ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವದು ಅಗತ್ಯ - ಪ್ರಾಚಾರ್ಯ ಎಂ.ಪಿ ಮೇತ್ರಿ ತಾಲೂಕಾಡಳಿತದಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಅಥಣಿ : ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ ನ್ಯಾಯ ದೊರಕಬೇಕಾದರೆ ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನ ಪಾಲಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಜೆ. ಎ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಂ ಪಿ ಮೇತ್ರಿ ಹೇಳಿದರು. ಅವರು ಇಲ್ಲಿನ ಕೆಎಲ್ಇ ಸಂಸ್ಥೆಯ ಖೋತ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಸಭೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಂದ ಆಯ್ಕೆಯಾದ ಜನಪ್ರತಿನಿಧಿಗಳು ಪ್ರಜೆಗಳಿಗಾಗಿ ಸಂವಿಧಾನದ ಆಶಯದಂತೆ ಕಾರ್ಯ ನಿರ್ವಹಿಸಬೇಕು. ವಿವಿಧ ಜಾತಿ ಧರ್ಮ ಮತ ಪಂಥಗಳ ಭೇದವಿಲ್ಲದೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು. ಡಾ. ಬಿ ಆರ್ ಅಂಬೇಡ್ಕರ್ ಅವರು ಒದಗಿಸಿದ ಸಂವಿಧಾನದ ಆಶಯಗಳನ್ನ ಪ್ರತಿಯೊಬ್ಬರೂ ಪಾಲಿಸಬೇಕು. 2007ರಲ್ಲಿ ವಿಶ್ವ ಸಂಸ್ಥೆಯು ತನ್ನ ಸಾಮಾನ್ಯ ಸಭೆಯಲ್ಲಿ ಅಗಸ್ಟ್ 15 ರಂದು ಎಲ್ಲಡೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅಧಿಕೃತವಾಗಿ ಘೋಷಿಸಿದೆ. ಪ್ರಪಂಚದಾದ್ಯಂತ ಪ್ರಜಾಪ್ರಭುತ್ವದ ಸ್ಥಿತಿಗತಿಗಳನ್ನು ಅವಲೋಕಿಸಲು ಮತ್ತು ಸರ್ಕಾರಗಳು ಹಾಗೂ ನಾಗರಿಕರು ಜವಾಬ್ದಾರಿಯುತ ಆಡಳಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನಾಚರಣೆಯ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿಯಾಗಿದೆ ಎಂದರು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವದ ಮಹತ್ವ ಸಾರಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜನಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ತಾಲೂಕ ಆಡಳಿತ ಹಮ್ಮಿಕೊಂಡಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಶಿವಲೀಲಾ ಬುಟಾಳಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅರ್ಚನಾ ಪಾಟೀಲ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಪೂರ್ವದಲ್ಲಿ ಸಂವಿಧಾನದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ನಂತರ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತ ವಾಸ್ಟರ್, ತಾ. ಪಂ ಅಧಿಕಾರಿ ಶಿವಾನಂದ ಕಲ್ಲಾಪುರ, ಉಪ ತಹಸಿಲ್ದಾರ ಮಹಾದೇವ ಬಿರಾದಾರ, ಸಮಾಜ ಕಲ್ಯಾಣ ಅಧಿಕಾರಿ ಪರಶುರಾಮ ಪತ್ತಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಮಹಾದೇವ ಕೋಳಿ, ತಾಲೂಕ ವೈದ್ಯಾಧಿಕಾರಿ ಡಾ. ಬಸ್ ಗೌಡ ಕಾಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಆರ್. ಮುಂಜೆ, ಪುರಸಭೆಯ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪರಶುರಾಮ ಪತ್ತಾರ ಸ್ವಾಗತಿಸಿದರು. ಸಂಗಮೇಶ ಹಚಡದ ನಿರೂಪಿಸಿ, ವಂದಿಸಿದರು.
ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವದು ಅಗತ್ಯ - ಪ್ರಾಚಾರ್ಯ ಎಂ.ಪಿ ಮೇತ್ರಿ ತಾಲೂಕಾಡಳಿತದಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಅಥಣಿ : ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ ನ್ಯಾಯ ದೊರಕಬೇಕಾದರೆ ಪ್ರತಿಯೊಬ್ಬರೂ ಸಂವಿಧಾನದ ಆಶಯಗಳನ್ನ ಪಾಲಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಜೆ. ಎ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಂ ಪಿ ಮೇತ್ರಿ ಹೇಳಿದರು. ಅವರು ಇಲ್ಲಿನ ಕೆಎಲ್ಇ ಸಂಸ್ಥೆಯ ಖೋತ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಸಭೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಂದ ಆಯ್ಕೆಯಾದ ಜನಪ್ರತಿನಿಧಿಗಳು ಪ್ರಜೆಗಳಿಗಾಗಿ ಸಂವಿಧಾನದ ಆಶಯದಂತೆ ಕಾರ್ಯ ನಿರ್ವಹಿಸಬೇಕು. ವಿವಿಧ ಜಾತಿ ಧರ್ಮ ಮತ ಪಂಥಗಳ ಭೇದವಿಲ್ಲದೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು. ಡಾ. ಬಿ ಆರ್ ಅಂಬೇಡ್ಕರ್ ಅವರು ಒದಗಿಸಿದ ಸಂವಿಧಾನದ ಆಶಯಗಳನ್ನ ಪ್ರತಿಯೊಬ್ಬರೂ ಪಾಲಿಸಬೇಕು. 2007ರಲ್ಲಿ ವಿಶ್ವ ಸಂಸ್ಥೆಯು ತನ್ನ ಸಾಮಾನ್ಯ ಸಭೆಯಲ್ಲಿ ಅಗಸ್ಟ್ 15 ರಂದು ಎಲ್ಲಡೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅಧಿಕೃತವಾಗಿ ಘೋಷಿಸಿದೆ. ಪ್ರಪಂಚದಾದ್ಯಂತ ಪ್ರಜಾಪ್ರಭುತ್ವದ ಸ್ಥಿತಿಗತಿಗಳನ್ನು ಅವಲೋಕಿಸಲು ಮತ್ತು ಸರ್ಕಾರಗಳು ಹಾಗೂ ನಾಗರಿಕರು ಜವಾಬ್ದಾರಿಯುತ ಆಡಳಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನಾಚರಣೆಯ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿಯಾಗಿದೆ ಎಂದರು. ಕೇಂದ್ರ
ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವದ ಮಹತ್ವ ಸಾರಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜನಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ತಾಲೂಕ ಆಡಳಿತ ಹಮ್ಮಿಕೊಂಡಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಶಿವಲೀಲಾ ಬುಟಾಳಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅರ್ಚನಾ ಪಾಟೀಲ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಪೂರ್ವದಲ್ಲಿ ಸಂವಿಧಾನದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ನಂತರ ಸಂವಿಧಾನ ಪೀಠಿಕೆ ಓದುವ ಮೂಲಕ ಪ್ರತಿಜ್ಞಾವಿಧಿ ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತ ವಾಸ್ಟರ್, ತಾ. ಪಂ ಅಧಿಕಾರಿ ಶಿವಾನಂದ ಕಲ್ಲಾಪುರ, ಉಪ ತಹಸಿಲ್ದಾರ ಮಹಾದೇವ ಬಿರಾದಾರ, ಸಮಾಜ ಕಲ್ಯಾಣ ಅಧಿಕಾರಿ ಪರಶುರಾಮ ಪತ್ತಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಮಹಾದೇವ ಕೋಳಿ, ತಾಲೂಕ ವೈದ್ಯಾಧಿಕಾರಿ ಡಾ. ಬಸ್ ಗೌಡ ಕಾಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಆರ್. ಮುಂಜೆ, ಪುರಸಭೆಯ ಮುಖ್ಯಾಧಿಕಾರಿ ಅಶೋಕ ಗುಡಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪರಶುರಾಮ ಪತ್ತಾರ ಸ್ವಾಗತಿಸಿದರು. ಸಂಗಮೇಶ ಹಚಡದ ನಿರೂಪಿಸಿ, ವಂದಿಸಿದರು.
