Shuru
Apke Nagar Ki App…
ಪಾವಗಡದಲ್ಲಿ ನಾಳೆ ವಿಜೃಂಭಣೆಯ ಕನಕ ಜಯಂತಿ: ಎಲ್ಲರೂ ಬಂದು ಯಶಸ್ವಿಗೊಳಿಸಲು ಆಹ್ವಾನ
MSMEDIACHANNEL
ಪಾವಗಡದಲ್ಲಿ ನಾಳೆ ವಿಜೃಂಭಣೆಯ ಕನಕ ಜಯಂತಿ: ಎಲ್ಲರೂ ಬಂದು ಯಶಸ್ವಿಗೊಳಿಸಲು ಆಹ್ವಾನ
More news from ಕರ್ನಾಟಕ and nearby areas
- ಗಡಿನಾಡ ಸಮಸ್ತ ಜನರಿಗೆ ಎಂ ಎಸ್ ಮಿಡಿಯಾ ವತಿಯಿಂದ ಶ್ರೀ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು1
- ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಸರ್ಕಾರ – ನಾಳೆ ಸಿಎಂ ಜೊತೆ ಸಂಧಾನ ಸಭೆ ಬೆಂಗಳೂರು: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ಸಮಸ್ಯೆ ಬಗೆಹರಿಸಲು, ನಾಳೆ ಆಶಾ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ಮಹತ್ವದ ಸಂಧಾನ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ಸಾದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ಸಭೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ರಾಜಕೀಯ ಪ್ರಧಾನ ಸಲಹೆಗಾರ ಜಿ.ಸಿ. ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯದರ್ಶಿ ನಾಗಲಕ್ಷ್ಮೀ ಸೇರಿದಂತೆ ಮುಖಂಡರೊಂದಿಗೆ ಸಭೆ ನಡೆಸಿ, ನಾಳೆ ಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಸಭೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಮಾಸಿಕ ಗೌರವಧನದಲ್ಲಿ ₹15 ಸಾವಿರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮೊದಲ ಹಂತದ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಇದೀಗ ಎರಡನೇ ಸುತ್ತಿನ ಮಾತುಕತೆಗೆ ಸರ್ಕಾರ ಮುಂದಾಗಿದೆ. ನಾಳಿನ ಸಭೆಗೂ ಮುನ್ನ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವರ್ಚುವಲ್ ಸಭೆ ನಡೆಸಿ, ಹೋರಾಟ ಹಾಗೂ ಬೇಡಿಕೆಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಇದೇ ವೇಳೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಅವರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನಕ್ಕೆ ಭೇಟಿ ನೀಡಿದರು. ಕಾರ್ಯಕರ್ತೆಯರ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಮಳೆ, ಗಾಳಿ, ಬಿಸಿಲನ್ನೂ ಲೆಕ್ಕಿಸದೆ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ ಕುಳಿತು ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕುಮಾರಕೃಪದಲ್ಲಿ ನೂರಾರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಜಪಾನ್ನಲ್ಲಿ ಹೈಸ್ಪೀಡ್ ರೈಲಿನಲ್ಲಿ ವೇಗವಾಗಿ ಸಂಚರಿಸುತ್ತಿದ್ದಾರೆ. ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ ಕುಳಿತಿದ್ದರೂ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಟೀಕಿಸಿದರು. ಕರ್ನಾಟಕದ ವಿರೋಧ ಪಕ್ಷಗಳು ಕೋಮಾ ಸ್ಥಿತಿಯಲ್ಲಿವೆ. ಕೇಂದ್ರ ಸಚಿವರು ಬರೀ ಭರವಸೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್, ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಹೋರಾಟವನ್ನು ಅಂತ್ಯಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು. ನಾಳೆ ಮುಖ್ಯಮಂತ್ರಿ ಹಾಗೂ ಆಶಾ ಸಂಘಟನೆಗಳ ಮುಖಂಡರ ನಡುವಿನ ಸಭೆಯ ಮೇಲೆ ಕಾರ್ಯಕರ್ತೆಯರ ನಿರೀಕ್ಷೆ ನೆಟ್ಟಿದೆ.1
- ಕೋಳಿ ತಿನ್ನುತ್ತಿದ್ದ ಚಿರತೆಗೆ ಬೋನಿನ ಬಲೆ; ತಗ್ಗಿಹಳ್ಳಿಯಲ್ಲಿ ಚಿರತೆ ಸೆರೆ! MADHUGIRI #ಚಿರತೆ #ತಗ್ಗಿಹಳ್ಳಿ #ಪುರವರ #ಅರಣ್ಯ ಇಲಾಖೆ1
- *ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ* ಚಿಂತಾಮಣಿ:ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಮತ್ತು ಸಂಘಟನೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ತಾಲೂಕು ಅಧ್ಯಕ್ಷ ಸೈಯದ್ ಅಸ್ಲಾಂ ಪಾಷಾ ಕಳಕಳಿಯ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಯುತ್ತಿರುವ ಹಲವಾರು ಘಟನೆಗಳು ನಮ್ಮ ಮುಂದಿದ್ದು,ಪತ್ರಕರ್ತರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದ್ದಾರೆ.2
- ಆಟೋ ಚಾಲಕರ ಬದುಕಿಗೆ ಆಸರೆ ನೀಡಿ; ಸುಸಜ್ಜಿತ ಆಟೋ ನಿಲ್ದಾಣ ನಿರ್ಮಿಸಿ ಆಟೋ ಚಾಲಕರ ಬದುಕಿಗೆ ಆಸರೆ ನೀಡಿ; ಸುಸಜ್ಜಿತ ಆಟೋ ನಿಲ್ದಾಣ ನಿರ್ಮಿಸಿ ಕನ್ನಡ ರಾಜ್ಯೋತ್ಸವ ಸಂಭ್ರಮದ ವೇದಿಕೆಯಲ್ಲಿ ಆಟೋ ಚಾಲಕರ ಸಮಸ್ಯೆಗಳ ಪ್ರಸ್ತಾಪ – ಮುರಳಿಧರ್ ಹಾಲಪ್ಪ ಭರವಸೆ ತುಮಕೂರು: ನಗರದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುರಳಿಧರ್ ಹಾಲಪ್ಪ ಹಾಗೂ ಧನಿಯಾ ಕುಮಾರ್ ಭಾಗವಹಿಸಿ ಕನ್ನಡಾಭಿಮಾನಿಗಳೊಂದಿಗೆ ರಾಜ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ, ಕನ್ನಡ ನಾಡು-ನುಡಿಯ ಅಭಿಮಾನ ಹಾಗೂ ಆಟೋ ಚಾಲಕರ ಒಗ್ಗಟ್ಟಿನ ಸಂದೇಶದೊಂದಿಗೆ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಟೋ ಚಾಲಕರು ತಮ್ಮ ವೃತ್ತಿಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಜನಪ್ರತಿನಿಧಿಗಳ ಗಮನ ಸೆಳೆದರು. ಫುಟ್ಪಾತ್ ಮೇಲೆ ಆಟೋ ನಿಲ್ಲಿಸುವ ಪರಿಸ್ಥಿತಿ: ಅಧ್ಯಕ್ಷ ರವಿಕಿರಣ್ ಅಳಲು ಈ ವೇಳೆ ಮಾತನಾಡಿದ ಆಟೋ ಚಾಲಕರ ಸಂಘದ ಅಧ್ಯಕ್ಷ ರವಿಕಿರಣ್ ಅವರು, ತುಮಕೂರು ನಗರದ ಹೈಟೆಕ್ ಬಸ್ ನಿಲ್ದಾಣದ ಎದುರು ಆಟೋ ಚಾಲಕರು ಆಟೋ ನಿಲ್ಲಿಸಲು ಸೂಕ್ತ ಸ್ಥಳವಿಲ್ಲದೆ ಫುಟ್ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಗರಕ್ಕೆ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಆಗಮಿಸುವ ಹೈಟೆಕ್ ಬಸ್ ನಿಲ್ದಾಣದ ಎದುರು ಆಟೋ ಚಾಲಕರಿಗೆ ಪ್ರತ್ಯೇಕವಾಗಿ ಸುಸಜ್ಜಿತ ಆಟೋ ನಿಲ್ದಾಣದ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹಾಗೂ ಆಟೋ ಚಾಲಕರು ಗೌರವಯುತವಾಗಿ ತಮ್ಮ ವೃತ್ತಿ ನಿರ್ವಹಿಸಲು ಅನುಕೂಲವಾಗುವ ರೀತಿಯಲ್ಲಿ ಆಟೋ ಸ್ಟ್ಯಾಂಡ್ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು. ಇಂದಿನ ದಿನಗಳಲ್ಲಿ ಆಟೋ ಚಾಲಕರ ಬದುಕು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದೆ. ಒಂದು ದಿನ ಪೂರ್ತಿ ದುಡಿದರೂ 500 ರೂಪಾಯಿ ಸಂಪಾದನೆ ಮಾಡುವುದು ಕಷ್ಟಕರವಾಗಿದೆ. ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಮನೆ ಬಾಡಿಗೆ, ವಾಹನದ ನಿರ್ವಹಣೆ ಹಾಗೂ ಇಂಧನ ವೆಚ್ಚಗಳನ್ನು ನಿಭಾಯಿಸುವುದು ಸವಾಲಾಗಿದೆ. ನಮ್ಮ ಜೀವನೋಪಾಯಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದರು. ಅಲ್ಲದೆ ನಗರದ ವಿವಿಧ ಆಟೋ ನಿಲ್ದಾಣಗಳಲ್ಲಿ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಚಾಲಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಯೊಂದು ಪ್ರಮುಖ ಆಟೋ ನಿಲ್ದಾಣದಲ್ಲಿಯೂ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮುರಳಿಧರ್ ಹಾಲಪ್ಪ ಅವರಲ್ಲಿ ಮನವಿ ಸಲ್ಲಿಸಿದರು. ಆಟೋ ಚಾಲಕರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಕರೆ ನಂತರ ಮಾತನಾಡಿದ ಮುರಳಿಧರ್ ಹಾಲಪ್ಪ ಅವರು, ಆಟೋ ಚಾಲಕರ ಸೇವೆ ಸಮಾಜದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಯಾರಿಗಾದರೂ ತುರ್ತು ಸಂದರ್ಭಗಳಲ್ಲಿ ತೊಂದರೆ ಎದುರಾದಾಗ ಮೊದಲು ನೆರವಿಗೆ ಧಾವಿಸುವವರಲ್ಲಿ ಆಟೋ ಚಾಲಕರು ಪ್ರಮುಖರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಆಟೋ ಚಾಲಕರ ಸಮಸ್ಯೆಗಳನ್ನು ಪರಿಹರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಸರ್ಕಾರವು ಈಗಾಗಲೇ ಪರಿಶ್ರಮ ಕಾರ್ಡ್ ನೀಡುವ ನಿಟ್ಟಿನಲ್ಲಿ ಮುಂದಾಗಿದೆ. ಆಟೋ ಚಾಲಕರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಇದರಿಂದ ತಮ್ಮ ಮಕ್ಕಳ ಶಿಕ್ಷಣ, ಆಸ್ಪತ್ರೆ ಹಾಗೂ ಆರೋಗ್ಯ ಸೇವೆ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಬ್ಬ ಆಟೋ ಚಾಲಕರು ಇಂತಹ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಆಟೋ ಚಾಲಕರು ಪ್ರಸ್ತಾಪಿಸಿರುವ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಸಮಸ್ಯೆ ನಿಜಕ್ಕೂ ಗಮನಹರಿಸಬೇಕಾದ ವಿಚಾರವಾಗಿದೆ. ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಅನುಕೂಲವಾಗುವಂತೆ ಸರ್ಕಾರದ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣಕ್ಕೆ ಭರವಸೆ ಹೈಟೆಕ್ ಬಸ್ ನಿಲ್ದಾಣದ ಎದುರು ಆಟೋ ಚಾಲಕರು ಎದುರಿಸುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುರಳಿಧರ್ ಹಾಲಪ್ಪ ಅವರು, ಇಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಈ ಸಂಬಂಧ ತಾವು ಹಾಗೂ ಇನ್ನಿಬ್ಬರು ಸೇರಿಕೊಂಡು ಸಂಬಂಧಪಟ್ಟವರೊಂದಿಗೆ ಚರ್ಚಿಸಿ, ಆಟೋ ಚಾಲಕರಿಗೆ ಅನುಕೂಲವಾಗುವ ರೀತಿಯಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಿಸಿಕೊಡಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು. ಆಟೋ ಚಾಲಕರು ತಮ್ಮ ವೃತ್ತಿಯನ್ನು ಗೌರವಯುತವಾಗಿ ಮುಂದುವರಿಸಲು ಅಗತ್ಯವಾದ ಮೂಲಸೌಕರ್ಯಗಳು ದೊರೆಯಬೇಕು. ಪ್ರಯಾಣಿಕರಿಗೂ ಅನುಕೂಲವಾಗುವಂತಹ ವ್ಯವಸ್ಥೆ ರೂಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು. ಆಟೋ ಚಾಲಕರ ಬದುಕಿಗೆ ಹೊಸ ಭರವಸೆಯ ನಿರೀಕ್ಷೆ ಒಟ್ಟಾರೆ, ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆ ಆಟೋ ಚಾಲಕರು ತಮ್ಮ ವೃತ್ತಿಯ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಮೂಲಭೂತ ಸೌಲಭ್ಯಗಳಿಗಾಗಿ ಮನವಿ ಸಲ್ಲಿಸಿರುವುದು ಕಾರ್ಯಕ್ರಮದ ಪ್ರಮುಖ ಗಮನ ಸೆಳೆಯಿತು. ಕೇವಲ ರಾಜ್ಯೋತ್ಸವ ಆಚರಣೆಗೆ ಸೀಮಿತವಾಗದೆ, ಆಟೋ ಚಾಲಕರ ಬದುಕಿನ ಸಂಕಷ್ಟಗಳು, ಜೀವನೋಪಾಯದ ಸಮಸ್ಯೆಗಳು ಹಾಗೂ ಮೂಲಸೌಕರ್ಯಗಳ ಕೊರತೆಯ ಬಗ್ಗೆ ಚರ್ಚೆ ನಡೆದಿರುವುದು ವಿಶೇಷವಾಗಿತ್ತು. ಮುರಳಿಧರ್ ಹಾಲಪ್ಪ ಅವರು ನೀಡಿರುವ ಭರವಸೆಯಂತೆ ಹೈಟೆಕ್ ಬಸ್ ನಿಲ್ದಾಣದ ಎದುರು ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣವಾಗುವುದೇ? ಆಟೋ ಚಾಲಕರಿಗೆ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ದೊರೆಯುವುದೇ? ಎಂಬ ನಿರೀಕ್ಷೆಯೊಂದಿಗೆ ಆಟೋ ಚಾಲಕರು ಕಾಯುತ್ತಿದ್ದಾರೆ. ಆಟೋ ಚಾಲಕರ ಬದುಕಿಗೆ ಗೌರವ, ಅವರ ಶ್ರಮಕ್ಕೆ ಬೆಲೆ ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿ ಎಂಬುದೇ ಈ ಕನ್ನಡ ರಾಜ್ಯೋತ್ಸವದ ಆಶಯವಾಗಿದೆ. ಈ ಸಂದರ್ಭದಲ್ಲಿ ಅಧ್ಯಕ್ಷರಾದ ರವಿಕಿರಣ್, ತಾಜ್ ಪೀರ್, ಬಂಡೆ ರಂಗನಾಥ್,ಹರೀಶ್, ಶೌಕತ್ ಅಲಿಮ್, ರೋಬಿನ್ ಇನ್ನು ಅನೇಕ ಆಟೋ ಚಾಲಕರು ಹಾಗೂ ಮಾಲೀಕರು ಉಪಸ್ಥಿತರಿದ್ದರು4
- ತುಮಕೂರು ಪರಂ ಮೌನ, ಆಕಾಂಕ್ಷಿಗಳ ಕನಸು ಭಗ್ನ! ಟೂಡಾ ಕುರ್ಚಿ ಯಾರಿಗೆ?1
- ಜನರ ಧ್ವನಿಯಾದವರಿಗೆ ಆರೋಗ್ಯದ ತಪಾಸಣ ಪತ್ರಕರ್ತರಿಗಾಗಿ ಬಸವೇಶ್ವರ ಆಸ್ಪತ್ರೆಯ ವಿಶೇಷ ಕಾಳಜಿ! #ಪತ್ರಕರ್ತರು #ಪತ್ರಕರ್ತರಆರೋಗ್ಯ #ಬಸವೇಶ್ವರಆಸ್ಪತ್ರೆ #ಉಚಿತಆರೋಗ್ಯತಪಾಸಣೆ #ಚಿತ್ರದುರ್ಗ #ವಿಶ್ವಮಧುಮೇಹದಿನ #ಆರೋಗ್ಯಜಾಗೃತಿ #ಮಾಧ್ಯಮಮಿತ್ರರು #ಪತ್ರಕರ್ತರಸಂಘ #ಬಸವೇಶ್ವರಮೆಡಿಕಲ್ಕಾಲೇಜು #ಮಾನವೀಯಕಾಳಜಿ #JournalistsHealth #BasaveshwaraHospital #FreeHealthCheckup #ChitradurgaNews #KannadaNews #MediaFriends #HealthAwareness #Journalists1
- ಪಾವಗಡದಲ್ಲಿ ನಾಳೆ ವಿಜೃಂಭಣೆಯ ಕನಕ ಜಯಂತಿ: ಎಲ್ಲರೂ ಬಂದು ಯಶಸ್ವಿಗೊಳಿಸಲು ಆಹ್ವಾನ1