ನರಹರಿ ನಗರದಲ್ಲಿ ₹60 ಲಕ್ಷ ವೆಚ್ಚದ 5,000 ಲೀಟರ್ ಸಾಮರ್ಥ್ಯದ ನೂತನ ಬಿಎಂಸಿ ಕೇಂದ್ರ ಉದ್ಘಾಟನೆ ಹೈನುಗಾರರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧ: ಸಚಿವ ಟಿ. ರಘುಮೂರ್ತಿ ಚಳ್ಳಕೆರೆ: ತಾಲೂಕಿನ ನರಹರಿ ನಗರದಲ್ಲಿ ನರಹರಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸುಮಾರು ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ 5,000 ಲೀಟರ್ ಸಾಮರ್ಥ್ಯದ ನೂತನ ಬೃಹತ್ ಹಾಲು ಶೀತಲೀಕರಣ ಕೇಂದ್ರ (BMC) ಹಾಗೂ ಯಂತ್ರೋಪಕರಣಗಳನ್ನು ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಟಿ. ರಘುಮೂರ್ತಿ ಅವರು ಅದ್ಧೂರಿಯಾಗಿ ಉದ್ಘಾಟಿಸಿದರು. ಬುಧವಾರದಂದು ವಿಜೃಂಭಣೆಯಿಂದ ನಡೆದ ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ ರಾಜಾರಾಮ್ ಸ್ವಾಮೀಜಿ ವಹಿಸಿದ್ದರು. ಸಂಘದ ಅಧ್ಯಕ್ಷರಾದ ಶ್ರೀ ಕಾರ್ತಿಕ್ ಎಸ್. ಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸಂಸದರಾದ ಶ್ರೀ ಗೋವಿಂದ ಎಂ. ಕಾರಜೋಳ ಹಾಗೂ ಶಿವಮೊಗ್ಗ–ದಾವಣಗೆರೆ–ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಅಧ್ಯಕ್ಷರಾದ ಶ್ರೀ ಹೆಚ್.ಎನ್. ವಿದ್ಯಾಧರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಮುಲ್ ನಿರ್ದೇಶಕರು ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಬಿ.ಸಿ. ಸಂಜೀವ್ ಮೂರ್ತಿ ಅವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ಜಿಲ್ಲಾ ನಿರ್ದೇಶಕರಾದ ಶ್ರೀ ಜಿ.ಪಿ. ರೇವಣಸಿದ್ದಪ್ಪ, ಶ್ರೀ ಜಿ.ಬಿ. ಶೇಖರಪ್ಪ ಹಾಗೂ ಬಿ.ಆರ್. ರವಿಕುಮಾರ್ ಅವರು ಬಿ.ಎಂ.ಸಿ. ಘಟಕಕ್ಕೆ ಚಾಲನೆ ನೀಡಿದರು. ಸಚಿವರ ಮಾತು: ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಟಿ. ರಘುಮೂರ್ತಿ ಅವರು, ಹಾಲಿನ ಗುಣಮಟ್ಟ ಕಾಪಾಡುವುದು, ಹಾಲು ಉತ್ಪಾದಕರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಹಾಗೂ ಗ್ರಾಮೀಣ ಭಾಗದ ಹೈನುಗಾರಿಕೆ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನೂತನ ಬಿ.ಎಂ.ಸಿ ಕೇಂದ್ರ ಮಹತ್ವದ ಕೊಡುಗೆ ನೀಡಲಿದೆ. ಹೈನುಗಾರರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದ್ದು, ಹಾಲು ಉತ್ಪಾದಕರ ಕಲ್ಯಾಣಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿರಂತರ ಕ್ರಮ ಕೈಗೊಳ್ಳಲಾಗುವುದು,ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ, ಕರ್ನಾಟಕ ಮಹಾಮಂಡಳಿ ವತಿಯಿಂದ ಬಿ.ಜಿ.ಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರಾದ ₹2,25,000 ಮೊತ್ತದ ಚೆಕ್ ಅನ್ನು ಸಚಿವರು ಹಾಗೂ ಜಿಲ್ಲಾ ನಿರ್ದೇಶಕರು ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಶಿಮುಲ್ ಉಪಾಧ್ಯಕ್ಷರಾದ ಶ್ರೀ ಚೇತನ್ ಎಸ್. ನಾಡಿಗರ್, ಕರ್ನಾಟಕ ಮಹಾಮಂಡಳಿಯ ಡಾ. ಎಸ್.