- ಅಥಣಿಯಲ್ಲಿ ಎಸ್‌ಐಆರ್-2026 (SIR-2026) ವಿಶೇಷ ಮತದಾರರ ನೋಂದಣಿ ಜಾಗೃತಿ ಅಭಿಯಾನ ಯಶಸ್ವಿ ಅಥಣಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ರ ಅಂಗವಾಗಿ ಅಥಣಿಯ ಕೆ.ಇ. ಲೋಕಪೂರ ಪದವಿ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾರರ ನೋಂದಣಿ ಕುರಿತು ವ್ಯಾಪಕ ಅರಿವು ಹಾಗೂ ಜಾಗೃತಿ ಮೂಡಿಸಲು SVEEP ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅತಿಥಿಗಳು ಮತ್ತು ಅಧಿಕಾರಿಗಳು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಮತ್ತು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವುದು ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಅಲ್ಲದೆ, ಯುವ ಮತದಾರರು ಹೊಸ ಮತದಾರರ ನೊಂದಣಿ, ತಿದ್ದುಪಡಿ ಹಾಗೂ ಆಧಾರ್ ಜೋಡಣೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ಟಿ.ಪಿ.ಒ. ಆದ ಶ್ರೀ ಬಿ.ಬಿ. ಗಾವಡೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾರ್ಗದರ್ಶನ ನೀಡಿದರು. ಕೆ.ಇ. ಲೋಕಪೂರ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಆರ್.ಎನ್. ನಾಯಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಎಸ್.ಎನ್. ಹಿರೇಮಠ, ಜೆ.ಡಿ. ಪವಾರ, ಕಿರಣ ಕಳ್ಳಿಮಠ, ಮಹೇಶ ಮಾಂಗ, ವಿಶ್ವನಾಥ ಮೋರೆ, ಕಿರಣಗ ಗೆಜ್ಜಿ ಸೇರಿದಂತೆ ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ಮತದಾರರ ಜಾಗೃತಿಯ ಪ್ರತಿಜ್ಞೆ ಸ್ವೀಕರಿಸಿದರು. ಎಸ್.ವಿ.ಇ.ಇ.ಪಿ. (SVEEP) ಚಟುವಟಿಕೆಗಳಡಿ ಹಮ್ಮಿಕೊಂಡಿದ್ದ ಈ ವಿಶೇಷ ಅಭಿಯಾನವು ಯಶಸ್ವಿಯಾಗಿ ಸಂಪನ್ನಗೊಂಡಿತು.4
- ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo1
- ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು1
- ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.1
- ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ ಯರಗಟ್ಟಿ: ಅವಳಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ ಮಾತನಾಡಿ, ‘ತಾಲ್ಲೂಕಿನಲ್ಲಿ ಶೇ 25ಕ್ಕಿಂತ ಹೆಚ್ಚು ಪ್ರಮಾಣದ ಮಳೆ ಕೊರತೆಯಾಗಿದೆ. ಇದರಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಕಾಳು ಕಟ್ಟುವ ಹಂತದಲ್ಲಿದ್ದ ಹೆಸರು, ಉದ್ದು, ಗೋವಿನಜೋಳ ನೆಲ ಕಚ್ಚಿದೆ. ಅಲ್ಲದೆ ಶೇಂಗಾ, ಸೋಯಾ, ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳು ಸಹ ಸಂಪೂರ್ಣವಾಗಿ ಹಾಳಾಗಿವೆ’ ಎಂದು ಹೇಳಿದರು. ‘ಬಿತ್ತನೆ, ಕಳೆ ಸೇರಿದಂತೆ ಬೆಳೆಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದು, ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅರಿಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ತಾಲ್ಲೂಕುಗಳನ್ನು