logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಜ್ಜಂಪುರದಲ್ಲಿ “ಮಂಗಳ ಗೌರಿ–ಸಬಲ ನಾರಿ” ಕಾರ್ಯಕ್ರಮ ಅದ್ಧೂರಿ ಯಶಸ್ಸು ಸಾವಿರಾರು ಮಹಿಳೆಯರಿಗೆ ಬಾಗಿನ ಸಮರ್ಪಣೆ; ತವರು ಮನೆಯ ನೆನಪಿನಲ್ಲಿ ಭಾವುಕರಾದ ಮಹಿಳೆಯರು ಅಜ್ಜಂಪುರ: ಜಿ.ಹೆಚ್. ಶ್ರೀನಿವಾಸ ಜನಹಿತ ಸೇವಾ ಟ್ರಸ್ಟ್ (ರಿ.) ವತಿಯಿಂದ ಗೌರಿ ಹಬ್ಬದ ಅಂಗವಾಗಿ ಅಜ್ಜಂಪುರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ “ಮಂಗಳ ಗೌರಿ–ಸಬಲ ನಾರಿ” ಕಾರ್ಯಕ್ರಮ ಸಾವಿರಾರು ಮಹಿಳೆಯರ ಭಾಗವಹಿಸುವಿಕೆಯಿಂದ ಅದ್ಧೂರಿಯಾಗಿ ನಡೆಯಿತು. ತರೀಕೆರೆ ಹಾಗೂ ಅಜ್ಜಂಪುರ ತಾಲ್ಲೂಕುಗಳ ವಿವಿಧ ಸ್ವಸಹಾಯ ಗುಂಪುಗಳ ತಾಯಂದಿರು ಮತ್ತು ಸಹೋದರಿಯರಿಗೆ ಅರಿಶಿನ–ಕುಂಕುಮ ಹಾಗೂ ಸೌಭಾಗ್ಯದ ಸಂಕೇತವಾದ ಬಾಗಿನವನ್ನು ಸಮರ್ಪಿಸುವ ಮೂಲಕ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರ ಗೌರವ, ಆತ್ಮಗೌರವ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ಆಶಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಜ್ಯದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಘುಮೂರ್ತಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಗೌರವಿಸುವ ಹಾಗೂ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಜಿ.ಹೆಚ್. ಶ್ರೀನಿವಾಸ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗೌರಿ ಹಬ್ಬದ ಪ್ರಯುಕ್ತ “ಮಂಗಳ ಗೌರಿ–ಸಬಲ ನಾರಿ” ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ತಮ್ಮ ಟ್ರಸ್ಟ್ ವತಿಯಿಂದ ಈ ಹಿಂದೆ ಕೂಡ ಸಾಮೂಹಿಕ ವಿವಾಹ, ಸಾಮೂಹಿಕ ಕಲ್ಯಾಣ ಹಾಗೂ ಸಾಮೂಹಿಕ ಸೀಮಂತ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದವೇ ಇಂತಹ ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆಯಾಗಿದ್ದು, ಮುಂದೆಯೂ ತಮ್ಮ ಮೇಲಿನ ಇದೇ ರೀತಿಯ ಆಶೀರ್ವಾದ ಇರಲಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ವಾಣಿ ಶ್ರೀನಿವಾಸ ಹಾಗೂ ಶ್ರೀಮತಿ ರಚನ ಚೇತನ್ ಅವರು ಮಾತನಾಡಿ, ಮಹಿಳೆಯರ ಏಕತೆ, ಆತ್ಮಗೌರವ ಹಾಗೂ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಮಹತ್ವದ ಪಾತ್ರವನ್ನು ಕೊಂಡಾಡಿದರು. ಬಳಿಕ ನೆರೆದಿದ್ದ ಸಾವಿರಾರು ಮಹಿಳೆಯರಿಗೆ ಬಾಗಿನ ಸಮರ್ಪಿಸಿ ಗೌರಿ ಹಬ್ಬದ ಶುಭಾಶಯಗಳನ್ನು ಕೋರಿದರು. ತವರು ಮನೆಯ ನೆನಪು; ಭಾವುಕರಾದ ಮಹಿಳೆಯರು ಕಾರ್ಯಕ್ರಮವು ಹಲವು ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಯಿತು. ಬಾಗಿನ ಸ್ವೀಕರಿಸುವ ಸಂದರ್ಭದಲ್ಲಿ ಕೆಲ ಮಹಿಳೆಯರು ತಮ್ಮ ತವರು ಮನೆಯ ನೆನಪುಗಳನ್ನು ಮೆಲುಕು ಹಾಕಿ ಕಣ್ಣೀರಾದರು. ಗೌರಿ ಹಬ್ಬದ ಸಂದರ್ಭದಲ್ಲಿ ತವರು ಮನೆಯಿಂದ ಬರುವ ಬಾಗಿನದೊಂದಿಗೆ ಬೆಸೆದುಕೊಂಡಿರುವ ಭಾವನಾತ್ಮಕ ಸಂಬಂಧವನ್ನು ಈ ಕ್ಷಣಗಳು ಮತ್ತೊಮ್ಮೆ ನೆನಪಿಸಿಕೊಟ್ಟವು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು, ಸಂಜೀವಿನಿ ಒಕ್ಕೂಟಗಳ ಮಹಿಳಾ ಸದಸ್ಯರು, ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದ ತರೀಕೆರೆ–ಅಜ್ಜಂಪುರ ತಾಲ್ಲೂಕುಗಳ ಸಾವಿರಾರು ತಾಯಂದಿರು ಮತ್ತು ಸಹೋದರಿಯರಿಗೆ ಜಿ.ಹೆಚ್. ಶ್ರೀನಿವಾಸ ಜನಹಿತ ಸೇವಾ ಟ್ರಸ್ಟ್ ವತಿಯಿಂದ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ಜನಸೇವೆಯ ಪಯಣಕ್ಕೆ ಮತ್ತಷ್ಟು ಶಕ್ತಿ ನೀಡುತ್ತದೆ. ಇಂತಹ ಸಮಾಜಮುಖಿ ಹಾಗೂ ಜನಪರ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ನಡೆಯಲಿವೆ ಎಂದು ಟ್ರಸ್ಟ್‌ನ ವತಿಯಿಂದ ತಿಳಿಸಲಾಯಿತು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ

22 hrs ago
user_ಪ್ರದೀಪ್ ಹೆಚ್ ಈ. ತರೀಕೆರೆ
ಪ್ರದೀಪ್ ಹೆಚ್ ಈ. ತರೀಕೆರೆ
ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
22 hrs ago
67601d6d-a177-4ba0-89d6-f83abf6065ff

ಅಜ್ಜಂಪುರದಲ್ಲಿ “ಮಂಗಳ ಗೌರಿ–ಸಬಲ ನಾರಿ” ಕಾರ್ಯಕ್ರಮ ಅದ್ಧೂರಿ ಯಶಸ್ಸು ಸಾವಿರಾರು ಮಹಿಳೆಯರಿಗೆ ಬಾಗಿನ ಸಮರ್ಪಣೆ; ತವರು ಮನೆಯ ನೆನಪಿನಲ್ಲಿ ಭಾವುಕರಾದ ಮಹಿಳೆಯರು ಅಜ್ಜಂಪುರ: ಜಿ.ಹೆಚ್. ಶ್ರೀನಿವಾಸ ಜನಹಿತ ಸೇವಾ ಟ್ರಸ್ಟ್ (ರಿ.) ವತಿಯಿಂದ ಗೌರಿ ಹಬ್ಬದ ಅಂಗವಾಗಿ ಅಜ್ಜಂಪುರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ “ಮಂಗಳ ಗೌರಿ–ಸಬಲ ನಾರಿ” ಕಾರ್ಯಕ್ರಮ ಸಾವಿರಾರು ಮಹಿಳೆಯರ ಭಾಗವಹಿಸುವಿಕೆಯಿಂದ ಅದ್ಧೂರಿಯಾಗಿ ನಡೆಯಿತು. ತರೀಕೆರೆ ಹಾಗೂ ಅಜ್ಜಂಪುರ ತಾಲ್ಲೂಕುಗಳ ವಿವಿಧ ಸ್ವಸಹಾಯ ಗುಂಪುಗಳ ತಾಯಂದಿರು ಮತ್ತು ಸಹೋದರಿಯರಿಗೆ ಅರಿಶಿನ–ಕುಂಕುಮ ಹಾಗೂ ಸೌಭಾಗ್ಯದ ಸಂಕೇತವಾದ ಬಾಗಿನವನ್ನು ಸಮರ್ಪಿಸುವ ಮೂಲಕ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರ ಗೌರವ, ಆತ್ಮಗೌರವ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ಆಶಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಜ್ಯದ ಪರಿಶಿಷ್ಟ ಪಂಗಡಗಳ ಕಲ್ಯಾಣ

a1cf44e1-e4b2-4add-a42d-4e37bc1f5963

ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಘುಮೂರ್ತಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರನ್ನು ಗೌರವಿಸುವ ಹಾಗೂ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಜಿ.ಹೆಚ್. ಶ್ರೀನಿವಾಸ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗೌರಿ ಹಬ್ಬದ ಪ್ರಯುಕ್ತ “ಮಂಗಳ ಗೌರಿ–ಸಬಲ ನಾರಿ” ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ತಮ್ಮ ಟ್ರಸ್ಟ್ ವತಿಯಿಂದ ಈ ಹಿಂದೆ ಕೂಡ ಸಾಮೂಹಿಕ ವಿವಾಹ, ಸಾಮೂಹಿಕ ಕಲ್ಯಾಣ ಹಾಗೂ ಸಾಮೂಹಿಕ ಸೀಮಂತ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದವೇ ಇಂತಹ ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆಯಾಗಿದ್ದು, ಮುಂದೆಯೂ

c5ed1633-927c-40d5-bd63-2a1edca8ae77

ತಮ್ಮ ಮೇಲಿನ ಇದೇ ರೀತಿಯ ಆಶೀರ್ವಾದ ಇರಲಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಮತಿ ವಾಣಿ ಶ್ರೀನಿವಾಸ ಹಾಗೂ ಶ್ರೀಮತಿ ರಚನ ಚೇತನ್ ಅವರು ಮಾತನಾಡಿ, ಮಹಿಳೆಯರ ಏಕತೆ, ಆತ್ಮಗೌರವ ಹಾಗೂ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಮಹತ್ವದ ಪಾತ್ರವನ್ನು ಕೊಂಡಾಡಿದರು. ಬಳಿಕ ನೆರೆದಿದ್ದ ಸಾವಿರಾರು ಮಹಿಳೆಯರಿಗೆ ಬಾಗಿನ ಸಮರ್ಪಿಸಿ ಗೌರಿ ಹಬ್ಬದ ಶುಭಾಶಯಗಳನ್ನು ಕೋರಿದರು. ತವರು ಮನೆಯ ನೆನಪು; ಭಾವುಕರಾದ ಮಹಿಳೆಯರು ಕಾರ್ಯಕ್ರಮವು ಹಲವು ಭಾವನಾತ್ಮಕ ಕ್ಷಣಗಳಿಗೂ ಸಾಕ್ಷಿಯಾಯಿತು. ಬಾಗಿನ ಸ್ವೀಕರಿಸುವ ಸಂದರ್ಭದಲ್ಲಿ ಕೆಲ ಮಹಿಳೆಯರು ತಮ್ಮ ತವರು ಮನೆಯ ನೆನಪುಗಳನ್ನು ಮೆಲುಕು ಹಾಕಿ ಕಣ್ಣೀರಾದರು. ಗೌರಿ ಹಬ್ಬದ ಸಂದರ್ಭದಲ್ಲಿ ತವರು ಮನೆಯಿಂದ ಬರುವ ಬಾಗಿನದೊಂದಿಗೆ ಬೆಸೆದುಕೊಂಡಿರುವ ಭಾವನಾತ್ಮಕ ಸಂಬಂಧವನ್ನು ಈ ಕ್ಷಣಗಳು

