logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಉಚಿತ ಉನ್ನತ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 10 ರವರೆಗೆ ಅವಧಿ ವಿಸ್ತರಣೆ ** ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ಸಹಯೋಗದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಪ್ರಸಕ್ತ ಶೈಕ್ಷಣಿಕ ಸಾಲಿನ 'ಉಚಿತ ಉನ್ನತ ಶಿಕ್ಷಣ ಯೋಜನೆ" ಅಡಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ವೈಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-560026 ಅಥವಾ ದೂ.ಸಂ: 080-26603664, ಹಾಗೂ 9880526439/9019526439 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1 hr ago
user_Lavanya
Lavanya
Local News Reporter ಪಾವಗಡ, ತುಮಕೂರು, ಕರ್ನಾಟಕ•
1 hr ago

ಉಚಿತ ಉನ್ನತ ಶಿಕ್ಷಣಕ್ಕಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 10 ರವರೆಗೆ ಅವಧಿ ವಿಸ್ತರಣೆ ** ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾಮುವಿ) ಸಹಯೋಗದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಪ್ರಸಕ್ತ ಶೈಕ್ಷಣಿಕ ಸಾಲಿನ 'ಉಚಿತ ಉನ್ನತ ಶಿಕ್ಷಣ ಯೋಜನೆ" ಅಡಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ವೈಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-560026 ಅಥವಾ ದೂ.ಸಂ: 080-26603664, ಹಾಗೂ 9880526439/9019526439 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ಆತ್ಮೀಯವಾಗಿ ಸ್ವಾಗತಿಸಿದ ಸಾಂಸ್ಕೃತಿಕ ನಗರಿಯ ಜನರು ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ನೀಡಿದ್ದು, ಸಾಂಸ್ಕೃತಿಕ ನಗರಿಯ ಜನರು ನೀಡಿದ ಆತ್ಮೀಯವಾಗಿ ಸ್ವಾಗತಿಸಿದರು.
    1
    ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ಆತ್ಮೀಯವಾಗಿ ಸ್ವಾಗತಿಸಿದ ಸಾಂಸ್ಕೃತಿಕ ನಗರಿಯ ಜನರು 
ಮೈಸೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರಿಗೆ ಭೇಟಿ ನೀಡಿದ್ದು, ಸಾಂಸ್ಕೃತಿಕ ನಗರಿಯ ಜನರು ನೀಡಿದ ಆತ್ಮೀಯವಾಗಿ ಸ್ವಾಗತಿಸಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    2 hrs ago
  • ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ
    2
    ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ 
ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    6 hrs ago
  • *ಅಭಿಮಾನಿಗಳಿಂದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ ಮತ್ತು ಕ್ರೀಡಾಕೂಟ* *ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ-ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ* ಭಾಗ್ಯನಗರ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು,ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದಢವಾಗಿರುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಹೇಳಿದರು. ಪಟ್ಟಣದ 12ನೇ ವಾರ್ಡಿನ ಹಿಂಭಾಗದ ಕೊರ್ಲಕುಂಟೆ ಕ್ರಿಕೆಟ್ ಮೈದಾನದಲ್ಲಿ ಸಚಿವ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಜನ್ಮದಿನದ ಅಂಗವಾಗಿ ಭಾಗ್ಯನಗರ ಬಿ.