾಲ್, ಪ್ರಜ್ವಲ್, ಶಿಕ್ಷಕಿ ನಳಿನಾ, ಚಂದನ, ಶಿವಕುಮಾರ್, ಹರ್ಷ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪಾವಗಡ ವರದಿ1
- NICE ಸಂಸ್ಥೆ ನಡೆಸಿರುವ ಅಕ್ರಮ ಮತ್ತು ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ ಬೆಂಗಳೂರು: NICE ಸಂಸ್ಥೆ ನಡೆಸಿರುವ ಅಕ್ರಮ ಮತ್ತು ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ನಿಯೋಗ ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ಹೈಕೋರ್ಟ್ ತೀರ್ಪಿನ ಪ್ರತಿ ಸಮೇತ 5 ಪುಟಗಳ ಮನವಿ ಪತ್ರ ಸಲ್ಲಿಸಿದರು.1
- ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.3
- ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು1
- ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ. ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು. ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ. (ಫೋಟೋ ಕಳುಹಿಸಿದೆ) ======== ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ. ===========1
- ಈದ್ ಮಿಲಾದ್: ಶಾಂತಿ ಸುವ್ಯವಸ್ಥೆ ಕಾಪಾಡಲು ಚಳ್ಳಕೆರೆಯಲ್ಲಿ ಪೊಲೀಸರಿಂದ ಬೃಹತ್ ಪಥಸಂಚಲನ ಚಳ್ಳಕೆರೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪಥಸಂಚಲನ ನಡೆಸಲಾಯಿತು. ನಗರದ ಪೊಲೀಸ್ ಠಾಣೆಯ ಮುಂಭಾಗದಿಂದ ಆರಂಭವಾದ ಈ ಶಿಸ್ತುಬದ್ಧ ಪಥಸಂಚಲನವು ಚಿತ್ರದುರ್ಗ ರಸ್ತೆ, ಅಂಬೇಡ್ಕರ್ ವೃತ್ತ, ಎಸ್.ಆರ್. ರಸ್ತೆ, ಬೆಂಗಳೂರು ರಸ್ತೆ, ಬಸವೇಶ್ವರ ವೃತ್ತ, ಹಳೆನಗರದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಮೂಲಕ ಸಾಗಿ ಬಳ್ಳಾರಿ ರಸ್ತೆಯವರೆಗೆ ಜರುಗಿತು. ನಗರದ ಅಷ್ಟ ದಿಕ್ಕುಗಳಲ್ಲೂ ಸಂಚರಿಸಿದ ಪೊಲೀಸ್ ಪಡೆ, ಸಾರ್ವಜನಿಕರಲ್ಲಿ ಧೈರ್ಯ ಮತ್ತು ಭದ್ರತೆಯ ಭಾವನೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಚಳ್ಳಕೆರೆ ವಿಭಾಗದ ಡಿವೈಎಸ್‌ಪಿ ಸತ್ಯನಾರಾಯಣ ರಾವ್ ಅವರ ನೇತೃತ್ವದಲ್ಲಿ ನಡೆದ ಈ ಪಥಸಂಚಲನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಕೆ. ಕುಮಾರ್, ಪಿಎಸ್‌ಐ ಶಿವರಾಜ್ ಸೇರಿದಂತೆ ಕೆಎಸ್‌ಆರ್‌ಪಿ , ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಎಲ್ಲರೂ ಅನ್ಯೋನ್ಯತೆಯಿಂದ, ಶಾಂತಿ ಹಾಗೂ ಸೌಹಾರ್ದತೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಬೇಕು,ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.1
- ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.1
