logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾರದಾದೇವಿ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಮಕ್ಕಳ ನೇತ್ರ ತಪಾಸಣೆ: ನ್ಯಾಯಾಧೀಶರ ಪ್ರಶಂಸೆ ಪಾವಗಡ: ತಾಲೂಕು ಕೇಂದ್ರದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರದಂದು ಮಕ್ಕಳ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಪ್ರಸಿದ್ಧ ಮಕ್ಕಳ ನೇತ್ರ ತಜ್ಞರಾದ ಡಾ. ವಸುಧಾ ನರೇಶ್ ಹಾಗೂ ಹಿರಿಯ ಆಪ್ಟೋಮೆಟ್ರಿಸ್ಟ್ ಅನೀಶ್ ರವರು ಆಗಮಿಸಿದ್ದ 40ಕ್ಕೂ ಹೆಚ್ಚು ಮಕ್ಕಳು ಹಾಗೂ ನವಜಾತ ಶಿಶುಗಳ ಕಣ್ಣಿನ ತಪಾಸಣೆ ನಡೆಸಿದರು. ಈ ಪೈಕಿ 8 ಮಕ್ಕಳಿಗೆ ಅತಿ ಸೂಕ್ಷ್ಮ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ತಪಾಸಣೆ, ಚಿಕಿತ್ಸೆ ಮತ್ತು ಮಧ್ಯಾಹ್ನದ ಭೋಜನವನ್ನು ಸಂಪೂರ್ಣ ಉಚಿತವಾಗಿ ನೀಡಲಾಯಿತು. ಈ ಶಿಬಿರಕ್ಕೆ ಕಲ್ಯಾಣದುರ್ಗ, ಅನಂತಪುರ, ಹಿಂದೂಪುರ, ಶಿರಾ, ಚಳ್ಳಕೆರೆ ಹಾಗೂ ಮಧುಗಿರಿ ಭಾಗಗಳಿಂದಲೂ ಸಾರ್ವಜನಿಕರು ತಮ್ಮ ಮಕ್ಕಳೊಂದಿಗೆ ಆಗಮಿಸಿದ್ದರು. ನ್ಯಾಯಾಧೀಶರ ಭೇಟಿ: ಇದೇ ಸಂದರ್ಭದಲ್ಲಿ ಪಾವಗಡ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಮೂರ್ತಿಗಳಾದ ವಿ. ಮಾದೇಶ್ ಹಾಗೂ ನ್ಯಾಯಮೂರ್ತಿಗಳಾದ ಸಿ. ಎನ್. ಮುನಿರತ್ನಮ್ಮ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸಂಚಾರಿ ಕಣ್ಣಿನ ಆಸ್ಪತ್ರೆಯನ್ನು ವೀಕ್ಷಿಸಿದ ಅವರು, ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳ ಕ್ಷೇಮ ವಿಚಾರಿಸಿದರು. ಪೂಜ್ಯ ಸ್ವಾಮಿ ಜಪಾನಂದಜೀ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ನ್ಯಾಯಾಧೀಶರು, ಮುಂದಿನ ದಿನಗಳಲ್ಲಿ ಗ್ರಾಮಾಂತರ ಭಾಗಗಳಲ್ಲಿ ಆಯೋಜಿಸುವ ನೇತ್ರ ಹಾಗೂ ಆರೋಗ್ಯ ಶಿಬಿರಗಳಲ್ಲಿ ತಾವು ಭಾಗವಹಿಸುವುದಾಗಿ ಭರವಸೆ ನೀಡಿದರು. ಪಾವಗಡ ವರದಿ

6 hrs ago
user_Ctv news
Ctv news
Voice of people ಪಾವಗಡ, ತುಮಕೂರು, ಕರ್ನಾಟಕ•
6 hrs ago
577ca766-4577-4b1f-98fa-d2a853f7522f

ಶಾರದಾದೇವಿ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಮಕ್ಕಳ ನೇತ್ರ ತಪಾಸಣೆ: ನ್ಯಾಯಾಧೀಶರ ಪ್ರಶಂಸೆ ಪಾವಗಡ: ತಾಲೂಕು ಕೇಂದ್ರದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಬುಧವಾರದಂದು ಮಕ್ಕಳ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಪ್ರಸಿದ್ಧ ಮಕ್ಕಳ ನೇತ್ರ ತಜ್ಞರಾದ ಡಾ. ವಸುಧಾ ನರೇಶ್ ಹಾಗೂ

2e775ca5-8b4b-4233-b08a-af29c90a4196

ಹಿರಿಯ ಆಪ್ಟೋಮೆಟ್ರಿಸ್ಟ್ ಅನೀಶ್ ರವರು ಆಗಮಿಸಿದ್ದ 40ಕ್ಕೂ ಹೆಚ್ಚು ಮಕ್ಕಳು ಹಾಗೂ ನವಜಾತ ಶಿಶುಗಳ ಕಣ್ಣಿನ ತಪಾಸಣೆ ನಡೆಸಿದರು. ಈ ಪೈಕಿ 8 ಮಕ್ಕಳಿಗೆ ಅತಿ ಸೂಕ್ಷ್ಮ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ತಪಾಸಣೆ, ಚಿಕಿತ್ಸೆ ಮತ್ತು ಮಧ್ಯಾಹ್ನದ ಭೋಜನವನ್ನು ಸಂಪೂರ್ಣ ಉಚಿತವಾಗಿ ನೀಡಲಾಯಿತು. ಈ ಶಿಬಿರಕ್ಕೆ

