‘ಮಾನವೀಯ ನೆರವಿಗೆ ಕೃತಜ್ಞತೆಯಾಗಿ ನಾವೇ ಜಿಪಿಎ ಕೊಟ್ಟಿದ್ದೇವೆ’: ಅಕ್ರಮ ಖಾತೆ ಆರೋಪ ತಳ್ಳಿಹಾಕಿದ ಕುಟುಂಬಸ್ಥರು, ದಾಖಲೆ ಸಮೇತ ರಮೇಶ್ ಸ್ಪಷ್ಟನೆ. ತುರುವೇಕೆರೆ: ರೈತ ಸಂಘ ತನ್ನ ವಿರುದ್ಧ ಮಾಡಿರುವ ಅಕ್ರಮ ಖಾತೆ ವರ್ಗಾವಣೆ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಹಳೆಯ ರಾಜಕೀಯ ದ್ವೇಷದಿಂದ ಸುಳ್ಳು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ನಾಗೇಗೌಡನಪಾಳ್ಯದ ಮಾಜಿ ವಿಎಸ್‌ಎಸ್‌ಎನ್ ಅಧ್ಯಕ್ಷ ರಮೇಶ್ ಪಿ. ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಮೀನಿನ ಮೂಲ ದಾಖಲೆಗಳು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಫೋಟೋಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ಮಾನವೀಯ ನೆರವು ಮತ್ತು ಕಾನೂನುಬದ್ಧ ಒಪ್ಪಂದ: ಮುಹಮ್ಮದ್ ಗೌಸ್ ಎಂಬುವವರಿಗೆ ಸರ್ಕಾರದಿಂದ ಸುಮಾರು 3 ಎಕರೆ ದರಖಾಸ್ತು ಜಮೀನು ಮಂಜೂರಾಗಿತ್ತು. 1991–92ರಲ್ಲಿ ಅರ್ಜಿ ಸಲ್ಲಿಸಿ, 2008ರಲ್ಲಿ ಸಾಗುವಳಿ ಚೀಟಿ ಪಡೆದು, 2015ರಲ್ಲಿ ಖಾತೆ ಮಾಡಿಸಿಕೊಂಡು ಅವರೇ ಸಾಗುವಳಿ ಅನುಭವದಲ್ಲಿದ್ದರು. 80 ವರ್ಷ ದಾಟಿದ್ದ ಮುಹಮ್ಮದ್ ಗೌಸ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ಕುಟುಂಬದ ಕೋರಿಕೆಯಂತೆ ಮಾನವೀಯ ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ವೆಚ್ಚ ಹಾಗೂ ಆರ್ಥಿಕ ನೆರವು ನೀಡಲಾಗಿತ್ತು. ಆ ಸಮಯದಲ್ಲಿ ನಿಯಮಾನುಸಾರ ಒಪ್ಪಂದ (ಅಗ್ರಿಮೆಂಟ್) ಮಾಡಿಕೊಳ್ಳಲಾಗಿತ್ತು ಎಂದು ರಮೇಶ್ ವಿವರಿಸಿದರು. ಮುಹಮ್ಮದ್ ಗೌಸ್ ಅವರ ನಿಧನದ ಬಳಿಕ, ತಮಗೆ ಯಾವುದೇ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಅವರ ಪತ್ನಿ ಮುಮ್ತಾಜ್ ಹಾಗೂ ಐವರು ಮಕ್ಕಳು ಸ್ವಇಚ್ಛೆಯಿಂದ ಕಾನೂನುಬದ್ಧವಾಗಿ ತಮ್ಮ ಹೆಸರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೋಂದಣಿ ಮಾಡಿಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಣ್ಣೀರಿಟ್ಟ ಮುಹಮ್ಮದ್ ಗೌಸ್ ಕುಟುಂಬಸ್ಥರು: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಭಾವುಕರಾಗಿ ಕಣ್ಣೀರು ಹಾಕುತ್ತಾ ಮಾತನಾಡಿ, "ಸುಮಾರು 20 ವರ್ಷಗಳಿಂದ ನಾವೇ ಜಮೀನಿನ ಸ್ವಾಧೀನ ಅನುಭವದಲ್ಲಿದ್ದೇವೆ. ಸರ್ಕಾರದ ಸಾಗುವಳಿ ಚೀಟಿ, ಖಾತೆ ಸೇರಿದಂತೆ ಎಲ್ಲಾ ಸಕ್ರಮ ದಾಖಲೆಗಳು ನಮ್ಮ ಬಳಿಯೇ ಇವೆ. ನಮ್ಮ ಸಂಕಷ್ಟದ ಪರಿಸ್ಥಿತಿಯಲ್ಲಿ ರಮೇಶ್ ಅವರು ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಲು ಪ್ರಯತ್ನಿಸಿದರು. ಅವರಿಗೆ ಮೋಸವಾಗಬಾರದೆಂದು ಇಡೀ ಕುಟುಂಬ ಒಟ್ಟಾಗಿ ಜಿಪಿಎ ಮಾಡಿಕೊಟ್ಟಿದ್ದೇವೆ. ಇದರಲ್ಲಿ ಯಾರ ಒತ್ತಾಯವೂ ಇಲ್ಲ, ಯಾವುದೇ ಅಕ್ರಮವೂ ನಡೆದಿಲ್ಲ" ಎಂದು ತಿಳಿಸಿದರು. ಎಲ್ಲವೂ ಕಾನೂನುಬದ್ಧ, ತನಿಖೆಗೆ ಸಿದ್ಧ: ತಹಶೀಲ್ದಾರ್ ಅವರ ಆದೇಶದಂತೆ ತಾಲೂಕು ಸರ್ವೆ ಇಲಾಖೆಯಿಂದ ಜಾಗದ ಅಧಿಕೃತ ನಕ್ಷೆ (ಸ್ಕೆಚ್) ಮಾಡಿಸಲಾಗಿದೆ. ಜಮೀನು ನೀಡಿದ ಕುಟುಂಬಕ್ಕಾಗಲಿ ಅಥವಾ ಅಕ್ಕಪಕ್ಕದ ರೈತರಿಗಾಗಲಿ ಯಾವುದೇ ತಕರಾರಿಲ್ಲದಿರುವಾಗ, ಕೆಲವರು ರೈತ ಸಂಘದ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ತೇಜೋವಧೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ತಾನು ಸರ್ಕಾರಕ್ಕಾಗಲಿ, ಜನರಿಗಾಗಲಿ ನಯಾಪೈಸೆ ಮೋಸ ಮಾಡಿಲ್ಲ. ಈ ವಿಚಾರದಲ್ಲಿ ಎಂತಹ ತನಿಖೆ ಎದುರಿಸಲೂ ಸಿದ್ಧ ಎಂದು ರಮೇಶ್ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಬೀ ಹಾಗೂ ಪುತ್ರ ನೂರುಲ್ಲಾ ಉಪಸ್ಥಿತರಿದ್ದರು.
‘ಮಾನವೀಯ ನೆರವಿಗೆ ಕೃತಜ್ಞತೆಯಾಗಿ ನಾವೇ ಜಿಪಿಎ ಕೊಟ್ಟಿದ್ದೇವೆ’: ಅಕ್ರಮ ಖಾತೆ ಆರೋಪ ತಳ್ಳಿಹಾಕಿದ ಕುಟುಂಬಸ್ಥರು, ದಾಖಲೆ ಸಮೇತ ರಮೇಶ್ ಸ್ಪಷ್ಟನೆ. ತುರುವೇಕೆರೆ: ರೈತ ಸಂಘ ತನ್ನ ವಿರುದ್ಧ ಮಾಡಿರುವ ಅಕ್ರಮ ಖಾತೆ ವರ್ಗಾವಣೆ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಹಳೆಯ ರಾಜಕೀಯ ದ್ವೇಷದಿಂದ ಸುಳ್ಳು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ನಾಗೇಗೌಡನಪಾಳ್ಯದ ಮಾಜಿ ವಿಎಸ್‌ಎಸ್‌ಎನ್ ಅಧ್ಯಕ್ಷ ರಮೇಶ್ ಪಿ. ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಮೀನಿನ ಮೂಲ ದಾಖಲೆಗಳು ಹಾಗೂ ಆಸ್ಪತ್ರೆಯ ಚಿಕಿತ್ಸೆಯ ಫೋಟೋಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ಮಾನವೀಯ ನೆರವು ಮತ್ತು ಕಾನೂನುಬದ್ಧ ಒಪ್ಪಂದ: ಮುಹಮ್ಮದ್ ಗೌಸ್ ಎಂಬುವವರಿಗೆ ಸರ್ಕಾರದಿಂದ
ಸುಮಾರು 3 ಎಕರೆ ದರಖಾಸ್ತು ಜಮೀನು ಮಂಜೂರಾಗಿತ್ತು. 1991–92ರಲ್ಲಿ ಅರ್ಜಿ ಸಲ್ಲಿಸಿ, 2008ರಲ್ಲಿ ಸಾಗುವಳಿ ಚೀಟಿ ಪಡೆದು, 2015ರಲ್ಲಿ ಖಾತೆ ಮಾಡಿಸಿಕೊಂಡು ಅವರೇ ಸಾಗುವಳಿ ಅನುಭವದಲ್ಲಿದ್ದರು. 80 ವರ್ಷ ದಾಟಿದ್ದ ಮುಹಮ್ಮದ್ ಗೌಸ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ಸಂದರ್ಭದಲ್ಲಿ ಕುಟುಂಬದ ಕೋರಿಕೆಯಂತೆ ಮಾನವೀಯ ನೆಲೆಯಲ್ಲಿ ಸಂಪೂರ್ಣ ವೈದ್ಯಕೀಯ ವೆಚ್ಚ ಹಾಗೂ ಆರ್ಥಿಕ ನೆರವು ನೀಡಲಾಗಿತ್ತು. ಆ ಸಮಯದಲ್ಲಿ ನಿಯಮಾನುಸಾರ ಒಪ್ಪಂದ (ಅಗ್ರಿಮೆಂಟ್) ಮಾಡಿಕೊಳ್ಳಲಾಗಿತ್ತು ಎಂದು ರಮೇಶ್ ವಿವರಿಸಿದರು. ಮುಹಮ್ಮದ್ ಗೌಸ್ ಅವರ ನಿಧನದ ಬಳಿಕ, ತಮಗೆ ಯಾವುದೇ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಅವರ ಪತ್ನಿ ಮುಮ್ತಾಜ್ ಹಾಗೂ ಐವರು ಮಕ್ಕಳು ಸ್ವಇಚ್ಛೆಯಿಂದ ಕಾನೂನುಬದ್ಧವಾಗಿ
