logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.

2 hrs ago
user_A News24Kannada
A News24Kannada
Newsagent Ballari, Karnataka•
2 hrs ago

ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.

More news from Karnataka and nearby areas
  • ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.
    1
    ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ.

ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.
    user_A News24Kannada
    A News24Kannada
    Newsagent Ballari, Karnataka•
    2 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂನ್ 20 ರಂದು ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಕೂಡ್ಲಿಗಿ ಪೊಲೀಸ್ ಉಪವಿಭಾಗ, ಪೊಲೀಸ್ ಠಾಣೆ, ತಾಲೂಕಾಡಳಿತ ಹಾಗೂ ವಿವಿಧ ಸಮುದಾಯಗಳ ಮುಖಂಡರು ಮತ್ತು ನಾಗರಿಕರ ಸಹಯೋಗದಲ್ಲಿ ಈ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಡಿ.ವೈ.ಎಸ್ಪಿ ಮಲ್ಲೇಶಪ್ಪ ದೊಡ್ಡಮನೆ ಅವರು, ಹಬ್ಬವು ಸಂಭ್ರಮದ ಸಂಕೇತವಾಗಿದ್ದು, ಯಾವುದೇ ಕಾರಣಕ್ಕೂ ಶಾಂತಿ ಭಂಗವಾಗಬಾರದು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ ಎಂದು ಸೂಚಿಸಿದರು. ಸರ್ವಜನಾಂಗದವರು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕಿದ್ದು, ಮೊಹರಂ ಸುಲಲಿತವಾಗಿ ನಡೆಯಲು ಇಲಾಖೆಯು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು. ಸಮುದಾಯಗಳ ಹಿರಿಯರು, ಪ್ರಭಾವಿಗಳು, ಪೋಷಕರು, ಮುಖಂಡರು, ಜನಪ್ರತಿನಿಧಿಗಳು ಮತ್ತು ಎಲ್ಲಾ ಸಮುದಾಯಗಳ ಪ್ರಮುಖರು ಇಲಾಖೆಯೊಂದಿಗೆ ಸಹಕರಿಸಬೇಕು ಹಾಗೂ ತಮ್ಮ ಯುವಕರನ್ನು ಹದ್ದುಬಸ್ತಿನಲ್ಲಿಟ್ಟು, ಹಬ್ಬದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ತಿಳಿಹೇಳಬೇಕು ಎಂದು ಅವರು ಕರೆ ನೀಡಿದರು. ಶಾಂತಿ ಭಂಗ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿ.ವೈ.ಎಸ್ಪಿ ಕಠಿಣ ಎಚ್ಚರಿಕೆ ನೀಡಿದರು. ಹಬ್ಬದ ಸಂದರ್ಭದಲ್ಲಿ ಕೋಮುಗಲಭೆ, ದಂಗೆ, ದೊಂಬಿ, ಗುಂಪು ಘರ್ಷಣೆ, ಹೊಡೆದಾಟ, ಹಲ್ಲೆಗಳಂತಹ ದುಷ್ಕೃತ್ಯಗಳಲ್ಲಿ ಭಾಗಿಯಾದವರಿಗೆ ಮತ್ತು ಘಟನೆಗಳಿಗೆ ಕುಮ್ಮಕ್ಕು ನೀಡಿದವರಿಗೆ, ಉತ್ತೇಜಿಸಿದವರಿಗೆ ಅಥವಾ ಸಹಕರಿಸಿದವರಿಗೆ ಕಾನೂನಿನಲ್ಲಿ ಯಾವುದೇ ಕ್ಷಮೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಬ್ಬದ ಸಂದರ್ಭದಲ್ಲಿ ಯಾರೂ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಮತ್ತು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಎಂದರು. ಶಾಂತಿ ಸೌಹಾರ್ದತೆಗೆ ಹೆಚ್ಚು ಆದ್ಯತೆ ನೀಡಬೇಕು ಮತ್ತು ನಾಗರಿಕರು, ಸರ್ವಧರ್ಮೀಯರು ಇಲಾಖೆಯೊಂದಿಗೆ ಎಲ್ಲಾ ರೀತಿಯಲ್ಲಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಹಬ್ಬದ ಸಂದರ್ಭದಲ್ಲಿ ಎಲ್ಲರ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಾನೂನಿನ ಗಾಂಭೀರ್ಯ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸಿ, ಸಂಯಮ, ಶಾಂತಿ ಹಾಗೂ ಸೌಹಾರ್ದತೆಯಿಂದ ವರ್ತಿಸುವಂತೆ ಜಾಗೃತಿ ಮೂಡಿಸಬೇಕು. ಪ್ರಭಾವಿಗಳು, ಸಂಘ ಸಂಸ್ಥೆಗಳ ಪ್ರಮುಖರು, ರಾಜಕಾರಣಿಗಳು, ಹಿರಿಯರು ಮತ್ತು ಮುಖಂಡರು ತಮ್ಮ ಯುವಕರನ್ನು ನಿಯಂತ್ರಣದಲ್ಲಿಟ್ಟು, ಇಲಾಖೆಯೊಂದಿಗೆ ಸಹಕರಿಸಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ವಹಿಸಬೇಕು ಎಂದರು. ಮೊಹರಂ ಹಬ್ಬ ಆಚರಣೆ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಭದ್ರತೆಯನ್ನು ಜರುಗಿಸಲಾಗಿದೆ. ಪ್ರಮುಖ ಬೀದಿಗಳು, ಧಾರ್ಮಿಕ ಕೇಂದ್ರಗಳ ಬಳಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅಗತ್ಯವಿರುವ ಕಡೆ ಮೀಸಲು ಪೊಲೀಸ್ ಪಡೆಯನ್ನು ನೇಮಿಸಿ ಸೂಕ್ತ ಬಿಗಿ ಭದ್ರತೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ ತೀವ್ರ ನಿಗಾ ವಹಿಸಲಾಗಿರುತ್ತದೆ ಎಂದು ಡಿ.ವೈ.ಎಸ್ಪಿ ತಿಳಿಸಿದರು. ಈ ಶಾಂತಿ ಸಭೆಯಲ್ಲಿ ತಹಶಿಲ್ದಾರರಾದ ವಿ.ಕೆ. ನೇತ್ರಾವತಿ ಹಾಗೂ ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ಅವರು ಮಾತನಾಡಿದರು. ಹಲವು ಮುಖಂಡರು ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಪಿಎಸ್ಐ ಸಿ ಪ್ರಕಾಶ ಸೇರಿದಂತೆ ಮುಸ್ಲಿಂ ಧರ್ಮದ ಪ್ರಮುಖರು, ವಿವಿಧ ಧರ್ಮಗಳ ಗುರುಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ಹಿರಿಯರು, ನಾಗರಿಕರು, ವಿವಿಧ ಪಕ್ಷಗಳ ಪ್ರಮುಖರು ಮತ್ತು ಯುವಕರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೂನ್ 20 ರಂದು ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಕೂಡ್ಲಿಗಿ ಪೊಲೀಸ್ ಉಪವಿಭಾಗ, ಪೊಲೀಸ್ ಠಾಣೆ, ತಾಲೂಕಾಡಳಿತ ಹಾಗೂ ವಿವಿಧ ಸಮುದಾಯಗಳ ಮುಖಂಡರು ಮತ್ತು ನಾಗರಿಕರ ಸಹಯೋಗದಲ್ಲಿ ಈ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಡಿ.ವೈ.ಎಸ್ಪಿ ಮಲ್ಲೇಶಪ್ಪ ದೊಡ್ಡಮನೆ ಅವರು, ಹಬ್ಬವು ಸಂಭ್ರಮದ ಸಂಕೇತವಾಗಿದ್ದು, ಯಾವುದೇ ಕಾರಣಕ್ಕೂ ಶಾಂತಿ ಭಂಗವಾಗಬಾರದು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಆಸ್ಪದವಿಲ್ಲ ಎಂದು ಸೂಚಿಸಿದರು. ಸರ್ವಜನಾಂಗದವರು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕಿದ್ದು, ಮೊಹರಂ ಸುಲಲಿತವಾಗಿ ನಡೆಯಲು ಇಲಾಖೆಯು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಿದ್ಧತೆ ನಡೆಸಿದೆ ಎಂದು ತಿಳಿಸಿದರು. ಸಮುದಾಯಗಳ ಹಿರಿಯರು, ಪ್ರಭಾವಿಗಳು, ಪೋಷಕರು, ಮುಖಂಡರು, ಜನಪ್ರತಿನಿಧಿಗಳು ಮತ್ತು ಎಲ್ಲಾ ಸಮುದಾಯಗಳ ಪ್ರಮುಖರು ಇಲಾಖೆಯೊಂದಿಗೆ ಸಹಕರಿಸಬೇಕು ಹಾಗೂ ತಮ್ಮ ಯುವಕರನ್ನು ಹದ್ದುಬಸ್ತಿನಲ್ಲಿಟ್ಟು, ಹಬ್ಬದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ತಿಳಿಹೇಳಬೇಕು ಎಂದು ಅವರು ಕರೆ ನೀಡಿದರು.

