ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಆರ್.ಕೆ. ಚಾಲನೆ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಆರ್.ಕೆ. ಚಾಲನೆ ಕೊಳ್ಳೇಗಾಲ, ಫೆ, ೧೭- ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಟಗರಪುರ ಮೋಳೆಯ ಸಿಲ್ಕಲ್‌ಪುರ, ಕಜ್ಜಿಹುಂಡಿ, ಕಟ್ನವಾಡಿ, ಕೆಸ್ತೂರು, ಕುಣಗಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು. ನಂತರ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಮಂಜೂರು ಮಾಡಿದ್ದಾರೆ. ಕಳೆದ ಸಾಲಿನಲ್ಲಿ ನೀಡಿದ್ದ ೨೫ ಕೋಟಿ. ರೂ. ಅನುದಾನವನ್ನು ಎಲ್ಲ ಧರ್ಮದ ಎಲ್ಲ ವರ್ಗದ ಸಮುದಾಯ ಭವನಗಳ ನಿರ್ಮಾಣಕ್ಕೆ ನೀಡಿದ್ದೇನೆ. ಎಲ್ಲ ಧರ್ಮದ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದ್ದೇನೆ. ಯಾವುದೇ ತಾರತಮ್ಯ, ಭೇದಭಾವ ಮಾಡದೆ. ಅನುದಾನವನ್ನು ಸಮನಾಗಿ ಹಂಚಿಕೆ ಮಾಡಿದ್ದೇನೆ. ಈ ಬಾರಿ ಮುಖ್ಯಮಂತ್ರಿಯವರು ನಮ್ಮ ಕ್ಷೇತ್ರದ ಅಭಿವೃದ್ಧಿಗೆ ೫೦ ಕೋಟಿ ರೂ. ಅನುದಾನವನ್ನು ನೀಡಿದ್ದು ಈ ಅನುದಾನವನ್ನು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ನಮ್ಮ ಕ್ಷೇತ್ರ ವ್ಯಾಪ್ತಿಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಗ್ರಾಮೀಣ ಪ್ರದೇಶಗಳ, ಪಟ್ಟಣ ಪ್ರದೇಶಗಳ, ನಗರಸಭಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಈ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ಸಿಲ್ಕಲ್‌ಪುರ ಗ್ರಾಮದಲ್ಲಿ ಸುಮಾರು ೪೩.೩೦ ಲಕ್ಷ ರೂ.ವೆಚ್ಚದಲ್ಲಿ ಹಾಗೂ ಕುಣಗಳ್ಳಿ ಗ್ರಾಮದಲ್ಲಿ ಸುಮಾರು ೪೬.೦೩ ಲಕ್ಷ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇರುವ ಕಡೆ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುವುದು. ಚೆಕ್ ಡ್ಯಾಂ ನಿರ್ಮಾಣದಿಂದ ಮಳೆಯ ನೀರನ್ನು ಸಂಗ್ರಹಣೆ ಮಾಡಬಹುದಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗಲಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ರವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಯಳಂದೂರು ತಾಲ್ಲೂಕು ಅಧ್ಯಕ್ಷ ಪ್ರಭುಪ್ರಸಾದ್, ಕೊಳ್ಳೇಗಾಲ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಸಣ್ಣ ನೀರಾವರಿ ಇಲಾಖೆಯ ಎ.ಇ.ಇ. ಅಭಿಲಾಷ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಗುತ್ತಿಗೆದಾರ ರೇವಣ್ಣ, ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು ಹಾಜರಿದ್ದರು.

- ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.1
- ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ ದಾಸೋಹಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೆ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು. ಪರಿಶೀಲನೆ ವೇಳೆ ದಾಸೋಹ ಭವನದ ಮೇಲೂಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.4
- ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ1
- ಪೊಲೀಸ್ ರು ಕಾನೂನು ರಕ್ಷಕರು ಹೀಗೆಲ್ಲ ಮಾಡಬಾರದು.🙏🏼🙏🏼🙏🏼🫣 #DelhiPolice #MumbaiPolice #UPPolice #KarnatakaPolice , #IndianPolice, #PoliceManthan, #UPPolice, and #DigitalPolicing. #LawAndOrder KannadaComedy #FunnyKannada #KannadaMemes #UttaraKarnatakaComedy #KannadaTikTok #viral #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClini1
- ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.1
- *ಭಾರತ ನಲ್ಲಿ ವೈರಲ್*1
- Students Of Govt U.H.P.B.SCHOOL Chamraja Double Road KR Mohalla Mysuru Organised Science & Arts Exhibitions1
- ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ 17 ವರ್ಷದ ಯುವಕನೋರ್ವ ನೇಣಿಗೆ ಶರಣಾದ ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಶಿವರುದ್ರಸ್ವಾಮಿ ಅವರ ಪುತ್ರ ತೇಜಶ್ವರ್ ಎಂದು ಗುರುತಿಸಲಾಗಿದೆ. ಈತ ಬಂಡಳ್ಳಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮನನೊಂದು ತೇಜಶ್ವರ್ ದಿಡೀರ್ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕಾಮಗೆರೆ ಹೊಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.1