ಟಿ. ಸುರೇಶ್ , ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ಆರ್. ಮಂಜೇಶ್, ಪ್ರಭಾರ ವ್ಯವಸ್ಥಾಪಕರಾದ ಡಾ. ಎಚ್. ಶರತ್, ಮಾರ್ಕೆಟಿಂಗ್ ವ್ಯವಸ್ಥಾಪಕರಾದ ಬಿ.ಎಂ. ಹನುಮಂತಪ್ಪ, ಮೂರ್ತಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸಿ. ವೆಂಕಟೇಶ್ ಮೂರ್ತಿ, ಲಕ್ಷ್ಮಿಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಸಿ. ಸತೀಶ್ ಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ. ತಿಪ್ಪೇಸ್ವಾಮಿ ಹಾಗೂ ವಿವಿಧ ಪಶುವೈದ್ಯರು, ಒಕ್ಕೂಟದ ಅಧಿಕಾರಿಗಳು, ಸಿಬ್ಬಂದಿ ವರ್ಗ, ನರಹರಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ನರಹರಿ ನಗರದಲ್ಲಿ ₹60 ಲಕ್ಷ ವೆಚ್ಚದ 5,000 ಲೀಟರ್ ಸಾಮರ್ಥ್ಯದ ನೂತನ ಬಿಎಂಸಿ ಕೇಂದ್ರ ಉದ್ಘಾಟನೆ ಹೈನುಗಾರರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧ: ಸಚಿವ ಟಿ. ರಘುಮೂರ್ತಿ ಚಳ್ಳಕೆರೆ: ತಾಲೂಕಿನ ನರಹರಿ ನಗರದಲ್ಲಿ ನರಹರಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸುಮಾರು ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ 5,000 ಲೀಟರ್ ಸಾಮರ್ಥ್ಯದ ನೂತನ ಬೃಹತ್ ಹಾಲು ಶೀತಲೀಕರಣ ಕೇಂದ್ರ (BMC) ಹಾಗೂ ಯಂತ್ರೋಪಕರಣಗಳನ್ನು ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಟಿ. ರಘುಮೂರ್ತಿ ಅವರು ಅದ್ಧೂರಿಯಾಗಿ ಉದ್ಘಾಟಿಸಿದರು. ಬುಧವಾರದಂದು ವಿಜೃಂಭಣೆಯಿಂದ ನಡೆದ ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ ರಾಜಾರಾಮ್
ಸ್ವಾಮೀಜಿ ವಹಿಸಿದ್ದರು. ಸಂಘದ ಅಧ್ಯಕ್ಷರಾದ ಶ್ರೀ ಕಾರ್ತಿಕ್ ಎಸ್. ಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸಂಸದರಾದ ಶ್ರೀ ಗೋವಿಂದ ಎಂ. ಕಾರಜೋಳ ಹಾಗೂ ಶಿವಮೊಗ್ಗ–ದಾವಣಗೆರೆ–ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಶಿಮುಲ್) ಅಧ್ಯಕ್ಷರಾದ ಶ್ರೀ ಹೆಚ್.ಎನ್. ವಿದ್ಯಾಧರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿಮುಲ್ ನಿರ್ದೇಶಕರು ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಬಿ.ಸಿ. ಸಂಜೀವ್ ಮೂರ್ತಿ ಅವರು ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ಜಿಲ್ಲಾ ನಿರ್ದೇಶಕರಾದ ಶ್ರೀ ಜಿ.ಪಿ. ರೇವಣಸಿದ್ದಪ್ಪ, ಶ್ರೀ ಜಿ.ಬಿ. ಶೇಖರಪ್ಪ ಹಾಗೂ ಬಿ.ಆರ್. ರವಿಕುಮಾರ್ ಅವರು ಬಿ.ಎಂ.ಸಿ. ಘಟಕಕ್ಕೆ ಚಾಲನೆ ನೀಡಿದರು. ಸಚಿವರ ಮಾತು: ಉದ್ಘಾಟನಾ ಸಮಾರಂಭದಲ್ಲಿ