ಶಾಂತಿ ಭಂಗ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಲ್ಲಿ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿ.ವೈ.ಎಸ್ಪಿ ಕಠಿಣ ಎಚ್ಚರಿಕೆ ನೀಡಿದರು. ಹಬ್ಬದ ಸಂದರ್ಭದಲ್ಲಿ ಕೋಮುಗಲಭೆ, ದಂಗೆ, ದೊಂಬಿ, ಗುಂಪು ಘರ್ಷಣೆ, ಹೊಡೆದಾಟ, ಹಲ್ಲೆಗಳಂತಹ ದುಷ್ಕೃತ್ಯಗಳಲ್ಲಿ ಭಾಗಿಯಾದವರಿಗೆ ಮತ್ತು ಘಟನೆಗಳಿಗೆ ಕುಮ್ಮಕ್ಕು ನೀಡಿದವರಿಗೆ, ಉತ್ತೇಜಿಸಿದವರಿಗೆ ಅಥವಾ ಸಹಕರಿಸಿದವರಿಗೆ ಕಾನೂನಿನಲ್ಲಿ ಯಾವುದೇ ಕ್ಷಮೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಬ್ಬದ ಸಂದರ್ಭದಲ್ಲಿ ಯಾರೂ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಮತ್ತು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಎಂದರು.

ಶಾಂತಿ ಸೌಹಾರ್ದತೆಗೆ ಹೆಚ್ಚು ಆದ್ಯತೆ ನೀಡಬೇಕು ಮತ್ತು ನಾಗರಿಕರು, ಸರ್ವಧರ್ಮೀಯರು ಇಲಾಖೆಯೊಂದಿಗೆ ಎಲ್ಲಾ ರೀತಿಯಲ್ಲಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಹಬ್ಬದ ಸಂದರ್ಭದಲ್ಲಿ ಎಲ್ಲರ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಾನೂನಿನ ಗಾಂಭೀರ್ಯ ಮತ್ತು ಪ್ರಭಾವದ ಬಗ್ಗೆ ಅರಿವು ಮೂಡಿಸಿ, ಸಂಯಮ, ಶಾಂತಿ ಹಾಗೂ ಸೌಹಾರ್ದತೆಯಿಂದ ವರ್ತಿಸುವಂತೆ ಜಾಗೃತಿ ಮೂಡಿಸಬೇಕು. ಪ್ರಭಾವಿಗಳು, ಸಂಘ ಸಂಸ್ಥೆಗಳ ಪ್ರಮುಖರು, ರಾಜಕಾರಣಿಗಳು, ಹಿರಿಯರು ಮತ್ತು ಮುಖಂಡರು ತಮ್ಮ ಯುವಕರನ್ನು ನಿಯಂತ್ರಣದಲ್ಲಿಟ್ಟು, ಇಲಾಖೆಯೊಂದಿಗೆ ಸಹಕರಿಸಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ವಹಿಸಬೇಕು ಎಂದರು.

ಮೊಹರಂ ಹಬ್ಬ ಆಚರಣೆ ಹಾಗೂ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಭದ್ರತೆಯನ್ನು ಜರುಗಿಸಲಾಗಿದೆ. ಪ್ರಮುಖ ಬೀದಿಗಳು, ಧಾರ್ಮಿಕ ಕೇಂದ್ರಗಳ ಬಳಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅಗತ್ಯವಿರುವ ಕಡೆ ಮೀಸಲು ಪೊಲೀಸ್ ಪಡೆಯನ್ನು ನೇಮಿಸಿ ಸೂಕ್ತ ಬಿಗಿ ಭದ್ರತೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ ತೀವ್ರ ನಿಗಾ ವಹಿಸಲಾಗಿರುತ್ತದೆ ಎಂದು ಡಿ.ವೈ.ಎಸ್ಪಿ ತಿಳಿಸಿದರು.