ತಮ್ಮ ಹೆಸರಿಗೆ ಜನರಲ್ ಪವರ್ ಆಫ್ ಅಟಾರ್ನಿ (GPA) ನೋಂದಣಿ ಮಾಡಿಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಣ್ಣೀರಿಟ್ಟ ಮುಹಮ್ಮದ್ ಗೌಸ್ ಕುಟುಂಬಸ್ಥರು: ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಭಾವುಕರಾಗಿ ಕಣ್ಣೀರು ಹಾಕುತ್ತಾ ಮಾತನಾಡಿ, "ಸುಮಾರು 20 ವರ್ಷಗಳಿಂದ ನಾವೇ ಜಮೀನಿನ ಸ್ವಾಧೀನ ಅನುಭವದಲ್ಲಿದ್ದೇವೆ. ಸರ್ಕಾರದ ಸಾಗುವಳಿ ಚೀಟಿ, ಖಾತೆ ಸೇರಿದಂತೆ ಎಲ್ಲಾ ಸಕ್ರಮ ದಾಖಲೆಗಳು ನಮ್ಮ ಬಳಿಯೇ ಇವೆ. ನಮ್ಮ ಸಂಕಷ್ಟದ ಪರಿಸ್ಥಿತಿಯಲ್ಲಿ ರಮೇಶ್ ಅವರು ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಲು ಪ್ರಯತ್ನಿಸಿದರು. ಅವರಿಗೆ ಮೋಸವಾಗಬಾರದೆಂದು ಇಡೀ ಕುಟುಂಬ ಒಟ್ಟಾಗಿ ಜಿಪಿಎ ಮಾಡಿಕೊಟ್ಟಿದ್ದೇವೆ. ಇದರಲ್ಲಿ ಯಾರ
ಒತ್ತಾಯವೂ ಇಲ್ಲ, ಯಾವುದೇ ಅಕ್ರಮವೂ ನಡೆದಿಲ್ಲ" ಎಂದು ತಿಳಿಸಿದರು. ಎಲ್ಲವೂ ಕಾನೂನುಬದ್ಧ, ತನಿಖೆಗೆ ಸಿದ್ಧ: ತಹಶೀಲ್ದಾರ್ ಅವರ ಆದೇಶದಂತೆ ತಾಲೂಕು ಸರ್ವೆ ಇಲಾಖೆಯಿಂದ ಜಾಗದ ಅಧಿಕೃತ ನಕ್ಷೆ (ಸ್ಕೆಚ್) ಮಾಡಿಸಲಾಗಿದೆ. ಜಮೀನು ನೀಡಿದ ಕುಟುಂಬಕ್ಕಾಗಲಿ ಅಥವಾ ಅಕ್ಕಪಕ್ಕದ ರೈತರಿಗಾಗಲಿ ಯಾವುದೇ ತಕರಾರಿಲ್ಲದಿರುವಾಗ, ಕೆಲವರು ರೈತ ಸಂಘದ ಹೆಸರನ್ನು ಮುಂದಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ತೇಜೋವಧೆ ಮಾಡುತ್ತಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವ ತಾನು ಸರ್ಕಾರಕ್ಕಾಗಲಿ, ಜನರಿಗಾಗಲಿ ನಯಾಪೈಸೆ ಮೋಸ ಮಾಡಿಲ್ಲ. ಈ ವಿಚಾರದಲ್ಲಿ ಎಂತಹ ತನಿಖೆ ಎದುರಿಸಲೂ ಸಿದ್ಧ ಎಂದು ರಮೇಶ್ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ಗೌಸ್ ಅವರ ಪತ್ನಿ ಮುಮ್ತಾಜ್ ಬೀ ಹಾಗೂ ಪುತ್ರ ನೂರುಲ್ಲಾ ಉಪಸ್ಥಿತರಿದ್ದರು.
- ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು1
- ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು1
- ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ1
- 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ *ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ. ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು. ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.2
- ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ1
- ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ. ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.1