logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪತ್ರಕರ್ತ ಶಿವಶರಣ ಅವರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣ ಖಂಡನೀಯ. ವಿಜಯಪುರ : ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ರಚಿಸಿ ಅಕ್ರಮ ದಂಧೆಕೋರರ ಜಾಲ ಹಾಗೂ ಅವರ ಹಿಂದೆ ಇರುವ ಎಲ್ಲ ವ್ಯಕ್ತಿಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲ ಹಾಗೂ ಪಾಲಕರ ಒಕ್ಕೂಟದಿಂದ ಜಿಲ್ಲಾಧಿಕಾರಿ ಡಾ. ಆನಂದ ಅವರÀ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ವಿನೋದ ಖೇಡ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ಜನಪರ ಯೋಜನೆಯಾದ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮ ಸಂಗ್ರಹ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಅಕ್ರಮ ಚಟುವಟಿಕೆ ಕುರಿತು ಪತ್ರಕರ್ತ ಪರಶುರಾಮ ಶಿವಶರಣ ಅವರು 20-08-2026 ರ ರಂದು ಹೊಸ ದಿಗಂತ ಪತ್ರಿಕೆಯಲ್ಲಿ ‘ಬೇರು ಬಿಟ್ಟ ಅಕ್ರಮ ದಂಧೆಕೋರರ ಜಾಲ, ಕಾಳಸಂತೆಕೋರರಿAದ ಮಹಾರಾಷ್ಟ್ರಕ್ಕೆ ಸಾಗಣೆ, ಅನ್ನಭಾಗ್ಯ ಅಕ್ಕಿ ಖದೀಮರಿಗೆ ವಿಜಯಪುರ ಸ್ವರ್ಗ' ಎಂಬ ಶಿರ್ಷಿಕೆಯಡಿ ವಿಶೇಷ ವರದಿ ಮಾಡುವ ಮೂಲಕ ಸರಕಾರದ ಜನಪರ ಯೋಜನೆಯು ಅಕ್ರಮ ದಂಧೆಕೋರರಿAದ ದುರ್ಬಳಕೆಯಾಗುತ್ತಿರುವ ಬಗ್ಗೆ ಸರಕಾರ ಗಮನಕ್ಕೆ ತಂದಿದ್ದರು. ಸರ್ಕಾರದ ಕಲ್ಯಾಣ ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪತ್ರಕರ್ತ ಪರಶುರಾಮ ಶಿವಶರಣ ಅವರ ವರದಿ ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಸರಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಅಕ್ರಮ ದಂಧೆಕೋರರು ಪತ್ರಕರ್ತ ಪರಶುರಾಮ ಶಿವಶರಣ ಅವರ ಮೇಲೆ ಕುಪಿತಗೊಂಡು ಅವರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣ ಖಂಡನೀಯ ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಾಲಿಕಾರ ಅವರು ಮಾತನಾಡಿ, ಸರಕಾರದ ಜನಪರ ಯೋಜನೆಯ ದುರ್ಬಳಕೆ ಕುರಿತು ವರದಿ ಮಾಡಿದ ಪತ್ರಕರ್ತರ ಮನೆಗೆ ಹೋಗಿ ಬೆದರಿಕೆ ಹಾಕುವ ಮಟ್ಟಕ್ಕೆ ಜಿಲ್ಲೆಯಲ್ಲಿ ಅಕ್ರಮ ದಂಧೆಕೋರರು ಬೆಳೆದಿದ್ದು, ಪೊಲೀಸ್ ಇಲಾಖೆಯ ಹಾಗೂ ಕಾನೂನಿನ ಭಯ ಇಲ್ಲದೇ ಇರುವುದು ನಾಚಿಕೆಗೇಡಿನ ಸಂಗತಿ. ಇಂತಹ ಕೃತ್ಯಗಳನ್ನು ನಾಗರೀಕ ಸಮಾಜ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪತ್ರಕರ್ತರನ್ನು ಬೆದರಿಸಿ ಅಕ್ರಮ ದಂಧೆಗಳನ್ನು ಮುಚ್ಚಿಹಾಕಲು ಯತ್ನಿಸುವ ಸಮಾಜಘಾತುಕ ಶಕ್ತಿಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಯನ್ನು ತಡೆಗಟ್ಟಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರಾಜು ತಡಲಗಿ, ಸಂತೋಷ ಕಲಗುಡಿ, ರಾಜು ಕುಮಟಗಿ, ಮಲ್ಲಿಕಾರ್ಜುನ ಗಣಿ, ಅಂಬಣ್ಣ ಗುನ್ನಾಪುರ, ಬಾಬು ಕೋಟಿಗುಂಡಿ, ಅನೀಲ ಪವಾರ, ಅಶೋಕ ವಾಲಿಕಾರ, ಪರಶುರಾಮ ಕುಚಬಾಳ, ಅನೀಲ ಇಕಡೆ, ಅಶೋಕ ಚೋಳಕೆ ಸೇರಿದಂತೆ ಮುಂತಾದವರು ಇದ್ದರು.

1 hr ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago
e99451e4-4875-4ee6-bcfe-b3cca9118856

ಪತ್ರಕರ್ತ ಶಿವಶರಣ ಅವರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣ ಖಂಡನೀಯ. ವಿಜಯಪುರ : ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ರಚಿಸಿ ಅಕ್ರಮ ದಂಧೆಕೋರರ ಜಾಲ ಹಾಗೂ ಅವರ ಹಿಂದೆ ಇರುವ ಎಲ್ಲ ವ್ಯಕ್ತಿಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲ ಹಾಗೂ ಪಾಲಕರ ಒಕ್ಕೂಟದಿಂದ ಜಿಲ್ಲಾಧಿಕಾರಿ ಡಾ. ಆನಂದ ಅವರÀ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ವಿನೋದ ಖೇಡ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ಜನಪರ ಯೋಜನೆಯಾದ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮ ಸಂಗ್ರಹ ಹಾಗೂ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಅಕ್ರಮ ಚಟುವಟಿಕೆ ಕುರಿತು ಪತ್ರಕರ್ತ ಪರಶುರಾಮ ಶಿವಶರಣ ಅವರು 20-08-2026 ರ ರಂದು ಹೊಸ ದಿಗಂತ ಪತ್ರಿಕೆಯಲ್ಲಿ ‘ಬೇರು ಬಿಟ್ಟ ಅಕ್ರಮ ದಂಧೆಕೋರರ ಜಾಲ, ಕಾಳಸಂತೆಕೋರರಿAದ ಮಹಾರಾಷ್ಟ್ರಕ್ಕೆ ಸಾಗಣೆ, ಅನ್ನಭಾಗ್ಯ ಅಕ್ಕಿ ಖದೀಮರಿಗೆ ವಿಜಯಪುರ ಸ್ವರ್ಗ' ಎಂಬ ಶಿರ್ಷಿಕೆಯಡಿ ವಿಶೇಷ ವರದಿ ಮಾಡುವ ಮೂಲಕ ಸರಕಾರದ ಜನಪರ ಯೋಜನೆಯು ಅಕ್ರಮ ದಂಧೆಕೋರರಿAದ ದುರ್ಬಳಕೆಯಾಗುತ್ತಿರುವ ಬಗ್ಗೆ ಸರಕಾರ ಗಮನಕ್ಕೆ ತಂದಿದ್ದರು. ಸರ್ಕಾರದ ಕಲ್ಯಾಣ ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪತ್ರಕರ್ತ ಪರಶುರಾಮ ಶಿವಶರಣ