ಈ ಶಾಂತಿ ಸಭೆಯಲ್ಲಿ ತಹಶಿಲ್ದಾರರಾದ ವಿ.ಕೆ. ನೇತ್ರಾವತಿ ಹಾಗೂ ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ಅವರು ಮಾತನಾಡಿದರು. ಹಲವು ಮುಖಂಡರು ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು. ಪಿಎಸ್ಐ ಸಿ ಪ್ರಕಾಶ ಸೇರಿದಂತೆ ಮುಸ್ಲಿಂ ಧರ್ಮದ ಪ್ರಮುಖರು, ವಿವಿಧ ಧರ್ಮಗಳ ಗುರುಗಳು, ವಿವಿಧ ಸಮುದಾಯಗಳ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಟ್ಟಣದ ಹಿರಿಯರು, ನಾಗರಿಕರು, ವಿವಿಧ ಪಕ್ಷಗಳ ಪ್ರಮುಖರು ಮತ್ತು ಯುವಕರು ಸೇರಿದಂತೆ ಗಣ್ಯರು ಭಾಗವಹಿಸಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    56 min ago
  • ಕೂಡ್ಲಿಗಿ ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆರಾಯನ ಆಗಮನಕ್ಕಾಗಿ ತಾಲ್ಲೂಕಿನಾದ್ಯಂತ ವಿವಿಧ ಆಚರಣೆಗಳು ಮತ್ತು ಪೂಜೆಗಳನ್ನು ನಡೆಸಲಾಗುತ್ತಿದ್ದು, ಅದರ ಭಾಗವಾಗಿ ಶನಿವಾರ ಅಮ್ಮನಕೆರಿ ಗ್ರಾಮದಲ್ಲಿ ವಿಶೇಷ ಗುರ್ಜಿ ಪೂಜೆ ಸಲ್ಲಿಸಲಾಯಿತು. ಈ ಆಚರಣೆಯಲ್ಲಿ, ಜೋಳದ ರೊಟ್ಟಿ ಬೇಯಿಸುವ ಹಂಚಿನ ಮೇಲೆ ಸೆಗಣಿಯಿಂದ ತಯಾರಿಸಿದ ಗುರ್ಜಿಯನ್ನು ಒಬ್ಬ ಯುವಕನ ತಲೆಯ ಮೇಲೆ ಇಟ್ಟುಕೊಂಡು ಮನೆ ಮನೆಗೆ ಹೋಗಲಾಯಿತು. ಈ ವೇಳೆ ಮಹಿಳೆಯರು "ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ. ಹಳ್ಳಕೊಳ್ಳ ಸುತ್ತಾಡಿ ಬಂದೆ. ಕಾರ ಮಳೆಯೋ ಕಪ್ಪತ್ತ ಮಳೆಯೋ.. ಸುರಿ ಸುರಿ ಸುರಿಯೋ ಮಳೆರಾಯ, ಬಣ್ಣ ಕೊಡ್ತೀನಿ ಬಾರಲೇ ಮಳೆಯೇ ಸುಣ್ಣ ಕೊಡ್ತೀನಿ ಸುರಿಯಲೇ ಮಳೆಯೇ" ಎಂದು ಹಾಡುತ್ತಾ ಮಳೆಗಾಗಿ ಪ್ರಾರ್ಥಿಸಿದರು. ಅಮ್ಮನಕೆರಿ ಗ್ರಾಮದಲ್ಲಿ ಬೇಗ ಮಳೆ ಬರುವಂತೆ ಕೋರಿ ಈ ಗುರ್ಜಿ ಪೂಜೆಯನ್ನು ಆಚರಿಸಲಾಯಿತು.
    1
    ಕೂಡ್ಲಿಗಿ ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆರಾಯನ ಆಗಮನಕ್ಕಾಗಿ ತಾಲ್ಲೂಕಿನಾದ್ಯಂತ ವಿವಿಧ ಆಚರಣೆಗಳು ಮತ್ತು ಪೂಜೆಗಳನ್ನು ನಡೆಸಲಾಗುತ್ತಿದ್ದು, ಅದರ ಭಾಗವಾಗಿ ಶನಿವಾರ ಅಮ್ಮನಕೆರಿ ಗ್ರಾಮದಲ್ಲಿ ವಿಶೇಷ ಗುರ್ಜಿ ಪೂಜೆ ಸಲ್ಲಿಸಲಾಯಿತು.

