logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಡೆಯುತ್ತಿರುವ ಅಪಪ್ರಚಾರದ ಹಿಂದೆ ಕೆಲವು ಕಾಣದ ಕೈಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

2 hrs ago
user_H M ಹರಕುಣಿ
H M ಹರಕುಣಿ
Local News Reporter Haveri, Karnataka•
2 hrs ago

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಡೆಯುತ್ತಿರುವ ಅಪಪ್ರಚಾರದ ಹಿಂದೆ ಕೆಲವು ಕಾಣದ ಕೈಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

More news from ಕರ್ನಾಟಕ and nearby areas
  • ಶಿಗ್ಗಾವಿ ತಾಲೂಕಿನ ಹುಕ್ಕೇರಿಯಲ್ಲಿರುವ ನೀರಾವರಿ ಅನ್ನದಾತರ ಹೋರಾಟ ವೇದಿಕೆಗೆ ಎಂಡಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಎಂಡಿ ಅವರು ಅನ್ನದಾತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
    1
    ಶಿಗ್ಗಾವಿ ತಾಲೂಕಿನ ಹುಕ್ಕೇರಿಯಲ್ಲಿರುವ ನೀರಾವರಿ ಅನ್ನದಾತರ ಹೋರಾಟ ವೇದಿಕೆಗೆ ಎಂಡಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಎಂಡಿ ಅವರು ಅನ್ನದಾತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಮಕ್ಕಳನ್ನು ದಾಖಲಿಸಲು ಪೋಷಕರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದರೂ, ಈಗ ಸರ್ಕಾರಿ ಶಾಲೆಗಳತ್ತ ಗಮನ ಹರಿಸುತ್ತಿರುವುದು ಅವುಗಳ ಬೇಡಿಕೆಯನ್ನು ಹೆಚ್ಚಿಸಿದೆ. ಸರ್ಕಾರಿ ಶಾಲೆಯ ಬೇಡಿಕೆಗೆ ಸಾಕ್ಷಿಯಾಗಿ, ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಿಕೊಳ್ಳಲು ಹಗಲು-ರಾತ್ರಿ ಎನ್ನದೆ ಅರ್ಜಿ ಹಿಡಿದು ಶಾಲೆಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. 2009ರಲ್ಲಿ ಮೇಲ್ದರ್ಜೆಗೇರಿದ ಈ ಕೆಪಿಎಸ್ ಶಾಲೆಯಲ್ಲಿ ಕಳೆದ ವರ್ಷ 800ಕ್ಕೂ ಹೆಚ್ಚು ಮಕ್ಕಳು ಅಧ್ಯಯನಕ್ಕೆ ದಾಖಲಾಗಿದ್ದರು. ಈ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ. ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುಸಿಯವರೆಗೂ ಒಂದೇ ಸೂರಿನಡಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕೆಪಿಎಸ್ ಪಠ್ಯಕ್ರಮದ ಜೊತೆಗೆ, ಎಲ್‌ಕೆಜಿ ಹಾಗೂ ಯುಕೆಜಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಕೆಪಿಎಸ್ ಪ್ರಭಾರಿ ಶಿಕ್ಷಕ, ಪ್ರಾಥಮಿಕ ವಿಭಾಗದ ಸುರೇಶ ಯಲ್ಲಾರಿ ಮಾಹಿತಿ ನೀಡಿದ್ದಾರೆ.
    1
    ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಮಕ್ಕಳನ್ನು ದಾಖಲಿಸಲು ಪೋಷಕರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದರೂ, ಈಗ ಸರ್ಕಾರಿ ಶಾಲೆಗಳತ್ತ ಗಮನ ಹರಿಸುತ್ತಿರುವುದು ಅವುಗಳ ಬೇಡಿಕೆಯನ್ನು ಹೆಚ್ಚಿಸಿದೆ.