2bf8757a-8a5d-43f9-bf07-1226effd2843

ಅವರ ವರದಿ ಸಮಾಜಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ಸರಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಅಕ್ರಮ ದಂಧೆಕೋರರು ಪತ್ರಕರ್ತ ಪರಶುರಾಮ ಶಿವಶರಣ ಅವರ ಮೇಲೆ ಕುಪಿತಗೊಂಡು ಅವರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಪ್ರಕರಣ ಖಂಡನೀಯ ಕೂಡಲೇ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಾಲಿಕಾರ ಅವರು ಮಾತನಾಡಿ, ಸರಕಾರದ ಜನಪರ ಯೋಜನೆಯ ದುರ್ಬಳಕೆ ಕುರಿತು ವರದಿ ಮಾಡಿದ ಪತ್ರಕರ್ತರ ಮನೆಗೆ ಹೋಗಿ ಬೆದರಿಕೆ ಹಾಕುವ ಮಟ್ಟಕ್ಕೆ ಜಿಲ್ಲೆಯಲ್ಲಿ ಅಕ್ರಮ ದಂಧೆಕೋರರು ಬೆಳೆದಿದ್ದು, ಪೊಲೀಸ್ ಇಲಾಖೆಯ ಹಾಗೂ ಕಾನೂನಿನ ಭಯ ಇಲ್ಲದೇ ಇರುವುದು ನಾಚಿಕೆಗೇಡಿನ ಸಂಗತಿ. ಇಂತಹ ಕೃತ್ಯಗಳನ್ನು ನಾಗರೀಕ ಸಮಾಜ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪತ್ರಕರ್ತರನ್ನು ಬೆದರಿಸಿ ಅಕ್ರಮ ದಂಧೆಗಳನ್ನು ಮುಚ್ಚಿಹಾಕಲು ಯತ್ನಿಸುವ ಸಮಾಜಘಾತುಕ ಶಕ್ತಿಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಯನ್ನು ತಡೆಗಟ್ಟಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರಾಜು ತಡಲಗಿ, ಸಂತೋಷ ಕಲಗುಡಿ, ರಾಜು ಕುಮಟಗಿ, ಮಲ್ಲಿಕಾರ್ಜುನ ಗಣಿ, ಅಂಬಣ್ಣ ಗುನ್ನಾಪುರ, ಬಾಬು ಕೋಟಿಗುಂಡಿ, ಅನೀಲ ಪವಾರ, ಅಶೋಕ ವಾಲಿಕಾರ, ಪರಶುರಾಮ ಕುಚಬಾಳ, ಅನೀಲ ಇಕಡೆ, ಅಶೋಕ ಚೋಳಕೆ ಸೇರಿದಂತೆ ಮುಂತಾದವರು ಇದ್ದರು.

More news from ಕರ್ನಾಟಕ and nearby areas
  • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ
    1
    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ಲಿ ಪೂಜೆ ನೆರವೇರಿಸಿದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    35 min ago
  • ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    4
    ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. 
ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಹಾವೇರಿ, ಹಾವೇರಿ, ಕರ್ನಾಟಕ•
    19 hrs ago
  • ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    1
    ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ
ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    16 hrs ago
  • ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    1
    ತುಮಕೂರು ಈದ್ ಮಿಲಾದ್ ಹಬ್ಬದ
 ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ 
ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    3 hrs ago
  • ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    1
    ಕಳಪೆ ಸಿಸಿ ರಸ್ತೆ ಕಾಮಗಾರಿ ತಡೆಗೆ ಆಗ್ರಹಿಸಿ ರೈತ ಸಂಘದಿಂದ ಕೆ.ಆರ್.ಐ.ಡಿ ಎಲ್ ಅಧಿಕಾರಿಗೆ ಮನವಿ

ಕೂಡ್ಲಿಗಿ: ತಾಲೂಕಿನ ಈಚಲಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ ಕೇಳಿಬಂದಿದ್ದು, ಕಾಮಗಾರಿ ತಡೆದು ಗುಣಮಟ್ಟ ಪರಿಶೀಲನೆ ಹಾಗೂ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ವತಿಯಿಂದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದಲ್ಲಿ ಹಳೆಯ ರಸ್ತೆಯ ಮೇಲೆಯೇ ಹೊಸ ಸಿಸಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ರೈತ ಸಂಘದ ಪದಾಧಿಕಾರಿಗಳು ಆರೋಪಿಸಿದರು. ಕಾಮಗಾರಿಯಲ್ಲಿ ನಿಯಮಾನುಸಾರ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಹಾಗೂ ಕಾಮಗಾರಿಯ ಸಂಪೂರ್ಣ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಅಥವಾ ಯಾವುದೇ ಅಕ್ರಮ ಕಂಡುಬಂದಲ್ಲಿ, ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಕಾಮಗಾರಿಗೆ ಹೊಣೆಗಾರ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಅಲ್ಲದೆ, ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು, ಅಂದಾಜು, ಬಳಸಲಾಗುತ್ತಿರುವ ಸಾಮಗ್ರಿಗಳ ಗುಣಮಟ್ಟ ಹಾಗೂ ಸ್ಥಳದಲ್ಲಿನ ಕಾಮಗಾರಿಯನ್ನು ಪರಿಶೀಲಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕೂಡ್ಲಿಗಿ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    52 min ago
  • ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.
    1
    ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ
ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    56 min ago
  • Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict
    1
    Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane.

#leopardcubs 
#leopard 
#channapattana 
#ramangaradistrict 
#bangaloresouthdistrict
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    2 hrs ago
  • ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    1
    ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ
ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು.
ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು.
ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.