9a0f39ad-67f1-4270-be95-bac5e6a182c9

ಕಲ್ಯಾಣದುರ್ಗ, ಅನಂತಪುರ, ಹಿಂದೂಪುರ, ಶಿರಾ, ಚಳ್ಳಕೆರೆ ಹಾಗೂ ಮಧುಗಿರಿ ಭಾಗಗಳಿಂದಲೂ ಸಾರ್ವಜನಿಕರು ತಮ್ಮ ಮಕ್ಕಳೊಂದಿಗೆ ಆಗಮಿಸಿದ್ದರು. ನ್ಯಾಯಾಧೀಶರ ಭೇಟಿ: ಇದೇ ಸಂದರ್ಭದಲ್ಲಿ ಪಾವಗಡ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಮೂರ್ತಿಗಳಾದ ವಿ. ಮಾದೇಶ್ ಹಾಗೂ ನ್ಯಾಯಮೂರ್ತಿಗಳಾದ ಸಿ. ಎನ್. ಮುನಿರತ್ನಮ್ಮ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸಂಚಾರಿ ಕಣ್ಣಿನ ಆಸ್ಪತ್ರೆಯನ್ನು

1e674fe0-f283-4472-8a6a-5a30612c53dc

ವೀಕ್ಷಿಸಿದ ಅವರು, ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳ ಕ್ಷೇಮ ವಿಚಾರಿಸಿದರು. ಪೂಜ್ಯ ಸ್ವಾಮಿ ಜಪಾನಂದಜೀ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ನ್ಯಾಯಾಧೀಶರು, ಮುಂದಿನ ದಿನಗಳಲ್ಲಿ ಗ್ರಾಮಾಂತರ ಭಾಗಗಳಲ್ಲಿ ಆಯೋಜಿಸುವ ನೇತ್ರ ಹಾಗೂ ಆರೋಗ್ಯ ಶಿಬಿರಗಳಲ್ಲಿ ತಾವು ಭಾಗವಹಿಸುವುದಾಗಿ ಭರವಸೆ ನೀಡಿದರು. ಪಾವಗಡ ವರದಿ

More news from ಕರ್ನಾಟಕ and nearby areas
  • ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು: ನಟ ಚಿರಂಜೀವಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪೌರಕಾರ್ಮಿಕರಿಗೆ ಸೀರೆ ವಿತರಣೆ ​ಪಾವಗಡ: ಸಿನಿಮಾ ನಟನೆಯನ್ನು ಮೆಚ್ಚಿ ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುವುದಷ್ಟೇ ಅಲ್ಲದೆ, ನಟರು ಮಾಡುವ ಸಾಮಾಜಿಕ ಸೇವಾ ಕಾರ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜಕ್ಕೆ ನೈಜ ಒಳಿತಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಶಮಿ ವೃಕ್ಷ ಅಭಿವೃದ್ಧಿ ಸಮಿತಿ ಟ್ರಸ್ಟ್ ಕಾರ್ಯದರ್ಶಿ ಸತ್ಯ ಲೋಕೇಶ್ ತಿಳಿಸಿದರು. ​ಪಟ್ಟಣದ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ 71ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ಮಹಿಳಾ ಪೌರಕಾರ್ಮಿಕರಿಗೆ ಹಾಗೂ ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆಗಳನ್ನು ವಿತರಿಸುವ ಮೂಲಕ ಹಬ್ಬದ ಸಡಗರಕ್ಕೆ ಚಾಲನೆ ನೀಡಲಾಯಿತು. ​ಕಾರ್ಯಕ್ರಮದ ಮುಖ್ಯ ರೂವಾರಿ, ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ, "ಚಿರಂಜೀವಿ ಅವರು ಕೇವಲ ನಟನಾಗಿ ಉಳಿಯದೆ, ಬ್ಲಡ್ ಬ್ಯಾಂಕ್ ಸ್ಥಾಪಿಸಿ ರಕ್ತದ ಅಗತ್ಯವಿರುವ ಸಾವಿರಾರು ಜನರಿಗೆ ನೆರವಾಗುವ ಮೂಲಕ ದೇಶಾದ್ಯಂತ ರಕ್ತದಾನದ ಮಹತ್ವ ಸಾರಿದ್ದಾರೆ. ಮುಂಬರುವ ವರಮಹಾಲಕ್ಷ್ಮಿ ಹಬ್ಬವನ್ನು ಬಡ ಮಹಿಳಾ ಕಾರ್ಮಿಕರು ಸಂಭ್ರಮದಿಂದ ಆಚರಿಸಲಿ ಎಂಬ ಉದ್ದೇಶದಿಂದ ಈ ಸಮಾಜ ಸೇವೆಗೆ ಮುನ್ನುಡಿ ಬರೆದಿದ್ದೇವೆ" ಎಂದರು. ​ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳ್ಳೇಕಾರ ಲೋಕೇಶ್ ಮಾತನಾಡಿ, ಸೇವಾ ಟ್ರಸ್ಟ್ ವತಿಯಿಂದ ಇದುವರೆಗೆ ಸುಮಾರು 13,500 ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಬಡವರ ಸೇವೆ ಮಾಡುತ್ತಿರುವ ಮಾನಂ ಶಶಿಕಿರಣ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ​ಅಂಗನವಾಡಿಗೆ ಧನಸಹಾಯ & ಸಾಂಸ್ಕೃತಿಕ ಸಂಭ್ರಮ: ಇದೇ ವೇಳೆ ಪಟ್ಟಣದ ಆದರ್ಶ ನಗರದ ಅಂಗನವಾಡಿ ಕೇಂದ್ರದ ನವೀಕರಣಕ್ಕಾಗಿ ₹15,000 ಮೊತ್ತದ ಚೆಕ್ ಅನ್ನು ಶಿಕ್ಷಕಿ ಭೂಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸುಮಾರು 100 ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆ ವಿತರಿಸಲಾಯಿತು. ಉನ್ನತಿ ತರಬೇತಿಯ ವಿದ್ಯಾರ್ಥಿನಿಯರು ಚಿರಂಜೀವಿ ಅವರ ಜನಪ್ರಿಯ ಗೀತೆಗಳಿಗೆ ಸಖತ್ ನೃತ್ಯ ಮಾಡಿ ಸಭಿಕರನ್ನು ರಂಜಿಸಿದರು. ಅತ್ಯುತ್ತಮವಾಗಿ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಷಾ ಬಾಬು ಹಾಗೂ ಗಣ್ಯರು ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರು. ಕೊನೆಯಲ್ಲಿ 71ನೇ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯಿತು. ​ಕಾರ್ಯಕ್ರಮದಲ್ಲಿ ಚಿರಂಜೀವಿ ಅಭಿಮಾನಿಗಳಾದ ಮಾಜಿ ಪುರಸಭಾ ಸದಸ್ಯರಾದ ರಿಜ್ವಾನ್ ಹುಲ್ಲಾ, ಷಾ ಬಾಬು, ನಂದೀಶ್, ಮುತ್ಯಾಲಪ್ಪ ಹಾಗೂ ಪ್ರಮುಖರಾದ ಶ್ರೀಧರ್ ಗುಪ್ತ, ಸೋಲಾರ್ ರಾಜಶೇಖರ್ ರೆಡ್ಡಿ, ಅಮಿಲಿನೇನಿ ನರೇಶ್, ಶಾರು, ಸಂಧ್ಯಾ ಮಾನಂ, ವಿಶಾಲ್, ಪ್ರಜ್ವಲ್, ಶಿಕ್ಷಕಿ ನಳಿನಾ, ಚಂದನ, ಶಿವಕುಮಾರ್, ಹರ್ಷ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪಾವಗಡ ವರದಿ
    1
    ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು: ನಟ ಚಿರಂಜೀವಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪೌರಕಾರ್ಮಿಕರಿಗೆ ಸೀರೆ ವಿತರಣೆ 

​ಪಾವಗಡ: ಸಿನಿಮಾ ನಟನೆಯನ್ನು ಮೆಚ್ಚಿ ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುವುದಷ್ಟೇ ಅಲ್ಲದೆ, ನಟರು ಮಾಡುವ ಸಾಮಾಜಿಕ ಸೇವಾ ಕಾರ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜಕ್ಕೆ ನೈಜ ಒಳಿತಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಶಮಿ ವೃಕ್ಷ ಅಭಿವೃದ್ಧಿ ಸಮಿತಿ ಟ್ರಸ್ಟ್ ಕಾರ್ಯದರ್ಶಿ ಸತ್ಯ ಲೋಕೇಶ್ ತಿಳಿಸಿದರು. 
​ಪಟ್ಟಣದ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ 71ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ಮಹಿಳಾ ಪೌರಕಾರ್ಮಿಕರಿಗೆ ಹಾಗೂ ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆಗಳನ್ನು ವಿತರಿಸುವ ಮೂಲಕ ಹಬ್ಬದ ಸಡಗರಕ್ಕೆ ಚಾಲನೆ ನೀಡಲಾಯಿತು.
