logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Arkalgud | ಜಯಂತಿ ಆಚರಣೆಗಳಲ್ಲಿ ಅಧಿಕಾರಿಗಳ ಭಾಗವಹಿಸುವಿಕೆ ಕಡ್ಡಾಯ ; ಏ. 14ರಂದು ಅಂಬೇಡ್ಕ‌ರ್ ಪ್ರತಿಮೆ ಗೋಪುರ ಉದ್ಘಾಟನೆ - ಅರಕಲಗೂಡು : ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ನಡೆಯುವ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಮಾಜದ ಮುಖಂಡರು,ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಮಹಾನೀಯರನ್ನು ಗೌರವಿಸಬೇಕೆಂದು ಶಾಸಕ ಎ.ಮಂಜು ಅವರು ಸೂಚನೆ ನೀಡಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಏ.5ರಂದು ಪಟ್ಟಣದ ದೇವರಾಜು ಅರಸು ಭವನದಲ್ಲಿ ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಿದೆ. ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯು ತಾಲೂಕು ಕಚೇರಿ ಆವರಣದಲ್ಲಿ ಜರುಗಲಿದೆ.ವಿಶೇಷವಾಗಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆ ಗೋಪುರ ಉದ್ಘಾಟನೆ ಹಾಗೂ ಬೃಹತ್ ವೇದಿಕೆ ಸಮಾರಂಭ ಆಯೋಜನೆ ಮಾಡಲಾಗಿದೆ.ಇದಕ್ಕೂ ಮುನ್ನಾ ಅನಕೃ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ 135 ಕುಂಭಕಳಸ,ಕಲಾ ತಂಡಗಳೊಂದಿಗೆ ನಡೆಯಲಿದೆ.ವಿಶ್ವಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಕೂಡ ನಡೆಯಲಿದೆ.ಈ ಕಾರ್ಯಕ್ರಮದ ಉಸ್ತುವಾರಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು,ಸಿಬ್ಬಂದಿಗಳು ನೋಡಿಕೊಳ್ಳಬೇಕು.ಇದಕ್ಕಾಗಿ ಇದೇ ಆವರಣದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟರು. ಈ ಎರಡು ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಗೌರವ ಸಮರ್ಪಣೆ,ವಿಶೇಷವಾಗಿ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ಈ ಇಬ್ಬರು ಮಹಾನೀಯರ ಜಯಂತಿ ಆಚರಣೆ ಕಾರ್ಯಕ್ರಮ ಹಬ್ಬವಾಗಿ ಜರುಗಲು ಸಮಾಜದ ಮುಖಂಡಂರು,ಚುನಾಯಿತ ಮಾಜಿ,ಹಾಲಿ ಸದಸ್ಯರು,ಗ್ರಾಪಂ ಆಡಳಿತದಿಂದಲೂ ಜನರನ್ನು ಕರೆತರುವ ಕೆಲಸ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತರು,ಮಹಿಳಾ ಸಂಘಟನೆಗಳ ಕಾರ್ಯಕರ್ತರು,ಧರ್ಮಸ್ಥಳ ಸ್ತೀಶಕ್ತಿ ಸಂಘಟನೆಗಳ ಮಹಿಳೆಯರನ್ನು ಆಹ್ವಾನಿಸಲು ಕ್ರಮವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಮಾತನಾಡಿದರು.ದಲಿತ ಸಂಘಟನೆಗಳ ಮುಖಂಡರು.ವಿವಿಧ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

7 hrs ago
user_News5Kannada
News5Kannada
Local News Reporter Arkalgud, Hassan•
7 hrs ago

Arkalgud | ಜಯಂತಿ ಆಚರಣೆಗಳಲ್ಲಿ ಅಧಿಕಾರಿಗಳ ಭಾಗವಹಿಸುವಿಕೆ ಕಡ್ಡಾಯ ; ಏ. 14ರಂದು ಅಂಬೇಡ್ಕ‌ರ್ ಪ್ರತಿಮೆ ಗೋಪುರ ಉದ್ಘಾಟನೆ - ಅರಕಲಗೂಡು : ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ನಡೆಯುವ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಮಾಜದ ಮುಖಂಡರು,ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಮಹಾನೀಯರನ್ನು ಗೌರವಿಸಬೇಕೆಂದು ಶಾಸಕ ಎ.ಮಂಜು ಅವರು ಸೂಚನೆ ನೀಡಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಏ.5ರಂದು ಪಟ್ಟಣದ ದೇವರಾಜು ಅರಸು ಭವನದಲ್ಲಿ ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಿದೆ. ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯು ತಾಲೂಕು ಕಚೇರಿ ಆವರಣದಲ್ಲಿ ಜರುಗಲಿದೆ.ವಿಶೇಷವಾಗಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆ ಗೋಪುರ ಉದ್ಘಾಟನೆ ಹಾಗೂ ಬೃಹತ್ ವೇದಿಕೆ ಸಮಾರಂಭ ಆಯೋಜನೆ ಮಾಡಲಾಗಿದೆ.