logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗೇಪಲ್ಲಿ: ಶಿಕ್ಷಕರ ಸಂಘದ ಚುನಾವಣಾ ಅಖಾಡ ಸಿದ್ಧ! 16 ಮಂದಿಯಿಂದ ನಾಮಪತ್ರ ಸಲ್ಲಿಕೆ; ಏಪ್ರಿಲ್ 19ಕ್ಕೆ ಮತದಾನ ಬಾಗೇಪಲ್ಲಿ:- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ರ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಬಾಗೇಪಲ್ಲಿ ತಾಲೂಕಿನಲ್ಲಿ ಚುನಾವಣಾ ಕಳೆ ಕಳೆಗಟ್ಟಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 12 ಕೊನೆಯ ದಿನವಾಗಿದ್ದು, ಅಂತಿಮ ದಿನದ ಹೊತ್ತಿಗೆ ಒಟ್ಟು ಹದಿನಾರು ಮಂದಿ ಶಿಕ್ಷಕರು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಾಲೂಕು ಚುನಾವಣಾಧಿಕಾರಿ ಹಾಗೂ ಬಿಇಓ ಎನ್ ವೆಂಕಟೇಶಪ್ಪ ಅವರು ನಾಮ ಪತ್ರ ಪಡೆಯುವ ಮೂಲಕ ಮಾಹಿತಿ ನೀಡಿದ್ದಾರೆ ಚುನಾವಣಾ ವೇಳಾಪಟ್ಟಿ ಮತ್ತು ಮುಂದಿನ ಹಂತಗಳು ಉಪ ಚುನಾವಣೆ ಅಧಿಕಾರಿ ಎನ್.ಶಿವಪ್ಪ ಈಗಾಗಲೇ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನಾ ಕಾರ್ಯವು ಏಪ್ರಿಲ್ 13ರಂದು ನಡೆಯಲಿದ್ದು, ಅಂದು ಅಭ್ಯರ್ಥಿಗಳ ಅರ್ಹತೆಯ ಬಗ್ಗೆ ಸ್ಪಷ್ಟನೆ ಸಿಗಲಿದೆ. ಒಂದು ವೇಳೆ ಯಾರಾದರೂ ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸಿದರೆ ಅವರಿಗೆ ಏಪ್ರಿಲ್ 14ರವರೆಗೆ ಕಾಲಾವಕಾಶ ನೀಡಲಾಗಿದೆ. ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಹೊರಬೀಳಲಿದೆ. ಈ ಎಲ್ಲಾ ಪ್ರಕ್ರಿಯೆಗಳ ನಂತರ ಏಪ್ರಿಲ್ 19ರಂದು ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಸಮಿತಿಯು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಹೇಳಿದರು. ಒಟ್ಟು ಪುರುಷರು 5 ಮಂದಿ 12 ಮಂದಿ ನಾಮ ಪತ್ರ ಸಲ್ಲಿಸಿದ್ದು ಇಬ್ಬರು ಮಹಿಳೆಯರಿಗೆ 4 ಜನ ಮಹಿಳೆಯರು ನಾಮಪತ್ರ ಸಲ್ಲಿಸಿದ್ದು ಒಟ್ಟು 16 ನಾಮ ಪತ್ರ ಸಲ್ಲಿಸಿದ್ದು ಶಿಕ್ಷಕರ ಹಿತರಕ್ಷಣೆಗೆ ಒತ್ತು'- ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ ಮಾತನಾಡಿ, “ಶಿಕ್ಷಕರು ವರ್ಷವಿಡೀ ಕರ್ತವ್ಯ ನಿರ್ವಹಿಸುವಾಗ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ನಮ್ಮ ತಂಡ ಈ ಸಮಸ್ಯೆಗಳನ್ನು ಬಗೆ ಹರಿಸಲು ಮತ್ತು ಶಿಕ್ಷಕರ ಹಕ್ಕುಗಳ ರಕ್ಷಣೆಗಾಗಿ ಸದಾ ಸನ್ನದ್ಧವಾಗಿದೆ ಎಂದು ಹೇಳಿದರು. ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಪಿ.ವೆಂಕಟರವಣ ಮಾತನಾಡಿ, “ಹಲವು ವರ್ಷಗಳಿಂದ ಶಿಕ್ಷಕರ ಹಿತಾಸಕ್ತಿಗಾಗಿ ಶ್ರಮಿಸುತ್ತಾ ಬಂದಿದ್ದೇನೆ. ಈ ಬಾರಿಯೂ ನಮ್ಮ ಬಳಗಕ್ಕೆ ಬಹುಮತ ನೀಡಿದರೆ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ,” ಎಂದರು. ಈ ಸಂದರ್ಭದಲ್ಲಿ ಸಿ.ವೆಂಕಟರಾಯಪ್ಪ ,ಎಂ.ವಿ.ರಂಗಾರೆಡ್ಡಿ, ನಾರಾಯಣ ಸ್ವಾಮಿ, ಟಿ.ವಿ.ಶ್ರೀರಾಮ, ಅರುಣ,ವಿಜಯಲಕ್ಷ್ಮೀ ಪ್ರಭಾವತಮ್ಮ,ಪ್ರಮೀಳಾ, ಹಾಗೂ ಇತರೆ ಶಿಕ್ಷಕರು ಹಾಜರಿದ್ದರು.