​ಕಾರ್ಯಕ್ರಮದ ಮುಖ್ಯ ರೂವಾರಿ, ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ, "ಚಿರಂಜೀವಿ ಅವರು ಕೇವಲ ನಟನಾಗಿ ಉಳಿಯದೆ, ಬ್ಲಡ್ ಬ್ಯಾಂಕ್ ಸ್ಥಾಪಿಸಿ ರಕ್ತದ ಅಗತ್ಯವಿರುವ ಸಾವಿರಾರು ಜನರಿಗೆ ನೆರವಾಗುವ ಮೂಲಕ ದೇಶಾದ್ಯಂತ ರಕ್ತದಾನದ ಮಹತ್ವ ಸಾರಿದ್ದಾರೆ. ಮುಂಬರುವ ವರಮಹಾಲಕ್ಷ್ಮಿ ಹಬ್ಬವನ್ನು ಬಡ ಮಹಿಳಾ ಕಾರ್ಮಿಕರು ಸಂಭ್ರಮದಿಂದ ಆಚರಿಸಲಿ ಎಂಬ ಉದ್ದೇಶದಿಂದ ಈ ಸಮಾಜ ಸೇವೆಗೆ ಮುನ್ನುಡಿ ಬರೆದಿದ್ದೇವೆ" ಎಂದರು.
​ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳ್ಳೇಕಾರ ಲೋಕೇಶ್ ಮಾತನಾಡಿ, ಸೇವಾ ಟ್ರಸ್ಟ್ ವತಿಯಿಂದ ಇದುವರೆಗೆ ಸುಮಾರು 13,500 ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಬಡವರ ಸೇವೆ ಮಾಡುತ್ತಿರುವ ಮಾನಂ ಶಶಿಕಿರಣ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
​ಅಂಗನವಾಡಿಗೆ ಧನಸಹಾಯ & ಸಾಂಸ್ಕೃತಿಕ ಸಂಭ್ರಮ:
ಇದೇ ವೇಳೆ ಪಟ್ಟಣದ ಆದರ್ಶ ನಗರದ ಅಂಗನವಾಡಿ ಕೇಂದ್ರದ ನವೀಕರಣಕ್ಕಾಗಿ ₹15,000 ಮೊತ್ತದ ಚೆಕ್ ಅನ್ನು ಶಿಕ್ಷಕಿ ಭೂಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸುಮಾರು 100 ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆ ವಿತರಿಸಲಾಯಿತು. ಉನ್ನತಿ ತರಬೇತಿಯ ವಿದ್ಯಾರ್ಥಿನಿಯರು ಚಿರಂಜೀವಿ ಅವರ ಜನಪ್ರಿಯ ಗೀತೆಗಳಿಗೆ ಸಖತ್ ನೃತ್ಯ ಮಾಡಿ ಸಭಿಕರನ್ನು ರಂಜಿಸಿದರು. ಅತ್ಯುತ್ತಮವಾಗಿ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಷಾ ಬಾಬು ಹಾಗೂ ಗಣ್ಯರು ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರು. ಕೊನೆಯಲ್ಲಿ 71ನೇ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯಿತು. 
​ಕಾರ್ಯಕ್ರಮದಲ್ಲಿ ಚಿರಂಜೀವಿ ಅಭಿಮಾನಿಗಳಾದ ಮಾಜಿ ಪುರಸಭಾ ಸದಸ್ಯರಾದ ರಿಜ್ವಾನ್ ಹುಲ್ಲಾ, ಷಾ ಬಾಬು, ನಂದೀಶ್, ಮುತ್ಯಾಲಪ್ಪ ಹಾಗೂ ಪ್ರಮುಖರಾದ ಶ್ರೀಧರ್ ಗುಪ್ತ, ಸೋಲಾರ್ ರಾಜಶೇಖರ್ ರೆಡ್ಡಿ, ಅಮಿಲಿನೇನಿ ನರೇಶ್, ಶಾರು, ಸಂಧ್ಯಾ ಮಾನಂ, ವಿಶಾಲ್, ಪ್ರಜ್ವಲ್, ಶಿಕ್ಷಕಿ ನಳಿನಾ, ಚಂದನ, ಶಿವಕುಮಾರ್, ಹರ್ಷ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪಾವಗಡ ವರದಿ
    user_Ctv news
    Ctv news
    Voice of people ಪಾವಗಡ, ತುಮಕೂರು, ಕರ್ನಾಟಕ•
    20 hrs ago
  • ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ.. ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಾಯ್ಸ್ ಓವರ್: ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು. ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ: ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು. ಉದ್ಯಮಿ ನೀಲೇಶ್ ಮಾತನಾಡಿ: ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ: 48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು. ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ: ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು. ಉದ್ಯಮಿ ಶ್ರೀನಾಗ್ ಮಾತನಾಡಿ: ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು. ವಾಯ್ಸ್ ಓವರ್: ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು. ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು. ಆಂಕರ್ ಔಟ್ರೋ: ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.
    3
    ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ..
ಕೊರಟಗೆರೆ ನ್ಯೂಸ್ — ಸಂಕೇನಹಳ್ಳಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಕುಬೇರ ಗಣಪತಿ ಪ್ರತಿಷ್ಠಾಪನೆ ಹಾಗೂ  ದೇವಸ್ಥಾನ ಉದ್ಘಾಟನೆ..
ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ 9 ವರ್ಷಗಳ ಕಾಲ ಗ್ರಾಮಸ್ಥರು ಕಂಡಿದ್ದ ಕನಸು ಇದೀಗ ನನಸಾಗಿದೆ. ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ನೂತನ ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಮಠಾಧೀಶರು, ಗಣ್ಯರು ಹಾಗೂ ಸಹಸ್ರಾರು ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.