ಝೆಡ್ ಗ್ರೂಪ್ಸ್ ಹಾಗೂ ಬಿ.ಝೆಡ್ ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳ ಬಳಗವತಿಯಿಂದ ಸತತ ನೇ ವರ್ಷದ ಕ್ರಿಕೆಟ್ ಟೂರ್ನೀ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ,ಮನುಷ್ಯನಿಗೆ ಕ್ರೀಡೆ ದೈಹಿಕ ಚಟುವಟಿಕೆ ಅಥವಾ ಮಾನಸಿಕ ಚಟುವಟಿಕೆ, ಸ್ಪರ್ಧೆ, ಮನರಂಜನೆ ಅಥವಾ ವ್ಯಾಯಾಮಕ್ಕಾಗಿ ನಡೆಸಲಾಗುತ್ತದೆ. ಕ್ರೀಡೆಯ ಮಹತ್ವವೆಂದರೆ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಮತ್ತು ಸಮಾಜದಲ್ಲಿ ಏಕತೆಯನ್ನು ತರುತ್ತದೆ,ಮುಖ್ಯವಾಗಿ ಯುವಕರು ದುಶ್ಚಟಗಳನ್ನು ತ್ಯಜಿಸಿ ಸದೃಢ ದೇಹ ಹೊಂದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಾಗೇಪಲ್ಲಿ ಬಿ ಜೆಡ್ ಗ್ರೂಪ್ ಮತ್ತು ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳಿಂದ ಅನ್ನದಾನ ಮತ್ತು ಕ್ರೀಡಾಕೂಟ ಹಾಗೂ ಸೇವಾ ಕಾರ್ಯಗಳು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪುರಸಭೆ ನಾಮ ನಿರ್ದೇಶನ ಸದಸ್ಯ ಹಾಗೂ ಬಿ ಜೆಡ್ ಗ್ರೂಪ್ ಅಧ್ಯಕ್ಷ ಅನ್ಸರ್ ಮಾತನಾಡಿ,ನಮ್ಮ ಅಲ್ಪಸಂಖ್ಯಾತರ ನಾಯಕರು ಹಾಗೂ ನಮ್ಮ ರಾಜ್ಯದ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಪ್ರೀತಿಯಿಂದ ವಿಶೇಷ ಅನ್ನದಾನ ಹಾಗೂ ಸಿಹಿ ವಿತರಿಸುವ ಮೂಲಕ ಬಾಗೇಪಲ್ಲಿ ಝೆಡ್ ಗ್ರೂಪ್ ವತಿಯಿಂದ ಸೇವಾ ಕಾರ್ಯಗಳು ಮಾಡಲಾಗುತ್ತಿದೆ, ಅವರಿಗೆ ಸದಾ ದೇವರ ಅನುಗ್ರಹ ಮತ್ತು ದೇವರ ಆಶೀರ್ವಾದ ಇರಬೇಕು ಎಂದು ಶುಭಹಾರೈಸುತ್ತೇನೆ ಎಂದರು. ಪಟ್ಟಣದ ವಿವಿಧ ವಾರ್ಡ್ ಗಳಿಂದ ಆಗಮಿಸಿದ್ದ ಸುಮಾರು 5 ಕ್ಕೂ ಹೆಚ್ಚು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ 10,000 ಸಾವಿರ ರೂ.ನಗದು, ಟ್ರೋಫಿ, ದ್ವಿತೀಯ ಬಹುಮಾನ 5,000 ರೂಪಾಯಿ ನಗದು ಮತ್ತು ಟ್ರೋಫಿ ಹಾಗೂ ಪಾದ್ಯವಳಿಯಲ್ಲಿ ಭಾಗವಹಿಸಿದ ಆಟಗಾರರಿಗೆ ಕುಡಿಯುವ ನೀರು,ಉಟೋಪಚಾರ,ನೆನಪಿನ ಕಾಣಿಕೆ ನೀಡಲಾಗುವುದು ಎಂದು ಬಿ ಝೆಡ್ ಗ್ರೂಪ್ ಕ್ರಿಕೆಟ್ ಟೂರ್ನೀಮೆಂಟ್ ಆಯೋಜಕರು ತಿಳಿಸಿದ್ದಾರೆ. ಈ ಸಂಧರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಜಯಪ್ರಕಾಶ್,ಅಲ್ಪಸಂಖ್ಯಾತರ ಅಧ್ಯಕ್ಷ ವಸೀo,ಜುಬೇದ ಟ್ರಾನ್ಸ್ಪೋರ್ಟ್ ಆಸೀಫ್, ಅಬ್ಜಲ್,ಫೈರೋಜ್,ಜಾವಿದ್ ಕಾಯುo,ಪೀರ್,ಪರ್ವಿಜ್, ಮೂರ್ತಿ ಆಝಾಮ್,ಮಕ್ಕ ಮಸೀದಿ ಅಧ್ಯಕ್ಷ ಮನೋಹರ್ ರಫೀಕ್ ಸೇರಿದಂತೆ ವಿವಿಧ ತಂಡಗಳ ಕ್ರೀಡಾಪಟುಗಳು ಇದ್ದರು.
    4
    *ಅಭಿಮಾನಿಗಳಿಂದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಅನ್ನದಾನ ಮತ್ತು ಕ್ರೀಡಾಕೂಟ*


*ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ-ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ*



ಭಾಗ್ಯನಗರ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು,ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದಢವಾಗಿರುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಜಯ್  ಸಾರಥಿ ಹೇಳಿದರು.