21 hrs ago
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
21 hrs ago
52412beb-08fa-42f6-90b2-c6a30e92a784

ಬಾಗೇಪಲ್ಲಿ: ಶಿಕ್ಷಕರ ಸಂಘದ ಚುನಾವಣಾ ಅಖಾಡ ಸಿದ್ಧ! 16 ಮಂದಿಯಿಂದ ನಾಮಪತ್ರ ಸಲ್ಲಿಕೆ; ಏಪ್ರಿಲ್ 19ಕ್ಕೆ ಮತದಾನ ಬಾಗೇಪಲ್ಲಿ:- ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ರ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಬಾಗೇಪಲ್ಲಿ ತಾಲೂಕಿನಲ್ಲಿ ಚುನಾವಣಾ ಕಳೆ ಕಳೆಗಟ್ಟಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 12 ಕೊನೆಯ ದಿನವಾಗಿದ್ದು, ಅಂತಿಮ ದಿನದ ಹೊತ್ತಿಗೆ ಒಟ್ಟು ಹದಿನಾರು ಮಂದಿ ಶಿಕ್ಷಕರು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಾಲೂಕು ಚುನಾವಣಾಧಿಕಾರಿ ಹಾಗೂ ಬಿಇಓ ಎನ್ ವೆಂಕಟೇಶಪ್ಪ ಅವರು ನಾಮ ಪತ್ರ ಪಡೆಯುವ ಮೂಲಕ ಮಾಹಿತಿ ನೀಡಿದ್ದಾರೆ ಚುನಾವಣಾ ವೇಳಾಪಟ್ಟಿ ಮತ್ತು ಮುಂದಿನ ಹಂತಗಳು ಉಪ ಚುನಾವಣೆ ಅಧಿಕಾರಿ ಎನ್.ಶಿವಪ್ಪ ಈಗಾಗಲೇ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನಾ ಕಾರ್ಯವು ಏಪ್ರಿಲ್ 13ರಂದು ನಡೆಯಲಿದ್ದು, ಅಂದು ಅಭ್ಯರ್ಥಿಗಳ ಅರ್ಹತೆಯ ಬಗ್ಗೆ ಸ್ಪಷ್ಟನೆ ಸಿಗಲಿದೆ. ಒಂದು ವೇಳೆ ಯಾರಾದರೂ ಸ್ಪರ್ಧೆಯಿಂದ ಹಿಂದೆ ಸರಿಯಲು ಬಯಸಿದರೆ ಅವರಿಗೆ ಏಪ್ರಿಲ್ 14ರವರೆಗೆ ಕಾಲಾವಕಾಶ ನೀಡಲಾಗಿದೆ. ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಹೊರಬೀಳಲಿದೆ. ಈ ಎಲ್ಲಾ ಪ್ರಕ್ರಿಯೆಗಳ ನಂತರ ಏಪ್ರಿಲ್ 19ರಂದು ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಸಮಿತಿಯು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಹೇಳಿದರು. ಒಟ್ಟು ಪುರುಷರು 5 ಮಂದಿ 12 ಮಂದಿ ನಾಮ ಪತ್ರ ಸಲ್ಲಿಸಿದ್ದು ಇಬ್ಬರು ಮಹಿಳೆಯರಿಗೆ 4 ಜನ ಮಹಿಳೆಯರು ನಾಮಪತ್ರ ಸಲ್ಲಿಸಿದ್ದು ಒಟ್ಟು 16 ನಾಮ ಪತ್ರ ಸಲ್ಲಿಸಿದ್ದು ಶಿಕ್ಷಕರ ಹಿತರಕ್ಷಣೆಗೆ ಒತ್ತು'- ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ ಮಾತನಾಡಿ, “ಶಿಕ್ಷಕರು ವರ್ಷವಿಡೀ ಕರ್ತವ್ಯ ನಿರ್ವಹಿಸುವಾಗ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ನಮ್ಮ ತಂಡ ಈ ಸಮಸ್ಯೆಗಳನ್ನು ಬಗೆ ಹರಿಸಲು ಮತ್ತು ಶಿಕ್ಷಕರ ಹಕ್ಕುಗಳ ರಕ್ಷಣೆಗಾಗಿ ಸದಾ ಸನ್ನದ್ಧವಾಗಿದೆ ಎಂದು ಹೇಳಿದರು. ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಪಿ.ವೆಂಕಟರವಣ ಮಾತನಾಡಿ, “ಹಲವು ವರ್ಷಗಳಿಂದ ಶಿಕ್ಷಕರ ಹಿತಾಸಕ್ತಿಗಾಗಿ ಶ್ರಮಿಸುತ್ತಾ ಬಂದಿದ್ದೇನೆ. ಈ ಬಾರಿಯೂ ನಮ್ಮ ಬಳಗಕ್ಕೆ ಬಹುಮತ ನೀಡಿದರೆ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ,” ಎಂದರು. ಈ ಸಂದರ್ಭದಲ್ಲಿ ಸಿ.ವೆಂಕಟರಾಯಪ್ಪ ,ಎಂ.ವಿ.ರಂಗಾರೆಡ್ಡಿ, ನಾರಾಯಣ ಸ್ವಾಮಿ, ಟಿ.ವಿ.ಶ್ರೀರಾಮ, ಅರುಣ,ವಿಜಯಲಕ್ಷ್ಮೀ ಪ್ರಭಾವತಮ್ಮ,ಪ್ರಮೀಳಾ, ಹಾಗೂ ಇತರೆ ಶಿಕ್ಷಕರು ಹಾಜರಿದ್ದರು.