ಇದಕ್ಕೂ ಮುನ್ನಾ ಅನಕೃ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ 135 ಕುಂಭಕಳಸ,ಕಲಾ ತಂಡಗಳೊಂದಿಗೆ ನಡೆಯಲಿದೆ.ವಿಶ್ವಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಕೂಡ ನಡೆಯಲಿದೆ.ಈ ಕಾರ್ಯಕ್ರಮದ ಉಸ್ತುವಾರಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು,ಸಿಬ್ಬಂದಿಗಳು ನೋಡಿಕೊಳ್ಳಬೇಕು.ಇದಕ್ಕಾಗಿ ಇದೇ ಆವರಣದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟರು. ಈ ಎರಡು ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಗೌರವ ಸಮರ್ಪಣೆ,ವಿಶೇಷವಾಗಿ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ಈ ಇಬ್ಬರು ಮಹಾನೀಯರ ಜಯಂತಿ ಆಚರಣೆ ಕಾರ್ಯಕ್ರಮ ಹಬ್ಬವಾಗಿ ಜರುಗಲು ಸಮಾಜದ ಮುಖಂಡಂರು,ಚುನಾಯಿತ ಮಾಜಿ,ಹಾಲಿ ಸದಸ್ಯರು,ಗ್ರಾಪಂ ಆಡಳಿತದಿಂದಲೂ ಜನರನ್ನು ಕರೆತರುವ ಕೆಲಸ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತರು,ಮಹಿಳಾ ಸಂಘಟನೆಗಳ ಕಾರ್ಯಕರ್ತರು,ಧರ್ಮಸ್ಥಳ ಸ್ತೀಶಕ್ತಿ ಸಂಘಟನೆಗಳ ಮಹಿಳೆಯರನ್ನು ಆಹ್ವಾನಿಸಲು ಕ್ರಮವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಮಾತನಾಡಿದರು.ದಲಿತ ಸಂಘಟನೆಗಳ ಮುಖಂಡರು.ವಿವಿಧ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

More news from Hassan and nearby areas
  • ಅರಕಲಗೂಡು : ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ನಡೆಯುವ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಮಾಜದ ಮುಖಂಡರು,ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಮಹಾನೀಯರನ್ನು ಗೌರವಿಸಬೇಕೆಂದು ಶಾಸಕ ಎ.ಮಂಜು ಅವರು ಸೂಚನೆ ನೀಡಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಏ.5ರಂದು ಪಟ್ಟಣದ ದೇವರಾಜು ಅರಸು ಭವನದಲ್ಲಿ ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಿದೆ. ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯು ತಾಲೂಕು ಕಚೇರಿ ಆವರಣದಲ್ಲಿ ಜರುಗಲಿದೆ.ವಿಶೇಷವಾಗಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆ ಗೋಪುರ ಉದ್ಘಾಟನೆ ಹಾಗೂ ಬೃಹತ್ ವೇದಿಕೆ ಸಮಾರಂಭ ಆಯೋಜನೆ ಮಾಡಲಾಗಿದೆ.ಇದಕ್ಕೂ ಮುನ್ನಾ ಅನಕೃ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ 135 ಕುಂಭಕಳಸ,ಕಲಾ ತಂಡಗಳೊಂದಿಗೆ ನಡೆಯಲಿದೆ.ವಿಶ್ವಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಕೂಡ ನಡೆಯಲಿದೆ.ಈ ಕಾರ್ಯಕ್ರಮದ ಉಸ್ತುವಾರಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು,ಸಿಬ್ಬಂದಿಗಳು ನೋಡಿಕೊಳ್ಳಬೇಕು.ಇದಕ್ಕಾಗಿ ಇದೇ ಆವರಣದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟರು. ಈ ಎರಡು ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಗೌರವ ಸಮರ್ಪಣೆ,ವಿಶೇಷವಾಗಿ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ಈ ಇಬ್ಬರು ಮಹಾನೀಯರ ಜಯಂತಿ ಆಚರಣೆ ಕಾರ್ಯಕ್ರಮ ಹಬ್ಬವಾಗಿ ಜರುಗಲು ಸಮಾಜದ ಮುಖಂಡಂರು,ಚುನಾಯಿತ ಮಾಜಿ,ಹಾಲಿ ಸದಸ್ಯರು,ಗ್ರಾಪಂ ಆಡಳಿತದಿಂದಲೂ ಜನರನ್ನು ಕರೆತರುವ ಕೆಲಸ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತರು,ಮಹಿಳಾ ಸಂಘಟನೆಗಳ ಕಾರ್ಯಕರ್ತರು,ಧರ್ಮಸ್ಥಳ ಸ್ತೀಶಕ್ತಿ ಸಂಘಟನೆಗಳ ಮಹಿಳೆಯರನ್ನು ಆಹ್ವಾನಿಸಲು ಕ್ರಮವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಮಾತನಾಡಿದರು.ದಲಿತ ಸಂಘಟನೆಗಳ ಮುಖಂಡರು.ವಿವಿಧ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.