ಈ ಆಚರಣೆಯಲ್ಲಿ, ಜೋಳದ ರೊಟ್ಟಿ ಬೇಯಿಸುವ ಹಂಚಿನ ಮೇಲೆ ಸೆಗಣಿಯಿಂದ ತಯಾರಿಸಿದ ಗುರ್ಜಿಯನ್ನು ಒಬ್ಬ ಯುವಕನ ತಲೆಯ ಮೇಲೆ ಇಟ್ಟುಕೊಂಡು ಮನೆ ಮನೆಗೆ ಹೋಗಲಾಯಿತು. ಈ ವೇಳೆ ಮಹಿಳೆಯರು "ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ. ಹಳ್ಳಕೊಳ್ಳ ಸುತ್ತಾಡಿ ಬಂದೆ. ಕಾರ ಮಳೆಯೋ ಕಪ್ಪತ್ತ ಮಳೆಯೋ.. ಸುರಿ ಸುರಿ ಸುರಿಯೋ ಮಳೆರಾಯ, ಬಣ್ಣ ಕೊಡ್ತೀನಿ ಬಾರಲೇ ಮಳೆಯೇ ಸುಣ್ಣ ಕೊಡ್ತೀನಿ ಸುರಿಯಲೇ ಮಳೆಯೇ" ಎಂದು ಹಾಡುತ್ತಾ ಮಳೆಗಾಗಿ ಪ್ರಾರ್ಥಿಸಿದರು. ಅಮ್ಮನಕೆರಿ ಗ್ರಾಮದಲ್ಲಿ ಬೇಗ ಮಳೆ ಬರುವಂತೆ ಕೋರಿ ಈ ಗುರ್ಜಿ ಪೂಜೆಯನ್ನು ಆಚರಿಸಲಾಯಿತು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಚಳ್ಳಕೆರೆ ತಾಲೂಕಿನ ರೈತ ಸಂಘಟನೆಗಳ ಮನವಿಗೆ ಸ್ಪಂದಿಸಿದ ಸರ್ಕಾರ, ಶೇಂಗಾ ಬಿತ್ತನೆ ಬೀಜದ ದರವನ್ನು ಕಡಿತಗೊಳಿಸಿದ್ದು, ಇದು ರೈತರಿಗೆ ಸಂತಸ ತಂದಿದೆ. ತಾಲೂಕಿನ ರೈತ ಸಂಘಟನೆಗಳ ಕೋರಿಕೆಯ ಮೇರೆಗೆ ಮಾನ್ಯ ಶಾಸಕ ಟಿ. ರಘುಮೂರ್ತಿಯವರು ಸರ್ಕಾರಕ್ಕೆ ಪತ್ರ ಬರೆದು ದರ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಇದರ ಪರಿಣಾಮವಾಗಿ, ಸರ್ಕಾರವು ಪ್ರತಿ ಕ್ವಿಂಟಲ್ ಶೇಂಗಾ ಬಿತ್ತನೆ ಬೀಜದ ದರವನ್ನು ₹11,300 ರಿಂದ ₹10,800ಕ್ಕೆ ಇಳಿಸಿದೆ. ಸಾಮಾನ್ಯ ವರ್ಗದ ರೈತರಿಗೆ ₹1,400 ಸಹಾಯಧನ ದೊರೆಯಲಿದ್ದು, ಅವರು ತಮ್ಮ ಪಾಲಿನ ₹9,400 ಪಾವತಿಸಿ ಬಿತ್ತನೆ ಬೀಜ ಪಡೆಯಬಹುದಾಗಿದೆ. ಅದೇ ರೀತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ₹2,100 ಸಹಾಯಧನ ದೊರೆಯಲಿದ್ದು, ಅವರು ಕೇವಲ ₹8,700 ಪಾವತಿಸಿ ಬಿತ್ತನೆ ಬೀಜವನ್ನು ಪಡೆಯಲು ಸಾಧ್ಯವಿದೆ. ಸಹಾಯಕ ಕೃಷಿ ನಿರ್ದೇಶಕ ಡಾ. ಎಸ್.ಟಿ. ರಮೇಶ್ ಅವರು, ಶೇಂಗಾ ಬೆಳೆ ಬೆಳೆಯುವ ರೈತರು ಸರ್ಕಾರದ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿ ಸರ್ಕಾರವು ಶೇಂಗಾ ಬಿತ್ತನೆ ಬೀಜದ ದರ ಕಡಿತಗೊಳಿಸಿರುವುದು ರೈತರಿಗೆ ದೊಡ್ಡ ನಿರಾಳತೆ ತಂದಿದೆ.
    1
    ಚಳ್ಳಕೆರೆ ತಾಲೂಕಿನ ರೈತ ಸಂಘಟನೆಗಳ ಮನವಿಗೆ ಸ್ಪಂದಿಸಿದ ಸರ್ಕಾರ, ಶೇಂಗಾ ಬಿತ್ತನೆ ಬೀಜದ ದರವನ್ನು ಕಡಿತಗೊಳಿಸಿದ್ದು, ಇದು ರೈತರಿಗೆ ಸಂತಸ ತಂದಿದೆ. ತಾಲೂಕಿನ ರೈತ ಸಂಘಟನೆಗಳ ಕೋರಿಕೆಯ ಮೇರೆಗೆ ಮಾನ್ಯ ಶಾಸಕ ಟಿ. ರಘುಮೂರ್ತಿಯವರು ಸರ್ಕಾರಕ್ಕೆ ಪತ್ರ ಬರೆದು ದರ ಕಡಿಮೆ ಮಾಡುವಂತೆ ಮನವಿ ಮಾಡಿದ್ದರು.