ಸರ್ಕಾರಿ ಶಾಲೆಯ ಬೇಡಿಕೆಗೆ ಸಾಕ್ಷಿಯಾಗಿ, ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಿಕೊಳ್ಳಲು ಹಗಲು-ರಾತ್ರಿ ಎನ್ನದೆ ಅರ್ಜಿ ಹಿಡಿದು ಶಾಲೆಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. 2009ರಲ್ಲಿ ಮೇಲ್ದರ್ಜೆಗೇರಿದ ಈ ಕೆಪಿಎಸ್ ಶಾಲೆಯಲ್ಲಿ ಕಳೆದ ವರ್ಷ 800ಕ್ಕೂ ಹೆಚ್ಚು ಮಕ್ಕಳು ಅಧ್ಯಯನಕ್ಕೆ ದಾಖಲಾಗಿದ್ದರು. ಈ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ.

ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುಸಿಯವರೆಗೂ ಒಂದೇ ಸೂರಿನಡಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕೆಪಿಎಸ್ ಪಠ್ಯಕ್ರಮದ ಜೊತೆಗೆ, ಎಲ್‌ಕೆಜಿ ಹಾಗೂ ಯುಕೆಜಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಕೆಪಿಎಸ್ ಪ್ರಭಾರಿ ಶಿಕ್ಷಕ, ಪ್ರಾಥಮಿಕ ವಿಭಾಗದ ಸುರೇಶ ಯಲ್ಲಾರಿ ಮಾಹಿತಿ ನೀಡಿದ್ದಾರೆ.
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    22 hrs ago
  • ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ರಾಜ್ಯವನ್ನು ಅಧೋಗತಿಗೆ ತಲುಪಿಸಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಧಾರವಾಡ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟಿದೆ ಹಾಗೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದರು. ಗ್ಯಾರಂಟಿ ಯೋಜನೆಗಳ ಕಡಿತ ಮಾಡಲಾಗುತ್ತಿದೆ ಎಂದು ದೂರಿದ ಅವರು, ಮುಂದೆ ಬರಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಗಳಿಂದ ರೋಸಿಹೋದ ಜನರು ಮುಂಬರುವ ದಿನಗಳಲ್ಲಿ ವಿಧಾನಸೌಧ ನುಗ್ಗಿ ಪ್ರತಿಭಟನೆ (ಹೊಡೆಯುವ) ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೀಮಾ ಮಸೂತಿ ಎಚ್ಚರಿಕೆ ನೀಡಿದರು.
    1
    ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ರಾಜ್ಯವನ್ನು ಅಧೋಗತಿಗೆ ತಲುಪಿಸಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಧಾರವಾಡ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟಿದೆ ಹಾಗೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳ ಕಡಿತ ಮಾಡಲಾಗುತ್ತಿದೆ ಎಂದು ದೂರಿದ ಅವರು, ಮುಂದೆ ಬರಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಗಳಿಂದ ರೋಸಿಹೋದ ಜನರು ಮುಂಬರುವ ದಿನಗಳಲ್ಲಿ ವಿಧಾನಸೌಧ ನುಗ್ಗಿ ಪ್ರತಿಭಟನೆ (ಹೊಡೆಯುವ) ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೀಮಾ ಮಸೂತಿ ಎಚ್ಚರಿಕೆ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    20 hrs ago