ವಾಯ್ಸ್ ಓವರ್:
ಕೊರಟಗೆರೆ ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ನೂತನ ಕುಬೇರ ಗಣಪತಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿಷ್ಠಾಪನೆ, ಸಮುದಾಯ ಭವನ ಮತ್ತು ರಾಜಗೋಪುರ ಉದ್ಘಾಟನಾ ಕಾರ್ಯಕ್ರಮ ಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು.
ಗ್ರಾಮಸ್ಥರ ಸುಮಾರು 9 ವರ್ಷಗಳ ನಿರಂತರ ಪ್ರಯತ್ನದ ಫಲವಾಗಿ ನಿರ್ಮಾಣಗೊಂಡಿರುವ ನೂತನ ದೇವಸ್ಥಾನವು ಗ್ರಾಮಸ್ಥರ ಭಕ್ತಿ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಎಲೆರಾಂಪುರ ಮಠದ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಹಾಗೂ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ಸೇರಿದಂತೆ ಗಣ್ಯರು ಭಾಗವಹಿಸಿ ಕುಬೇರ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ದೇವಸ್ಥಾನವನ್ನು ಉದ್ಘಾಟಿಸಿದರು.
ಪಿ.ಎನ್. ಕೃಷ್ಣಮೂರ್ತಿ ಮಾತನಾಡಿ:
ಪ್ರತಿಯೊಂದು ಹಳ್ಳಿಯಲ್ಲೂ ಸಿರಿವಂತರು ಹಾಗೂ ಅನುಕೂಲಸ್ಥರು ತಮ್ಮ ಒಳ್ಳೆಯ ಮನಸ್ಸಿನಿಂದ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ದೇವಸ್ಥಾನಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಕೇಂದ್ರಗಳಾಗಿದ್ದು, ಇದೇ ರೀತಿ ಪ್ರತಿಯೊಂದು ಗ್ರಾಮದಲ್ಲೂ ಉತ್ತಮ ಶಾಲೆಗಳಿರಬೇಕು. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಮತ್ತು ನಮ್ಮ ಆಚಾರ-ವಿಚಾರಗಳ ಅರಿವು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸಮಾಜದ ಮೇಲಿದೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸುಸ್ಥಿರ ಬದಲಾವಣೆ ಸಾಧ್ಯ ಎಂದರು.
ಉದ್ಯಮಿ ನೀಲೇಶ್ ಮಾತನಾಡಿ:
ನಾವು ಎಲ್ಲೇ ಇದ್ದರೂ, ಹೇಗೆ ಇದ್ದರೂ, ನಾವು ಹುಟ್ಟಿದ ಗ್ರಾಮವನ್ನು ಮರೆಯಬಾರದು. ನಮ್ಮ ಗ್ರಾಮಕ್ಕೆ ನಮ್ಮ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮಗಳ ಅಭಿವೃದ್ಧಿಗೆ ಆರ್ಥಿಕ ಸಹಾಯದ ಜೊತೆಗೆ ಸಮಯ, ಶ್ರಮ ಹಾಗೂ ಮಾರ್ಗದರ್ಶನ ನೀಡುವ ಮೂಲಕವೂ ಸೇವೆ ಸಲ್ಲಿಸಬಹುದು. ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಡಾ. ಹನುಮಂತನಾಥ ಸ್ವಾಮೀಜಿ ಆಶೀರ್ವಚನ ನೀಡಿ:
48 ದಿನಗಳ ಕಾಲ ನಿಷ್ಠೆ, ಭಕ್ತಿ ಮತ್ತು ಶ್ರದ್ಧೆಯಿಂದ ಗಣೇಶನ ಪೂಜೆ ಮಾಡಿದರೆ ಭಗವಂತನ ಅನುಗ್ರಹ ದೊರೆಯುತ್ತದೆ. ಆದರೆ ದೇವರ ಅನುಗ್ರಹ ಪಡೆಯುವ ಜೊತೆಗೆ ತಂದೆ-ತಾಯಿಯ ಸೇವೆ ಮಾಡುವುದು ಅತ್ಯಂತ ಮುಖ್ಯ. ಹಿರಿಯರನ್ನು ಗೌರವಿಸಿ, ಸತ್ಯ, ಧರ್ಮ ಹಾಗೂ ನೀತಿಯ ಮಾರ್ಗದಲ್ಲಿ ಜೀವನ ನಡೆಸಬೇಕು. ಭಕ್ತಿ ನಮ್ಮ ಬದುಕಿಗೆ ದಾರಿ ತೋರಿಸುವ ಶಕ್ತಿಯಾಗಬೇಕು ಎಂದು ತಿಳಿಸಿದರು.