    1
    ಅರಕಲಗೂಡು : ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ವತಿಯಿಂದ ನಡೆಯುವ ಬಾಬು ಜಗಜೀವನ್ ರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಮಾಜದ ಮುಖಂಡರು,ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವ ಮೂಲಕ ಮಹಾನೀಯರನ್ನು ಗೌರವಿಸಬೇಕೆಂದು ಶಾಸಕ ಎ.ಮಂಜು ಅವರು ಸೂಚನೆ ನೀಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು,ಏ.5ರಂದು ಪಟ್ಟಣದ ದೇವರಾಜು ಅರಸು ಭವನದಲ್ಲಿ ಬಾಬು ಜಗಜೀವನ್ ರಾಂ ಅವರ 119ನೇ ಜಯಂತಿ ಆಚರಣೆ ಸಮಾರಂಭ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಿದೆ.
ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯು ತಾಲೂಕು ಕಚೇರಿ ಆವರಣದಲ್ಲಿ ಜರುಗಲಿದೆ.ವಿಶೇಷವಾಗಿ ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಕಚೇರಿ ಆವರಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆ ಗೋಪುರ ಉದ್ಘಾಟನೆ ಹಾಗೂ ಬೃಹತ್ ವೇದಿಕೆ ಸಮಾರಂಭ ಆಯೋಜನೆ ಮಾಡಲಾಗಿದೆ.ಇದಕ್ಕೂ ಮುನ್ನಾ ಅನಕೃ ವೃತ್ತದಿಂದ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ 135 ಕುಂಭಕಳಸ,ಕಲಾ ತಂಡಗಳೊಂದಿಗೆ ನಡೆಯಲಿದೆ.ವಿಶ್ವಚೇತನ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಕೂಡ ನಡೆಯಲಿದೆ.ಈ ಕಾರ್ಯಕ್ರಮದ ಉಸ್ತುವಾರಿಯನ್ನು ತಾಲೂಕು ಆರೋಗ್ಯ ಅಧಿಕಾರಿಗಳು,ಸಿಬ್ಬಂದಿಗಳು ನೋಡಿಕೊಳ್ಳಬೇಕು.ಇದಕ್ಕಾಗಿ ಇದೇ ಆವರಣದಲ್ಲಿ ಪ್ರತ್ಯೇಕವಾಗಿ ಶಾಮಿಯಾನ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.
ಈ ಎರಡು ಕಾರ್ಯಕ್ರಮಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಗೌರವ ಸಮರ್ಪಣೆ,ವಿಶೇಷವಾಗಿ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ಈ ಇಬ್ಬರು ಮಹಾನೀಯರ ಜಯಂತಿ ಆಚರಣೆ ಕಾರ್ಯಕ್ರಮ ಹಬ್ಬವಾಗಿ ಜರುಗಲು ಸಮಾಜದ ಮುಖಂಡಂರು,ಚುನಾಯಿತ ಮಾಜಿ,ಹಾಲಿ ಸದಸ್ಯರು,ಗ್ರಾಪಂ ಆಡಳಿತದಿಂದಲೂ ಜನರನ್ನು ಕರೆತರುವ ಕೆಲಸ ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತರು,ಮಹಿಳಾ ಸಂಘಟನೆಗಳ ಕಾರ್ಯಕರ್ತರು,ಧರ್ಮಸ್ಥಳ ಸ್ತೀಶಕ್ತಿ ಸಂಘಟನೆಗಳ ಮಹಿಳೆಯರನ್ನು ಆಹ್ವಾನಿಸಲು ಕ್ರಮವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಮಾತನಾಡಿದರು.ದಲಿತ ಸಂಘಟನೆಗಳ ಮುಖಂಡರು.ವಿವಿಧ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.