  • ಶುಕ್ರವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವ್ಯಾಪಕ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಹಾಗೂ ಶಿವಮೊಗ್ಗ ತಾಲ್ಲೂಕುಗಳ ವ್ಯಾಪ್ತಿಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿವೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯ ಮೇಲೂ ದಾಖಲೆ ಪರಿಶೀಲನೆ ಕೈಗೊಂಡಿವೆ. ಭದ್ರಾವತಿ ತಾಲ್ಲೂಕಿನ ನಿಂಬೆಗೊಂದಿ, ಮಂಗೋಟೆ ಹಾಗೂ ಸನ್ಯಾಸಿಕೊಡಮಗ್ಗಿ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಹಾಗೂ ಕೂಡಲಿ, ತೀರ್ಥಹಳ್ಳಿ ತಾಲ್ಲೂಕಿನ ಮಂಡುವಳ್ಳಿ, ತೂದೂರು ಮತ್ತು ದಬ್ಬಣಗದ್ದೆ ಪ್ರದೇಶಗಳಲ್ಲಿರುವ ಮರಳು ಕ್ವಾರಿಗಳ ಮೇಲೂ ಕಾರ್ಯಾಚರಣೆ ನಡೆಸಲಾಗಿದೆ. ಹೊಸನಗರ ತಾಲ್ಲೂಕಿನ ಹರಿದ್ರಾವತಿ, ಸುತ್ತಾ, ಸಂಪಕಟ್ಟೆ ಹಾಗೂ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರದೇಶಗಳಲ್ಲಿಯೂ ಅಕ್ರಮ ಮರಳು ಚಟುವಟಿಕೆಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪು ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, ಶಿವಮೊಗ್ಗ ಮತ್ತು ಚಿತ್ರದುರ್ಗ ಲೋಕಾಯುಕ್ತ ಘಟಕದ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಗಣಿಗಾರಿಕೆ ಕುರಿತಂತೆ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿಯೂ ಅಕ್ರಮ ಮರಳು ಸಾಗಣೆ ವಿಚಾರವು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾತ್ಮಕ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಲೋಕಾಯುಕ್ತ ದಾಳಿಯ ಬಳಿಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ ಇನ್ನಷ್ಟು ಕ್ರಮಗಳು ಕೈಗೊಳ್ಳುವ ಸಾಧ್ಯತೆ ಇದೆ.
    1
    ಶುಕ್ರವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ವ್ಯಾಪಕ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಹಾಗೂ ಶಿವಮೊಗ್ಗ ತಾಲ್ಲೂಕುಗಳ ವ್ಯಾಪ್ತಿಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿವೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯ ಮೇಲೂ ದಾಖಲೆ ಪರಿಶೀಲನೆ ಕೈಗೊಂಡಿವೆ.

ಭದ್ರಾವತಿ ತಾಲ್ಲೂಕಿನ ನಿಂಬೆಗೊಂದಿ, ಮಂಗೋಟೆ ಹಾಗೂ ಸನ್ಯಾಸಿಕೊಡಮಗ್ಗಿ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಹಾಗೂ ಕೂಡಲಿ, ತೀರ್ಥಹಳ್ಳಿ ತಾಲ್ಲೂಕಿನ ಮಂಡುವಳ್ಳಿ, ತೂದೂರು ಮತ್ತು ದಬ್ಬಣಗದ್ದೆ ಪ್ರದೇಶಗಳಲ್ಲಿರುವ ಮರಳು ಕ್ವಾರಿಗಳ ಮೇಲೂ ಕಾರ್ಯಾಚರಣೆ ನಡೆಸಲಾಗಿದೆ. ಹೊಸನಗರ ತಾಲ್ಲೂಕಿನ ಹರಿದ್ರಾವತಿ, ಸುತ್ತಾ, ಸಂಪಕಟ್ಟೆ ಹಾಗೂ ಸಾಗರ ತಾಲ್ಲೂಕಿನ ಆವಿನಹಳ್ಳಿ ಪ್ರದೇಶಗಳಲ್ಲಿಯೂ ಅಕ್ರಮ ಮರಳು ಚಟುವಟಿಕೆಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪು ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲೂ ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, ಶಿವಮೊಗ್ಗ ಮತ್ತು ಚಿತ್ರದುರ್ಗ ಲೋಕಾಯುಕ್ತ ಘಟಕದ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಗಣಿಗಾರಿಕೆ ಕುರಿತಂತೆ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿಯೂ ಅಕ್ರಮ ಮರಳು ಸಾಗಣೆ ವಿಚಾರವು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾತ್ಮಕ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಲೋಕಾಯುಕ್ತ ದಾಳಿಯ ಬಳಿಕ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದಂತೆ ಇನ್ನಷ್ಟು ಕ್ರಮಗಳು ಕೈಗೊಳ್ಳುವ ಸಾಧ್ಯತೆ ಇದೆ.