ಮಾತನಾಡಿದ ಸಚಿವ ಟಿ. ರಘುಮೂರ್ತಿ ಅವರು, ಹಾಲಿನ ಗುಣಮಟ್ಟ ಕಾಪಾಡುವುದು, ಹಾಲು ಉತ್ಪಾದಕರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಹಾಗೂ ಗ್ರಾಮೀಣ ಭಾಗದ ಹೈನುಗಾರಿಕೆ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನೂತನ ಬಿ.ಎಂ.ಸಿ ಕೇಂದ್ರ ಮಹತ್ವದ ಕೊಡುಗೆ ನೀಡಲಿದೆ. ಹೈನುಗಾರರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದ್ದು, ಹಾಲು ಉತ್ಪಾದಕರ ಕಲ್ಯಾಣಕ್ಕಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿರಂತರ ಕ್ರಮ ಕೈಗೊಳ್ಳಲಾಗುವುದು,ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ, ಕರ್ನಾಟಕ ಮಹಾಮಂಡಳಿ ವತಿಯಿಂದ ಬಿ.ಜಿ.ಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರಾದ ₹2,25,000 ಮೊತ್ತದ ಚೆಕ್ ಅನ್ನು ಸಚಿವರು ಹಾಗೂ ಜಿಲ್ಲಾ ನಿರ್ದೇಶಕರು ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಶಿಮುಲ್ ಉಪಾಧ್ಯಕ್ಷರಾದ
ಶ್ರೀ ಚೇತನ್ ಎಸ್. ನಾಡಿಗರ್, ಕರ್ನಾಟಕ ಮಹಾಮಂಡಳಿಯ ಡಾ. ಎಸ್.ಟಿ. ಸುರೇಶ್ , ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ಆರ್. ಮಂಜೇಶ್, ಪ್ರಭಾರ ವ್ಯವಸ್ಥಾಪಕರಾದ ಡಾ. ಎಚ್. ಶರತ್, ಮಾರ್ಕೆಟಿಂಗ್ ವ್ಯವಸ್ಥಾಪಕರಾದ ಬಿ.ಎಂ. ಹನುಮಂತಪ್ಪ, ಮೂರ್ತಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸಿ. ವೆಂಕಟೇಶ್ ಮೂರ್ತಿ, ಲಕ್ಷ್ಮಿಪುರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಸಿ. ಸತೀಶ್ ಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ. ತಿಪ್ಪೇಸ್ವಾಮಿ ಹಾಗೂ ವಿವಿಧ ಪಶುವೈದ್ಯರು, ಒಕ್ಕೂಟದ ಅಧಿಕಾರಿಗಳು, ಸಿಬ್ಬಂದಿ ವರ್ಗ, ನರಹರಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
- ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ. ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು. ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ. (ಫೋಟೋ ಕಳುಹಿಸಿದೆ) ======== ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ. ===========1
- ಮುಹಮ್ಮದ್ ಪೈಗಂಬರರ ಜನ್ಮದಿನದ ನೆನಪಾಗಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಣೆ.1
- ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ1
- ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು. ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.1
- ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು. ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.4
- ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.1
- ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.1
- ಮುಹಮ್ಮದ್ ಪೈಗಂಬರರ ಜನ್ಮದಿನದ ನೆನಪಾಗಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಣೆ.1