Shuru
Apke Nagar Ki App…
ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ ಮಾಡಿ ದಕ ಜಿಲ್ಲಾಧಿಕಾರಿ ಆದೇಶ ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ'' ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.
Shamsheer Budoli
ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ: ಮದ್ಯ ಮಾರಾಟ ನಿಷೇಧ ಮಾಡಿ ದಕ ಜಿಲ್ಲಾಧಿಕಾರಿ ಆದೇಶ ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ'' ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.
More news from ಕರ್ನಾಟಕ and nearby areas
- ಮಂಗಳೂರಿನ ಮೀನುಗಾರಿಕಾ ಧಕ್ಕೆಯಲ್ಲಿರುವ ಸಂದೇಶ್ ಎಂಬವರ ಮಾಲಿಕತ್ವದ 'ಗುರುರಾಜ್’ ಎಂಬ ಆಳಸಮುದ್ರ ಮೀನುಗಾರಿಕಾ ಬೋಟ್‍ನಲ್ಲಿ ಗೋಬಿಂದ ದಾಸ್(42) ಎಂಬವರು ಮಾರ್ಚ್ 6 ರಂದು ರಾತ್ರಿ ಒಟ್ಟು 9 ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿರುತ್ತಾರೆ. ಮೀನುಹಿಡಿಯುವ ಸಲುವಾಗಿ ಬಲೆ ಬೀಸಲು ತೊಡಗಿದಾಗ ಗೋಬಿಂದ ದಾಸ್ ಬೋಟ್‍ನಲ್ಲಿ ಇರದೇ ಕಾಣೆಯಾಗಿದ್ದಾರೆ. ಅಥವಾ ರಾತ್ರಿ ಸಮಯ ಗೋಬಿಂದ ದಾಸ್ ಆಕಸ್ಮಿಕವಾಗಿ ಬೋಟ್‍ನಿಂದ ಜಾರಿ ಆಳ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಎತ್ತರ 5 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕಪ್ಪು ಬಿಳಿ ಮಿಶ್ರಿತ ಕೂದಲು, ಹಿಂದಿ, ಬೆಂಗಾಳಿ ಭಾಷೆ ಮಾತನಾಡುತ್ತಾರೆ. ನೀಲಿ ಬಣ್ಣದ ಟೀಶರ್ಟ್,ಮತ್ತು ಕಪ್ಪು ಬಣ್ಣದ ಬರ್ಮುಡಾ ಚಡ್ಡಿ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ದಕ್ಷಿಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಕಡೂರು : ಸುಮಾರು ಎರಡು ಎಕರೆ ಪ್ರದೇಶದ ತೋಟದಲ್ಲಿ ಫಸಲು ಬಂದಿದ್ದ ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಅಂಚೇಚೋಮನಹಳ್ಳಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಡಿ.ಕಾರೇಹಳ್ಳಿ ಗ್ರಾಮದ ರೈತ ಚಂದ್ರಪ್ಪ ಎಂಬುವವರಿಗೆ ಸೇರಿದ ಜಮೀನನಲ್ಲಿ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಬಾಳೆಗೊನೆ ಬಿಟ್ಟಿದ್ದ ಸುಮಾರು 1500 ಬಾಳೆಗಿಡಗಳನ್ನು ಕಡಿದು ಹಾಕಿದ್ದಾರೆ. ಬಾಳೆಗಿಡಗಳ ಬೆಳೆಗಾಗಿ ಸಂಘ, ಬ್ಯಾಂಕ್ ಹಾಗೂ ಕೈಗಡ ಸೇರಿ ಸುಮಾರು 5ಲಕ್ಷ ಸಾಲ ಮಾಡಲಾಗಿದೆ. ಬಾಳೆಗಿಡದ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುತ್ತಾ ಬರಲಾಗಿದೆ. ಸುಮಾರು 20ಲಕ್ಷ ಮೌಲ್ಯದ ಬಾಳೆಗಿಡಗಳನ್ನು ಕಡಿದು ಹಾಕಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ರೈತ ಚಂದ್ರಪ್ಪ ದೂರು ನೀಡಿದ್ದಾರೆ. ಮಂಗಳವಾರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೃತ್ಯ ವೆಸಗಿದ ಕಿಡಿಗೇಡಿಗಳ ಪತ್ತೆಗಾಗಿ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.3
- ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಗೆ ಸೇತುವೆಗಳ ಮೇಲಿಂದ ಕಸ ಎಸೆಯುತ್ತಿದ್ದು ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾನದಿ ಸಂರಕ್ಷಣಾ ಪಡೆ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಪವಿತ್ರ ನದಿಗೆ ಕೆಲ ಅನಾಗರಿಕ ಸಾರ್ವಜನಿಕರು ಎರಡು ಸೇತುವೆಗಳ ಮೇಲಿಂದ ಕಸ,ಪ್ಲಾಸ್ಟಿಕ್ ಬ್ಯಾಗ್ ಎಸೆದು ಮಲೀನ ಮಾಡುತ್ತಿದ್ದು, ಇದರಿಂದ ನದಿ ಹಾಗೂ ಜಲಚರಗಳಿಗೆ ಕುತ್ತು ತರುತ್ತಿದೆ. 1974 ಜಾಲಮಾಲಿನ್ಯ ಕಾಯ್ದೆ ತಡೆಗಟ್ಟುವ ಸೆಕ್ಷನ್ 24 ರ ಅನ್ವಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ 41 ಮತ್ತು 45 ರ ಸೆಕ್ಷನ್ ಅನ್ವಯ ದಂಡನೆಯನ್ನು ವಿಧಿಸಬಹು ದಾಗಿದೆ. ಘನ ತ್ಯಾಜ್ಯ ನಿರ್ವಹಣೆ 2016 ರ ಕಾಯ್ದೆ ಅನ್ವಯ ಯಾವುದೇ ನದಿ ಪಾತ್ರ ಗಳಲ್ಲಿ ಕಸ ಎಸೆಯುವುದು, ಘನತ್ಯಾಜ್ಯ ನಿರ್ಬಂಧವಿದ್ದರೂ ಆದೇಶ ಗಾಳಿಗೆ ತೂರಿದಂತಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಲವು ನಗರಸಭೆಗಳ ಮೇಲೆ ಪರಿಸರ ಪರಿಹಾರ ವಿಧಿಸಿದ್ದು ಓಡಿಶಾ ರಾಜ್ಯದ ಕೇಂದ್ರಪುರ ಮುನಿಸಿಪಾಲಿಟಿ, ಚಂಬಲ್ ನದಿ ಪ್ರಕರಣ, ಗೊರಕ್ ಪುರ ಕೊಳಚೆ ನೀರು ಪ್ರಕರಣಗಳನ್ನು ಗಮನಿಸಿ ಕೂಡಲೇ ಭದ್ರಾ ನದಿಯ ಮಾಲಿನ್ಯ ತಡೆಗೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಭದ್ರಾ ನದಿ ಸಂರಕ್ಷಣಾ ಪಡೆಯ ಸಿ.ತೀರ್ಥೇಶ್,ಡಿಎಸ್ಎಸ್ ಮುಖಂಡ ದಾಸರಕಲ್ಲಳ್ಳಿ ನಾಗರಾಜ್, ಹರೀಶ್, ಹಿರಿಯ ಹೋರಾಟಗಾರ ಜಯಣ್ಣ, ಗಣೇಶ್, ರೈತ ಮುಖಂಡ ಇಮ್ರಾನ್ ಪಾಷಾ, ಭದ್ರಾನದಿ ಸಂರಕ್ಷಣಪಡೆಯ ಮುಖ್ಯಸ್ಥ ರಾದ ಕಾರ್ತಿಕ್ ಕಿದ್ಮಯ್ ಉಪಸ್ಥಿತರಿದ್ದರು.1
- ಅರಕಲಗೂಡು ತಾಲ್ಲೂಕಿನ ಜೋಡಿಗುಬ್ಬಿ ಕ್ರಾಸ್ ಬಳಿ ಘಟನೆ ಅರಕಲಗೂಡ ತಾಲ್ಲೂಕಿನ ಹೆತ್ತಗೌಡನಹಳ್ಳಿ ಗ್ರಾಮದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೆರೆಗೋಡು ಗ್ರಾಮದ ಮೂವರಿಂದ ಹಲ್ಲೆ ಅರಕಲಗೂಡು ಪೋಲೀಸ್'ರು ಸ್ಥಳಕ್ಕೆ ಭೇಟಿ , ಪರಿಶೀಲನೆ1
- Post by Md Aleemulla Shariff1