ಶ್ರೀ ವೀರ ಬಸವಲಿಂಗ ಸ್ವಾಮೀಜಿ ಮಾತನಾಡಿ:
ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡುವುದಷ್ಟೇ ಅಲ್ಲ, ಸಂಸ್ಕಾರವಂತರನ್ನಾಗಿಯೂ ಬೆಳೆಸಬೇಕು. ಮೊಬೈಲ್ ಮತ್ತು ಟಿವಿಯ ಬಳಕೆಯನ್ನು ಕಡಿಮೆ ಮಾಡಿ, ಮಕ್ಕಳಿಗೆ ಕುಟುಂಬದ ಮೌಲ್ಯಗಳನ್ನು ಕಲಿಸಬೇಕು. ‘ಎ’ ಎಂದರೆ ಅಪ್ಪ-ಅಮ್ಮ, ‘ಬಿ’ ಎಂದರೆ ಬಂಧು-ಬಳಗ ಎಂಬಂತೆ ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ತಂದೆ-ತಾಯಿ, ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಬೆಳೆಸಬೇಕು ಎಂದು ಕರೆ ನೀಡಿದರು.
ಉದ್ಯಮಿ ಶ್ರೀನಾಗ್ ಮಾತನಾಡಿ:
ಸಂಕೇನಹಳ್ಳಿ ಗ್ರಾಮದಲ್ಲಿ ‘ಕುಬೇರ ಗಣಪತಿ’ ಎಂಬ ಹೆಸರು ಬರಲು ಪ್ರಮುಖ ಕಾರಣ ಗ್ರಾಮಸ್ಥರ ಭಕ್ತಿ, ಒಗ್ಗಟ್ಟು ಮತ್ತು ಸಂಕಲ್ಪ. ಗ್ರಾಮಸ್ಥರೆಲ್ಲರೂ ಒಂದಾಗಿ ನಿಂತು ದೇವಸ್ಥಾನದ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಇದು ಕೇವಲ ದೇವಸ್ಥಾನವಲ್ಲ, ಗ್ರಾಮದ ಜನರ ಒಗ್ಗಟ್ಟಿನ ಪ್ರತೀಕವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ಒಗ್ಗಟ್ಟಿನಿಂದ ಗ್ರಾಮದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ವಾಯ್ಸ್ ಓವರ್:
ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ನಡೆಯಿತು. ಸಂಕೇನಹಳ್ಳಿ, ಗೋಕುಲ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕುಬೇರ ಗಣಪತಿಯ ದರ್ಶನ ಪಡೆದು ಪುನೀತರಾದರು.
ಸಹಸ್ರಾರು ಭಕ್ತಾದಿಗಳು ಭಾಗವಹಿಸಿದ್ದರಿಂದ ಇಡೀ ಸಂಕೇನಹಳ್ಳಿ ಗ್ರಾಮವು ಹಬ್ಬದ ವಾತಾವರಣದಲ್ಲಿ ಕಂಗೊಳಿಸಿತು.
ಆಂಕರ್ ಔಟ್ರೋ:
ಒಂಬತ್ತು ವರ್ಷಗಳ ಗ್ರಾಮಸ್ಥರ ಕನಸು ನನಸಾಗಿದ್ದು, ನೂತನ ಕುಬೇರ ಗಣಪತಿ ದೇವಸ್ಥಾನ ಇದೀಗ ಭಕ್ತರ ಆಕರ್ಷಣೆಯ ಕೇಂದ್ರವಾಗಿ ಹೊರಹೊಮ್ಮಿದೆ. ಗ್ರಾಮಸ್ಥರ ಒಗ್ಗಟ್ಟು ಮತ್ತು ಭಕ್ತಿಗೆ ಈ ದೇವಸ್ಥಾನ ಸಾಕ್ಷಿಯಾಗಿದೆ.
    user_Mutthuraj Raj
    Mutthuraj Raj
    Photographer ಕೊರಟಗೆರೆ, ತುಮಕೂರು, ಕರ್ನಾಟಕ•
    10 hrs ago
  • ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ. ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು. ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ. (ಫೋಟೋ ಕಳುಹಿಸಿದೆ) ======== ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ. ===========
    1
    ಶೀತ, ಕೆಮ್ಮು, ಜ್ವರ ಹೆಚ್ಚಳ: ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

ಚಿತ್ರದುರ್ಗ:ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ.
ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು.
ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು.
ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ.
(ಫೋಟೋ ಕಳುಹಿಸಿದೆ)
========
ಆ.28ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಸಮಾರಂಭ ಏರ್ಪಡಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ, ಕೊರಮ ಸಮಾಜ ಜಿಲ್ಲಾ ಅಧ್ಯಕ್ಷ ಕೆ.ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್, ಜಿಲ್ಲಾ ಆರ್ಯ ಈಡಿಗರ ಸಂಘ ಅಧ್ಯಕ್ಷ ಹೆಚ್.ಜೀವನ್, ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್, ಜಿಲ್ಲಾ ಆರ್ಯ ಈಡಿಗರ ಮಹಿಳಾ ಸಂಘದ ಅಧ್ಯಕ್ಷೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ, ಆರ್ಯ ಈಡಿಗರ ಸೇವಾ ಸಂಘ ಅಧ್ಯಕ್ಷ ಇ.ಎನ್.ಲಕ್ಷ್ಮೀಕಾಂತ ಭಾಗವಹಿಸುವರು. ಚಿತ್ರದುರ್ಗದ ಉಮೇಶ್ ಪತ್ತಾರ ಮತ್ತು ತಂಡ ಹಾಗೂ ಆಯಿತೋಳು ಯಶವಂತ್ ಕುಮಾರ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
===========
    user_ನ್ಯೂಸ್ ಕಿಂಗ್
    ನ್ಯೂಸ್ ಕಿಂಗ್
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    1
    ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್  ಮಿಲಾದ್  ಹಬ್ಬದ  ಆಚರಣೆ 
ಮೊಳಕಾಲ್ಮುರು ಸುದ್ದಿ 
ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ.
ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ.
ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ.
ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    13 hrs ago
  • ಮುಹಮ್ಮದ್ ಪೈಗಂಬರರ ಜನ್ಮದಿನದ ನೆನಪಾಗಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಣೆ.
    1
    ಮುಹಮ್ಮದ್ ಪೈಗಂಬರರ ಜನ್ಮದಿನದ ನೆನಪಾಗಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಣೆ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಶಿರಾದಲ್ಲಿ ಶಾಂತಿಯುತವಾಗಿ ಜರುಗಿದ ಜಷ್ನೇ ಈದ್ ಮಿಲಾದ್ ಮೆರವಣಿಗೆ 6 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರಿಂದ ಅದ್ಧೂರಿ ಆಚರಣೆ ಶಿರಾ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಜಷ್ನೇ ಈದ್ ಮಿಲಾದ್ ಉನ್ನಬಿ ಹಬ್ಬವನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಸುಮಾರು 6 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು. ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ನಗರದ ವಿವಿಧ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಬಳಿಕ ಜಾಮಿಯಾ ಮಸೀದಿ ಬಳಿ ಮರಳಿತು. ಅಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಶಾಂತಿಯುತವಾಗಿ ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್, ವಿವಿಧ ಮಸೀದಿಗಳ ಅಧ್ಯಕ್ಷರು, ಮುಖಂಡರು ಹಾಗೂ ರಾಜಕೀಯ ಮುಖಂಡರಿಗೆ ಧನ್ಯವಾದ ಸಲ್ಲಿಸಿದರು. ಯುವಕರಿಗೆ ಸಂದೇಶ ನೀಡಿದ ಅವರು, ಯಾವುದೇ ವದಂತಿಗಳಿಗೆ ಕಿವಿಗೊಡ ಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಅನಗತ್ಯ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳಬಾರದು. ಯುವಕರು ಬೈಕ್ ವೀಲಿಂಗ್ ಹಾಗೂ ಅತಿವೇಗದ ಚಾಲನೆ ಮಾಡದೆ, ಸಂಚಾರ ನಿಯಮಗಳನ್ನು ಪಾಲಿಸಿ ದ್ವಿಚಕ್ರ ವಾಹನಗಳನ್ನು ಸುರಕ್ಷಿತವಾಗಿ ಚಲಾಯಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್, ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಅವರ ಜನ್ಮದಿನದ ಸ್ಮರಣಾರ್ಥ ಜಷ್ನೇ ಈದ್ ಮಿಲಾದ್ ಉನ್ನಬಿ ಆಚರಿಸಲಾಗುತ್ತಿದೆ. ಪ್ರವಾದಿಯವರು ಶಾಂತಿಯಿಂದ ಬಾಳಬೇಕು ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರ ಸಂದೇಶದಂತೆ ಎಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಿಸುತ್ತಿದ್ದು, ಯುವಕರೂ ಸಹ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಹಬ್ಬ ಆಚರಿಸಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ. ಶೇಖರ್, ಸಿಪಿಐ ಪ್ರವೀಣ್ ಕುಮಾರ್, ಶ್ರೀನಿವಾಸ್, ಶಿರಾ ನಗರಸಭೆ ಅಧ್ಯಕ್ಷ ಜೀಷನ್ ಮಹಮ್ಮುದ್, ಮಾಜಿ ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ಉಪ್ಕಾರ್ ಗ್ರೂಪ್ ಮಾಲೀಕ ಅಬ್ದುಲ್ಲಾ ಖಾನ್, ಖಾದರ್ ಖಾನ್, ಸಾಲ್ಮನ್ ಮಹಮ್ಮುದ್, ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಸಮಾಜಸೇವಕ ಸಾದಿಕ್ ಪಾಷಾ, ಅಜ್ಮತ್ ಖಾನ್ ಸೇರಿದಂತೆ ಹಲವು ಮುಖಂಡರು, ಪೊಲೀಸ್ ಅಧಿಕಾರಿಗಳು, ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮೆರವಣಿಗೆಯು ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆಯಿತು.