ಬರ ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ ಹಾಗೂ ಸಂಜುಕುಮಾರ ನವಲಗುಂದ ಮಾತನಾಡಿ, ‘ರೈತರ ಸಂಕಷ್ಟ ಪರಿಗಣಿಸಿ ವೈಜ್ಞಾನಿಕವಾಗಿ ಬೆಳೆ ಹಾನಿಯ ಸಮೀಕ್ಷೆ ನಡೆಸುವ ಮೂಲಕ ಖಚಿತಪಡಿಸಿಕೊಳ್ಳಬೇಕು. ಗೋ ಶಾಲೆ ತೆರೆಯಬೇಕು ಮತ್ತು ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ತೀವ್ರ ನಿಗಾ ವಹಿಸಬೇಕು’ ಎಂದು ಆಗ್ರಹಿಸಿದರು. ಪಟ್ಟಣದ ಮಹಾಂತ ದುರದುಂಡೇಶ್ವರ ಮಠದಿಂದ ಹೊರಟ ಪ್ರತಿಭಟನಾ ಮೆರವಣೆಗೆ ಬಾಗವಾ ಚೌಕ್, ಗಾಂಧಿ ವೃತದ ಮೂಲಕ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈಯರಗೆ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಕೃಷಿ ಅಧಿಕಾರಿ ಶಿವಪ್ರಕಾಶ ಪಾಟೀಲ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಮದುರ್ಗ ಮಂಡಳ ಅಧ್ಯಕ್ಷ ಡಾ. ಕೆ. ವ್ಹಿ. ಪಾಟೀಲ, ಬಿಜೆಪಿ ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ, ಸಂಜುಕುಮಾರ ನವಲಗುಂದ, ತಾ. ಪಂ ಮಾಜಿ ಅಧ್ಯಕ್ಷ ಪರ್ವತಗೌಡ ಪಾಟೀಲ, ಈರಣ್ಣಾ ಚಂದರಗಿ, ವೆಂಕಟೇಶ ದೇವರಡ್ಡಿ, ಗೌಡಪ್ಪ ಸವದತ್ತಿ, ವೆಂಕಣ್ಣಾ ಹುರಕನ್ನವರ, ಚೇತನ ಜಕಾತಿ ಕೃಷ್ಣಮೂರ್ತಿ ತೋರಗಲ್ಲ, ಮಹಾಂತೇಶ ಚೆನ್ನಗೌಡರ, ಆನಂದ ಅತ್ತೂಗೋಳ, ಮಹಾದೇವ ಮುರಗೋಡ, ಈರಣ್ಣಾ ವೀರಶೆಟ್ಟಿ, ಆನಂದ ಬಾಗೋಡಿ, ಸದಾನಂದ ಪಾಟೀಲ, ಕುಮಾರ ಹಿರೇಮಠ, ಬಸವರಾಜ ಕಟ್ಟಿಮನಿ, ಶಿವಾನಂದ ಪಟ್ಟಣಶೆಟ್ಟಿ, ಚಂದ್ರಪ್ಪ ಹೊಸಮನಿ, ಪಂಚು ಪಂಚನ್ನವರ, ಶಂಕರ ದಂಡೈನ್ನವರ, ಚಂದ್ರಶೇಖರ ಸವದತ್ತಿ, ಮೈತ್ರಾ ಹೊಂಗಲ, ಲಕ್ಷ್ಮೀ ಪಾಟೀಲ, ಕಸ್ತೂರಿ ಹೊಸೂರ, ಸುಜಾತ ಬೆನಕಟ್ಟಿ, ವಾಜಿರ್ಬಿ ಚೈಪ್ತಿ, ಸಿಕ್ಕುಬಾಯಿ ಕುಂಬಾರ ಸೇರಿದಂತೆ ಅನೇಕರು ಇದ್ದರು.1
- Dad and kids challenge! #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World The Lift/Balance Challenge Humorous Routines #DadSonChallenge Dad and kids challenge! #riyagowda @riyagowda #riyamshee_yogeshagowda #fathersonchallenge #fatheranddaughterchallenge Like Nastya and her Dad #dadchallenge #dadandson #daddaughterchallenge #familychallenge #dadlife Multi DO & Ryan's World The Lift/Balance Challenge Humorous Routines #DadSonChallenge3
- 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.4