    user_News5Kannada
    News5Kannada
    Local News Reporter Arkalgud, Hassan•
    7 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    48 min ago
  • EID HARMONY GATHERING HELD @ MILAN FUNCTION HALL IN MYSURU ORGANISED BY JAMAT E ISLAMI HIND MYSURU #kvnews
    1
    EID HARMONY GATHERING HELD @ MILAN FUNCTION HALL IN MYSURU ORGANISED BY JAMAT E ISLAMI HIND MYSURU #kvnews
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    14 hrs ago
  • ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಯಾಗಿದ್ದು ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ‌ನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
    1
    ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ  ಯಾಗಿದ್ದು  ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ‌ನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು
ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ. ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.
    1
    ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.
ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    18 hrs ago
  • ಮಳವಳ್ಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಚಾಲನೆ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖೆ ಅಧಿಕಾರಿ ಮಧುಶ್ರೀ ಚಾಲನೆ * ಉಚಿತ ತರಬೇತಿ ಆರಂಭವಾಗಿದೆ- ಅಸಕ್ತರು ಕೂಡಲೇ ನೋಂದಣಿ ಮಾಡಿಸಿಕೊಳ್ಳುವಂತೆ ಕರೆ ಮಳವಳ್ಳಿ:ಸರ್ಕಾರಗಳು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬನೆ ಜೀವನ ರೂಪಿಸುವುದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ತರಬೇತಿ ಸಂಸ್ಥೆ ವತಿಯಿಂದ ಉಚಿತವಾಗಿ ಡ್ರೈವಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು ನಿರುದ್ಯೋಗಿ ಯುವತಿ ಯುವಕರು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದುವAತೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಮಧುಶ್ರೀ ಹೇಳಿದರು. ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ನಿರುದ್ಯೋಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ಕಾರ್ಯಗಾರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಇಲಾಖೆ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬಿ ಜೀವನ ರೂಪಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು,ಪಲಾನುಭವಿಗಳು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಅವರು ಕರೆ ನೀಡಿದರು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಯುವತಿಯರು ಸಹ ಎಲ್ಲಾ ವೃತ್ತಿಯಲ್ಲಿ ಮುಂಚೂಣಿಯಲ್ಲಿದ್ದು, ನಗರ ಪ್ರದೇಶದಲ್ಲಿ ಮಹಿಳೆಯರು ಆಟೋ ಕಾರು ಬಸ್ ಚಾಲನೆ ಮಾಡುತ್ತಿದ್ದಾರೆ ಅವರಂತೆ ನೀವುಗಳು ಸಹ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಅವರು ಈ ಸಂದರ್ಬದಲ್ಲಿ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಜಗದೀಶ್ ಮಾತನಾಡಿ ಇಡೀ ದೇಶದಲ್ಲಿ ಮಳವಳ್ಳಿಯ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯು ಮಾದರಿಯಾಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ನೀಡುತ್ತಿದೆ ,ಇಲ್ಲಿ ತರಬೇತಿ ಪಡೆದವರು ಇಡೀ ದೇಶದ ಯಾವ ಭಾಗದಲ್ಲಾದರೂ, ಇಡೀ ವಿಶ್ವದ ಯಾವ ದೇಶದಲ್ಲಾದರೂ ಚಾಲನೆ ವೃತ್ತಿಯನ್ನು ಯಶಸ್ವಿಯಾಗಿ ಮಾಡಬಹುದಾಗಿದೆ. ಪ್ರಸ್ತುತವಾಗಿ ಚಾಲನೆ ವೃತ್ತಿಗೆ ಬಹಳ ಬೇಡಿಕೆ ಇದೆ.ಯುವಕ ,ಯುವತಿಯರು ಇಲ್ಲಿ ನೀಡುವ ತರಬೇತಿಯನ್ನು ಉತ್ತಮವಾಗಿ ಕಲಿತು, ತಮ್ಮ ವೃತ್ತಿಯನ್ನು ಯಶಸ್ವಿಯಾಗಿ ಮಾಡುವುದರೊಂದಿಗೆ ಇತರರಿಗೂ ಸಹ ಈ ವೃತ್ತಿ ತರಬೇತಿಯ ಸೌಲಭ್ಯದ ಮಾಹಿತಿ ನೀಡಿ ಅವರನ್ನು ತರಬೇತಿಗೆ ಸೇರಿಸಿ ತಾವು, ತಮ್ಮವರು, ತಮ್ಮ ಸುತ್ತಮುತ್ತಲಿನ ಜನರು ಸಹ ಆರ್ಥಿಕವಾಗಿ ಪ್ರಗತಿ ಹೊಂದಲು ನೀವೆಲ್ಲರೂ ಸಮಾಜಮುಖಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎ.ಎಸ್.ಪ್ರಭಾಕರ್,ಚಾಲನಾ ತರಬೇತಿ ಸಂಸ್ಥೆಙ ಸಂತೋಷ್,ಇತರೆ ಸಿಬ್ಬಂದಿಗಳು ,ನಿರುದ್ಯೋಗಿ ಯುವಕರು,ಯುವತಿಯರು ಉಪಸ್ಥಿತರಿದ್ದರು.
