ಸಚಿವ ಡಿ. ಸುಧಾಕರ್ ಅಗಲಿಕೆ: ಚಳ್ಳಕೆರೆಯಲ್ಲಿ ಗಣ್ಯರಿಂದ ಅಂತಿಮ ದರ್ಶನ, ಕಂಬನಿ (ಚಿತ್ರದುರ್ಗ).ಮೇ.11: ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಗಣ್ಯರು ಹಾಗೂ ಜನಸಾಗರವೇ ಹರಿದುಬಂದಿದೆ. ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ (ಡಿ. ಸುಧಾಕರ್ ಸ್ಟೇಡಿಯಂ) ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು. ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಸುಧಾಕರ್ ಅವರು ಸರಳ ರಾಜಕೀಯ ಮತ್ತು ವೈಯಕ್ತಿಕ ಜೀವನ ನಡೆಸಿದವರು. ಕಳೆದ 25 ವರ್ಷಗಳಿಂದ ಅವರ ಪರಿಚಯವಿತ್ತು. ಸಂಪುಟದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರ ನಗುಮೊಗದ ಮತ್ತು ಪ್ರಾಮಾಣಿಕ ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ, ಪಕ್ಷ ಸದಾ ಅವರ ಕುಟುಂಬದ ಬೆನ್ನಿಗಿದೆ ಎಂದು ಭಾವುಕರಾದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಹುಟ್ಟು ಉಚಿತ, ಸಾವು ಖಚಿತ. ಸಣ್ಣ ಸಮುದಾಯದಿಂದ ಬಂದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗುವುದು ಸಾಮಾನ್ಯವಲ್ಲ. ಅವರು ಸದಾ ರೈತರ ಮತ್ತು ಬಡವರ ಪರವಾಗಿ ನಿಲ್ಲುತ್ತಿದ್ದರು. ಭದ್ರಾ ಮೇಲ್ದಂಡೆ ಯೋಜನೆಗೆ ಸಚಿವ ಡಿ. ಸುಧಾಕರ್ ಅವರ ಹೆಸರಿಡುವ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ಸುಧಾಕರ್ ಅವರು ಕಳೆದ 45 ವರ್ಷಗಳಿಂದ ನನಗೆ ಆತ್ಮೀಯ ಸ್ನೇಹಿತರಾಗಿದ್ದರು. ಜೈನ ಸಮುದಾಯದವರಾಗಿದ್ದರೂ ಎಲ್ಲ ವರ್ಗದ ಜನರ ಪ್ರೀತಿ ಗಳಿಸಿ ಜನಾನುರಾಗಿಯಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಮ್ಮನ್ನು ಅಗಲಿರುವುದು ದುರದೃಷ್ಟಕರ. ಇಂದು ಅಂತಿಮ ದರ್ಶನಕ್ಕೆ ಹರಿದು ಬರುತ್ತಿರುವ ಜನಸಾಗರವೇ ಅವರು ಎಂತಹ ಸ್ನೇಹಜೀವಿ ಎಂಬುದಕ್ಕೆ ಸಾಕ್ಷಿ" ಎಂದು ಸ್ಮರಿಸಿದರು. ಡಿ. ಸುಧಾಕರ್ ಅವರ ನಿಧನಕ್ಕೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಅಂತಿಮ ವಿದಾಯ ಹೇಳಲು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ .
ಸಚಿವ ಡಿ. ಸುಧಾಕರ್ ಅಗಲಿಕೆ: ಚಳ್ಳಕೆರೆಯಲ್ಲಿ ಗಣ್ಯರಿಂದ ಅಂತಿಮ ದರ್ಶನ, ಕಂಬನಿ (ಚಿತ್ರದುರ್ಗ).ಮೇ.11: ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಗಣ್ಯರು ಹಾಗೂ ಜನಸಾಗರವೇ ಹರಿದುಬಂದಿದೆ. ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ (ಡಿ. ಸುಧಾಕರ್ ಸ್ಟೇಡಿಯಂ) ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೃಷಿ ಸಚಿವ ಚೆಲುವರಾಯಸ್ವಾಮಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು. ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಸುಧಾಕರ್ ಅವರು ಸರಳ ರಾಜಕೀಯ ಮತ್ತು ವೈಯಕ್ತಿಕ ಜೀವನ ನಡೆಸಿದವರು. ಕಳೆದ 25 ವರ್ಷಗಳಿಂದ ಅವರ ಪರಿಚಯವಿತ್ತು. ಸಂಪುಟದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರ ನಗುಮೊಗದ ಮತ್ತು ಪ್ರಾಮಾಣಿಕ ವ್ಯಕ್ತಿತ್ವ ನಮ್ಮೆಲ್ಲರಿಗೂ ಮಾದರಿ. ಅವರ
ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ, ಪಕ್ಷ ಸದಾ ಅವರ ಕುಟುಂಬದ ಬೆನ್ನಿಗಿದೆ ಎಂದು ಭಾವುಕರಾದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಹುಟ್ಟು ಉಚಿತ, ಸಾವು ಖಚಿತ. ಸಣ್ಣ ಸಮುದಾಯದಿಂದ ಬಂದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗುವುದು ಸಾಮಾನ್ಯವಲ್ಲ. ಅವರು ಸದಾ ರೈತರ ಮತ್ತು ಬಡವರ ಪರವಾಗಿ ನಿಲ್ಲುತ್ತಿದ್ದರು. ಭದ್ರಾ ಮೇಲ್ದಂಡೆ ಯೋಜನೆಗೆ ಸಚಿವ ಡಿ. ಸುಧಾಕರ್ ಅವರ ಹೆಸರಿಡುವ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ಸುಧಾಕರ್ ಅವರು ಕಳೆದ 45 ವರ್ಷಗಳಿಂದ ನನಗೆ ಆತ್ಮೀಯ ಸ್ನೇಹಿತರಾಗಿದ್ದರು. ಜೈನ ಸಮುದಾಯದವರಾಗಿದ್ದರೂ ಎಲ್ಲ ವರ್ಗದ ಜನರ ಪ್ರೀತಿ ಗಳಿಸಿ ಜನಾನುರಾಗಿಯಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ನಮ್ಮನ್ನು ಅಗಲಿರುವುದು ದುರದೃಷ್ಟಕರ. ಇಂದು ಅಂತಿಮ ದರ್ಶನಕ್ಕೆ ಹರಿದು ಬರುತ್ತಿರುವ ಜನಸಾಗರವೇ ಅವರು ಎಂತಹ ಸ್ನೇಹಜೀವಿ ಎಂಬುದಕ್ಕೆ ಸಾಕ್ಷಿ" ಎಂದು ಸ್ಮರಿಸಿದರು. ಡಿ. ಸುಧಾಕರ್ ಅವರ ನಿಧನಕ್ಕೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಅಂತಿಮ ವಿದಾಯ ಹೇಳಲು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ .
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1
- ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.4
- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀರ್ ಅಹಮದ್! ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.1
- ವಿಧವಶರಾದ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳ ಯಾವುದು ಗೊತ್ತೆ? ಸಚಿವ ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರ ಸ್ಥಳ ಬದಲು - ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಅಂತಿಮ ವಿಧಿವಿಧಾನ..!! ಚಿತ್ರದುರ್ಗ: ಮೊದಲಿಗೆ ಸುಧಾಕರ್ ಅವರ ಸೆಟಲ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಬಳಿಕ ಸ್ಥಳ ಬದಲಾವಣೆ ಮಾಡಲಾಗಿದ್ದು, ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲು ತೀರ್ಮಾನಿಸಲಾಗಿದೆ. ಮುಕ್ತಿಧಾಮದಲ್ಲಿ ಈಗಾಗಲೇ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಜೈನ ಸಂಪ್ರದಾಯದಂತೆ ವಿಧಿವಿಧಾನಗಳು ನಡೆಯಲಿವೆ. ಸುಧಾಕರ್ ಅವರ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ನೆರವೇರಿಸಲಿದ್ದು, ಸಾವಿರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಡಿ ಸುಧಾಕರ್ ಪಂಚಭೂತಗಳಲ್ಲಿ ಲೀನರಾಗಲಿದ್ದಾರೆ.1