More news from ಕರ್ನಾಟಕ and nearby areas
  • ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    1
    ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. 
ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. 
ಕಾರ್ಯಕ್ರಮದಲ್ಲಿ  ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ,   ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    user_Shashi Kumar
    Shashi Kumar
    ಪತ್ರಕರ್ತ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    3
    ಹೊಸಕೋಟೆ
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. 
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ.
ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    10 hrs ago
  • ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍
    1
    ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ 
ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು 
ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ 
ಎಲ್ಲರಿಗೂ ಜೈ ಭೀಮ್ ಜೈ ಭೀಮ್ 
💐💐❤️❤️💐💐👍
    user_ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ​ಕಾರ್ಯಕ್ರಮದ ಮುಖ್ಯಾಂಶಗಳು: ​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು
​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು.
​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ
​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು.
​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ
​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು.
​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.
​ಕಾರ್ಯಕ್ರಮದ ಮುಖ್ಯಾಂಶಗಳು:
​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ.
​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ.
​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ.
​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    9 hrs ago
  • ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ ಕಣ್ಣನ್ನು ತಂಪು ಗೊಳಿಸಿದೆ
    1
    ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನ್‌ ರಾಮ್‌ ಜಯಂತಿ ಪ್ರಯುಕ್ತ ಬೋಟ್ ಪೆರೇಡ್‌ ಜನರ  ಕಣ್ಣನ್ನು ತಂಪು ಗೊಳಿಸಿದೆ
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    10 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.