ಇದರ ಪರಿಣಾಮವಾಗಿ, ಸರ್ಕಾರವು ಪ್ರತಿ ಕ್ವಿಂಟಲ್ ಶೇಂಗಾ ಬಿತ್ತನೆ ಬೀಜದ ದರವನ್ನು ₹11,300 ರಿಂದ ₹10,800ಕ್ಕೆ ಇಳಿಸಿದೆ. ಸಾಮಾನ್ಯ ವರ್ಗದ ರೈತರಿಗೆ ₹1,400 ಸಹಾಯಧನ ದೊರೆಯಲಿದ್ದು, ಅವರು ತಮ್ಮ ಪಾಲಿನ ₹9,400 ಪಾವತಿಸಿ ಬಿತ್ತನೆ ಬೀಜ ಪಡೆಯಬಹುದಾಗಿದೆ. ಅದೇ ರೀತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ₹2,100 ಸಹಾಯಧನ ದೊರೆಯಲಿದ್ದು, ಅವರು ಕೇವಲ ₹8,700 ಪಾವತಿಸಿ ಬಿತ್ತನೆ ಬೀಜವನ್ನು ಪಡೆಯಲು ಸಾಧ್ಯವಿದೆ.

ಸಹಾಯಕ ಕೃಷಿ ನಿರ್ದೇಶಕ ಡಾ. ಎಸ್.ಟಿ. ರಮೇಶ್ ಅವರು, ಶೇಂಗಾ ಬೆಳೆ ಬೆಳೆಯುವ ರೈತರು ಸರ್ಕಾರದ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಶಾಸಕರ ಮನವಿಗೆ ಸ್ಪಂದಿಸಿ ಸರ್ಕಾರವು ಶೇಂಗಾ ಬಿತ್ತನೆ ಬೀಜದ ದರ ಕಡಿತಗೊಳಿಸಿರುವುದು ರೈತರಿಗೆ ದೊಡ್ಡ ನಿರಾಳತೆ ತಂದಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಈ ಕುರಿತು ಶುಕ್ರವಾರ ರಾತ್ರಿ 8:30 ಕ್ಕೆ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಳ್ಳಕೆರೆ ತಾಲ್ಲೂಕಿನ ಎನ್.ಗೌರೀಪುರ ಗ್ರಾಮದಲ್ಲಿ ಶ್ರೀ ಉಮಾ ಮಹೇಶ್ವರ ದೇವರ ಕಾರ್ತಿಕೋತ್ಸವದ ಸಂದರ್ಭದಲ್ಲಿ ಆದಿಕರ್ನಾಟಕ ಜಾತಿಗೆ ಸೇರಿದ ಡಿ.ಓಬಣ್ಣ ಮತ್ತು ಇತರರು ದೇವರಿಗೆ ಡ್ರಮ್, ವಾದ್ಯ ಹಾಗೂ ತಮಟೆಗಳಿಂದ ಸೇವೆ ಸಲ್ಲಿಸುತ್ತಿದ್ದ ವೇಳೆ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ, ಲಿಂಗಾಯತ ಜಾತಿಗೆ ಸೇರಿದ ಆರೋಪಿಗಳು ಜಾತಿ ನಿಂದನೆ ಮಾಡಿ, ಕೈಕಾಲುಗಳಿಂದ ಹಲ್ಲೆ ನಡೆಸಿದ್ದರು ಎಂದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಚಳ್ಳಕೆರೆ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀಧರ ವೆಂಕಟರಮಣ ಶೆಟ್ಟಿ ಅವರು ಕೈಗೊಂಡಿದ್ದರು. ಅವರು ಆರೋಪಿಗಳನ್ನು ಬಂಧಿಸಿ, ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.
    1
    ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಈ ಕುರಿತು ಶುಕ್ರವಾರ ರಾತ್ರಿ 8:30 ಕ್ಕೆ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಳ್ಳಕೆರೆ ತಾಲ್ಲೂಕಿನ ಎನ್.ಗೌರೀಪುರ ಗ್ರಾಮದಲ್ಲಿ ಶ್ರೀ ಉಮಾ ಮಹೇಶ್ವರ ದೇವರ ಕಾರ್ತಿಕೋತ್ಸವದ ಸಂದರ್ಭದಲ್ಲಿ ಆದಿಕರ್ನಾಟಕ ಜಾತಿಗೆ ಸೇರಿದ ಡಿ.