ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ರವರು ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಆಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಹಾಗೂ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರರವರನ್ನು ದೇವಸ್ಥಾನದ ಪ್ರಮುಖರು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು. ದೇವರ ದರ್ಶನ ಪಡೆದ ನಂತರ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.ಅದೇ ರೀತಿ ಈ ಬಾರಿಯೂ ಶ್ರೀ ಬೆಟ್ಟಳ್ಳಿ ಮಾರಮ್ಮ ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ಧಾರ್ಮಿಕ ಪೂಜಾ ಕೈಂಕಾರ್ಯಗಳಲ್ಲಿ ಸಮಾನತೆ ಒದಗಿಸಬೇಕು. ಜಾತ್ರೆ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಯಾವುದೇ ಅಹಿತಕರ ಘಟನೆ ನಡೆದಂತೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ, ಪ್ರತಿಯೊಬ್ಬರಿಗೂ ಶ್ರೀ ಬೆಟ್ಟಳ್ಳಿ ಮಾರಮ್ಮ ಶುಭವನ್ನುಂಟುಮಾಡಲಿ ಎಂದು ಶುಭ ಕೋರಿದರು. ಬುದುವಾರ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಮುಖ ಘಟ್ಟವಾಗಿರುವ ದೊಡ್ಡಬಾಯಿ ಬೀಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಂಗೇಗೌಡ ಮಾತನಾಡಿ ಈ ಬಾರಿ 86 ಜನರು ದೊಡ್ಡ ಬಾಯಿ ಬೀಗ ಹಾಕಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ 19 ಮಹಿಳಾ ಭಕ್ತಾದಿಗಳು ಸಹ 30 ಅಡಿ ಉದ್ದದ ಬಾಯಿ ಬೀಗ ಹಾಕಿಸಿಕೊಳ್ಳುತ್ತಿದ್ದಾರೆ. ಮೂರರಿಂದ ನಾಲ್ಕು ಸಾವಿರ ಭಕ್ತಾದಿಗಳು ಚಿಕ್ಕಬಾಯಿ ಬೀಗ ಹಾಕಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಇದೆ ವೇಳೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಇನ್ಸ್ಪೆಕ್ಟರ್ಗಳಾದ ಆನಂದ್ ಮೂರ್ತಿ ಚಿಕ್ಕರಾಜ್ ಶೆಟ್ಟಿ, ಜಗದೀಶ್ ಒಕ್ಕಲಿಗ ಸಮುದಾಯದ ಮುಖಂಡರಾದ ಲಿಂಗರಾಜುಗೌಡ, ವೆಂಕಟೇಗೌಡ, ಮಾದೇಶ್,ರಾಜುಗೌಡ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಗಿರೀಶ್, ಹರೀಶ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಜರಿದ್ದರು.

- ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಶಾಸಕರು ಸಮಾಜದ ಜನರ ಒಪ್ಪಿಗೆಯಂತೆ ಸರ್ಕಾರದ ಮಾರ್ಗ ಸೂಚಿಯಂತೆ ಜಯಂತಿ ಆಚರಿಸಲು ತಿಳಿಸಿದ್ದು ಅದರಂತೆ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಎಂದರು. ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಕೇಶವಮೂರ್ತಿ, ಶಿಕ್ಷಣಾಧಿಕಾರಿ ಮಹೇಶ್, ಕಾವೇರಿ ನಿಗಮದ ಎಇಇ ಕರುಣಾಮಯಿ, ಪರಿಶಿಷ್ಟ ವರ್ಗ ಇಲಾಖೆ ರಾಜೇಶ್, ಪ.ಪಂ. ಮುಖ್ಯಾಧಿಕಾರಿ ರೇಖಾ,ಜಿ.ಪಂ ಎಇಇ ಕುಮಾರ್, ಸಿಡಿಪಿಒ ಅಂಬಿಕಾ, ಅಗ್ನಿಶಾಮಕ ಮಹೇಶ್,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾಳ್ಯ ರಾಚಪ್ಪ,ಸಮುದಾಯದ ಮುಖಂಡರಾದ ನಾಗರಾಜು,ಬಸವರಾಜು,ಸಿದ್ದರಾಜು, ಯಜಮಾನರಾದ ಮಹೇಶ್ ಕಿರಣ್, ದಲಿತ್ ಸಿದ್ದರಾಜು,ಲಿಂಗರಾಜು, ದೇವರಾಜು ಹಾಗೂ ಯುವಕರು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.4
- ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಹಿರಿಕಾಟಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯವಾದ ರಸ್ತೆ ನಿರ್ಮಾಣ ಇನ್ನೂ ಸಾಕಾರವಾಗದೇ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಮುಖ್ಯ ಸಂಪರ್ಕ ರಸ್ತೆ ಇಂದಿಗೂ ಮಣ್ಣಿನ ರಸ್ತೆಯಾಗಿ ಉಳಿದಿದ್ದು, ವಾಹನ ಸಂಚಾರ ಹೆಚ್ಚಾದಾಗ ಭಾರೀ ಪ್ರಮಾಣದಲ್ಲಿ ಧೂಳು ಏಳುತ್ತದೆ. ಈ ಧೂಳು ನೇರವಾಗಿ ಮನೆಗಳೊಳಗೆ ಪ್ರವೇಶಿಸುತ್ತಿದ್ದು, ದಿನನಿತ್ಯದ ಜೀವನವೇ ಸಂಕಷ್ಟಕರವಾಗಿದೆ. ಮಕ್ಕಳಿಗೆ ಉಸಿರಾಟದ ತೊಂದರೆ, ವೃದ್ಧರಿಗೆ ಕೆಮ್ಮು, ಅಲರ್ಜಿ ಹಾಗೂ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಗ್ಯ ಸಮಸ್ಯೆಗಳು ಹೆಚ್ಚಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎನ್ನುವುದು ಗ್ರಾಮಸ್ಥರ ಅಳಲು. ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ದುಸ್ಥಿತಿಯಾಗುತ್ತದೆ. ಮಣ್ಣಿನ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟು ಜನರು ಸಂಚಾರ ಮಾಡಲು ಪರದಾಡಬೇಕಾಗುತ್ತದೆ. ಶಾಲಾ ಮಕ್ಕಳು ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ವಾಹನಗಳು ಗ್ರಾಮಕ್ಕೆ ಸುಲಭವಾಗಿ ಬರಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಗ್ರಾಮಸ್ಥರು ಹಲವು ಬಾರಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಚುನಾವಣೆ ಸಮಯದಲ್ಲಿ ಮಾತ್ರ ರಸ್ತೆ ನಿರ್ಮಾಣದ ಭರವಸೆ ನೀಡಲಾಗುತ್ತದೆ. ಆದರೆ ನಂತರ ಸಮಸ್ಯೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಶತಮಾನ ಕಳೆದರೂ ಗ್ರಾಮಕ್ಕೆ ಪಕ್ಕಾ ರಸ್ತೆ ಸಿಗದಿರುವುದು ಅಭಿವೃದ್ಧಿ ಬಗ್ಗೆ ಪ್ರಶ್ನೆ ಮೂಡಿಸಿದೆ. ತಕ್ಷಣವೇ ಹಿರಿಕಾಟಿ ಗ್ರಾಮಕ್ಕೆ ಶಾಶ್ವತ ಡಾಂಬರು ರಸ್ತೆ ನಿರ್ಮಿಸಿ ಧೂಳು ಸಮಸ್ಯೆಗೆ ಅಂತ್ಯ ಕಲ್ಪಿಸಬೇಕು. ಜೊತೆಗೆ ಗ್ರಾಮಸ್ಥರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನಾದರೂ ಸಂಬಂಧಿತ ಇಲಾಖೆ ಎಚ್ಚೆತ್ತು ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸುತ್ತಾರೆಯೇ ಎಂಬುದು ಇದೀಗ ಸಾರ್ವಜನಿಕರ ಪ್ರಶ್ನೆಯಾಗಿದೆ.3
- ಹನೂರು: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಏಪ್ರಿಲ್ 14ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಮುದಾಯದ ಮುಖಂಡರು ಸಲಹೆ, ಸೂಚನೆ ನೀಡಿ ಸಹಕರಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಜಯಂತಿ ಕಾರ್ಯಕ್ರಮ ಕೇವಲ ಆಚರಣೆಗೆ ಸೀಮಿತವಾಗದೆ, ಸಮಾಜದ ಮಾರ್ಗದರ್ಶನವನ್ನು ಪಾಲನೆ ಮಾಡುವ ಮೂಲಕ ಮಾತ್ರ ಇದರ ಅರ್ಥ ಸಿಗುತ್ತದೆ. ವಿವಿಧ ಗ್ರಾಮಗಳಿಂದ ಬಂದಿರುವ ಯಜಮಾನರು, ಸಮುದಾಯ ಮುಖಂಡರು ಸಲಹೆ ನೀಡಿ ಕಾರ್ಯಕ್ರಮ ಯಶಸ್ವಿಯಾಗಲಿ” ಎಂದರು. ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಚೈತ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಬಿ.ಇ.ಒ ಮಹೇಶ್, ಸಿಡಿಪಿಒ ಅಂಬಿಕಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ವಿವಿಧ ಗ್ರಾಮಗಳ ಸಮುದಾಯ ಮುಖಂಡರು ಉಪಸ್ಥಿತರಿದ್ದರು1
- ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ. ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- *ಭಾರತ ನಲ್ಲಿ ವೈರಲ್*1
- SHINE ARENA F⚽⚽TBALL AND CRICKET 🏏 TRUF INNAGURATED IN RAJIV NAGAR MYSURU #kvnews1
- STATEMENT GIVEN BY SYED ASIM GENERAL SECRETARY MYSORE CITY KPCC1
- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಲವೆಡೆ ಮಳೆ ಉಂಟಾಗಿದ್ದು ಬಿರು ಬಿಸಿಲಿಗೆ ಮಳೆರಾಯ ತಂಪೆರೆದಿದ್ದಾನೆ. ನಗರದ ಕುವೆಂಪು ನಗರ, ವಿದ್ಯಾರಣ್ಯಪುರಂ, ಅಗ್ರಹಾರ, ಚಾಮುಂಡಿಪುರಂ ಸೇರಿದಂತೆ ಹಲವೆಡೆ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು ಪಾದಚಾರಿಗಳು ಪರದಾಟ ಅನುಭವಿಸಿದ್ದಾರೆ.1