- ಕಿತ್ತೂರು ಹೋರಾಟದಲ್ಲಿ ಚೆನ್ನಮ್ಮಳ ತ್ಯಾಗ, ದೇಶ ಪ್ರೇಮ ಅಪಾರ :ಸಂಶೋಧಕ ಯ. ರು. ಪಾಟೀಲ ಅಥಣಿ :ಕಿತ್ತೂರು ಹೋರಾಟದಲ್ಲಿ ತ್ಯಾಗ, ದೇಶ ಪ್ರೇಮ ಅಪಾರವಾಗಿತ್ತು. ಕಿತ್ತೂರು ಸೈನಿಕರು ಭಂಟರು,ವೀರರು, ಪ್ರಾಣದ ಹಂಗು ತೊರೆದು ಹೋರಾಟ ಮಾಡುವವರಾಗಿದ್ದರು.ವೇತನಕ್ಕಾಗಿ ಕೆಲಸ ಮಾಡುವವರಾಗಿರಲಿಲ್ಲ. ದೇಶ ಪ್ರೇಮಿಗಳಾಗಿದ್ದರು. ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ, ಸವಾಯಿ ಮಲ್ಲಸರ್ಜನಂತಹ ಅನೇಕ ವೀರರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ ಎಂದು ಬೆಳಗಾವಿಯ ಸಂಶೋಧಕ ವಾಗ್ಮಿ ಯ. ರು. ಪಾಟೀಲ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಥಣಿಯ ಕನ್ನಡ ವಿಭಾಗ ಹಾಗೂ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ 'ಕಿತ್ತೂರು ಸಂಸ್ಥಾನ ಮತ್ತು ರಾಣಿ ಚನ್ನಮ್ಮ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ ಸಿಂಹಾಸನಕ್ಕಾಗಿ ತಮ್ಮ ಮಗನಿಗೆ ಭೈರವ ಕಂಕಣ ಕಟ್ಟಿದ ಮಹಾನ್ ಹೋರಾಟಗಾರ್ತಿ ಕಿತ್ತೂರು ಚೆನ್ನಮ್ಮ. ಐತಿಹಾಸಿಕ ಮಾಹಿತಿಗಳು ಮತ್ತು ಹೊಸ ಸಾಹಿತ್ಯ ಕೃತಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಪ್ರಭಾರ ಪ್ರಾಚಾರ್ಯರಾದ ಪ್ರೊ. ಶಾಂತಿನಾಥ ಬಳೋಜ ಅವರು ಕಾರ್ಯಕ್ರಮ ಉದ್ಘಾಟಿಸಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಪ್ರಥಮ ಹೋರಾಟಗಾರ್ತಿ ಚೆನ್ನಮ್ಮ ಭಾರತದ ಇತಿಹಾಸದಲ್ಲಿ ಅಚ್ಚಳಿಯದ ಸ್ಥಾನ ಹೊಂದಿದ್ದಾರೆ ಎಂದು ಸ್ಮರಿಸಿದರು. ನಂತರ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯ. ರು. ಪಾಟೀಲ ಅವರು "ಕಿತ್ತೂರು ಸಂಸ್ಥಾನದ ಮೇಲೆ ಇತ್ತೀಚಿಗೆ ಬಂದ ಸಾಹಿತ್ಯ ಕೃತಿಗಳ ಅವಲೋಕನ" ಕುರಿತು ವಿಶೇಷ ಉಪನ್ಯಾಸ ನೀಡಿದರು. ಬೆಳಗಾವಿ ಕಿತ್ತೂರು ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಎಸ್. ಎಂ. ಗಂಗಾಧರಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಕಾರ್ಯಕ್ರಮದ ಮೂಲಕ ಕಿತ್ತೂರು ಸಂಸ್ಥಾನದ ಪರಿಚಯ ಅವಳ ಶೂರತನ, ವೀರತನ, ಧೈರ್ಯ ನಮಗೆ ಮತ್ತೆ ಮತ್ತೆ ಪುಟಿದೇಳಲು ಹುಮ್ಮಸ್ಸು ತುಂಬುತ್ತೆ.ಕಿತ್ತೂರು ಚೆನ್ನಮ್ಮನ ಕುರಿತು ನಾವೆಲ್ಲರೂ ತಿಳಿದುಕೊಳ್ಳಬೇಕು. ದೇಶ, ದೇಶಪ್ರೇಮ, ಸ್ವಾಭಿಮಾನ, ನಮ್ಮ ನರನಾಡಿಗಳಲ್ಲಿ ರಕ್ತ ಸಂಚಾರವಾಗುತ್ತದೆ. ತ್ಯಾಖರೇ ಎಂಬ ಇಂಗ್ಲಿಷ್ ಅಧಿಕಾರಿ ಹತ್ಯೆ ಆಗುತ್ತದೆ. ಸಹಾಯಕ ಸೈನ್ಯ ಪದ್ಧತಿ ಮೂಲಕ ಕಿತ್ತೂರಿನ ಮೇಲೆ ದಾಳಿ ಮಾಡುತ್ತಾರೆ. ಬ್ರಿಟಿಷರಿಗೆ ನಮ್ಮ ದುಷ್ಟ ಜನರ ಸಹಕಾರದಿಂದ ಮೂರನೇ ದಾಳಿ ಮೂಲಕ ಅರಮನೆ ಧ್ವಂಸ ಆಗುತ್ತದೆ.ಆದರೆ ಇಂದು ಚೆನ್ನಮ್ಮಳಿಗೆ ಸಾಕಷ್ಟು ಪ್ರಚಾರ ಸಿಗದೇ ಇರೋದಕ್ಕೆ ನಮ್ಮ ವ್ಯವಸ್ಥೆ ನಿರ್ಲಕ್ಷ ಕಾರಣ ಎಂದು ಹೇಳಿದರು. ಈ ವೇಳೆ ಕನ್ನಡ ವಿಭಾಗದ ಮುಖ್ಯಸ್ಥರಾದ ಸಂತೋಷ ಉಂಡಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ವಿಭಾಗದ ಬಸಯ್ಯ ಮಠಪತಿ ಅವರು ಉಪಸ್ಥಿತರಿದ್ದರು. ಈ ವೇಳೆ ಡಾ ವಿಜಯ ಕಾಂಬಳೆ, ಡಾ ಪದ್ಮಶ್ರೀ, ಡಾ ಆರ್ ಎಸ್ ದೊಡ್ಡನಿಂಗಪ್ಪಗೋಳ, ಪ್ರೋ ಪಿ ಎಲ್ ಪೂಜಾರಿ,ಡಾ. ಶಿವಾನಂದ ಹೆಳವರ,ಡಾ. ಆರ್ ಜಿ ಗೊಂಧಳೆ,ಡಾ. ಎ ಜಿ ಮಾದರ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.4