- EID HARMONY GATHERING HELD @ MILAN FUNCTION HALL IN MYSURU Organised by jamat e Islami HIND #kvnews1
- ಮೈಸೂರು ಜಿಲ್ಲೆಯ “ದಕ್ಷಿಣ ಕಾಶಿ” ಎಂಬ ಹೆಗ್ಗಳಿಕೆಯನ್ನು ಪಡೆದ ಪವಿತ್ರ ಕ್ಷೇತ್ರಗಳಲ್ಲಿ ನಂಜನಗೂಡು ಶ್ರೀ ನಂಜುಂಡೇಶ್ವರ ದೇವಾಲಯದೊಂದಿಗೆ ತಿ. ನರಸೀಪುರದಲ್ಲಿರುವ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಮನೋನ್ಮಣಿ ಸಮೇತ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ದೇವಸ್ಥಾನ ವಿಶೇಷ ಸ್ಥಾನ ಹೊಂದಿದೆ. ಪರಶುರಾಮರಿಂದ ನಿರ್ಮಾಣಗೊಂಡ ನಂಜನಗೂಡು ದೇವಾಲಯದಂತೆ, ಅಗಸ್ತ್ಯ ಮಹರ್ಷಿಗಳಿಂದ ಪ್ರತಿಷ್ಠಾಪಿತವಾಗಿದೆ ಎಂಬ ನಂಬಿಕೆ ಇರುವ ಈ ದೇವಸ್ಥಾನವೂ ಭಕ್ತರ ಆಸ್ಥೆಯ ಕೇಂದ್ರವಾಗಿದೆ. ಇಂದು ತಿ. ನರಸೀಪುರದ ತ್ರಿವೇಣಿ ಸಂಗಮ ತಟದಲ್ಲಿರುವ ಮನೋನ್ಮಣಿ ಸಮೇತ ಶ್ರೀ ಅಗಸ್ತ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಹಾ ರಥೋತ್ಸವವು ಭಕ್ತಿ ಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದ ಬಳಿಕ ದೇವಾಲಯದ ಮುಂಭಾಗದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಕ್ಕೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ನಂತರ ಭಕ್ತರಿಗೆ ರಥ ಎಳೆಯಲು ಅವಕಾಶ ಮಾಡಿಕೊಡಲಾಯಿತು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತಾದಿಗಳು ಹರ ಹರ ಮಹಾದೇವ ಘೋಷಣೆಗಳ ನಡುವೆ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥ ಸಾಗುವ ವೇಳೆ ಭಕ್ತರು ಹಣ್ಣು, ಜವನ ಹಾಗೂ ಪುಷ್ಪಗಳನ್ನು ಅರ್ಪಿಸಿ ಧಾರ್ಮಿಕ ಉತ್ಸಾಹ ಮೆರೆದರು. ಬಿಸಿಲಿನ ತಾಪದ ನಡುವೆಯೂ ಭಕ್ತರ ಸಂಭ್ರಮ ಕಡಿಮೆಯಾಗದೇ ಇದ್ದು, ದಾನಿಗಳಿಂದ ಮಜ್ಜಿಗೆ ಮತ್ತು ಪಾನಕ ವಿತರಣೆ ಮಾಡಿ ಭಕ್ತರ ದಾಹ ನೀಗಿಸಲಾಯಿತು. ತ್ರಿವೇಣಿ ಸಂಗಮ ತಟದಲ್ಲಿ ನಡೆಯುವ ಈ ಮಹಾ ರಥೋತ್ಸವವು ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಪ್ರಮುಖ ಉತ್ಸವವಾಗಿ ಗಮನ ಸೆಳೆಯಿತು.1
- ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7 ಸಂಜೆ 5 ಗಂಟೆಯಿಂದ ಏಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3 ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4 ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ'' ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.1