    1
    ಶಿರಾದಲ್ಲಿ ಶಾಂತಿಯುತವಾಗಿ ಜರುಗಿದ ಜಷ್ನೇ ಈದ್ ಮಿಲಾದ್ ಮೆರವಣಿಗೆ

6 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರಿಂದ ಅದ್ಧೂರಿ ಆಚರಣೆ
ಶಿರಾ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಜಷ್ನೇ ಈದ್ ಮಿಲಾದ್ ಉನ್ನಬಿ ಹಬ್ಬವನ್ನು ಬುಧವಾರ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಸುಮಾರು 6 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ನಗರದ ವಿವಿಧ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಬಳಿಕ ಜಾಮಿಯಾ ಮಸೀದಿ ಬಳಿ ಮರಳಿತು. ಅಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಶಾಂತಿಯುತವಾಗಿ ಮುಕ್ತಾಯಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಇಲಾಖೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್, ವಿವಿಧ ಮಸೀದಿಗಳ ಅಧ್ಯಕ್ಷರು, ಮುಖಂಡರು ಹಾಗೂ ರಾಜಕೀಯ ಮುಖಂಡರಿಗೆ ಧನ್ಯವಾದ ಸಲ್ಲಿಸಿದರು.
ಯುವಕರಿಗೆ ಸಂದೇಶ ನೀಡಿದ ಅವರು, ಯಾವುದೇ ವದಂತಿಗಳಿಗೆ ಕಿವಿಗೊಡ ಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಕ್ಕೆ ಸಂಬಂಧಿಸಿದ ಅನಗತ್ಯ ಅಥವಾ ಪ್ರಚೋದನಕಾರಿ ಸಂದೇಶಗಳನ್ನು ಹಂಚಿಕೊಳ್ಳಬಾರದು. ಯುವಕರು ಬೈಕ್ ವೀಲಿಂಗ್ ಹಾಗೂ ಅತಿವೇಗದ ಚಾಲನೆ ಮಾಡದೆ, ಸಂಚಾರ ನಿಯಮಗಳನ್ನು ಪಾಲಿಸಿ ದ್ವಿಚಕ್ರ ವಾಹನಗಳನ್ನು ಸುರಕ್ಷಿತವಾಗಿ ಚಲಾಯಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಾಮಿಯಾ ಮಸೀದಿ ಅಧ್ಯಕ್ಷ ಮೊಹಮ್ಮದ್ ಜಾಫರ್, ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಅವರ ಜನ್ಮದಿನದ ಸ್ಮರಣಾರ್ಥ ಜಷ್ನೇ ಈದ್ ಮಿಲಾದ್ ಉನ್ನಬಿ ಆಚರಿಸಲಾಗುತ್ತಿದೆ. ಪ್ರವಾದಿಯವರು ಶಾಂತಿಯಿಂದ ಬಾಳಬೇಕು ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುವಂತೆ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ನೀಡಿದ್ದಾರೆ. ಅವರ ಸಂದೇಶದಂತೆ ಎಲ್ಲರೂ ಶಾಂತಿಯುತವಾಗಿ ಹಬ್ಬವನ್ನು ಆಚರಿಸುತ್ತಿದ್ದು, ಯುವಕರೂ ಸಹ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಹಬ್ಬ ಆಚರಿಸಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಬಿ.ಕೆ. ಶೇಖರ್, ಸಿಪಿಐ ಪ್ರವೀಣ್ ಕುಮಾರ್, ಶ್ರೀನಿವಾಸ್, ಶಿರಾ ನಗರಸಭೆ ಅಧ್ಯಕ್ಷ ಜೀಷನ್ ಮಹಮ್ಮುದ್, ಮಾಜಿ ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ಉಪ್ಕಾರ್ ಗ್ರೂಪ್ ಮಾಲೀಕ ಅಬ್ದುಲ್ಲಾ ಖಾನ್, ಖಾದರ್ ಖಾನ್, ಸಾಲ್ಮನ್ ಮಹಮ್ಮುದ್, ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಸಮಾಜಸೇವಕ ಸಾದಿಕ್ ಪಾಷಾ, ಅಜ್ಮತ್ ಖಾನ್ ಸೇರಿದಂತೆ ಹಲವು ಮುಖಂಡರು, ಪೊಲೀಸ್ ಅಧಿಕಾರಿಗಳು, ಗೃಹರಕ್ಷಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಮೆರವಣಿಗೆಯು ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆಯಿತು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    5 hrs ago
  • ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ
    1
    ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥
ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು!
#SeeratUnNabi
#ಸೀರತ್_ಅಭಿಯಾನ
#ಕ್ರಾಂತಿಯಜ್ಯೋತಿ
#ಪ್ರವಾದಿಮುಹಮ್ಮದ್ﷺ
#Muhammadﷺ
#ProphetMuhammad
#SeeratCampaign
#JamaatEIslamiHind
#ಚಿತ್ರದುರ್ಗ
#Chitradurga
#ChitradurgaNews
#KarnatakaNews
#KannadaNews
#BreakingNews
#ViralNews
#LocalNews
#CTownNews
#CtownNews
#NewsUpdate
#ಸುದ್ದಿ
#ಸುದ್ದಿವಾಹಿನಿ
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
    1
    ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ..
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ..
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
    user_Mutthuraj Raj
    Mutthuraj Raj
    Photographer ಕೊರಟಗೆರೆ, ತುಮಕೂರು, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.