a93eafba-a13f-4376-8db3-18564572b844

ಮತ್ತೊಮ್ಮೆ ನೆನಪಿಸಿಕೊಟ್ಟವು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು, ಸಂಜೀವಿನಿ ಒಕ್ಕೂಟಗಳ ಮಹಿಳಾ ಸದಸ್ಯರು, ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸ್ವಯಂಸೇವಕರು ಹಾಗೂ ವಿಶೇಷವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದ ತರೀಕೆರೆ–ಅಜ್ಜಂಪುರ ತಾಲ್ಲೂಕುಗಳ ಸಾವಿರಾರು ತಾಯಂದಿರು ಮತ್ತು ಸಹೋದರಿಯರಿಗೆ ಜಿ.ಹೆಚ್. ಶ್ರೀನಿವಾಸ ಜನಹಿತ ಸೇವಾ ಟ್ರಸ್ಟ್ ವತಿಯಿಂದ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು. ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ಜನಸೇವೆಯ ಪಯಣಕ್ಕೆ ಮತ್ತಷ್ಟು ಶಕ್ತಿ ನೀಡುತ್ತದೆ. ಇಂತಹ ಸಮಾಜಮುಖಿ ಹಾಗೂ ಜನಪರ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ನಡೆಯಲಿವೆ ಎಂದು ಟ್ರಸ್ಟ್‌ನ ವತಿಯಿಂದ ತಿಳಿಸಲಾಯಿತು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ

More news from Shivamogga and nearby areas
  • ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು.  ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು.  ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ

ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. 
ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. 
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    1 day ago
  • ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    1
    ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    18 hrs ago
  • ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ. ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. " ಬಿಜೆಪಿ ಸೇವಾ ಸಂಕಲ್ಪ ಅಭಿಯಾನ" ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    1
    ಭಾರತದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ ದೀಪ ಹಚ್ಚೋಣ. ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ.
ಭಾರತ ದೇಶದ ಪ್ರಧಾನ ಮಂತ್ರಿ ಶ್ರೀಯುತ ನರೇಂದ್ರ ಮೋದಿಜಿ ರವರ 25 ವರ್ಷಗಳ ಜನ ಸೇವೆಯ ಗೌರವಾರ್ಥ ಆಶೀರ್ವಾದದ 
ದೀಪ ಹಚ್ಚೋಣ.
" ಬಿಜೆಪಿ ಸೇವಾ ಸಂಕಲ್ಪ ಅಭಿಯಾನ"
ಬಿ. ವೈ .ರಾಘವೇಂದ್ರ ರವರು ಜನಪ್ರಿಯ ಸಂಸದರು ಶಿವಮೊಗ್ಗ ಲೋಕಸಭಾ ಕ್ಷೇತ್ರ.
    user_Press Narashimha swamy SN
    Press Narashimha swamy SN
    Newspaper publisher ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    1 hr ago
  • ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
    1
    ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ!
ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ
ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ!
ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು.
ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು.
ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ!
ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ
ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು,   ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ.
ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    25 min ago
  • ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    1
    ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ 
ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು
ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು 
ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    user_Nagesh BR Durgavara
    Nagesh BR Durgavara
    Photographer Chitradurga, Karnataka•
    3 hrs ago
  • ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    1
    ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು
ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ.‌ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ.  ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    22 hrs ago
  • ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    1
    ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್!
ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    18 hrs ago
  • ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    4
    ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ

ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ
ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು.
ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ.
ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.