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    8 hrs ago
  • ಪ್ರಖ್ಯಾತ ಮಕ್ಕಳ ತಜ್ಞರಾದ ಡಾ. ಚಂದ್ರನಾಯ್ಕ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಬಲವಾಗಿ ಒತ್ತಾಯಿಸಿದ್ದಾರೆ. ಮೂರು ಬಾರಿ ಚುನಾವಣೆಯಲ್ಲಿ ಗೆದ್ದು, ತಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಶಾಸಕ ರಘುಮೂರ್ತಿ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಗಮನದಲ್ಲಿಟ್ಟುಕೊಂಡು ಈ ಮನವಿ ಮಾಡಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಚಂದ್ರನಾಯ್ಕ್, ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶ ಮತ್ತು ಹೆಚ್ಚು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳನ್ನು ಹೊಂದಿರುವ ಚಳ್ಳಕೆರೆ ಕ್ಷೇತ್ರವು ಈ ಹಿಂದೆ ಅಭಿವೃದ್ಧಿ ಕಾಣದ ಪ್ರದೇಶವಾಗಿತ್ತು. ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಘುಮೂರ್ತಿಯವರು ತಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದರು. ಐದು ವರ್ಷಗಳ ಕಾಲ ಕ್ಷೇತ್ರದ ಮನೆಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಅರಿತುಕೊಂಡ ಅವರು, ಇಲ್ಲಿಯವರೆಗೆ ಮೂರು ಬಾರಿ ಗೆದ್ದು ಚಳ್ಳಕೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಆದ್ದರಿಂದ, ಹಾಲಿ ಕಾಂಗ್ರೆಸ್ ಸರ್ಕಾರವು “ಅಭಿವೃದ್ಧಿ ಹರಿಕಾರ” ಎಂದೇ ಗುರುತಿಸಿಕೊಂಡಿರುವ ಶಾಸಕ ಟಿ. ರಘುಮೂರ್ತಿ ಅವರಿಗೆ ಉತ್ತಮ ಮಂತ್ರಿ ಸ್ಥಾನವನ್ನು ನೀಡುವ ಮೂಲಕ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಡಾ. ಚಂದ್ರನಾಯ್ಕ್ ಮನವಿ ಮಾಡಿದ್ದಾರೆ.
    1
    ಪ್ರಖ್ಯಾತ ಮಕ್ಕಳ ತಜ್ಞರಾದ ಡಾ. ಚಂದ್ರನಾಯ್ಕ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಬಲವಾಗಿ ಒತ್ತಾಯಿಸಿದ್ದಾರೆ. ಮೂರು ಬಾರಿ ಚುನಾವಣೆಯಲ್ಲಿ ಗೆದ್ದು, ತಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಶಾಸಕ ರಘುಮೂರ್ತಿ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಗಮನದಲ್ಲಿಟ್ಟುಕೊಂಡು ಈ ಮನವಿ ಮಾಡಲಾಗಿದೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಚಂದ್ರನಾಯ್ಕ್, ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಕಡಿಮೆ ಮಳೆ ಬೀಳುವ ಪ್ರದೇಶ ಮತ್ತು ಹೆಚ್ಚು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳನ್ನು ಹೊಂದಿರುವ ಚಳ್ಳಕೆರೆ ಕ್ಷೇತ್ರವು ಈ ಹಿಂದೆ ಅಭಿವೃದ್ಧಿ ಕಾಣದ ಪ್ರದೇಶವಾಗಿತ್ತು. ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಘುಮೂರ್ತಿಯವರು ತಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದರು. ಐದು ವರ್ಷಗಳ ಕಾಲ ಕ್ಷೇತ್ರದ ಮನೆಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಅರಿತುಕೊಂಡ ಅವರು, ಇಲ್ಲಿಯವರೆಗೆ ಮೂರು ಬಾರಿ ಗೆದ್ದು ಚಳ್ಳಕೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ. 