ಓಬಣ್ಣ ಮತ್ತು ಇತರರು ದೇವರಿಗೆ ಡ್ರಮ್, ವಾದ್ಯ ಹಾಗೂ ತಮಟೆಗಳಿಂದ ಸೇವೆ ಸಲ್ಲಿಸುತ್ತಿದ್ದ ವೇಳೆ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ, ಲಿಂಗಾಯತ ಜಾತಿಗೆ ಸೇರಿದ ಆರೋಪಿಗಳು ಜಾತಿ ನಿಂದನೆ ಮಾಡಿ, ಕೈಕಾಲುಗಳಿಂದ ಹಲ್ಲೆ ನಡೆಸಿದ್ದರು ಎಂದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಚಳ್ಳಕೆರೆ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀಧರ ವೆಂಕಟರಮಣ ಶೆಟ್ಟಿ ಅವರು ಕೈಗೊಂಡಿದ್ದರು. ಅವರು ಆರೋಪಿಗಳನ್ನು ಬಂಧಿಸಿ, ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂನ್ 21 ರಂದು ದೇಶಾದ್ಯಂತ ಆಯ್ದ ಕೇಂದ್ರಗಳಲ್ಲಿ ನೀಟ್ ಮರುಪರೀಕ್ಷೆಯನ್ನು ನಡೆಸುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಈ ಪರೀಕ್ಷೆಯನ್ನು ಸುಗಮ ಹಾಗೂ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಾದ್ಯಂತ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ 5,329 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಪರೀಕ್ಷೆಯ ಭದ್ರತಾ ದೃಷ್ಟಿಯಿಂದ, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ರೂಟ್ ಮ್ಯಾಪ್ ಸಿದ್ಧಪಡಿಸಿ, ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪ್ರತಿ ಕೇಂದ್ರದಲ್ಲೂ ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಪೊಲೀಸ್ ಇಲಾಖೆ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ರೂಟ್ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಅಗತ್ಯ ವಾಹನ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ. ಪರೀಕ್ಷೆಯು ಯಾವುದೇ ತೊಂದರೆ ಅಥವಾ ವ್ಯತ್ಯಯವಿಲ್ಲದೆ ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
    1
    ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂನ್ 21 ರಂದು ದೇಶಾದ್ಯಂತ ಆಯ್ದ ಕೇಂದ್ರಗಳಲ್ಲಿ ನೀಟ್ ಮರುಪರೀಕ್ಷೆಯನ್ನು ನಡೆಸುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಈ ಪರೀಕ್ಷೆಯನ್ನು ಸುಗಮ ಹಾಗೂ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಾದ್ಯಂತ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ 5,329 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ.

ಪರೀಕ್ಷೆಯ ಭದ್ರತಾ ದೃಷ್ಟಿಯಿಂದ, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ರೂಟ್ ಮ್ಯಾಪ್ ಸಿದ್ಧಪಡಿಸಿ, ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪ್ರತಿ ಕೇಂದ್ರದಲ್ಲೂ ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಪೊಲೀಸ್ ಇಲಾಖೆ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ರೂಟ್ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಅಗತ್ಯ ವಾಹನ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ.