- ಮುಂದಿನ 6 ತಿಂಗಳಲ್ಲಿ 1 ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬೃಹತ್ ಘೋಷಣೆ ಲಖನೌ: ಉತ್ತರ ಪ್ರದೇಶದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಭ ಸುದ್ದಿ ನೀಡಿದ್ದಾರೆ. ಮುಂಬರುವ ಆರು ತಿಂಗಳ ಅವಧಿಯಲ್ಲಿ ರಾಜ್ಯದ ಸುಮಾರು 1 ಲಕ್ಷ ಯುವಕರಿಗೆ ಸರ್ಕಾರಿ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಅವರು ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಕಟಿಸಿದ್ದಾರೆ. ಈ ಪ್ರಕ್ರಿಯೆಯನ್ನು ಪ್ರತಿ ವಾರ ಹಂತ-ಹಂತವಾಗಿ (ಬ್ಯಾಚ್‌ಗಳಲ್ಲಿ) ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ತಮ್ಮ ಆಡಳಿತಾವಧಿಯ ಪಾರದರ್ಶಕತೆ ಹಾಗೂ ಸಾಧನೆಗಳನ್ನು ಎತ್ತಿಹಿಡಿಯುವುದರ ಜೊತೆಗೆ 2017 ಕ್ಕೂ ಮುಂಚಿನ ನೇಮಕಾತಿ ವ್ಯವಸ್ಥೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. **ಸುದ್ದಿಯ ಪ್ರಮುಖ ಅಂಶಗಳು:** * **1 ಲಕ್ಷ ಹೊಸ ಉದ್ಯೋಗ ಪತ್ರ:** ಮುಂದಿನ 6 ತಿಂಗಳಲ್ಲಿ 1,00,000 ಅರ್ಹ ಯುವಕರಿಗೆ ನಿಯಮಿತವಾಗಿ ಬ್ಯಾಚ್‌ಗಳ ಮೂಲಕ ನೇಮಕಾತಿ ಆದೇಶಗಳನ್ನು ನೀಡಲು ಸರ್ಕಾರ ಯೋಜಿಸಿದೆ. * **9.30 ಲಕ್ಷ ಉದ್ಯೋಗಗಳ ಸಾಧನೆ:** ಕಳೆದ ಒಂಬತ್ತೂವರೆ ವರ್ಷಗಳ ‘ಡಬಲ್-ಎಂಜಿನ್’ ಬಿಜೆಪಿ ಸರ್ಕಾರವು 9.30 ಲಕ್ಷಕ್ಕೂ ಹೆಚ್ಚು ಯುವಕರಿಗೆ ಪಾರದರ್ಶಕವಾಗಿ ಸರ್ಕಾರಿ ಉದ್ಯೋಗ ಒದಗಿಸಿದೆ. ಈ ಪೈಕಿ ಒಂದೇ ಒಂದು ನೇಮಕಾತಿಯೂ ನ್ಯಾಯಾಲಯದಲ್ಲಿ ಪ್ರಶ್ನೆಗೊಳಗಾಗಿಲ್ಲ ಎಂದು ಸಿಎಂ ಪ್ರತಿಪಾದಿಸಿದರು. * **ಹಿಂದಿನ ವ್ಯವಸ್ಥೆಗೆ ವೀಟೋ:** 2017 ಕ್ಕೂ ಮೊದಲು ರಾಜ್ಯದಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ ಹಾಗೂ 'ಕುಲ ಆಡಳಿತ' ತಾಂಡವವಾಡುತ್ತಿತ್ತು. ಇದರಿಂದಾಗಿ ಅರ್ಹ ಯುವಕರು ಕೆಲಸವಿಲ್ಲದೆ ಅಲೆಯಬೇಕಾಯಿತು ಮತ್ತು ಅಂತಿಮವಾಗಿ ನ್ಯಾಯಾಲಯಗಳು ತಡೆಯಾಜ್ಞೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಯೋಗಿ ಆದಿತ್ಯನಾಥ್ ಟೀಕಿಸಿದರು. * **ಅಕ್ರಮವೆಸಗುವವರ ವಿರುದ್ಧ ಶೂನ್ಯ ಸಹಿಷ್ಣುತೆ:** ನೇಮಕಾತಿ ಮಂಡಳಿಗಳು ಹಾಗೂ ಸರ್ಕಾರಿ ಯಂತ್ರದಲ್ಲಿದ್ದ ಭ್ರಷ್ಟರನ್ನು ತಳೆದುಹಾಕಲಾಗಿದೆ. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ 'ವಂಚನೆ ಮಾಫಿಯಾ' ಮತ್ತು ಕಿಂಗ್‌ಪಿನ್‌ಗಳ ಬೆನ್ನುಮೂಳೆ ಮುರಿಯಲು ಸರ್ಕಾರ ‘ಶೂನ್ಯ ಸಹಿಷ್ಣುತೆ’ ನೀತಿಯಡಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ಎಚ್ಚರಿಸಿದರು. ಯುವಕರ ಪ್ರತಿಭೆ ಮತ್ತು ಶಕ್ತಿಯನ್ನು ತಾರತಮ್ಯವಿಲ್ಲದೆ ಬಳಸಿಕೊಂಡಾಗ ಇಡೀ ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿಗಳು, ಅರ್ಹತೆಗೆ ಆದ್ಯತೆ ನೀಡುವುದೇ ತಮ್ಮ ಸರ್ಕಾರದ ಮುಖ್ಯ ಉದ್ದೇಶ ಎಂದಿದ್ದಾರೆ.1