ಆದ್ದರಿಂದ, ಹಾಲಿ ಕಾಂಗ್ರೆಸ್ ಸರ್ಕಾರವು “ಅಭಿವೃದ್ಧಿ ಹರಿಕಾರ” ಎಂದೇ ಗುರುತಿಸಿಕೊಂಡಿರುವ ಶಾಸಕ ಟಿ. ರಘುಮೂರ್ತಿ ಅವರಿಗೆ ಉತ್ತಮ ಮಂತ್ರಿ ಸ್ಥಾನವನ್ನು ನೀಡುವ ಮೂಲಕ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಡಾ. ಚಂದ್ರನಾಯ್ಕ್ ಮನವಿ ಮಾಡಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಶಾಸಕ ಶ್ರೀ ಶ್ರೀನಿವಾಸ ಮಾನೆ ಅವರು ಅನಾರೋಗ್ಯದಿಂದ ಬಳಲುತ್ತಿರುವ ವಯೋವೃದ್ಧರಿಗೆ ಸಹಾಯ ಹಸ್ತ ಚಾಚಿದ್ದಾರೆ. ಅವರ ಈ ಸಹಾಯ ಕಾರ್ಯದ ಮೂಲಕ ವೃದ್ಧರಿಗೆ ಆಸರೆಯಾಗಿದ್ದಾರೆ.
    1
    ಶಾಸಕ ಶ್ರೀ ಶ್ರೀನಿವಾಸ ಮಾನೆ ಅವರು ಅನಾರೋಗ್ಯದಿಂದ ಬಳಲುತ್ತಿರುವ ವಯೋವೃದ್ಧರಿಗೆ ಸಹಾಯ ಹಸ್ತ ಚಾಚಿದ್ದಾರೆ. ಅವರ ಈ ಸಹಾಯ ಕಾರ್ಯದ ಮೂಲಕ ವೃದ್ಧರಿಗೆ ಆಸರೆಯಾಗಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    10 hrs ago
  • ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಹಾವೇರಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಆರು ಕಾಂಗ್ರೆಸ್ ಶಾಸಕರಿದ್ದು, ಬಿಜೆಪಿಯ ಬಸವರಾಜ್ ಬೊಮ್ಮಾಯಿಯವರು ಪ್ರಸ್ತುತ ಹಾವೇರಿ ಜಿಲ್ಲೆಯ ಸಂಸದರಾಗಿದ್ದಾರೆ ಎಂದು ಪಠಾಣ್ ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನಿಂದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಇದೇ ವೇಳೆ, ಸಚಿವ ಸ್ಥಾನದ ಲಾಬಿಯಲ್ಲಿರುವ ಶಾಸಕರ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ರಚನೆಯು ಯಾವುದೇ ತೊಂದರೆಯಿಲ್ಲದೆ ಸುಗಮವಾಗಿ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.
    1
    ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಹಾವೇರಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಆರು ಕಾಂಗ್ರೆಸ್ ಶಾಸಕರಿದ್ದು, ಬಿಜೆಪಿಯ ಬಸವರಾಜ್ ಬೊಮ್ಮಾಯಿಯವರು ಪ್ರಸ್ತುತ ಹಾವೇರಿ ಜಿಲ್ಲೆಯ ಸಂಸದರಾಗಿದ್ದಾರೆ ಎಂದು ಪಠಾಣ್ ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನಿಂದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಇದೇ ವೇಳೆ, ಸಚಿವ ಸ್ಥಾನದ ಲಾಬಿಯಲ್ಲಿರುವ ಶಾಸಕರ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ರಚನೆಯು ಯಾವುದೇ ತೊಂದರೆಯಿಲ್ಲದೆ ಸುಗಮವಾಗಿ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 hrs ago
  • ಧಾರವಾಡದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟದ ಸ್ಥಳಕ್ಕೆ ವಿರೋಧ ಪಕ್ಷದ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಹೋರಾಟಕ್ಕೆ ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ. ಹಿರೇಮಠ ಅವರು ಹೊಸ ಶಕ್ತಿ ತುಂಬಿ ಯಶಸ್ವಿಗೊಳಿಸಿದ್ದಾರೆ ಎಂದು ಶಾಸಕ ಬೆಲ್ಲದ ಇದೇ ವೇಳೆ ಮಾತನಾಡುತ್ತಾ ಶ್ಲಾಘಿಸಿದರು. ಶಾಸಕ ಅರವಿಂದ ಬೆಲ್ಲದ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಅಭಿವೃದ್ಧಿಗೆ ನಿರಂತರವಾಗಿ ಪ್ರಯತ್ನ ಮಾಡಿದ್ದು, ಈಗಲೂ ಪ್ರಯತ್ನ ಮುಂದುವರಿಸುವುದಾಗಿ ತಿಳಿಸಿದರು. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ತಾವು ಈಗ ಬದ್ಧರಾಗಿರುವುದಾಗಿ ಹೇಳಿದ ಅವರು, ತಮ್ಮ ನಾಯಕರಾದ ಪ್ರಹ್ಲಾದ ಜೋಶಿ ಅವರು ಸಹ ಧಾರವಾಡ ಮಹಾನಗರ ಪಾಲಿಕೆ ಹೋರಾಟಕ್ಕೆ ಕೈಜೋಡಿಸಿರುವುದಾಗಿ ತಿಳಿಸಿದರು.
    1
    ಧಾರವಾಡದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟದ ಸ್ಥಳಕ್ಕೆ ವಿರೋಧ ಪಕ್ಷದ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಹೋರಾಟಕ್ಕೆ ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ. ಹಿರೇಮಠ ಅವರು ಹೊಸ ಶಕ್ತಿ ತುಂಬಿ ಯಶಸ್ವಿಗೊಳಿಸಿದ್ದಾರೆ ಎಂದು ಶಾಸಕ ಬೆಲ್ಲದ ಇದೇ ವೇಳೆ ಮಾತನಾಡುತ್ತಾ ಶ್ಲಾಘಿಸಿದರು.

ಶಾಸಕ ಅರವಿಂದ ಬೆಲ್ಲದ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಅಭಿವೃದ್ಧಿಗೆ ನಿರಂತರವಾಗಿ ಪ್ರಯತ್ನ ಮಾಡಿದ್ದು, ಈಗಲೂ ಪ್ರಯತ್ನ ಮುಂದುವರಿಸುವುದಾಗಿ ತಿಳಿಸಿದರು. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ತಾವು ಈಗ ಬದ್ಧರಾಗಿರುವುದಾಗಿ ಹೇಳಿದ ಅವರು, ತಮ್ಮ ನಾಯಕರಾದ ಪ್ರಹ್ಲಾದ ಜೋಶಿ ಅವರು ಸಹ ಧಾರವಾಡ ಮಹಾನಗರ ಪಾಲಿಕೆ ಹೋರಾಟಕ್ಕೆ ಕೈಜೋಡಿಸಿರುವುದಾಗಿ ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    21 hrs ago
  • ಆರ್‌ಸಿಬಿ ತಂಡದ ಗೆಲುವಿಗಾಗಿ, ಚಿತ್ರದುರ್ಗದ ಕಲಾವಿದರೊಬ್ಬರು ರಕ್ತದಲ್ಲಿ ವಿರಾಟ್ ಕೋಹ್ಲಿ ಆರ್‌ಸಿಬಿ ಕಪ್ ಹಿಡಿದಿರುವ ಭವ್ಯ ಚಿತ್ರವನ್ನು ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಚಿತ್ರದುರ್ಗದ ಜೆಸಿಆರ್ ಬಡಾವಣೆಯ ಕಲಾವಿದ ಮನೋಜ್ ಅವರು ತಮ್ಮ ಕೈಚಳಕದಿಂದ ಈ ವಿಶಿಷ್ಟ ಚಿತ್ರವನ್ನು ರಚಿಸಿದ್ದಾರೆ. ಸುಮಾರು 20 ಅಡಿ ಉದ್ದ ಹಾಗೂ 7 ಅಡಿ ಅಗಲದ ಈ ಚಿತ್ರದಲ್ಲಿ ವಿರಾಟ್ ಕೋಹ್ಲಿ ಆರ್‌ಸಿಬಿ ಕಪ್ ಹಿಡಿದು ನಿಂತಿರುವ ದೃಶ್ಯವನ್ನು ಮನೋಜ್ ಚಿತ್ರಿಸಿದ್ದಾರೆ. ಕುಂಚಿಗನಹಾಳ್ ಬಳಿಯ ಜಿಟಿಡಿಸಿ ಸರ್ಕಾರಿ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಮನೋಜ್, ತಮ್ಮ ಸ್ನೇಹಿತರ ಸಹಾಯ ಪಡೆದು ರಕ್ತ ಸಂಗ್ರಹಿಸುವ ಮೂಲಕ ಈ ಅದ್ಭುತ ಕಲಾಕೃತಿಯನ್ನು ಸೃಷ್ಟಿಸಿದ್ದಾರೆ. ಆರ್‌ಸಿಬಿ ಗೆಲುವಿಗಾಗಿ ಮೂಡಿಬಂದ ಈ ವಿಶೇಷ ದೊಡ್ಡ ಗಾತ್ರದ ಕೋಹ್ಲಿ ಚಿತ್ರವನ್ನು ಕಂಡು ಸಾರ್ವಜನಿಕರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಕಲಾವಿದ ಮನೋಜ್ ಅವರು ಕೂಡ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲ್ಲಲಿದೆ ಎಂಬ ಆಶಯವನ್ನು ಈ ಮೂಲಕ ಹೊರಹಾಕಿದ್ದಾರೆ.
    1
    ಆರ್‌ಸಿಬಿ ತಂಡದ ಗೆಲುವಿಗಾಗಿ, ಚಿತ್ರದುರ್ಗದ ಕಲಾವಿದರೊಬ್ಬರು ರಕ್ತದಲ್ಲಿ ವಿರಾಟ್ ಕೋಹ್ಲಿ ಆರ್‌ಸಿಬಿ ಕಪ್ ಹಿಡಿದಿರುವ ಭವ್ಯ ಚಿತ್ರವನ್ನು ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಚಿತ್ರದುರ್ಗದ ಜೆಸಿಆರ್ ಬಡಾವಣೆಯ ಕಲಾವಿದ ಮನೋಜ್ ಅವರು ತಮ್ಮ ಕೈಚಳಕದಿಂದ ಈ ವಿಶಿಷ್ಟ ಚಿತ್ರವನ್ನು ರಚಿಸಿದ್ದಾರೆ.

ಸುಮಾರು 20 ಅಡಿ ಉದ್ದ ಹಾಗೂ 7 ಅಡಿ ಅಗಲದ ಈ ಚಿತ್ರದಲ್ಲಿ ವಿರಾಟ್ ಕೋಹ್ಲಿ ಆರ್‌ಸಿಬಿ ಕಪ್ ಹಿಡಿದು ನಿಂತಿರುವ ದೃಶ್ಯವನ್ನು ಮನೋಜ್ ಚಿತ್ರಿಸಿದ್ದಾರೆ. ಕುಂಚಿಗನಹಾಳ್ ಬಳಿಯ ಜಿಟಿಡಿಸಿ ಸರ್ಕಾರಿ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಮನೋಜ್, ತಮ್ಮ ಸ್ನೇಹಿತರ ಸಹಾಯ ಪಡೆದು ರಕ್ತ ಸಂಗ್ರಹಿಸುವ ಮೂಲಕ ಈ ಅದ್ಭುತ ಕಲಾಕೃತಿಯನ್ನು ಸೃಷ್ಟಿಸಿದ್ದಾರೆ.

ಆರ್‌ಸಿಬಿ ಗೆಲುವಿಗಾಗಿ ಮೂಡಿಬಂದ ಈ ವಿಶೇಷ ದೊಡ್ಡ ಗಾತ್ರದ ಕೋಹ್ಲಿ ಚಿತ್ರವನ್ನು ಕಂಡು ಸಾರ್ವಜನಿಕರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಕಲಾವಿದ ಮನೋಜ್ ಅವರು ಕೂಡ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಗೆಲ್ಲಲಿದೆ ಎಂಬ ಆಶಯವನ್ನು ಈ ಮೂಲಕ ಹೊರಹಾಕಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.