ಕೇಂದ್ರಮಂತ್ರಿ ಎನ್ನುವುದನ್ನು ಮರೆತು ಗ್ರಾಮ ಪಂಚಾಯಿತಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ರಾಮನಗರ : ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವರು ಗೌರವಯುತವಾಗಿ ಮಾತನಾಡಬೇಕು. ಕೇಂದ್ರ ಮಂತ್ರಿ ಎನ್ನುವುದನ್ನು ಮರೆತು ಗ್ರಾಮ ಪಂಚಾಯಿತಿ ಸದಸ್ಯರಂತೆ ಎಚ್.ಡಿ. ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ ಎಂದು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿಚಾರದ ಬಗ್ಗೆ ಯಾಕೆ ಮಾತನಾಡ್ತಾರೆ? ಅದು ಅಸಹ್ಯ. ಪ್ರಜ್ವಲ್ ಪ್ರಕರಣಕ್ಕೂ, ನೈಸ್-ಕೆಪಿಎಸ್‌ಸಿಗೂ ಏನು ಸಂಬಂಧ? ಹೀಗೆ ಪದೇ ಪದೇ ಮಾತನಾಡಿಯೇ ಪ್ರಜ್ವಲ್‌ರನ್ನ ಜೈಲಿಗೆ ಕಳುಹಿಸಿದರು. ಪ್ರಜ್ವಲ್ ಜೈಲಲ್ಲೇ ಇರಬೇಕು, ಅವರನ್ನು ರಾಜಕೀಯವಾಗಿ ಮುಗಿಸಿ ತಮ್ಮ ಮಗನನ್ನು ಪ್ರತಿಷ್ಠಾಪನೆ ಮಾಡಬೇಕು ಎನ್ನುವುದೇ ಕುಮಾರಸ್ವಾಮಿ ಅವರ ಅಸಲಿ ಅಭಿಲಾಷೆಯಾಗಿದೆ. ಪ್ರಜ್ವಲ್ ಬಳಿ ಮೊಬೈಲ್ ಹೇಗೆ ಬಂತು ಎಂದು ಅನುಮಾನವಿದ್ದರೆ ಸಿಬಿಐ ತನಿಖೆಗೆ ಪತ್ರ ಬರೆಯಲಿ ಎಂದರು. ರಾಜ್ಯ ಸರ್ಕಾರದ 100ನೇ ದಿನದ ಸಾಧನಾ ಕಾರ್ಯಕ್ರಮವನ್ನು ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಪಂಚದಲ್ಲಿ ಕುಮಾರಸ್ವಾಮಿ ಒಬ್ಬರೇ ಮೇಧಾವಿ, ಉಳಿದವರೆಲ್ಲ ದಡ್ಡರು ಎನ್ನುವ ಮನಸ್ಥಿತಿ ಅವರದ್ದು. ನಾನು ಹುಟ್ಟಿದ್ದೇ ಬಡವರಿಗಾಗಿ ಎನ್ನುವ ಅವರ ಮನಸ್ಥಿತಿಯ ಬಗ್ಗೆ ನಾವೇನೂ ಮಾತನಾಡಲು ಸಾಧ್ಯವಿಲ್ಲ ಎಂದರು. ದೇವೇಗೌಡರ ಕುಟುಂಬವನ್ನು ಮುಗಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಅವರು, ಯಾರೋ ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ನಮ್ಮನ್ನು ಮುಗಿಸಲು ಅವರು ನೋಡಿದರೆ, ನಾವು ಅದನ್ನೇ ಮಾಡುತ್ತೇವೆ, ಇದು ರಾಜಕಾರಣ. ದೇವೇಗೌಡರು, ಕುಮಾರಸ್ವಾಮಿ ಎಂದರೆ ಒಕ್ಕಲಿಗರು ಎದ್ದು ನಿಲ್ಲುತ್ತಾರೆ ಎನ್ನುವ ಸೆಂಟಿಮೆಂಟ್ ರಾಜಕಾರಣ ಬಿಡಲಿ. ಕೇಂದ್ರ ಮಂತ್ರಿಯಾಗಿದ್ದಾರೆ, ರಾಜ್ಯಕ್ಕೆ ಉದ್ಯೋಗಗಳನ್ನು ತರಲಿ ನಮ್ಮ ಸರ್ಕಾರ ಜಾಗ ನೀಡಲು ಸಿದ್ಧವಿದೆ ಎಂದು ತಿಳಿಸಿದರು. ನಾನು ವಿದೇಶದಿಂದ ಬರುವವರೆಗೆ ಯಾರೂ ನಿದ್ದೆ ಮಾಡಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಡಿದ ಬಾಲಕೃಷ್ಣ, ಅಯ್ಯೋ.. ಅವರು ಬರುವವರೆಗೂ ನಾವ್ಯಾರೂ ನಿದ್ದೆಯೇ ಮಾಡಿರಲಿಲ್ಲ. ನಾಳೆಯಿಂದ ನೆಮ್ಮದಿಯಾಗಿ ನಿದ್ದೆ ಮಾಡುತ್ತೇವೆ. ಎಲ್ಲಿ ಎದೆ ಡಮ್ ಅನ್ನುತ್ತೋ ಅಂತ ಭಯ ಇತ್ತು, ಎದೆ ಗಟ್ಟಿಯಾಗಿ ಇಟ್ಟುಕೊಂಡಿದ್ದೆವು. ಇಂತಹ ಚಿಲ್ಲರೆ ಹೇಳಿಕೆಗಳನ್ನು ನೀಡುವುದನ್ನು ಅವರು ನಿಲ್ಲಿಸಬೇಕು ಎಂದರು.

- ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ ಯುಗದಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.1
- ದೊಡ್ಡಆಲಹಳ್ಳಿಯಲ್ಲಿ ಗೌರಿ–ಗಣೇಶ ಹಬ್ಬ ಆಚರಣೆ: ಮಹಿಳೆಯರೊಂದಿಗೆ ಸರಳವಾಗಿ ಬೆರೆತ ಸಿಎಂ ಪತ್ನಿ ಶ್ರೀಮತಿ ಉಷಾ ಕನಕಪುರ: ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದಲ್ಲಿ ಗೌರಿ–ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಅವರು ತಂಬಿಟ್ಟಿನ ಆರತಿಯೊಂದಿಗೆ ಆಗಮಿಸಿ ನಾಗರಕಲ್ಲಿಗೆ ತನಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯವರ ಪತ್ನಿ ಎಂಬ ಯಾವುದೇ ಅಹಂ ಪ್ರದರ್ಶಿಸದೆ, ಗ್ರಾಮದ ಮಹಿಳೆಯರೊಂದಿಗೆ ಸಾಮಾನ್ಯ ಮಹಿಳೆಯಂತೆ ಬೆರೆತು ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಗ್ರಾಮೀಣ ಸಂಪ್ರದಾಯದಂತೆ ನಾಗರಕಲ್ಲಿಗೆ ಪೂಜೆ ಸಲ್ಲಿಸಿ, ಕುಟುಂಬ ಹಾಗೂ ರಾಜ್ಯದ ಒಳಿತಿಗಾಗಿ ಪ್ರಾರ್ಥಿಸಿದರು. ಪೂಜೆ ಬಳಿಕ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಉಷಾ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಈ ವೇಳೆ ಉಷಾ ಅವರು ಗ್ರಾಮದ ಮಹಿಳೆಯರೊಂದಿಗೆ ಆತ್ಮೀಯವಾಗಿ ಬೆರೆತು, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಉಷಾ ಅವರ ಸರಳತೆ ಹಾಗೂ ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಬೆರೆತ ನಡೆ ಸ್ಥಳೀಯರ ಗಮನ ಸೆಳೆಯಿತು1
- ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ1
- ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.1
- ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ1
- ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.1
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು1