Shuru
Apke Nagar Ki App…
All About,State of affairs of Congress Party organization members in #NRConstituency #Mysuru *ಭಾರತ ನಲ್ಲಿ ವೈರಲ್*
Md Aleemulla Shariff
All About,State of affairs of Congress Party organization members in #NRConstituency #Mysuru *ಭಾರತ ನಲ್ಲಿ ವೈರಲ್*
More news from Karnataka and nearby areas
- ಪ್ರಜಾಪ್ರಭುತ್ವ ದಿನಾಚರಣೆಗೆ ಶಾಸಕರು, ತಹಶೀಲ್ದಾರ್ ಗೈರು.. ಅಧಿಕಾರಿಗಳ ಗೈರಿಗೆ ದಸಂಸ ಆಕ್ರೋಶ — ಕಾಟಾಚಾರದ ಆಚರಣೆ ಆರೋಪ ನಂಜನಗೂಡು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಶಾಸಕರು ಹಾಗೂ ತಹಶೀಲ್ದಾರ್ ಗೈರುಹಾಜರಾಗಿದ್ದಕ್ಕೆ ದಲಿತ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಪೀಠಿಕೆಯ ಭಾವಚಿತ್ರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಭೆ ಆರಂಭವಾಗುತ್ತಿದ್ದಂತೆ ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ದಿನಾಚರಣೆಗೆ ಸಮರ್ಪಕವಾಗಿ ಆಹ್ವಾನ ನೀಡದೆ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಪಿತಾಮಹರಿಗೆ ಗೌರವ ಸಲ್ಲಿಸುವ ದಿನದಂದೇ ಜವಾಬ್ದಾರಿಯುತ ಅಧಿಕಾರಿಗಳು ಗೈರಾಗಿರುವುದು ಖಂಡನೀಯ. ಗೈರುಹಾಜರಾದ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಬಸವಣ್ಣ ಹಾಗೂ ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ವಿಜಯಕುಮಾರ್ ಆಗ್ರಹಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೇ ಕಾರ್ಯಕ್ರಮಕ್ಕೆ ಗೈರಾಗಿರುವುದು ಸರಿಯಲ್ಲ. ಇಂತಹ ನಡೆ ಪ್ರಜಾಪ್ರಭುತ್ವದ ಮೇಲಿನ ಅವರ ಬದ್ಧತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ತಹಶೀಲ್ದಾರ್ ಗ್ರೇಡ್–2 ನಂದಕಿಶೋರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು, ಕಂದಾಯ ಆಡಳಿತ ಅಧಿಕಾರಿ ರಾಜು, ದಸಂಸ ಸಂಚಾಲಕ ಶಂಕರಪುರ ಸುರೇಶ್, ಹಗಿನವಾಳು ಚಿಕ್ಕಣ್ಣ, ದೇವರಸನಹಳ್ಳಿ ಪುಟ್ಟಸ್ವಾಮಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.3
- ಮಾನವೀಯತೆ ಮೆರೆದ ಮೈಸೂರು ಚಾರಿಟೇಬಲ್ ಟ್ರಸ್ಟ್: ಬಡ ವ್ಯಾಪಾರಿಗಳಿಗೆ ಗೌರಿ ಗಣೇಶ ಹಬ್ಬದ ಉಡುಗೊರೆ ವಿತರಣೆ! ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೀದಿ ಬದಿ ವ್ಯಾಪಾರಿಗಳಿಗೆ ಹಬ್ಬದ ಕೊಡುಗೆ ನೀಡಿದ ಡಾ. ಇಮ್ರಾನ್ ಖಾನ್ | ಮೈಸೂರು ಚಾರಿಟೇಬಲ್ ಟ್ರಸ್ಟ್1
- ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಪರಿಹಾರ: ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯ- ಕೆಆರ್ ಎಸ್ ನೀಡರಿನ ಮಟ್ಟ ಕುಸಿತ ಕಂಡಿರುವ ಹಿನ್ನೆಲೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಹೇಮಾವತಿ ಜಲಾಶಯ ದಿಂದ ನೀರು ಹರಿಸಲಾಗುತ್ತಿದೆ. ಆದರೆ, ಕೆಲವೆಡೆ ರೈತರು ನೀರು ತಡೆಯುತ್ತಿರುವುದು ಗಮನಕ್ಕೆ ಬಂದಿದೆ. ಕೆ.ಆರ್. ಪೇಟೆ ಹಾಗೂ ಪಾಂಡವಪುರ ಭಾಗದ ರೈತರು ಸಹಕರಿಸಿ, ಮದ್ದೂರು ಹಾಗೂ ಮಳವಳ್ಳಿ ಭಾಗದ ಕೆರೆಗಳು ತುಂಬಲು ಅವಕಾಶ ಮಾಡಿಕೊಡಬೇಕು. ಅಗತ್ಯವಿದ್ದರೆ ಪೊಲೀಸ್ ಭದ್ರತೆ ಪಡೆದು ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತು ವಾರಿ ಸಚಿವ ಚಲುವ ರಾಯಸ್ವಾಮಿ ಹೇಳಿದ್ರು. ಮಂಡ್ಯದಲ್ಲಿಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆ ಸಭೆಯಲ್ಲಿ ಬಾಗವಹಿಸಿ ಮಾತನಾಡಿದ ಅವರುಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪೀಠ ಮೂರು ದಿನ ಕಾರ್ಯನಿರ್ವಹಿಸದ ಕಾರಣ, ಕಾವೇರಿ ನೀರು ನಿಯಂತ್ರಣ ಸಮಿತಿಗೆ (CWRC) ಇಂದು ಮಧ್ಯಾಹ್ನವೇ ವಿಶೇಷ ಅರ್ಜಿ ಸಲ್ಲಿಸಿ ರಾಜ್ಯದ ನೀರಿನ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡಲಾಗುವುದು. ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆ ಜಾರಿ ಮಾತ್ರ ಶಾಶ್ವತ ಪರಿಹಾರ ಎಂದು ಅವರು ಪುನರುಚ್ಚರಿಸಿದರು.1
- 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ನರೇಂದ್ರಸ್ವಾಮಿ ಉದ್ಘಾಟಿಸಿದರು. ಈ ವೇಳೆ 23 ವಾರ್ಡುನ 896 ನಿವೇಶನ ಫಲಾನುಭವಿಗಳಿಗೆ ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು ಫಲಾನುಭವಿಗಳು ಲಾಟರಿ ಮೂಲಕ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.1
- ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ ಗೌರಿ ಗಣೇಶ ಹಬ್ಬದ ಅಂಗವಾಗಿ ಹೆಬ್ಬಣಿ ಗ್ರಾಮದಲ್ಲಿ ಕ್ರೀಡಾಕೂಟ: ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಳವಳ್ಳಿ:ತಾಲೂಕಿನ ಹೆಬ್ಬಣಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಗ್ರಾಮಸ್ಥರ ವತಿಯಿಂದ ಸೋಮವಾರ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭದಲ್ಲಿ ಮಣ್ಣಿನ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು. ಪರಿಸರ ಸ್ನೇಹಿ ಮಣ್ಣಿನ ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಗ್ರಾಮಂತರ ವೃತ್ತ ನಿರೀಕ್ಷಕ ಬಸವರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು . ಹಬ್ಬಗಳಲ್ಲಿ ಕೇವಲ ಪೂಜೆಗೆ ಸೀಮಿತವಾಗಬಾರದು. ಇಂತಹ ಕ್ರೀಡಾಕೂಟಗಳಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ, ಒಗ್ಗಟ್ಟು ಬೆಳೆಯುತ್ತದೆ. ಮೊಬೈಲ್ ಬಿಟ್ಟು ಮೈದಾನಕ್ಕೆ ಬರಬೇಕು. ಮಾದಕ ವ್ಯಸನಗಳಿಂದ ದೂರವಿರಬೇಕು" ಎಂದು ಅವರು ಕಿವಿಮಾತು ಹೇಳಿದರು. *ಕಾರ್ಯಕ್ರಮದಲ್ಲಿ* ಗ್ರಾಮದ ಎಲ್ಲಾ ಜನಾಂಗದ ಮುಖಂಡರು, ಯುವಕ ಸಂಘದ ಪದಾಧಿಕಾರಿಗಳು, ಮಹಿಳೆಯರು ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.1
- ದಸರಾ ಮಾಡದಿದ್ದರೆ ಉಪವಾಸ ಸತ್ಯಾಗ್ರಹ : ಕಲಾವಿದ ಶಿವಶಂಕರ ಚೆಟ್ಟು ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಕಲಾವಿದ ಶಿವಶಂಕರ ಚೆಟ್ಟು ಮಾತನಾಡಿ ಈ ಬಾರಿ ಚಾಮರಾಜನಗರ ದಸರಾ ಮಹೋತ್ಸವ ನಡೆಸದಿದ್ದರೆ ಜಿಲ್ಲೆಯ ಕಲಾವಿದರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.1
- All About,senior Congressman from Telengana who are accused of Encroachment of #WaqfProperties *ಭಾರತ ನಲ್ಲಿ ವೈರಲ್*1
- ಮಾನವೀಯತೆ ಮೆರೆದ ಮೈಸೂರು ಚಾರಿಟೇಬಲ್ ಟ್ರಸ್ಟ್: ಬಡ ವ್ಯಾಪಾರಿಗಳಿಗೆ ಗೌರಿ ಗಣೇಶ ಹಬ್ಬದ ಉಡುಗೊರೆ ವಿತರಣೆ! ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೀದಿ ಬದಿ ವ್ಯಾಪಾರಿಗಳಿಗೆ ಹಬ್ಬದ ಕೊಡುಗೆ ನೀಡಿದ ಡಾ. ಇಮ್ರಾನ್ ಖಾನ್ | ಮೈಸೂರು ಚಾರಿಟೇಬಲ್ ಟ್ರಸ್ಟ್ಮಾನವೀಯತೆ ಮೆರೆದ ಮೈಸೂರು ಚಾರಿಟೇಬಲ್ ಟ್ರಸ್ಟ್: ಬಡ ವ್ಯಾಪಾರಿಗಳಿಗೆ ಗೌರಿ ಗಣೇಶ ಹಬ್ಬದ ಉಡುಗೊರೆ ವಿತರಣೆ!1
- ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರು ಅರಿಯಬೇಕು- ಎನ್. ಚಲುವರಾಯಸ್ವಾಮ ಮಂಡ್ಯ- ಜಾತಿ, ಧರ್ಮ, ಮೇಲು-ಕೀಳು, ಅಂತಸ್ತು, ಅಧಿಕಾರ ಹಾಗೂ ಆರ್ಥಿಕ ಅಸಮಾನತೆಗಳನ್ನು ಮೀರಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ನ್ಯಾಯ, ಸ್ವಾತಂತ್ರ್ಯ ಹಾಗೂ ಅವಕಾಶಗಳನ್ನು ಒದಗಿಸುವ ವ್ಯವಸ್ಥೆಯೇ ಪ್ರಜಾಪ್ರಭುತ್ವವಾಗಿದ್ದು, ಇದರ ಮೌಲ್ಯಗಳನ್ನು ಯುವಜನರು ಆಳವಾಗಿ ಅರಿತುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವು ಕೇವಲ ಆಡಳಿತ ವ್ಯವಸ್ಥೆಯಲ್ಲ. ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಗೌರವವನ್ನು ಸಂರಕ್ಷಿಸುವ ವ್ಯವಸ್ಥೆಯಾಗಿದೆ. ಈ ಮೌಲ್ಯಗಳನ್ನು ನಮಗೆ ನೀಡಿರುವ ಸಂವಿಧಾನವನ್ನು ಗೌರವಿಸಿ, ಅದರ ಆಶಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಪ್ರತಿ ವರ್ಷ ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ವಿಶ್ವದಾದ್ಯಂತ ಪ್ರಜಾಪ್ರಭುತ್ವದ ಮೌಲ್ಯಗಳು, ಜನರ ಹಕ್ಕುಗಳು ಹಾಗೂ ಜವಾಬ್ದಾರಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಮ್ಮ ದೇಶದಲ್ಲಿಯೂ ಕೇಂದ್ರ, ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಗುತ್ತಿದೆ ಎಂದು ತಿಳಿಸಿದರು. *ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಅಗತ್ಯ* ಇಂದಿನ ಯುವಜನರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಎಷ್ಟು ಆಳವಾಗಿ ಅರ್ಥಮಾಡಿಕೊಳ್ಳುತ್ತಾರೋ, ಅಷ್ಟು ಬಲಿಷ್ಠವಾಗಿ ಹಾಗೂ ಜವಾಬ್ದಾರಿಯುತವಾಗಿ ದೇಶವನ್ನು ಮುನ್ನಡೆಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಎಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಂವಿಧಾನ, ಪ್ರಜಾಪ್ರಭುತ್ವ, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ತಿಳಿದುಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು. ದೇಶದ ಸಂವಿಧಾನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಸದಸ್ಯರನ್ನು ಗೌರವದಿಂದ ಸ್ಮರಿಸಬೇಕು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನಾಯಕತ್ವ ನೀಡಿದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜನಸಾಮಾನ್ಯರು ಮಾಡಿದ ತ್ಯಾಗ ಮತ್ತು ಹೋರಾಟದ ಫಲವಾಗಿ ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪುಗೊಂಡಿದೆ ಎಂದರು. *ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನ ಅರಿವು ಮೂಡಿಸಿ* ಶಾಲಾ-ಕಾಲೇಜುಗಳ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಂವಿಧಾನವು ಕೇವಲ ಪಠ್ಯಪುಸ್ತಕದ ವಿಷಯವಾಗದೆ, ವಿದ್ಯಾರ್ಥಿಗಳ ಜೀವನದ ಭಾಗವಾಗಬೇಕು. ಇಂದಿನ ಮಕ್ಕಳು ನಾಳಿನ ದೇಶದ ನಾಯಕರು. ಅವರಲ್ಲಿ ಸಂವಿಧಾನ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸಮಾನತೆಯ ಮನೋಭಾವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ರವರು ಕಾರ್ಯಕ್ರಮದಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಭೋದಿಸಿದರು* ಕಾರ್ಯಕ್ರಮದಲ್ಲಿ ಮಂಡ್ಯ ನಗರಾಭಿವೃದ್ಥಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ. ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ವಿಜಯಲಕ್ಷ್ಮಿ ರಘುನಂದನ್, ಜಿಲ್ಲಾಧಿಕಾರಿಗಳಾದ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಆರ್ ನಂದಿನಿ, ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ್, ಡಿ.ವೈ.ಎಸ್.ಪಿ ಹೆಚ್. ಲಕ್ಷ್ಮೀನಾರಾಯಣ ಪ್ರಸಾದ್, ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.1