ಪಟ್ಟಣದ 12ನೇ ವಾರ್ಡಿನ ಹಿಂಭಾಗದ ಕೊರ್ಲಕುಂಟೆ  ಕ್ರಿಕೆಟ್ ಮೈದಾನದಲ್ಲಿ ಸಚಿವ ಬಿ.ಝೆಡ್  ಜಮೀರ್ ಅಹ್ಮದ್ ಖಾನ್ ಜನ್ಮದಿನದ ಅಂಗವಾಗಿ ಭಾಗ್ಯನಗರ ಬಿ.ಝೆಡ್ ಗ್ರೂಪ್ಸ್ ಹಾಗೂ ಬಿ.ಝೆಡ್  ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳ ಬಳಗವತಿಯಿಂದ ಸತತ ನೇ ವರ್ಷದ ಕ್ರಿಕೆಟ್ ಟೂರ್ನೀ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ,ಮನುಷ್ಯನಿಗೆ ಕ್ರೀಡೆ ದೈಹಿಕ ಚಟುವಟಿಕೆ ಅಥವಾ ಮಾನಸಿಕ ಚಟುವಟಿಕೆ, ಸ್ಪರ್ಧೆ, ಮನರಂಜನೆ ಅಥವಾ ವ್ಯಾಯಾಮಕ್ಕಾಗಿ ನಡೆಸಲಾಗುತ್ತದೆ. ಕ್ರೀಡೆಯ ಮಹತ್ವವೆಂದರೆ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಜೀವನ ಕೌಶಲ್ಯಗಳನ್ನು ಕಲಿಸುತ್ತದೆ ಮತ್ತು ಸಮಾಜದಲ್ಲಿ ಏಕತೆಯನ್ನು ತರುತ್ತದೆ,ಮುಖ್ಯವಾಗಿ ಯುವಕರು ದುಶ್ಚಟಗಳನ್ನು ತ್ಯಜಿಸಿ ಸದೃಢ ದೇಹ ಹೊಂದಲು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮಾಜಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ  ಬಾಗೇಪಲ್ಲಿ ಬಿ ಜೆಡ್ ಗ್ರೂಪ್ ಮತ್ತು ಜಮೀರ್ ಅಹ್ಮದ್ ಖಾನ್ ಅಭಿಮಾನಿಗಳಿಂದ ಅನ್ನದಾನ ಮತ್ತು ಕ್ರೀಡಾಕೂಟ ಹಾಗೂ ಸೇವಾ ಕಾರ್ಯಗಳು ನೆರವೇರಿಸಲಾಯಿತು.

ಇದೇ ಸಂಧರ್ಭದಲ್ಲಿ ಪುರಸಭೆ ನಾಮ ನಿರ್ದೇಶನ ಸದಸ್ಯ ಹಾಗೂ ಬಿ ಜೆಡ್ ಗ್ರೂಪ್ ಅಧ್ಯಕ್ಷ  ಅನ್ಸರ್ ಮಾತನಾಡಿ,ನಮ್ಮ ಅಲ್ಪಸಂಖ್ಯಾತರ ನಾಯಕರು ಹಾಗೂ ನಮ್ಮ ರಾಜ್ಯದ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್  ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಪ್ರೀತಿಯಿಂದ ವಿಶೇಷ ಅನ್ನದಾನ ಹಾಗೂ ಸಿಹಿ ವಿತರಿಸುವ ಮೂಲಕ ಬಾಗೇಪಲ್ಲಿ 
 ಝೆಡ್ ಗ್ರೂಪ್ ವತಿಯಿಂದ ಸೇವಾ ಕಾರ್ಯಗಳು ಮಾಡಲಾಗುತ್ತಿದೆ, ಅವರಿಗೆ ಸದಾ ದೇವರ ಅನುಗ್ರಹ ಮತ್ತು ದೇವರ ಆಶೀರ್ವಾದ ಇರಬೇಕು ಎಂದು ಶುಭಹಾರೈಸುತ್ತೇನೆ ಎಂದರು.