    1
    ಮಳವಳ್ಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಚಾಲನೆ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖೆ ಅಧಿಕಾರಿ ಮಧುಶ್ರೀ ಚಾಲನೆ
*  ಉಚಿತ ತರಬೇತಿ ಆರಂಭವಾಗಿದೆ- ಅಸಕ್ತರು ಕೂಡಲೇ ನೋಂದಣಿ ಮಾಡಿಸಿಕೊಳ್ಳುವಂತೆ ಕರೆ
ಮಳವಳ್ಳಿ:ಸರ್ಕಾರಗಳು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬನೆ ಜೀವನ ರೂಪಿಸುವುದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ತರಬೇತಿ ಸಂಸ್ಥೆ ವತಿಯಿಂದ ಉಚಿತವಾಗಿ ಡ್ರೈವಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು ನಿರುದ್ಯೋಗಿ ಯುವತಿ ಯುವಕರು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದುವAತೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಮಧುಶ್ರೀ ಹೇಳಿದರು.
ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ನಿರುದ್ಯೋಗಿ ಯುವಕ ಯುವತಿಯರಿಗೆ ಚಾಲನೆ  ತರಬೇತಿ ಕಾರ್ಯಗಾರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಇಲಾಖೆ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬಿ ಜೀವನ ರೂಪಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು,ಪಲಾನುಭವಿಗಳು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಅವರು ಕರೆ ನೀಡಿದರು
ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಯುವತಿಯರು ಸಹ ಎಲ್ಲಾ ವೃತ್ತಿಯಲ್ಲಿ ಮುಂಚೂಣಿಯಲ್ಲಿದ್ದು, ನಗರ ಪ್ರದೇಶದಲ್ಲಿ ಮಹಿಳೆಯರು ಆಟೋ ಕಾರು ಬಸ್ ಚಾಲನೆ ಮಾಡುತ್ತಿದ್ದಾರೆ ಅವರಂತೆ ನೀವುಗಳು ಸಹ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಅವರು ಈ ಸಂದರ್ಬದಲ್ಲಿ  ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಜಗದೀಶ್ ಮಾತನಾಡಿ ಇಡೀ ದೇಶದಲ್ಲಿ ಮಳವಳ್ಳಿಯ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯು ಮಾದರಿಯಾಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ನೀಡುತ್ತಿದೆ ,ಇಲ್ಲಿ ತರಬೇತಿ ಪಡೆದವರು ಇಡೀ ದೇಶದ ಯಾವ ಭಾಗದಲ್ಲಾದರೂ, ಇಡೀ ವಿಶ್ವದ ಯಾವ ದೇಶದಲ್ಲಾದರೂ ಚಾಲನೆ ವೃತ್ತಿಯನ್ನು ಯಶಸ್ವಿಯಾಗಿ ಮಾಡಬಹುದಾಗಿದೆ. ಪ್ರಸ್ತುತವಾಗಿ ಚಾಲನೆ ವೃತ್ತಿಗೆ ಬಹಳ ಬೇಡಿಕೆ ಇದೆ.