ಪರೀಕ್ಷೆಯು ಯಾವುದೇ ತೊಂದರೆ ಅಥವಾ ವ್ಯತ್ಯಯವಿಲ್ಲದೆ ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    3 hrs ago
  • ಇಳಕಲ್ ನಗರದಲ್ಲಿ ಮಡಿವಾಳ ಸಮಾಜದ ವತಿಯಿಂದ ಮಾಧ್ಯಮ ಘೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ, ಉತ್ತರ ಕರ್ನಾಟಕದ ಯುವಕರ ಕಣ್ಮಣಿ ಹಾಗೂ ಅಭಿವೃದ್ಧಿಯ ಹರಿಕಾರರೆಂದು ಗುರುತಿಸಿಕೊಂಡಿರುವ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಲಾಯಿತು. ಮಾಧ್ಯಮ ಘೋಷ್ಠಿಯಲ್ಲಿ ಮಡಿವಾಳ ಸಮಾಜದ ಮುಖಂಡರು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು. ಜನಪ್ರಿಯ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರಕಿಸಿಕೊಡಬೇಕೆಂದು ಮಡಿವಾಳ ಸಮಾಜದ ಮುಖಂಡರು ಬಲವಾಗಿ ಆಗ್ರಹಿಸಿದರು.
    3
    ಇಳಕಲ್ ನಗರದಲ್ಲಿ ಮಡಿವಾಳ ಸಮಾಜದ ವತಿಯಿಂದ ಮಾಧ್ಯಮ ಘೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ, ಉತ್ತರ ಕರ್ನಾಟಕದ ಯುವಕರ ಕಣ್ಮಣಿ ಹಾಗೂ ಅಭಿವೃದ್ಧಿಯ ಹರಿಕಾರರೆಂದು ಗುರುತಿಸಿಕೊಂಡಿರುವ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಲಾಯಿತು.

ಮಾಧ್ಯಮ ಘೋಷ್ಠಿಯಲ್ಲಿ ಮಡಿವಾಳ ಸಮಾಜದ ಮುಖಂಡರು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು. ಜನಪ್ರಿಯ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರಕಿಸಿಕೊಡಬೇಕೆಂದು ಮಡಿವಾಳ ಸಮಾಜದ ಮುಖಂಡರು ಬಲವಾಗಿ ಆಗ್ರಹಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಶುಭ ಸಂದರ್ಭದಲ್ಲಿ ಶಾಸಕರು ಎರಡು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ತಲಾ 10 ಲಕ್ಷ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ. ಬಂಡೆಹಟ್ಟಿ ಮತ್ತು ಎರೆಡುಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಅಭಿವೃದ್ಧಿಗಾಗಿ ಈ ಅನುದಾನವನ್ನು ನೀಡಲಾಗಿದ್ದು, ಇದು ಬಡ ಮಕ್ಕಳ ಶಿಕ್ಷಣಕ್ಕೆ ಹೊಸ ಆಶಾಕಿರಣ ಮೂಡಿಸಿದೆ. ಶಿಕ್ಷಣ ಕ್ಷೇತ್ರದ ಮೇಲಿನ ತಮ್ಮ ಕಾಳಜಿಯಿಂದ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದ ಶಾಸಕ ಬಿ. ನಾಗೇಂದ್ರ ಅವರ ಈ ಕೆಲಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
    1
    ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಶುಭ ಸಂದರ್ಭದಲ್ಲಿ ಶಾಸಕರು ಎರಡು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ತಲಾ 10 ಲಕ್ಷ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ.

ಬಂಡೆಹಟ್ಟಿ ಮತ್ತು ಎರೆಡುಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಅಭಿವೃದ್ಧಿಗಾಗಿ ಈ ಅನುದಾನವನ್ನು ನೀಡಲಾಗಿದ್ದು, ಇದು ಬಡ ಮಕ್ಕಳ ಶಿಕ್ಷಣಕ್ಕೆ ಹೊಸ ಆಶಾಕಿರಣ ಮೂಡಿಸಿದೆ. ಶಿಕ್ಷಣ ಕ್ಷೇತ್ರದ ಮೇಲಿನ ತಮ್ಮ ಕಾಳಜಿಯಿಂದ ಮತ್ತೊಮ್ಮೆ ಸಾರ್ವಜನಿಕರ ಗಮನ ಸೆಳೆದ ಶಾಸಕ ಬಿ. ನಾಗೇಂದ್ರ ಅವರ ಈ ಕೆಲಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
    user_A News24Kannada
    A News24Kannada
    Newsagent Ballari, Karnataka•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.