ಪಟ್ಟಣದ ವಿವಿಧ ವಾರ್ಡ್ ಗಳಿಂದ  ಆಗಮಿಸಿದ್ದ ಸುಮಾರು 5 ಕ್ಕೂ ಹೆಚ್ಚು ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ 10,000 ಸಾವಿರ ರೂ.ನಗದು, ಟ್ರೋಫಿ, ದ್ವಿತೀಯ ಬಹುಮಾನ 5,000 ರೂಪಾಯಿ ನಗದು ಮತ್ತು ಟ್ರೋಫಿ ಹಾಗೂ ಪಾದ್ಯವಳಿಯಲ್ಲಿ ಭಾಗವಹಿಸಿದ ಆಟಗಾರರಿಗೆ ಕುಡಿಯುವ ನೀರು,ಉಟೋಪಚಾರ,ನೆನಪಿನ ಕಾಣಿಕೆ ನೀಡಲಾಗುವುದು ಎಂದು  ಬಿ ಝೆಡ್ ಗ್ರೂಪ್ ಕ್ರಿಕೆಟ್ ಟೂರ್ನೀಮೆಂಟ್ ಆಯೋಜಕರು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಜಯಪ್ರಕಾಶ್,ಅಲ್ಪಸಂಖ್ಯಾತರ ಅಧ್ಯಕ್ಷ ವಸೀo,ಜುಬೇದ ಟ್ರಾನ್ಸ್ಪೋರ್ಟ್ ಆಸೀಫ್,  ಅಬ್ಜಲ್,ಫೈರೋಜ್,ಜಾವಿದ್ ಕಾಯುo,ಪೀರ್,ಪರ್ವಿಜ್, ಮೂರ್ತಿ ಆಝಾಮ್,ಮಕ್ಕ ಮಸೀದಿ ಅಧ್ಯಕ್ಷ ಮನೋಹರ್ ರಫೀಕ್ ಸೇರಿದಂತೆ ವಿವಿಧ ತಂಡಗಳ ಕ್ರೀಡಾಪಟುಗಳು ಇದ್ದರು.
    user_Govindappa K
    Govindappa K
    Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    45 min ago
  • Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    1
    Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ
ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ‌ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ.‌ ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    29 min ago
  • ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    2
    ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ
ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:*
***********"
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ  ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ.
ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು.
ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    52 min ago
  • ಹೇಮಾವತಿ ನೀರಿಗಾಗಿ ಹೋರಾಟ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಸಿ ಬಿ ಸುರೇಶ್ ಬಾಬು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನಾಲೆ ಶೀಘ್ರವೇ ಮುಗಿಸಬೇಕು ನೀರನ್ನು ಹರಿಸಬೇಕು ಎಂಬ ಹೋರಾಟ ಮೂರು ದಿನಗಳಿಂದ ನಡೆಯುತ್ತಿದ್ದು ಇಂದು ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸುರೇಶ್ ಬಾಬು ನೇರವಾಗಿ ತಾಲೂಕು ಕಚೇರಿಯ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಹೋರಾಟಗಾರರ ಜೊತೆ ನೇರವಾಗಿ ಮಾತನಾಡಿದ್ದಾರೆ ಮಂಗಳವಾರದ ಒಳಗೆ ಕಾಮಗಾರಿಯನ್ನ ಮುಗಿಸುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.
    1
    ಹೇಮಾವತಿ ನೀರಿಗಾಗಿ ಹೋರಾಟ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಸಿ ಬಿ ಸುರೇಶ್ ಬಾಬು 
ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನಾಲೆ  ಶೀಘ್ರವೇ ಮುಗಿಸಬೇಕು ನೀರನ್ನು ಹರಿಸಬೇಕು ಎಂಬ ಹೋರಾಟ ಮೂರು ದಿನಗಳಿಂದ ನಡೆಯುತ್ತಿದ್ದು  ಇಂದು ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸುರೇಶ್ ಬಾಬು ನೇರವಾಗಿ  ತಾಲೂಕು ಕಚೇರಿಯ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ  ಭಾಗಿಯಾಗಿರುವ ಹೋರಾಟಗಾರರ ಜೊತೆ ನೇರವಾಗಿ ಮಾತನಾಡಿದ್ದಾರೆ  ಮಂಗಳವಾರದ ಒಳಗೆ ಕಾಮಗಾರಿಯನ್ನ ಮುಗಿಸುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    56 min ago
  • ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    1
    ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.

ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ  ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ ..
ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ  ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ   ತಕ್ಷಣ  ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು
ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು.
ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ಬೆಂಗಳೂರು ನಗರವನ್ನು ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.
    1
    'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್ 
ಬೆಂಗಳೂರು:  ಬೆಂಗಳೂರು ನಗರವನ್ನು ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.