ಯುವಕ ,ಯುವತಿಯರು ಇಲ್ಲಿ ನೀಡುವ ತರಬೇತಿಯನ್ನು ಉತ್ತಮವಾಗಿ ಕಲಿತು, ತಮ್ಮ ವೃತ್ತಿಯನ್ನು ಯಶಸ್ವಿಯಾಗಿ ಮಾಡುವುದರೊಂದಿಗೆ ಇತರರಿಗೂ ಸಹ ಈ ವೃತ್ತಿ ತರಬೇತಿಯ ಸೌಲಭ್ಯದ ಮಾಹಿತಿ ನೀಡಿ ಅವರನ್ನು ತರಬೇತಿಗೆ ಸೇರಿಸಿ ತಾವು, ತಮ್ಮವರು, ತಮ್ಮ ಸುತ್ತಮುತ್ತಲಿನ ಜನರು  ಸಹ ಆರ್ಥಿಕವಾಗಿ ಪ್ರಗತಿ ಹೊಂದಲು ನೀವೆಲ್ಲರೂ ಸಮಾಜಮುಖಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎ.ಎಸ್.ಪ್ರಭಾಕರ್,ಚಾಲನಾ ತರಬೇತಿ ಸಂಸ್ಥೆಙ ಸಂತೋಷ್,ಇತರೆ ಸಿಬ್ಬಂದಿಗಳು ,ನಿರುದ್ಯೋಗಿ ಯುವಕರು,ಯುವತಿಯರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    16 hrs ago
  • ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ​ ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    1
    ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ.
​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ  ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು,  ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು.
ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್:
​  ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು.
ಬಡವರಿಗಾಗಿ ಆಸ್ಪತ್ರೆ:
​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ  ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    20 hrs ago
  • ಅರಕಲಗೂಡು: ತಂಬಾಕು ಬೆಳೆಗಾರರಿಗೆ ಸರಿಯಾದ ಬೆಲೆ ನೀಡದೆ ತಂಬಾಕು ಮಂಡಳಿ ಮತ್ತು ಕಂಪನಿಗಳು ಬೆಳೆಗಾ ರರನ್ನು ವಂಚಿಸುತ್ತಿದ್ದು, ಅದನ್ನು ವಿರೋಧಿಸಿ ಏ.3 ರಂದು ಬೆಳಿಗ್ಗೆ 11 ಗಂಟೆಯಿಂದ ಭಾರತೀಯ ಕಿಸಾನ್ ಸಂಘ ಮತ್ತು ತಂಬಾಕು ಬೆಳೆಗಾರರು ಅಹೋರಾತ್ರಿ ಧರಣಿ ಹಮ್ಮಿಕೊಂಡಿರು ವುದಾಗಿ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಂದಿಗನಹಳ್ಳಿ ರವಿ ಅವರು ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಂಬಾಕು ಮಂಡಳಿ ವಹಿ ವಾಟು ಆರಂಭಿಸಿ 6 ತಿಂಗಳು ಕಳೆದರೂ ಇನ್ನೂ ಅರ್ಧಷ್ಟು ತಂಬಾಕು ಮಾರಾಟ ಕಂಡಿಲ್ಲ. ಬೆಳೆಗಾರರು ಮಂಡಳಿಗೆ ತರುವ ತಂಬಾಕನ್ನು ಕಂಪನಿಗಳು ತಮಗೆ ಬೇಕಾದ್ದನ್ನು ಇಷ್ಟಬಂದಷ್ಟು ಧರ ನಿಗಧಿಮಾಡಿ ಕೊಳ್ಳುತ್ತಿವೆ. ಬೆಳೆಗಾ ರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಮಂಡಳಿ ರೈತರಿಗೆ ನ್ಯಾಯ ದೊರಕಿಸಿ ಕೊಡಲು ವಿಫಲವಾಗಿದೆ. ಅದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿ ಕೊಂಡಿದ್ದು ಎಲ್ಲಾ ರೈತ ಪರ ಸಂಘಟ ನೆಗಳು, ಬೆಳೆಗಾರರೂ ಪ್ರತಿಭಟನೆ . ಯಲ್ಲಿ ಪಾಲ್ಗೊಳ್ಳುವ ಮೂಲಕ ಬೆಳೆಗಾರರಿಗೆ ನ್ಯಾಯಾ ದೊರಕಿಸಿ ಕೊಡಲು ಸಹಕರಿಸುವಂತೆ ಮನವಿ ಮಾಡಿದರು. ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೀಬಳ್ಳಿ ಯೋಗಣ್ಣ ಮಾತನಾಡಿ, ಕಳೆದ ವರ್ಷದ ಅ.10 ರಂದು ತಂಬಾಕು ವಹಿವಾಟು ಪ್ರಾರಂಭವಾಗಿದ್ದು, ಈ ವರೆಗೂ ಬೆಲೆ ಸ್ಥಿರತೆ ಕಂಡುಕೊಂಡಿಲ್ಲ, ಪ್ರಾರಂಭದಲ್ಲಿ ಆಂಧ್ರದಲ್ಲಿ ರೂ. 450 ದರ ನಿಗದಿಯಾದರೆ ಕರ್ನಾಟಕದಲ್ಲಿ ರೂ. 350 ಬೆಲೆ ನಿಗಧಿಯಾಗಿತ್ತು. ಬಳಿಕ ದಿನೇ, ದಿನೇ ದರ ಕುಸಿಯುತ್ತಲೆ ಸಾಗುತ್ತಿದೆ. ಹಾಸನ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಮಾತುಕತೆ ನಡೆಸಿದರೂ ಫಲಪ್ರದವಾಗಿಲ್ಲ. ಸಂಸದರಾದ ಯಧುವೀರ್ ಮತ್ತು ಶ್ರೇಯಸ್ ಪಠೇಲ್ ಸಂಸತ್‌ನಲ್ಲಿ ಸಮಸ್ಯೆ ಬಗ್ಗೆ ಗಮನ ಸಳೆದರೂ ಪ್ರಯೋಜನವಾ ಗಿಲ್ಲ. ಬೆಳೆಗಾರರು ಹೋರಾಟದ ಹಾದಿ ಹಿಡಿಯಬೇಕಾಗಿದೆ. ಸಂಸತ್ ಹಾಗೂ ಸದಸನದಲ್ಲಿ ನ್ಯಾಯ ದೊರಕಿಸಲು ಸಾಧ್ಯವಾಗದ ಜನಪ್ರತಿಗಳು ಹೋರಾ ಟದ ಹಾದಿ ಹಿಡಿದಿರುವ ರೈತರೊಂದಿಗೆ ಸೇರಿ ಪ್ರತಿಭಟನೆ ಮೂಲಕ ಪರಿಹಾರ ದೊರಕಿಸಲು ನೆರವಾಗಬೇಕು. ವಾರ್ಷಿಕ ರೂ. 45 ಸಾವಿರ ಕೋಟಿ ವಿದೇಶಿ ವಿನಿಮಯ ಗಳಿಸುವ ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ, ವಾಣಿಜ್ಯ ಇಲಾಖೆ ಹಾಗೂ ತಂಬಾಕು ಮಂಡಳಿ ಗಮನ ಹರಿಸದೆ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಮುಖಂಡರಾದ ಮಂಜಣ್ಣ, ವಿರೇಂದ್ರ, ಸಂಜು, ವೇದಾನಂದ ಗೋಷ್ಠಿಯಲ್ಲಿದ್ದರು.
    1
    ಅರಕಲಗೂಡು: ತಂಬಾಕು ಬೆಳೆಗಾರರಿಗೆ ಸರಿಯಾದ ಬೆಲೆ ನೀಡದೆ ತಂಬಾಕು ಮಂಡಳಿ ಮತ್ತು ಕಂಪನಿಗಳು ಬೆಳೆಗಾ ರರನ್ನು ವಂಚಿಸುತ್ತಿದ್ದು, ಅದನ್ನು ವಿರೋಧಿಸಿ ಏ.3 ರಂದು ಬೆಳಿಗ್ಗೆ 11 ಗಂಟೆಯಿಂದ ಭಾರತೀಯ ಕಿಸಾನ್ ಸಂಘ ಮತ್ತು ತಂಬಾಕು ಬೆಳೆಗಾರರು ಅಹೋರಾತ್ರಿ ಧರಣಿ ಹಮ್ಮಿಕೊಂಡಿರು ವುದಾಗಿ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಂದಿಗನಹಳ್ಳಿ ರವಿ ಅವರು ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಂಬಾಕು ಮಂಡಳಿ ವಹಿ ವಾಟು ಆರಂಭಿಸಿ 6 ತಿಂಗಳು ಕಳೆದರೂ ಇನ್ನೂ ಅರ್ಧಷ್ಟು ತಂಬಾಕು ಮಾರಾಟ ಕಂಡಿಲ್ಲ. ಬೆಳೆಗಾರರು ಮಂಡಳಿಗೆ ತರುವ ತಂಬಾಕನ್ನು ಕಂಪನಿಗಳು ತಮಗೆ ಬೇಕಾದ್ದನ್ನು ಇಷ್ಟಬಂದಷ್ಟು ಧರ ನಿಗಧಿಮಾಡಿ ಕೊಳ್ಳುತ್ತಿವೆ. ಬೆಳೆಗಾ ರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಮಂಡಳಿ ರೈತರಿಗೆ ನ್ಯಾಯ ದೊರಕಿಸಿ ಕೊಡಲು ವಿಫಲವಾಗಿದೆ. ಅದನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿ ಕೊಂಡಿದ್ದು ಎಲ್ಲಾ ರೈತ ಪರ ಸಂಘಟ ನೆಗಳು, ಬೆಳೆಗಾರರೂ ಪ್ರತಿಭಟನೆ . ಯಲ್ಲಿ ಪಾಲ್ಗೊಳ್ಳುವ ಮೂಲಕ ಬೆಳೆಗಾರರಿಗೆ ನ್ಯಾಯಾ ದೊರಕಿಸಿ ಕೊಡಲು ಸಹಕರಿಸುವಂತೆ ಮನವಿ ಮಾಡಿದರು.
ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೀಬಳ್ಳಿ ಯೋಗಣ್ಣ ಮಾತನಾಡಿ, ಕಳೆದ ವರ್ಷದ ಅ.10 ರಂದು ತಂಬಾಕು ವಹಿವಾಟು ಪ್ರಾರಂಭವಾಗಿದ್ದು, ಈ ವರೆಗೂ ಬೆಲೆ ಸ್ಥಿರತೆ ಕಂಡುಕೊಂಡಿಲ್ಲ, ಪ್ರಾರಂಭದಲ್ಲಿ ಆಂಧ್ರದಲ್ಲಿ ರೂ. 450 ದರ ನಿಗದಿಯಾದರೆ ಕರ್ನಾಟಕದಲ್ಲಿ ರೂ. 350 ಬೆಲೆ ನಿಗಧಿಯಾಗಿತ್ತು. ಬಳಿಕ ದಿನೇ, ದಿನೇ ದರ ಕುಸಿಯುತ್ತಲೆ ಸಾಗುತ್ತಿದೆ. ಹಾಸನ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಮಾತುಕತೆ ನಡೆಸಿದರೂ ಫಲಪ್ರದವಾಗಿಲ್ಲ. ಸಂಸದರಾದ ಯಧುವೀರ್ ಮತ್ತು ಶ್ರೇಯಸ್ ಪಠೇಲ್ ಸಂಸತ್‌ನಲ್ಲಿ ಸಮಸ್ಯೆ ಬಗ್ಗೆ ಗಮನ ಸಳೆದರೂ ಪ್ರಯೋಜನವಾ ಗಿಲ್ಲ. ಬೆಳೆಗಾರರು ಹೋರಾಟದ ಹಾದಿ ಹಿಡಿಯಬೇಕಾಗಿದೆ. ಸಂಸತ್ ಹಾಗೂ ಸದಸನದಲ್ಲಿ ನ್ಯಾಯ ದೊರಕಿಸಲು ಸಾಧ್ಯವಾಗದ ಜನಪ್ರತಿಗಳು ಹೋರಾ ಟದ ಹಾದಿ ಹಿಡಿದಿರುವ ರೈತರೊಂದಿಗೆ ಸೇರಿ ಪ್ರತಿಭಟನೆ ಮೂಲಕ ಪರಿಹಾರ ದೊರಕಿಸಲು ನೆರವಾಗಬೇಕು. ವಾರ್ಷಿಕ ರೂ. 45 ಸಾವಿರ ಕೋಟಿ ವಿದೇಶಿ ವಿನಿಮಯ ಗಳಿಸುವ ತಂಬಾಕು ಬೆಳೆಗಾರರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ, ವಾಣಿಜ್ಯ ಇಲಾಖೆ ಹಾಗೂ ತಂಬಾಕು ಮಂಡಳಿ ಗಮನ ಹರಿಸದೆ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತ ಪಡಿಸಿದರು. 
ಮುಖಂಡರಾದ ಮಂಜಣ್ಣ, ವಿರೇಂದ್ರ, ಸಂಜು, ವೇದಾನಂದ ಗೋಷ್ಠಿಯಲ್ಲಿದ್ದರು.
    user_News5Kannada
    News5Kannada
    Local News Reporter Arkalgud, Hassan•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.